Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 14:20 - ಕನ್ನಡ ಸತ್ಯವೇದವು J.V. (BSI)

20 ನೊಹ ದಾನಿಯೇಲ ಯೋಬ ಎಂಬಿವರು ಅದರಲ್ಲಿದ್ದರೂ ನನ್ನ ಜೀವದಾಣೆ, ತಮ್ಮ ಸದಾಚಾರದಿಂದ ಸ್ವಂತಪ್ರಾಣಗಳನ್ನು ಉಳಿಸಿಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡುಮಗನನ್ನಾಗಲೀ ಹೆಣ್ಣುಮಗಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ; ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನೋಹ, ದಾನಿಯೇಲ, ಯೋಬ ಎಂಬುವರು ಆ ದೇಶದಲ್ಲಿದ್ದರೂ ನನ್ನ ಜೀವದಾಣೆ, ತಮ್ಮ ಸದಾಚಾರದಿಂದ ಸ್ವಂತಪ್ರಾಣಗಳನ್ನು ಉಳಿಸಿಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡು ಮಗನನ್ನಾಗಲಿ, ಹೆಣ್ಣು ಮಗಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ” ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನೋಹ, ದಾನಿಯೇಲ, ಯೋಬ, ಎಂಬವರು ಅದರಲ್ಲಿದ್ದರೂ ನನ್ನ ಜೀವದಾಣೆ, ತಮ್ಮ ಸದಾಚಾರದಿಂದ ಸ್ವಂತಪ್ರಾಣಗಳನ್ನು ಉಳಿಸಿಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡುಮಗನನ್ನಾಗಲಿ ಹೆಣ್ಣು ಮಗಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ; ಇದು ಸರ್ವೇಶ್ವರನಾದ ದೇವರ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ದೇವರಾದ ಯೆಹೋವನಾಣೆ, ನೋಹನಾಗಲಿ ದಾನಿಯೇಲನಾಗಲಿ ಯೋಬನಾಗಲಿ ತಮ್ಮ ಪುತ್ರಪುತ್ರಿಯರನ್ನು ರಕ್ಷಿಸಿಕೊಳ್ಳಲಾಗುತ್ತಿರಲಿಲ್ಲ. ಅವರು ತಮ್ಮನ್ನು ಮಾತ್ರ ರಕ್ಷಿಸಿಕೊಳ್ಳಬಹುದಾಗಿತ್ತು.” ಇದು ನನ್ನ ಒಡೆಯನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನೋಹನೂ, ದಾನಿಯೇಲನೂ, ಯೋಬನೂ ಅದರಲ್ಲಿದ್ದರೂ ನನ್ನ ಜೀವದಾಣೆ, ಅವರು ತಮ್ಮ ನೀತಿಯಿಂದ ತಮ್ಮ ಪ್ರಾಣಗಳನ್ನು ಮಾತ್ರ ಉಳಿಸಿಕೊಳ್ಳುತ್ತಿದ್ದರೇ ಹೊರತು ತಮ್ಮ ಪುತ್ರಪುತ್ರಿಯರನ್ನು ಉಳಿಸಿಕೊಳ್ಳುತ್ತಿರಲಿಲ್ಲ,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 14:20
20 ತಿಳಿವುಗಳ ಹೋಲಿಕೆ  

ನೋಹ ದಾನಿಯೇಲ ಯೋಬ ಎಂಬೀ ಮೂವರು ಪುರುಷರು ಅದರಲ್ಲಿದ್ದರೂ ತಮ್ಮ ಸದಾಚಾರದಿಂದ ಸ್ವಂತಪ್ರಾಣಗಳನ್ನು ಮಾತ್ರ ಉಳಿಸಿಕೊಳ್ಳುತ್ತಿದ್ದರು; ಇದು ಕರ್ತನಾದ ಯೆಹೋವನ ನುಡಿ.


ಇವರು ದೇವರ ಮಕ್ಕಳೆಂಬದೂ ಅವರು ಸೈತಾನನ ಮಕ್ಕಳೆಂಬದೂ ಇದರಿಂದ ವ್ಯಕ್ತವಾಗುತ್ತದೆ. ನೀತಿಯನ್ನು ಅನುಸರಿಸದವನೂ ತನ್ನ ಸಹೋದರನನ್ನು ಪ್ರೀತಿಸದವನೂ ದೇವರಿಂದ ಹುಟ್ಟಿದವರಲ್ಲ.


ಪ್ರಿಯರಾದ ಮಕ್ಕಳೇ, ನಿಮ್ಮನ್ನು ಸನ್ಮಾರ್ಗದಿಂದ ತಪ್ಪಿಸುವದಕ್ಕೆ ಯಾರಿಗೂ ಅವಕಾಶ ಕೊಡಬೇಡಿರಿ. ಕ್ರಿಸ್ತನು ಹೇಗೆ ನೀತಿವಂತನಾಗಿದ್ದಾನೋ ಹಾಗೆಯೇ ನೀತಿಯನ್ನನುಸರಿಸುವವನು ನೀತಿವಂತನಾಗಿದ್ದಾನೆ.


ಆತನು ನೀತಿವಂತನಾಗಿದ್ದಾನೆಂಬದು ನಿಮಗೆ ಗೊತ್ತಾಗಿದ್ದರೆ ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನಾಗಿದ್ದಾನೆಂದು ನೀವು ತಿಳಿದಿದ್ದೀರಿ.


ದೇವರು ಪಕ್ಷಪಾತಿಯಲ್ಲ, ಯಾವ ಜನರಲ್ಲಿಯಾದರೂ ದೇವರಿಗೆ ಭಯಪಟ್ಟು ನೀತಿಯನ್ನು ನಡಿಸುವವರು ಆತನಿಗೆ ಮೆಚ್ಚಿಗೆಯಾಗಿದ್ದಾರೆಂದು ಈಗ ಸಂದೇಹವಿಲ್ಲದೆ ನನಗೆ ತಿಳಿದುಬಂದಿದೆ.


ಯೆಹೋವನ ನಿಯಮವನ್ನು ಕೈಕೊಂಡ ಲೋಕದ ದೀನರೇ, ನೀವೆಲ್ಲರೂ ಯೆಹೋವನನ್ನು ಆಶ್ರಯಿಸಿರಿ, ಸದ್ಧರ್ಮವನ್ನು ಅಭ್ಯಾಸಿಸಿರಿ, ದೈನ್ಯವನ್ನು ಹೊಂದಿಕೊಳ್ಳಿರಿ; ಯೆಹೋವನ ಸಿಟ್ಟಿನ ದಿನದಲ್ಲಿ ಒಂದು ವೇಳೆ ಮರೆಯಾಗುವಿರಿ.


ನೀತಿಯ ಬೀಜವನ್ನು ಬಿತ್ತಿರಿ, ಪ್ರೀತಿಯ ಫಲವನ್ನು ಕೊಯ್ಯಿರಿ, ಗೆಯ್ಯದ ನಿಮ್ಮ ಭೂವಿುಯನ್ನು ಗೆಯ್ಯಿರಿ; ಯೆಹೋವನು ಬಂದು ನಮ್ಮ ಮೇಲೆ ನೀತಿಯನ್ನು ವರ್ಷಿಸಲೆಂದು ಆತನನ್ನು ಶರಣುಹೊಗುವ ಸಮಯವು ಒದಗಿದೆ.


ಅವನು ಮಾಡಿದ ಯಾವ ಅಪರಾಧವೂ ಅವನ ಲೆಕ್ಕಕ್ಕೆ ಸೇರಿಸಲ್ಪಡದು, ಅವನು ಮಾಡುತ್ತಿರುವ ಸದ್ಧರ್ಮದಿಂದಲೇ ಅವನು ಬಾಳುವನು.


ಈ ಮೂವರು ಪುರುಷರು ಅದರಲ್ಲಿದ್ದರೂ ನನ್ನ ಜೀವದಾಣೆ ತಾವು ಉಳಿದುಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡುಮಕ್ಕಳನ್ನಾಗಲಿ ಹೆಣ್ಣುಮಕ್ಕಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ; ದೇಶವು ಹಾಳಾಗಿ ಹೋಗುವದು; ಇದು ಕರ್ತನಾದ ಯೆಹೋವನ ನುಡಿ.


ಶಿಷ್ಟರಿಗೆ ಶುಭವೇ ಎಂದು ಹೇಳಿರಿ, ಅವರು ತಮ್ಮ ಸುಕೃತಫಲವನ್ನು ಅನುಭವಿಸುವರಷ್ಟೆ.


ಪಾಪಮಾಡುವವನೇ ಸಾಯುವನು; ಮಗನು ತಂದೆಯ ದೋಷಫಲವನ್ನು ಅನುಭವಿಸನು, ತಂದೆಯು ಮಗನ ದೋಷಫಲವನ್ನು ಅನುಭವಿಸನು; ಶಿಷ್ಟನ ಶಿಷ್ಟತನದ ಫಲವು ಶಿಷ್ಟನದೇ, ದುಷ್ಟನ ದುಷ್ಟತನದ ಫಲವು ದುಷ್ಟನದೇ.


ನಂಬಿಕೆಯಿಂದಲೇ ನೋಹನು ಅದುವರೆಗೆ ಕಾಣದಿದ್ದ ಸಂಗತಿಗಳ ವಿಷಯವಾಗಿ ದೈವೋಕ್ತಿಯನ್ನು ಹೊಂದಿ ಭಯಭಕ್ತಿಯುಳ್ಳವನಾಗಿ ತನ್ನ ಮನೆಯವರ ಸಂರಕ್ಷಣೆಗೋಸ್ಕರ ನಾವೆಯನ್ನು ಕಟ್ಟಿ ಸಿದ್ಧಮಾಡಿದನು. ಅದರಿಂದ ಅವನು ಲೋಕದವರನ್ನು ದಂಡನೆಗೆ ಪಾತ್ರರೆಂದು ನಿರ್ಣಯಿಸಿಕೊಂಡು ನಂಬಿಕೆಯ ಫಲವಾದ ನೀತಿಗೆ ಬಾಧ್ಯನಾದನು.


ಊಚ್ ದೇಶದಲ್ಲಿ ಯೋಬನೆಂಬ ಒಬ್ಬ ಮನುಷ್ಯನಿದ್ದನು; ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ ಯಥಾರ್ಥಚಿತ್ತನೂ ಆಗಿದ್ದನು.


ಯೆಹೋವನು ನನಗೆ ಹೀಗೆ ಹೇಳಿದನು - ಮೋಶೆಯೂ ಸಮುವೇಲನೂ ನನಗೆ ವಿಜ್ಞಾಪಿಸಿದರೂ ನನ್ನ ಮನಸ್ಸು ಈ ಜನರ ಕಡೆಗೆ ತಿರುಗದು; ನನ್ನ ಕಣ್ಣೆದುರಿನಿಂದ ಇವರನ್ನು ನೂಕಿಬಿಡು, ತೊಲಗಿಹೋಗಲಿ! ಅವರು - ನಾವು ಎಲ್ಲಿಗೆ ಹೋಗೋಣ ಎಂದು ಕೇಳಲು


ನೀನು ದುಷ್ಟನನ್ನು ಎಚ್ಚರಿಸಿದರೂ ಅವನು ತನ್ನ ದುಷ್ಟತನವನ್ನೂ ದುರ್ಮಾರ್ಗವನ್ನೂ ಬಿಡದೆಹೋದರೆ ತನ್ನ ಅಪರಾಧದಿಂದ ಸಾಯುವನು; ನೀನೋ ನಿನ್ನ ಪ್ರಾಣವನ್ನು ಉಳಿಸಿಕೊಂಡಿರುವಿ.


ನಾನು ಆ ದೇಶದ ಮೇಲೆ ನನ್ನ ಕೋಪವನ್ನು ಹೊಯ್ದು ರಕ್ತವನ್ನು ಸುರಿಸಿ ವ್ಯಾಧಿಯನ್ನು ಕಳುಹಿಸಿ ಜನಪಶುಗಳನ್ನು ನಿರ್ಮೂಲಮಾಡುವ ಪಕ್ಷದಲ್ಲಿ


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ಖಡ್ಗ ಕ್ಷಾಮ ದುಷ್ಟಮೃಗ ವ್ಯಾಧಿ ಎಂಬೀ ನಾಲ್ಕು ಬಾಧೆಗಳನ್ನು ಯೆರೂಸಲೇವಿುನ ಮೇಲೆ ಒಟ್ಟಿಗೆ ತಂದು ಜನಪಶುಗಳನ್ನು ನಿರ್ಮೂಲಮಾಡುವಾಗ ಹೇಳತಕ್ಕದ್ದೇನು!


ಆರಿಸಲ್ಪಟ್ಟ ಯುವಕರಲ್ಲಿ ದಾನಿಯೇಲ, ಹನನ್ಯ, ಮೀಶಾಯೇಲ, ಅಜರ್ಯ ಎಂಬ ಯೆಹೂದ್ಯರು ಸೇರಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು