Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 14:1 - ಕನ್ನಡ ಸತ್ಯವೇದವು J.V. (BSI)

1 ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ಬಂದು ನನ್ನ ಮುಂದೆ ಕೂತುಕೊಂಡಿರುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇಸ್ರಯೇಲಿನ ಹಿರಿಯರಲ್ಲಿ ಕೆಲವರು ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಇಸ್ರೇಲರ ಹಿರಿಯರಲ್ಲಿ ಕೆಲವರು ನನ್ನ ಬಳಿಗೆ ಬಂದು ನನ್ನೊಂದಿಗೆ ಮಾತಾಡಲು ಕುಳಿತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆಮೇಲೆ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ನನ್ನ ಬಳಿಗೆ ಬಂದು ನನ್ನ ಮುಂದೆ ಕುಳಿತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 14:1
13 ತಿಳಿವುಗಳ ಹೋಲಿಕೆ  

[ಯೆಹೋಯಾಖೀನನು ಸೆರೆಯಾದ] ಆರನೆಯ ವರುಷದ ಆರನೆಯ ತಿಂಗಳಿನ ಐದನೆಯ ದಿನದಲ್ಲಿ ನಾನೂ ಯೆಹೂದದ ಹಿರಿಯರೂ ನನ್ನ ಮನೆಯೊಳಗೆ ಎದುರುಬದುರಾಗಿ ಕೂತಿರಲು ಕರ್ತನಾದ ಯೆಹೋವನ ಹಸ್ತಸ್ಪರ್ಶದಿಂದ ನಾನು ಪರವಶನಾದೆನು.


[ಯೆಹೋಯಾಖೀನನು ಸೆರೆಯಾದ] ಏಳನೆಯ ವರುಷದ ಐದನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ಯೆಹೋವನನ್ನು ಪ್ರಶ್ನೆಕೇಳುವದಕ್ಕೆ ಬಂದು ನನ್ನ ಮುಂದೆ ಕೂತುಕೊಂಡರು.


[ಪ್ರಶ್ನೆ ಕೇಳುವದಕ್ಕೆ] ಬರುವ ಜನರಂತೆ ಅವರು ನಿನ್ನ ಬಳಿಗೆ ಬಂದು ನನ್ನ ಭಕ್ತರಾಗಿ ನಿನ್ನ ಮುಂದೆ ಕೂತುಕೊಂಡು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಕೊಳ್ಳುವದಿಲ್ಲ; ಬಾಯಿಂದ ಬಹುಪ್ರೀತಿಯನ್ನು ತೋರಿಸುತ್ತಾರೆ. ಅವರ ಮನಸ್ಸೇನೋ ತಾವು ದೋಚಿಕೊಂಡದರ ಮೇಲೆ ಹೋಗುತ್ತದೆ.


ಮತ್ತು ಯೆಹೋವನು - ಈ ಜನರು ಮಾತಿನಿಂದ ನನ್ನನ್ನು ಸಮೀಪಿಸಿ ತುಟಿಯಿಂದ ನನ್ನನ್ನು ಸನ್ಮಾನಿಸುತ್ತಾರೆ, ಮನಸ್ಸನ್ನೋ ದೂರಮಾಡಿಕೊಂಡು ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯಭಕ್ತಿಯನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ;


ಎಲೀಷನು ಊರಿನ ಹಿರಿಯರೊಡನೆ ತನ್ನ ಮನೆಯಲ್ಲಿ ಕೂತುಕೊಂಡಿದ್ದನು; ಅರಸನು ತನ್ನ ಹತ್ತಿರವಿದ್ದ ಒಬ್ಬ ಆಳನ್ನು ಕಳುಹಿಸಿದನು. ಅವನು ಇನ್ನೂ ದೂರದಲ್ಲಿರುವಾಗಲೇ ಎಲೀಷನು ಹಿರಿಯರಿಗೆ - ನೋಡಿರಿ, ಆ ಕೊಲೆಗಾರನ ಮಗನು ನನ್ನ ತಲೆಯನ್ನು ಹಾರಿಸುವದಕ್ಕೆ ಆಳನ್ನು ಕಳುಹಿಸಿದ್ದಾನೆ. ಆಳು ಇಲ್ಲಿಗೆ ಬಂದ ಕೂಡಲೆ ನೀವು ಬಾಗಲನ್ನು ಮುಚ್ಚಿ ಅವನು ಒಳಗೆ ಬಾರದಂತೆ ಅದನ್ನು ಒತ್ತಿಹಿಡಿಯಿರಿ; ಅವನ ಹಿಂದೆಯೇ ಬರುತ್ತಿರುವ ಅವನೊಡೆಯನ ಕಾಲು ಸಪ್ಪಳವು ಕೇಳಿಸುತ್ತದಲ್ಲಾ ಎಂದು ಹೇಳಿದನು.


ನಾನು ಯೆಹೂದ್ಯನು, ಕಿಲಿಕ್ಯದ ತಾರ್ಸದಲ್ಲಿ ಹುಟ್ಟಿದವನು, ಆದರೆ ಈ ಪಟ್ಟಣದಲ್ಲೇ ಬೆಳೆದವನು. ಗಮಲಿಯೇಲನ ಪಾದಸನ್ನಿಧಿಯಲ್ಲಿ ನಮ್ಮ ಪಿತೃಗಳ ಧರ್ಮಶಾಸ್ತ್ರದಲ್ಲಿ ಪೂರ್ಣ ಶಿಕ್ಷಿತನಾದೆನು; ನೀವೆಲ್ಲರೂ ಈಹೊತ್ತು ದೇವರ ವಿಷಯದಲ್ಲಿ ಅಭಿಮಾನಿಗಳಾಗಿರುವಂತೆಯೇ ನಾನು ಅಭಿಮಾನಿಯಾಗಿದ್ದೆನು.


ಪೇತ್ರನು ಪವಿತ್ರಾತ್ಮಭರಿತನಾಗಿ ಅವರಿಗೆ - ಜನರ ಅಧಿಕಾರಿಗಳೇ, ಹಿರಿಯರೇ,


ಮರುದಿನ ಯೆಹೂದ್ಯರ ಅಧಿಕಾರಿಗಳೂ ಹಿರಿಯರೂ ಶಾಸ್ತ್ರಿಗಳೂ ಯೆರೂಸಲೇವಿುನಲ್ಲಿ ಕೂಡಿಬಂದರು.


ಆಕೆಗೆ ಮರಿಯಳೆಂಬ ಒಬ್ಬ ತಂಗಿ ಇದ್ದಳು. ಈಕೆಯು ಸ್ವಾವಿುಯ ಪಾದಗಳ ಬಳಿಯಲ್ಲಿ ಕೂತುಕೊಂಡು ಆತನ ವಾಕ್ಯವನ್ನು ಕೇಳುತ್ತಿದ್ದಳು.


ಯೆಹೋವನು ಈ ವಾಕ್ಯವನ್ನು ನನಗೆ ಅನುಗ್ರಹಿಸಿದನು -


ಇಗೋ, ನಿನ್ನ ಮಾತು ಅವರ ಎಣಿಕೆಯಲ್ಲಿ ಒಬ್ಬ ಸಂಗೀತಗಾರನು ವಾದ್ಯವನ್ನು ಜಾಣತನದಿಂದ ಬಾರಿಸಿ ಮಧುರಸ್ವರದಿಂದ ಹಾಡುವ ಪ್ರೇಮಗೀತಕ್ಕೆ ಸಮಾನವಾಗಿದೆ; ನಿನ್ನ ಮಾತುಗಳನ್ನು ಕೇಳುತ್ತಾರೆ ಆದರೆ ಕೈಕೊಳ್ಳುವದಿಲ್ಲ.


ಉದಯವು ಬರುತ್ತದೆ, ರಾತ್ರಿಯೂ ಬರುತ್ತದೆ; ವಿಚಾರಿಸಬೇಕಾದರೆ ವಿಚಾರಿಸಿರಿ, ತಿರಿಗಿ ಬನ್ನಿರಿ ಎಂದು ಕಾವಲುಗಾರನು ಹೇಳಿದನು.


ನರಪುತ್ರನೇ, ಇಸ್ರಾಯೇಲಿನ ಹಿರಿಯರನ್ನು ಸಂಬೋಧಿಸಿ ಹೀಗೆ ಹೇಳು - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನನ್ನು ಪ್ರಶ್ನೆಕೇಳುವದಕ್ಕೆ ಬಂದಿರೊ? ನನ್ನ ಜೀವದಾಣೆ, ನಾನು ನಿಮಗೆ ಉತ್ತರಕೊಡುವದೇ ಇಲ್ಲ; ಇದು ಕರ್ತನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು