ಯೆಹೆಜ್ಕೇಲನು 13:23 - ಕನ್ನಡ ಸತ್ಯವೇದವು J.V. (BSI)23 ನೀವು ವಿುಥ್ಯಾದರ್ಶನವನ್ನು ಹೊಂದಿ ಕಣಿಹೇಳುವ ಕೆಲಸವು ಇನ್ನು ನಡಿಯುವದೇ ಇಲ್ಲ; ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು; ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಆದಕಾರಣ ನೀವು ಮಿಥ್ಯ ದರ್ಶನವನ್ನು ಹೊಂದಿ, ಕಣಿಹೇಳುವ ಕೆಲಸವು ಇನ್ನು ನಡೆಯುವುದೇ ಇಲ್ಲ; ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು, ನಾನೇ ಯೆಹೋವನು’ ಎಂದು ನಿಮಗೆ ಗೊತ್ತಾಗುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಆದಕಾರಣ ನೀವು ಮಿಥ್ಯದರ್ಶನವನ್ನು ಹೊಂದಿ, ಸುಳ್ಳುಭವಿಷ್ಯ ಹೇಳುವ ಕೆಲಸ ಇನ್ನು ನಡೆಯುವುದೇ ಇಲ್ಲ; ನನ್ನ ಜನರನ್ನು ನಿಮ್ಮ ಕೈವಶದಿಂದ ಬಿಡಿಸುವೆನು; ನಾನೆ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಆದ್ದರಿಂದ ನೀವು ಪ್ರಯೋಜನವಿಲ್ಲದ ದರ್ಶನವನ್ನು ಇನ್ನು ಮೇಲೆ ನೋಡುವುದಿಲ್ಲ. ನೀವು ನಿಮ್ಮ ಮಂತ್ರತಂತ್ರಗಳನ್ನು ಇನ್ನು ಮಾಡುವುದಿಲ್ಲ. ನನ್ನ ಶಕ್ತಿಯಿಂದ ನಾನು ನನ್ನ ಜನರನ್ನು ಕಾಪಾಡುತ್ತೇನೆ. ಆಗ ನಾನು ಯೆಹೋವನು ಎಂದು ನೀವು ತಿಳಿಯುವಿರಿ.’” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆದ್ದರಿಂದ ನೀವು ಇನ್ನು ಮೇಲೆ ಸುಳ್ಳು ದರ್ಶನಗಳನ್ನು ಕಾಣುವುದಿಲ್ಲ ಮತ್ತು ಸುಳ್ಳು ದೈವೋಕ್ತಿಗಳನ್ನು ಅಭ್ಯಾಸಿಸುವುದಿಲ್ಲ. ಏಕೆಂದರೆ ನಾನು ನನ್ನ ಜನರನ್ನು ನಿಮ್ಮ ಕೈಯೊಳಗಿಂದ ಬಿಡಿಸುವೆನು. ಆಗ ನಾನೇ ಯೆಹೋವ ದೇವರೆಂದು ನೀವು ತಿಳಿದುಕೊಳ್ಳುವಿರಿ.’ ” ಅಧ್ಯಾಯವನ್ನು ನೋಡಿ |