Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 14:18 - ಕನ್ನಡ ಸತ್ಯವೇದವು J.V. (BSI)

18 ಈ ಮೂವರು ಪುರುಷರು ಅದರಲ್ಲಿದ್ದರೂ ನನ್ನ ಜೀವದಾಣೆ, ತಾವು ಉಳಿದುಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡುಮಕ್ಕಳನ್ನಾಗಲಿ ಹೆಣ್ಣುಮಕ್ಕಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ; ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಈ ಮೂವರು ಪುರುಷರು ಆ ದೇಶದಲ್ಲಿದ್ದರೂ ನನ್ನ ಜೀವದಾಣೆ, ತಾವು ಉಳಿದುಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡು ಮಕ್ಕಳನ್ನಾಗಲಿ, ಹೆಣ್ಣು ಮಕ್ಕಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ” ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಈ ಮೂವರು ಪುರುಷರು ಅದರಲ್ಲಿದ್ದರೂ, ನನ್ನ ಜೀವದಾಣೆ, ತಾವು ಉಳಿದುಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡುಮಕ್ಕಳನ್ನಾಗಲಿ ಹೆಣ್ಣುಮಕ್ಕಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ; ಇದು ಸರ್ವೇಶ್ವರನಾದ ದೇವರ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ದೇವರಾದ ಯೆಹೋವನಾಣೆ, ನೋಹನಾಗಲಿ ದಾನಿಯೇಲನಾಗಲಿ ಯೋಬನಾಗಲಿ ತಮ್ಮ ಪುತ್ರಪುತ್ರಿಯರನ್ನು ರಕ್ಷಿಸಿಕೊಳ್ಳಲಾಗುತ್ತಿರಲಿಲ್ಲ. ಅವರು ತಮ್ಮನ್ನು ಮಾತ್ರ ರಕ್ಷಿಸಿಕೊಳ್ಳಬಹುದಾಗಿತ್ತು.” ಇವುಗಳನ್ನು ನನ್ನ ಒಡೆಯನಾದ ಯೆಹೋವನೇ ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಈ ಮೂವರು ಅದರಲ್ಲಿದ್ದರೂ, ನನ್ನ ಜೀವದಾಣೆ, ತಾವು ಉಳಿದುಕೊಳ್ಳುತ್ತಿದ್ದರೇ ಹೊರತು ತಮ್ಮ ಪುತ್ರಪುತ್ರಿಯರನ್ನು ಉಳಿಸಿಕೊಳ್ಳುತ್ತಿರಲಿಲ್ಲ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 14:18
6 ತಿಳಿವುಗಳ ಹೋಲಿಕೆ  

ಖಡ್ಗವೇ, ದೇಶವನ್ನು ಹೊಕ್ಕು ಹೋಗು ಎಂದು ಆಜ್ಞಾಪಿಸಿ ನಾನು ಅದನ್ನು ಆ ದೇಶಕ್ಕೆ ತಂದು ಜನಪಶುಗಳನ್ನು ಅದರೊಳಗಿಂದ ನಿರ್ಮೂಲಮಾಡುವ ಪಕ್ಷದಲ್ಲಿ


ನಾನು ಆ ದೇಶದ ಮೇಲೆ ನನ್ನ ಕೋಪವನ್ನು ಹೊಯ್ದು ರಕ್ತವನ್ನು ಸುರಿಸಿ ವ್ಯಾಧಿಯನ್ನು ಕಳುಹಿಸಿ ಜನಪಶುಗಳನ್ನು ನಿರ್ಮೂಲಮಾಡುವ ಪಕ್ಷದಲ್ಲಿ


ಈ ಪಟ್ಟಣವು ಏಕೆ ಹಾಳಾಗಬೇಕು? ಅವರು ಪ್ರವಾದಿಗಳಾಗಿದ್ದು ಯೆಹೋವನ ವಾಕ್ಯಕ್ಕೆ ನೆಲೆಯಾಗಿದ್ದರೆ ಈಗ ಸೇನಾಧೀಶ್ವರನಾದ ಯೆಹೋವನಿಗೆ ವಿಜ್ಞಾಪನೆ ಮಾಡಿ ಯೆಹೋವನ ಆಲಯದಲ್ಲಿಯೂ ಯೆಹೂದದ ಅರಸನ ಮನೆಯಲ್ಲಿಯೂ ಯೆರೂಸಲೇವಿುನಲ್ಲಿಯೂ ಉಳಿದಿರುವ ಉಪಕರಣಗಳು ಬಾಬೆಲಿಗೆ ಹೋಗದಂತೆ ಬೇಡಿಕೊಳ್ಳಲಿ.


ನಾನು ಅವರನ್ನು ಜನಾಂಗಗಳೊಳಗೆ ಚದರಿಸಿಬಿಟ್ಟು ಅನ್ಯದೇಶಗಳಲ್ಲಿ ಚಲ್ಲಾಪಿಲ್ಲಿಮಾಡುವಾಗ ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವದು.


ನೋಹ ದಾನಿಯೇಲ ಯೋಬ ಎಂಬೀ ಮೂವರು ಪುರುಷರು ಅದರಲ್ಲಿದ್ದರೂ ತಮ್ಮ ಸದಾಚಾರದಿಂದ ಸ್ವಂತಪ್ರಾಣಗಳನ್ನು ಮಾತ್ರ ಉಳಿಸಿಕೊಳ್ಳುತ್ತಿದ್ದರು; ಇದು ಕರ್ತನಾದ ಯೆಹೋವನ ನುಡಿ.


ಈ ಮೂವರು ಪುರುಷರು ಅದರಲ್ಲಿದ್ದರೂ ನನ್ನ ಜೀವದಾಣೆ ತಾವು ಉಳಿದುಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡುಮಕ್ಕಳನ್ನಾಗಲಿ ಹೆಣ್ಣುಮಕ್ಕಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ; ದೇಶವು ಹಾಳಾಗಿ ಹೋಗುವದು; ಇದು ಕರ್ತನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು