Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 13:3 - ಕನ್ನಡ ಸತ್ಯವೇದವು J.V. (BSI)

3 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಯಾವ ಸಾಕ್ಷಾತ್ಕಾರವೂ ಇಲ್ಲದೆ ಸ್ವಬುದ್ಧಿಯನ್ನೇ ಅನುಸರಿಸುವ ಮೂರ್ಖ ಪ್ರವಾದಿಗಳ ಗತಿಯು ಏನೆಂದು ಹೇಳಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಯಾವ ಸಾಕ್ಷಾತ್ಕಾರವೂ ಇಲ್ಲದೆ ಸ್ವಬುದ್ಧಿಯನ್ನೇ ಅನುಸರಿಸುವ ಮೂರ್ಖ ಪ್ರವಾದಿಗಳ ಗತಿಯನ್ನು ಏನೆಂದು ಹೇಳಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ‘ಯಾವ ಸಾಕ್ಷಾತ್ಕಾರವೂ ಇಲ್ಲದೆ ಸ್ವಬುದ್ಧಿಯನ್ನೇ ಅನುಸರಿಸುವ ಮೂರ್ಖಪ್ರವಾದಿಗಳಿಗೆ ಧಿಕ್ಕಾರ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ಬುದ್ಧಿಯಿಲ್ಲದ ಪ್ರವಾದಿಗಳೇ, ನಿಮಗೆ ಸಂಕಟಗಳು ಬರುವವು. ನೀವು ನಿಮ್ಮ ಸ್ವಂತ ಆತ್ಮವನ್ನು ಅನುಸರಿಸುತ್ತೀರಿ. ನೀವು ದರ್ಶನಗಳಲ್ಲಿ ಏನನ್ನೂ ಕಂಡಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಯಾವ ಸಾಕ್ಷಾತ್ಕಾರವೂ ಇಲ್ಲದೆ ಸ್ವಬುದ್ಧಿಯನ್ನೇ ಅನುಸರಿಸುತ್ತಿರುವ ಮೂರ್ಖ ಪ್ರವಾದಿಗಳೇ ನಿಮಗೆ ಕಷ್ಟ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 13:3
21 ತಿಳಿವುಗಳ ಹೋಲಿಕೆ  

ನಿನ್ನ ಪ್ರವಾದಿಗಳು ಕಂಡುಹೇಳಿದ ಕಣಿಗಳು ವ್ಯರ್ಥ, ನಿಸ್ಸಾರ; ಅವರು ನಿನ್ನ ದೋಷವನ್ನು ಬೈಲಿಗೆ ತಾರದಕಾರಣ ನಿನ್ನ ದುರವಸ್ಥೆಯು ನೀಗಲಿಲ್ಲ; ನಿನ್ನ ವಿಷಯವಾಗಿ ಅವರಿಗೆ ಕಂಡುಬಂದ ವ್ಯರ್ಥ ದೈವೋಕ್ತಿಗಳು ನೀನು ಗಡೀಪಾರಾಗಿ ಒಯ್ಯಲ್ಪಡುವದಕ್ಕೆ ಆಸ್ಪದವಾದವು.


ದಂಡನೆಯ ದಿನಗಳು ಹತ್ತರಿಸಿವೆ, ಮುಯ್ಯಿತೀರಿಸುವ ದಿವಸಗಳು ಸಮೀಪಿಸಿವೆ; ಇಸ್ರಾಯೇಲಿನ ಅನುಭವಕ್ಕೆ ಬಂದೇ ಬರುವವು; [ಇಸ್ರಾಯೇಲೇ,] ನಿನ್ನ ಅಧರ್ಮವು ಬಹಳವಾಗಿರುವದರಿಂದಲೂ ವಿರೋಧವು ಹೆಚ್ಚಾಗಿರುವದರಿಂದಲೂ ಪ್ರವಾದಿಯು ಮೂರ್ಖನು, ದೇವರಾತ್ಮಾವಿಷ್ಟನು ಹುಚ್ಚನು [ಅಂದುಕೊಳ್ಳುತ್ತಿ].


ನರಪುತ್ರನೇ, ಇಸ್ರಾಯೇಲೆಂಬ ಮಂದೆಯ ಕುರುಬರಿಗೆ ಈ ದೈವೋಕ್ತಿಯನ್ನು ನುಡಿ, ನುಡಿದೇ ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಅಯ್ಯೋ, ಸ್ವಂತ ಹೊಟ್ಟೆಯನ್ನು ಹೊರೆದುಕೊಳ್ಳುವ ಇಸ್ರಾಯೇಲಿನ ಕುರುಬರ ಗತಿಯನ್ನು ಏನು ಹೇಳಲಿ! ಕುರಿಗಳ ಹೊಟ್ಟೆಯನ್ನು ನೋಡುವದು ಕುರುಬರ ಧರ್ಮವಲ್ಲವೆ.


ನನ್ನ ಕಾವಲಿನ ಕುರಿಗಳನ್ನು ಚದರಿಸಿ ಹಾಳುಮಾಡುವ ಕುರುಬರ ಗತಿಯನ್ನು ಏನೆಂದು ಹೇಳಲಿ ಎಂಬದು ಯೆಹೋವನ ನುಡಿ.


ವಿವೇಕಿಯ ಹೃದಯ ತಿಳುವಳಿಕೆಯನ್ನು ಹುಡುಕುವದು; ಮೂಢರ ಬಾಯಿ ಮೂರ್ಖತನವನ್ನು ಮುಕ್ಕುವದು.


ಅವನು ಒಂದನ್ನೂ ತಿಳಿಯದೆ ಕುತರ್ಕ ವಾಗ್ವಾದಗಳನ್ನು ಮಾಡುವ ಭ್ರಾಂತಿಯಲ್ಲಿದ್ದು ಮದದಿಂದ ಕಣ್ಣುಗಾಣದವನಾಗಿದ್ದಾನೆ. ಇವುಗಳಿಂದ ಹೊಟ್ಟೇಕಿಚ್ಚು ಜಗಳ ದೂಷಣೆ ದುಸ್ಸಂಶಯ ಇವುಗಳು ಉಂಟಾಗುತ್ತವೆ.


ನಾನು ಸುವಾರ್ತೆಯನ್ನು ಸಾರಿದರೂ ಹೊಗಳಿಕೊಳ್ಳುವದಕ್ಕೆ ನನಗೇನೂ ಆಸ್ಪದವಿಲ್ಲ; ಸಾರಲೇಬೇಕೆಂಬ ನಿರ್ಬಂಧ ನನಗುಂಟು. ಸಾರದಿದ್ದರೆ ನನ್ನ ಗತಿಯನ್ನು ಏನು ಹೇಳಲಿ.


ಅಯ್ಯೋ ಧರ್ಮೋಪದೇಶಕರೇ, ಜ್ಞಾನಕ್ಕೆ ಸಾಧನವಾದ ಬೀಗದ ಕೈಯನ್ನು ತೆಗೆದುಬಿಟ್ಟಿರಿ. ನೀವೂ ಒಳಕ್ಕೆ ಹೋಗಲಿಲ್ಲ; ಒಳಕ್ಕೆ ಹೋಗುತ್ತಿರುವವರಿಗೂ ಅಡ್ಡಿಮಾಡಿದಿರಿ ಅಂದನು.


ಬುದ್ಧಿಯಿಲ್ಲದವರೇ, ಹೊರಭಾಗವನ್ನು ಮಾಡಿದಾತನು ಒಳಭಾಗವನ್ನೂ ಮಾಡಿದನಲ್ಲವೇ.


ಆಮೇಲೆ ಯೆಹೋವನು ನನಗೆ ಹೀಗೆ ಅಪ್ಪಣೆಮಾಡಿದನು - ನೀನು ಮತ್ತೊಮ್ಮೆ ತಕ್ಕ ಸಲಕರಣೆಗಳನ್ನು ತೆಗೆದುಕೊಂಡು ಮುಕ್ಕಕುರುಬನಂತೆ ನಟಿಸು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಜನರ ಪ್ರಾಣಗಳನ್ನು ಬೇಟೆಯಾಡಬೇಕೆಂದು ಎಲ್ಲರ ಮೊಣಕೈಗಳಿಗೆ ತಾಯಿತಿಗಳನ್ನು ಕಟ್ಟಿ ಉದ್ದವಾದವರಿಗೂ ಗಿಡ್ಡಾದವರಿಗೂ ತಕ್ಕತಕ್ಕ ಮುಸುಕುಗಳನ್ನು ಸಿದ್ಧಮಾಡಿಕೊಂಡಿರುವ ಸ್ತ್ರೀಯರ ಗತಿಯನ್ನು ಏನೆಂದು ಹೇಳಲಿ! ಸ್ತ್ರೀಯರೇ, ನೀವು ನನ್ನ ಜನರ ಪ್ರಾಣಗಳನ್ನು ಬೇಟೆಯಾಡಿ ಸ್ವಂತ ಪ್ರಾಣಗಳನ್ನು ಉಳಿಸಿಕೊಳ್ಳುವಿರೋ?


ಜ್ಞಾನಿಗಳ ನಾಲಿಗೆಯು ತಿಳುವಳಿಕೆಯನ್ನು ಸಾರ್ಥಕ ಮಾಡುವದು; ಜ್ಞಾನಹೀನರ ಬಾಯಿಯು ಮೂರ್ಖತನವನ್ನು ಕಕ್ಕುವದು.


ಆದರೆ ಅವರ ಪ್ರಯತ್ನವು ಇನ್ನು ಸಾಗುವದಿಲ್ಲ; ಆ ಯನ್ನ ಯಂಬ್ರರ ಮೂರ್ಖತನವು ಎಲ್ಲರಿಗೂ ಪರಿಷ್ಕಾರವಾಗಿ ತಿಳಿದುಬಂದ ಪ್ರಕಾರ ಇವರದೂ ತಿಳಿದುಬರುವದು.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ - ನಿಮಗೆ ಪ್ರವಾದಿಸುವ ಪ್ರವಾದಿಗಳ ಮಾತುಗಳನ್ನು ಕೇಳಬೇಡಿರಿ; ನಿಮ್ಮಲ್ಲಿ ವ್ಯರ್ಥನಿರೀಕ್ಷೆಯನ್ನು ಹುಟ್ಟಿಸುತ್ತಾರೆ; ಯೆಹೋವನ ಬಾಯಿಂದ ಹೊರಟದ್ದನ್ನು ನುಡಿಯದೆ ಸ್ವಂತ ಹೃದಯಕ್ಕೆ ಹೊಳೆದದ್ದನ್ನೇ ಹೇಳುತ್ತಾರೆ.


ಆಗ ಪ್ರವಾದಿಯಾದ ಯೆರೆಮೀಯನು ಪ್ರವಾದಿಯಾದ ಹನನ್ಯನಿಗೆ - ಹನನ್ಯನೇ, ಕೇಳು, ಯೆಹೋವನು ನಿನ್ನನ್ನು ಕಳುಹಿಸಲಿಲ್ಲ; ಈ ಜನರು ಸುಳ್ಳನ್ನು ನಂಬುವಂತೆ ಮಾಡುತ್ತೀ.


ಇಸ್ರಾಯೇಲೇ, ನಿನ್ನ ಪ್ರವಾದಿಗಳು ಹಾಳು ಪ್ರದೇಶಗಳಲ್ಲಿನ ನರಿಗಳಂತಿದ್ದಾರೆ.


ಪ್ರವಾದಿಗಳ ವಿಷಯ. ನನ್ನ ಹೃದಯವು ನನ್ನೊಳಗೆ ಒಡೆದುಹೋಗಿದೆ; ನನ್ನ ಎಲುಬುಗಳೆಲ್ಲಾ ಕರಗಿಹೋಗಿವೆ. ನಾನು ಯೆಹೋವನಿಗೂ ಆತನ ಪರಿಶುದ್ಧವಾಕ್ಯಗಳಿಗೂ ವಶನಾಗಿ ಅಮಲೇರಿದವನಂತಿದ್ದೇನೆ. ಹೌದು, ದ್ರಾಕ್ಷಾರಸಕ್ಕೆ ಸೋತವನ ಹಾಗಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು