Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 14:16 - ಕನ್ನಡ ಸತ್ಯವೇದವು J.V. (BSI)

16 ಈ ಮೂವರು ಪುರುಷರು ಅದರಲ್ಲಿದ್ದರೂ ನನ್ನ ಜೀವದಾಣೆ ತಾವು ಉಳಿದುಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡುಮಕ್ಕಳನ್ನಾಗಲಿ ಹೆಣ್ಣುಮಕ್ಕಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ; ದೇಶವು ಹಾಳಾಗಿ ಹೋಗುವದು; ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಈ ಮೂವರು ಪುರುಷರು ಆ ದೇಶದಲ್ಲಿದ್ದರೂ ನನ್ನ ಜೀವದಾಣೆ, ತಾವು ಉಳಿದುಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡು ಮಕ್ಕಳನ್ನಾಗಲಿ, ಹೆಣ್ಣು ಮಕ್ಕಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ; ದೇಶವು ಹಾಳಾಗಿ ಹೋಗುವುದು” ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಈ ಮೂವರು ವ್ಯಕ್ತಿಗಳು ಅದರಲ್ಲಿದ್ದರೂ, ನನ್ನ ಜೀವದಾಣೆ, ತಾವು ಉಳಿದುಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡು ಮಕ್ಕಳನ್ನಾಗಲಿ ಹೆಣ್ಣು ಮಕ್ಕಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ; ನಾಡು ಹಾಳಾಗಿ ಹೋಗುವುದು; ಇದು ಸರ್ವೇಶ್ವರನಾದ ದೇವರ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನನ್ನ ಜೀವದಾಣೆ, ನೋಹನಾಗಲಿ ದಾನಿಯೇಲನಾಗಲಿ ಯೋಬನಾಗಲಿ ತಮ್ಮ ಪುತ್ರಪುತ್ರಿಯರನ್ನು ರಕ್ಷಿಸಲಾಗುತ್ತಿರಲಿಲ್ಲ. ಅವರು ತಮ್ಮನ್ನು ಮಾತ್ರ ರಕ್ಷಿಸಿಕೊಳ್ಳಬಹುದಾಗಿತ್ತು. ಆದರೆ ದೇಶವು ನಿರ್ಜನವಾಗುತ್ತಿತ್ತು.” ಇವುಗಳನ್ನು ನನ್ನ ಒಡೆಯನಾದ ಯೆಹೋವನೇ ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಈ ಮೂರು ಮನುಷ್ಯರಲ್ಲಿ ಅದರಲ್ಲಿ ಇದ್ದರೂ, ನನ್ನ ಜೀವದಾಣೆ ಅವರು ಪುತ್ರರನ್ನಾಗಲಿ, ಪುತ್ರಿಯರನ್ನಾಗಲಿ ಬಿಡಿಸಲು ಆಗುತ್ತಿರಲಿಲ್ಲ, ತಾವು ಮಾತ್ರ ತಪ್ಪಿಸಿಕೊಳ್ಳುವರು. ಆದರೆ ದೇಶವು ಹಾಳಾಗುವುದು,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 14:16
13 ತಿಳಿವುಗಳ ಹೋಲಿಕೆ  

ದೇವರು ಆ ಸೀಮೆಯ ಪಟ್ಟಣಗಳನ್ನು ನಾಶಮಾಡಿದಾಗ ಲೋಟನು ವಾಸವಾಗಿದ್ದ ಊರುಗಳನ್ನು ಕೆಡವಿದರೂ ಅಬ್ರಹಾಮನನ್ನು ನೆನಸಿ ಲೋಟನನ್ನು ತಪ್ಪಿಸಿ ಕಾಪಾಡಿದನು.


ಹೀಗಿರಲು ನೀವು ಸ್ವಸ್ಥವಾಗಬೇಕಾದರೆ ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು ಅರಿಕೆ ಮಾಡಿ ಒಬ್ಬರಿಗೋಸ್ಕರ ಒಬ್ಬರು ದೇವರನ್ನು ಪ್ರಾರ್ಥಿಸಿರಿ; ನೀತಿವಂತನ ಅತ್ಯಾಸಕ್ತಿಯುಳ್ಳ ವಿಜ್ಞಾಪನೆಯು ಬಹು ಬಲವಾಗಿದೆ.


ನಂಬಿಕೆಯಿಂದಲೇ ನೋಹನು ಅದುವರೆಗೆ ಕಾಣದಿದ್ದ ಸಂಗತಿಗಳ ವಿಷಯವಾಗಿ ದೈವೋಕ್ತಿಯನ್ನು ಹೊಂದಿ ಭಯಭಕ್ತಿಯುಳ್ಳವನಾಗಿ ತನ್ನ ಮನೆಯವರ ಸಂರಕ್ಷಣೆಗೋಸ್ಕರ ನಾವೆಯನ್ನು ಕಟ್ಟಿ ಸಿದ್ಧಮಾಡಿದನು. ಅದರಿಂದ ಅವನು ಲೋಕದವರನ್ನು ದಂಡನೆಗೆ ಪಾತ್ರರೆಂದು ನಿರ್ಣಯಿಸಿಕೊಂಡು ನಂಬಿಕೆಯ ಫಲವಾದ ನೀತಿಗೆ ಬಾಧ್ಯನಾದನು.


ಪೌಲನೇ, ಭಯಪಡಬೇಡ, ನೀನು ಚಕ್ರವರ್ತಿಯ ಮುಂದೆ ನಿಲ್ಲಬೇಕು; ಇದಲ್ಲದೆ ನಿನ್ನ ಸಂಗಡ ಈ ಹಡಗಿನಲ್ಲಿ ಪ್ರಯಾಣಮಾಡುವವರೆಲ್ಲರ ಪ್ರಾಣ ದೇವರು ನಿನ್ನ ಮೇಲಣ ದಯೆಯಿಂದ ಉಳಿಸಿಕೊಟ್ಟಿದ್ದಾನೆಂದು ನನ್ನ ಸಂಗಡ ಹೇಳಿದನು.


ನನ್ನ ಜೀವದಾಣೆ, ದುಷ್ಟನ ಸಾವಿನಲ್ಲಿ ನನಗೆ ಲೇಶವಾದರೂ ಸಂತೋಷವಿಲ್ಲ; ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ಬಾಳುವದೇ ನನಗೆ ಸಂತೋಷ. ಇಸ್ರಾಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳನ್ನು ಬಿಡಿರಿ, ಬಿಟ್ಟುಬಿಡಿರಿ; ನೀವು ಸಾಯಲೇಕೆ? ಇದು ಕರ್ತನಾದ ಯೇಹೋವನ ನುಡಿ.


ಪಾಪಮಾಡುವವನೇ ಸಾಯುವನು; ಮಗನು ತಂದೆಯ ದೋಷಫಲವನ್ನು ಅನುಭವಿಸನು, ತಂದೆಯು ಮಗನ ದೋಷಫಲವನ್ನು ಅನುಭವಿಸನು; ಶಿಷ್ಟನ ಶಿಷ್ಟತನದ ಫಲವು ಶಿಷ್ಟನದೇ, ದುಷ್ಟನ ದುಷ್ಟತನದ ಫಲವು ದುಷ್ಟನದೇ.


ನೊಹ ದಾನಿಯೇಲ ಯೋಬ ಎಂಬಿವರು ಅದರಲ್ಲಿದ್ದರೂ ನನ್ನ ಜೀವದಾಣೆ, ತಮ್ಮ ಸದಾಚಾರದಿಂದ ಸ್ವಂತಪ್ರಾಣಗಳನ್ನು ಉಳಿಸಿಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡುಮಗನನ್ನಾಗಲೀ ಹೆಣ್ಣುಮಗಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ; ಇದು ಕರ್ತನಾದ ಯೆಹೋವನ ನುಡಿ.


ಈ ಮೂವರು ಪುರುಷರು ಅದರಲ್ಲಿದ್ದರೂ ನನ್ನ ಜೀವದಾಣೆ, ತಾವು ಉಳಿದುಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡುಮಕ್ಕಳನ್ನಾಗಲಿ ಹೆಣ್ಣುಮಕ್ಕಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ; ಇದು ಕರ್ತನಾದ ಯೆಹೋವನ ನುಡಿ.


ನೋಹ ದಾನಿಯೇಲ ಯೋಬ ಎಂಬೀ ಮೂವರು ಪುರುಷರು ಅದರಲ್ಲಿದ್ದರೂ ತಮ್ಮ ಸದಾಚಾರದಿಂದ ಸ್ವಂತಪ್ರಾಣಗಳನ್ನು ಮಾತ್ರ ಉಳಿಸಿಕೊಳ್ಳುತ್ತಿದ್ದರು; ಇದು ಕರ್ತನಾದ ಯೆಹೋವನ ನುಡಿ.


ಅವರ ಉಳಿದ ಸೊತ್ತನ್ನು ಬೆಂಕಿಯು ನಾಶಮಾಡಿತು ಎಂದು ನಿರ್ದೋಷಿಗಳು ದುಷ್ಟರನ್ನು ಅಣಕಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು