Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 14:14 - ಕನ್ನಡ ಸತ್ಯವೇದವು J.V. (BSI)

14 ನೋಹ ದಾನಿಯೇಲ ಯೋಬ ಎಂಬೀ ಮೂವರು ಪುರುಷರು ಅದರಲ್ಲಿದ್ದರೂ ತಮ್ಮ ಸದಾಚಾರದಿಂದ ಸ್ವಂತಪ್ರಾಣಗಳನ್ನು ಮಾತ್ರ ಉಳಿಸಿಕೊಳ್ಳುತ್ತಿದ್ದರು; ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನೋಹ, ದಾನಿಯೇಲ, ಯೋಬ ಎಂಬ ಮೂವರು ಪುರುಷರು ಆ ದೇಶದಲ್ಲಿದ್ದರೂ ತಮ್ಮ ಸದಾಚಾರದಿಂದ ಸ್ವಂತ ಪ್ರಾಣಗಳನ್ನು ಮಾತ್ರ ಉಳಿಸಿಕೊಳ್ಳುತ್ತಿದ್ದರು” ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನೋಹ, ದಾನಿಯೇಲ, ಯೋಬ, ಎಂಬೀ ಮೂವರು ವ್ಯಕ್ತಿಗಳು ಆ ನಾಡಿನಲ್ಲಿದ್ದರೂ ತಮ್ಮ ಸದಾಚಾರದಿಂದ ಸ್ವಂತಪ್ರಾಣಗಳನ್ನು ಮಾತ್ರ ಉಳಿಸಿಕೊಳ್ಳುತ್ತಿದ್ದರು; ಇದು ಸರ್ವೇಶ್ವರನಾದ ದೇವರ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆ ದೇಶದಲ್ಲಿ ನೋಹ, ದಾನಿಯೇಲ, ಯೋಬ ಜೀವಿಸಿದ್ದರೂ ಆ ಮೂವರು ತಮ್ಮ ಸತ್ಕಾರ್ಯಗಳಿಂದ ತಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುತ್ತಿದ್ದರೇ ಹೊರತು ಇಡೀ ದೇಶವನ್ನು ರಕ್ಷಿಸಲಾಗುತ್ತಿರಲಿಲ್ಲ.” ಇವುಗಳನ್ನು ನನ್ನ ಒಡೆಯನಾದ ಯೆಹೋವನೇ ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನೋಹನೂ ದಾನಿಯೇಲನೂ ಯೋಬನೂ ಎಂಬ ಈ ಮೂವರು ಅದರಲ್ಲಿದ್ದರೂ ತಮ್ಮ ನೀತಿಯಿಂದ ತಮ್ಮ ಪ್ರಾಣಗಳನ್ನು ಮಾತ್ರವೇ ಉಳಿಸಿಕೊಳ್ಳುತ್ತಿದ್ದರು,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 14:14
26 ತಿಳಿವುಗಳ ಹೋಲಿಕೆ  

ನೊಹ ದಾನಿಯೇಲ ಯೋಬ ಎಂಬಿವರು ಅದರಲ್ಲಿದ್ದರೂ ನನ್ನ ಜೀವದಾಣೆ, ತಮ್ಮ ಸದಾಚಾರದಿಂದ ಸ್ವಂತಪ್ರಾಣಗಳನ್ನು ಉಳಿಸಿಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡುಮಗನನ್ನಾಗಲೀ ಹೆಣ್ಣುಮಗಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ; ಇದು ಕರ್ತನಾದ ಯೆಹೋವನ ನುಡಿ.


ಯೆಹೋವನು ನನಗೆ ಹೀಗೆ ಹೇಳಿದನು - ಮೋಶೆಯೂ ಸಮುವೇಲನೂ ನನಗೆ ವಿಜ್ಞಾಪಿಸಿದರೂ ನನ್ನ ಮನಸ್ಸು ಈ ಜನರ ಕಡೆಗೆ ತಿರುಗದು; ನನ್ನ ಕಣ್ಣೆದುರಿನಿಂದ ಇವರನ್ನು ನೂಕಿಬಿಡು, ತೊಲಗಿಹೋಗಲಿ! ಅವರು - ನಾವು ಎಲ್ಲಿಗೆ ಹೋಗೋಣ ಎಂದು ಕೇಳಲು


ಇಗೋ, ನೀನು ದಾನಿಯೇಲನಿಗಿಂತಲೂ ಬುದ್ಧಿವಂತನು; ನಿನಗೆ ಮರೆಯಾದ ಮರ್ಮವು ಯಾವದೂ ಇಲ್ಲ;


ಆಗ ಯೆಹೋವನು ನೋಹನಿಗೆ - ನೀನೂ ನಿನ್ನ ಮನೆಯವರೆಲ್ಲರೂ ನಾವೆಯಲ್ಲಿ ಸೇರಿರಿ; ಈಗಿನವರಲ್ಲಿ ನೀನೊಬ್ಬನೇ ನನ್ನ ಮುಂದೆ ನೀತಿವಂತನಾಗಿ ನಡೆಯುವದನ್ನು ನೋಡಿದ್ದೇನೆ.


ಈ ಮೂವರು ಪುರುಷರು ಅದರಲ್ಲಿದ್ದರೂ ನನ್ನ ಜೀವದಾಣೆ, ತಾವು ಉಳಿದುಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡುಮಕ್ಕಳನ್ನಾಗಲಿ ಹೆಣ್ಣುಮಕ್ಕಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ; ಇದು ಕರ್ತನಾದ ಯೆಹೋವನ ನುಡಿ.


ಊಚ್ ದೇಶದಲ್ಲಿ ಯೋಬನೆಂಬ ಒಬ್ಬ ಮನುಷ್ಯನಿದ್ದನು; ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ ಯಥಾರ್ಥಚಿತ್ತನೂ ಆಗಿದ್ದನು.


ನಂಬಿಕೆಯಿಂದಲೇ ನೋಹನು ಅದುವರೆಗೆ ಕಾಣದಿದ್ದ ಸಂಗತಿಗಳ ವಿಷಯವಾಗಿ ದೈವೋಕ್ತಿಯನ್ನು ಹೊಂದಿ ಭಯಭಕ್ತಿಯುಳ್ಳವನಾಗಿ ತನ್ನ ಮನೆಯವರ ಸಂರಕ್ಷಣೆಗೋಸ್ಕರ ನಾವೆಯನ್ನು ಕಟ್ಟಿ ಸಿದ್ಧಮಾಡಿದನು. ಅದರಿಂದ ಅವನು ಲೋಕದವರನ್ನು ದಂಡನೆಗೆ ಪಾತ್ರರೆಂದು ನಿರ್ಣಯಿಸಿಕೊಂಡು ನಂಬಿಕೆಯ ಫಲವಾದ ನೀತಿಗೆ ಬಾಧ್ಯನಾದನು.


ಆಗ ಅವನು ನನಗೆ - ದಾನಿಯೇಲನೇ, ಅತಿಪ್ರಿಯನೇ, ನಾನು ನುಡಿಯುವ ಮಾತುಗಳನ್ನು ಗ್ರಹಿಸು; ನಿಂತುಕೋ, ಈಗ ನಿನ್ನ ಬಳಿಗೇ ಕಳುಹಿಸಲ್ಪಟ್ಟಿದ್ದೇನೆ ಎಂದು ಹೇಳಿದನು; ಹೇಳಿದ ಕೂಡಲೆ ನಾನು ನಡುಗುತ್ತಾ ನಿಂತುಕೊಂಡೆನು.


ಔತಣ ಸರದಿ ತೀರಿದನಂತರ ಯೋಬನು ತನ್ನ ಮಕ್ಕಳು ಒಂದು ವೇಳೆ ಹೃದಯದಲ್ಲಿ ದೇವರನ್ನು ದೂಷಿಸಿ ಪಾಪ ಮಾಡಿರಬಹುದು ಎಂದು ಅವರನ್ನು ಕರಿಸಿ ಶುದ್ಧಿಪಡಿಸಿ ಬೆಳಿಗ್ಗೆ ಎದ್ದು ಅವರ ಸಂಖ್ಯೆಗೆ ತಕ್ಕಂತೆ ಹೋಮಗಳನ್ನು ಅರ್ಪಿಸುತ್ತಿದ್ದನು. ಹೀಗೆ ಯೋಬನು ಕ್ರಮವಾಗಿ ಮಾಡುತ್ತಿದ್ದನು.


ಆದರೆ ನೋಹನಿಗೆ ಯೆಹೋವನ ದಯವು ದೊರಕಿತು.


ಈ ಮೂವರು ಪುರುಷರು ಅದರಲ್ಲಿದ್ದರೂ ನನ್ನ ಜೀವದಾಣೆ ತಾವು ಉಳಿದುಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡುಮಕ್ಕಳನ್ನಾಗಲಿ ಹೆಣ್ಣುಮಕ್ಕಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ; ದೇಶವು ಹಾಳಾಗಿ ಹೋಗುವದು; ಇದು ಕರ್ತನಾದ ಯೆಹೋವನ ನುಡಿ.


ಪಾಪಮಾಡುವವನೇ ಸಾಯುವನು; ಮಗನು ತಂದೆಯ ದೋಷಫಲವನ್ನು ಅನುಭವಿಸನು, ತಂದೆಯು ಮಗನ ದೋಷಫಲವನ್ನು ಅನುಭವಿಸನು; ಶಿಷ್ಟನ ಶಿಷ್ಟತನದ ಫಲವು ಶಿಷ್ಟನದೇ, ದುಷ್ಟನ ದುಷ್ಟತನದ ಫಲವು ದುಷ್ಟನದೇ.


ಆದಕಾರಣ ಈ ಜನರಿಗೋಸ್ಕರ ಬೇಡಿಕೊಳ್ಳಬೇಡ, ಇವರಿಗಾಗಿ ಮೊರೆಯಿಡಬೇಡ, ಪ್ರಾರ್ಥಿಸಲೂ ಬೇಡ; ಅವರು ತಮ್ಮ ಕೇಡಿನ ನಿವಿುತ್ತ ನನಗೆ ಮೊರೆಯಿಡುವಾಗ ನಾನು ಕೇಳೆನು.


ಕರ್ತನು ಭಕ್ತರನ್ನು ಕಷ್ಟಗಳೊಳಗಿಂದ ತಪ್ಪಿಸುವದಕ್ಕೂ ದುರ್ಮಾರ್ಗಿಗಳನ್ನು ನ್ಯಾಯತೀರ್ಪಿನ ದಿನದ ತನಕ ಶಿಕ್ಷಾನುಭವದಲ್ಲಿ ಇಡುವದಕ್ಕೂ ಬಲ್ಲವನಾಗಿದ್ದಾನೆ.


ಮೊದಲು ನನ್ನ ಕನಸಿನಲ್ಲಿ ಕಂಡ ಗಬ್ರಿಯೇಲನೆಂಬ ಪುರುಷನು ಅಸುರುಸುರಾಗಿ ಹಾರಿಬಂದು ಸಂಧ್ಯಾನೈವೇದ್ಯಸಮಯದಲ್ಲಿ ನನ್ನನ್ನು ಸೇರಿ


ನೀನಂತು ಈ ಜನರಿಗೋಸ್ಕರ ಬೇಡಿಕೊಳ್ಳಬೇಡ, ಇವರಿಗಾಗಿ ಮೊರೆಯಿಡಬೇಡ, ಪ್ರಾರ್ಥಿಸಬೇಡ, ನನಗೆ ವಿಜ್ಞಾಪಿಸಲೂಬೇಡ, ನಾನು ಕೇಳಲೊಲ್ಲೆ.


ಧನವು ಕೋಪದ ದಿನದಲ್ಲಿ ವ್ಯರ್ಥ; ಧರ್ಮವು ಮರಣವಿಮೋಚಕ.


ಆರಿಸಲ್ಪಟ್ಟ ಯುವಕರಲ್ಲಿ ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಎಂಬ ಯೆಹೂದ್ಯರು ಸೇರಿದ್ದರು.


ನೀನು ದುಷ್ಟನನ್ನು ಎಚ್ಚರಿಸಿದರೂ ಅವನು ತನ್ನ ದುಷ್ಟತನವನ್ನೂ ದುರ್ಮಾರ್ಗವನ್ನೂ ಬಿಡದೆಹೋದರೆ ತನ್ನ ಅಪರಾಧದಿಂದ ಸಾಯುವನು; ನೀನೋ ನಿನ್ನ ಪ್ರಾಣವನ್ನು ಉಳಿಸಿಕೊಂಡಿರುವಿ.


ನಿನ್ನ ಕಸೂತಿಯ ಬಟ್ಟೆಗಳನ್ನು ತೆಗೆದು ಮೂರ್ತಿಗಳಿಗೆ ಹೊದಿಸಿ ಅವುಗಳ ಮುಂದೆ ನನ್ನ ತೈಲವನ್ನೂ ನನ್ನ ಧೂಪವನ್ನೂ ಅರ್ಪಿಸಿದಿ.


ಇದಲ್ಲದೆ ನೀನು ನನಗೆ ಹೆತ್ತ ಗಂಡು ಹೆಣ್ಣು ಮಕ್ಕಳನ್ನು ಹಿಡಿದು ಮೂರ್ತಿಗಳಿಗೆ ಅಹಾರವಾಗಲೆಂದು ಯಜ್ಞಮಾಡಿದಿ.


ಹನೋಕ್, ಮೆತೂಷೆಲಹ, ಲೆಮೆಕ್, ನೋಹ, ಶೇಮ್, ಹಾಮ್, ಯೆಫೆತ್ ಎಂಬವರು.


ನಿನ್ನ ವಿಜ್ಞಾಪನೆಯ ಆರಂಭದಲ್ಲಿಯೇ ದೇವರ ಅಪ್ಪಣೆಯಾಯಿತು; ಅದನ್ನು ನಿನಗೆ ತಿಳಿಸಲು ಇಲ್ಲಿಗೆ ಬಂದಿದ್ದೇನೆ; ನೀನು (ದೇವರಿಗೆ) ಅತಿಪ್ರಿಯ; ಈ ದೈವೋಕ್ತಿಯನ್ನು ಯೋಚಿಸು, ಈ ದರ್ಶನವನ್ನು ಗ್ರಹಿಸಿಕೋ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು