Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 14:3 - ಕನ್ನಡ ಸತ್ಯವೇದವು J.V. (BSI)

3 ನರಪುತ್ರನೇ, ಇವರು ತಮ್ಮ ಬೊಂಬೆಗಳನ್ನು ಮನಸ್ಸಿನಲ್ಲಿ ನೆಲೆಗೊಳಿಸಿ ತಮಗೆ ಪಾಪಕಾರಿಯಾದ ವಿಘ್ನವನ್ನು ತಮ್ಮ ಮುಂದೆ ಇಟ್ಟುಕೊಂಡಿದ್ದಾರೆ; ಇಂಥವರಿಗೆ ನಾನು ದೈವೋತ್ತರವನ್ನು ದಯಪಾಲಿಸುವದು ಯುಕ್ತವೋ? ಎಂದಿಗೂ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 “ನರಪುತ್ರನೇ, ಇವರು ತಮ್ಮ ವಿಗ್ರಹಗಳನ್ನು, ಮನಸ್ಸಿನಲ್ಲಿ ನೆಲೆಗೊಳಿಸಿ, ಪಾಪಕಾರಿಯಾದ ಈ ವಿಘ್ನವನ್ನು ತಮ್ಮ ಮುಂದೆ ಇಟ್ಟುಕೊಂಡಿದ್ದಾರೆ; ಇಂಥವರಿಗೆ ನಾನು ದೈವೋತ್ತರವನ್ನು ದಯಪಾಲಿಸುವುದು ಸರಿಯೆ? ಎಂದಿಗೂ ಇಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 “ನರಪುತ್ರನೇ, ಈ ಜನರು ವಿಗ್ರಹಗಳನ್ನು, ತಮ್ಮ ಹೃದಯದಲ್ಲಿ ನೆಲೆಗೊಳಿಸಿಕೊಂಡಿದ್ದಾರೆ. ಪಾಪಕಾರಿಯಾದ ಈ ವಿಘ್ನವನ್ನು ತಮ್ಮ ಮುಂದೆಯೇ ಇಟ್ಟುಕೊಂಡಿದ್ದಾರೆ; ಇಂಥವರಿಗೆ ನಾನು ದೈವೋತ್ತರವನ್ನು ದಯಪಾಲಿಸುವುದು ಸರಿಯೆ? ಎಂದಿಗೂ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 “ನರಪುತ್ರನೇ, ಈ ಜನರು ತಮ್ಮ ವಿಗ್ರಹಗಳಿಗೆ ಪ್ರತಿಷ್ಠಿತರಾಗಿದ್ದಾರೆ ಮತ್ತು ಪಾಪಕ್ಕೆ ಬೀಳಲು ತಮಗೆ ತಾವೇ ಅವಕಾಶಮಾಡಿಕೊಡುತ್ತಾರೆ. ಸಹಾಯಕ್ಕಾಗಿ ನನ್ನನ್ನು ಕೇಳಿಕೊಳ್ಳಲು ಅವರಿಗೆ ಅವಕಾಶ ಕೊಡಬೇಕೇ? ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 “ಮನುಷ್ಯಪುತ್ರನೇ, ಈ ಮನುಷ್ಯರು ತಮ್ಮ ವಿಗ್ರಹಗಳನ್ನು ತಮ್ಮ ಹೃದಯಗಳಲ್ಲೇ ಸ್ಥಾಪಿಸಿ, ತಮ್ಮ ಅಕ್ರಮವಾದ ವಿಘ್ನಗಳನ್ನು ತಮ್ಮ ಮುಖದ ಮುಂದೆಯೇ ಇಟ್ಟುಕೊಂಡಿದ್ದಾರೆ. ಇವೆಲ್ಲವುಗಳಿಗಾಗಿ ನಾನು ಅವರನ್ನು ವಿಚಾರಿಸಬೇಕೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 14:3
37 ತಿಳಿವುಗಳ ಹೋಲಿಕೆ  

ಏಕಂದರೆ ಇಸ್ರಾಯೇಲ್ ವಂಶದವರಲ್ಲಾಗಲಿ ಇಸ್ರಾಯೇಲಿನೊಳಗೆ ವಾಸವಾಗಿರುವ ವಿದೇಶಿಗಳಲ್ಲಾಗಲಿ ಯಾವನು ನನ್ನಿಂದ ಅಗಲಿ ತನ್ನ ಬೊಂಬೆಗಳನ್ನು ಮನಸ್ಸಿನಲ್ಲಿ ನೆಲೆಗೊಳಿಸಿ ತನಗೆ ಪಾಪಕಾರಿಯಾದ ವಿಘ್ನವನ್ನು ತನ್ನ ಮುಂದೆ ಇಟ್ಟುಕೊಂಡು ಪ್ರವಾದಿಯ ಬಳಿಗೆ ಬಂದು ಅವನ ಮೂಲಕ ದೈವೋತ್ತರವನ್ನು ಕೇಳಿಕೊಳ್ಳುವನೋ ಅವನಿಗೆ ಯೆಹೋವನಾದ ನಾನೇ ಉತ್ತರಕೊಟ್ಟು


ಅವರು ತಮ್ಮ ಬೆಳ್ಳಿಯನ್ನು ಬೀದಿಗಳಲ್ಲಿ ಬಿಸಾಡುವರು, ಅವರ ಬಂಗಾರವು ಅಶುದ್ಧಪದಾರ್ಥದಂತಿರುವದು; ಯೆಹೋವನು ತನ್ನ ರೋಷವನ್ನು ತೀರಿಸುವ ದಿನದಲ್ಲಿ ಅವರ ಬೆಳ್ಳಿಬಂಗಾರವು ಅವರನ್ನು ರಕ್ಷಿಸಲಾರದು; ಅವರ ಇಷ್ಟಾರ್ಥ ನೆರವೇರದು, ಅವರ ಹೊಟ್ಟೆ ತುಂಬದು; ಏಕಂದರೆ ಅವರ ಆಸ್ತಿಯು ಅವರಿಗೆ ಪಾಪಕಾರಿವಿಘ್ನವಾಗಿತ್ತು.


ಏಕಂದರೆ ಅವರ ಹೃದಯವು ತಮ್ಮ ವಿಗ್ರಹಗಳಲ್ಲಿ ಆಸಕ್ತವಾಗಿ ಅವರು ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ನಿರಾಕರಿಸಿ ನಾನು ನೇವಿುಸಿದ ಸಬ್ಬತ್ ದಿನಗಳನ್ನು ಹೊಲೆ ಮಾಡಿದವರಾಗಿದ್ದರು.


ನರಪುತ್ರನೇ, ಇಸ್ರಾಯೇಲಿನ ಹಿರಿಯರನ್ನು ಸಂಬೋಧಿಸಿ ಹೀಗೆ ಹೇಳು - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನನ್ನು ಪ್ರಶ್ನೆಕೇಳುವದಕ್ಕೆ ಬಂದಿರೊ? ನನ್ನ ಜೀವದಾಣೆ, ನಾನು ನಿಮಗೆ ಉತ್ತರಕೊಡುವದೇ ಇಲ್ಲ; ಇದು ಕರ್ತನಾದ ಯೆಹೋವನ ನುಡಿ.


ನೀವು [ನನ್ನ ಕಡೆಗೆ] ಕೈಯೆತ್ತುವಾಗ ನಿಮ್ಮನ್ನು ನೋಡದಂತೆ ನನ್ನ ಕಣ್ಣುಗಳನ್ನು ಮರೆಮಾಡಿಕೊಳ್ಳುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿದರೂ ನಾನು ಕೇಳೆನು, ನಿಮ್ಮ ಕೈಗಳಲ್ಲಿ ರಕ್ತವು ತುಂಬಿದೆ.


ಆದಕಾರಣ ನೀನು ಅವರನ್ನು ಸಂಬೋಧಿಸಿ ಹೀಗೆ ಹೇಳು - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲ್ ವಂಶದವರಲ್ಲಿ ಯಾವ ಯಾವನು ತನ್ನ ಬೊಂಬೆಗಳನ್ನು ಮನಸ್ಸಿನಲ್ಲಿ ನೆಲೆಗೊಳಿಸಿ ತನಗೆ ಪಾಪಕಾರಿಯಾದ ವಿಘ್ನವನ್ನು ತನ್ನ ಮುಂದೆ ಇಟ್ಟುಕೊಂಡು ಪ್ರವಾದಿಯನ್ನು ಪ್ರಶ್ನೆಕೇಳುವದಕ್ಕೆ ಬರುವನೋ ಅವನ ಪಾತಕಕ್ಕೆ ಅಂದರೆ ಅವನ ಲೆಕ್ಕವಿಲ್ಲದ ಬೊಂಬೆಗಳಿಗೆ ತಕ್ಕ ಹಾಗೆ ಯೆಹೋವನಾದ ನಾನು ಅವನಿಗೆ ಉತ್ತರವನ್ನು ಕೊಡುವೆನು;


ಅವರು ತಮ್ಮ ಬೊಂಬೆಗಳ ಮುಂದೆ ಜನರಿಗಾಗಿ ಸೇವೆಮಾಡಿ ಇಸ್ರಾಯೇಲ್ ವಂಶದವರಿಗೆ ಪಾಪಕಾರಿ ವಿಘ್ನವಾದದರಿಂದ ನಾನು ಅವರ ಮೇಲೆ ಕೈಯೆತ್ತಿದ್ದೇನೆ, ಅವರು ತಮ್ಮ ದೋಷಫಲವನ್ನು ಅನುಭವಿಸೇ ತೀರಬೇಕು; ಇದು ಕರ್ತನಾದ ಯೆಹೋವನ ನುಡಿ.


ನೀವು ಬಲಿಯರ್ಪಿಸುತ್ತಾ ನಿಮ್ಮ ಮಕ್ಕಳನ್ನು ಆಹುತಿಕೊಟ್ಟು ಇಂದಿನವರೆಗೂ ನಿಮ್ಮನ್ನು ಅಶುದ್ಧಮಾಡಿಕೊಳ್ಳುತ್ತಿದ್ದೀರೋ? ಇಸ್ರಾಯೇಲ್ ವಂಶದವರೇ, ನಾನು ನಿಮ್ಮಂಥವರಿಗೆ ದೈವೋತ್ತರವನ್ನು ದಯಪಾಲಿಸಬಹುದೋ? ನನ್ನ ಜೀವದಾಣೆ, ನಿಮಗೆ ದೈವೋತ್ತರವನ್ನು ದಯಪಾಲಿಸೆನು; ಇದು ಕರ್ತನಾದ ಯೆಹೋವನ ನುಡಿ.


ಧರ್ಮೋಪದೇಶಕ್ಕೆ ಕಿವಿಗೊಡದವನು ಮಾಡುವ ದೇವಪ್ರಾರ್ಥನೆಯೂ ಅಸಹ್ಯ.


ಆದರೂ ಕೆಲವು ವಿಷಯಗಳಲ್ಲಿ ನಿನ್ನ ಮೇಲೆ ತಪ್ಪುಹೊರಿಸಬೇಕಾಗುತ್ತದೆ; ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿನ್ನುವದರಲ್ಲಿಯೂ ಜಾರತ್ವ ಮಾಡುವದರಲ್ಲಿಯೂ ಇಸ್ರಾಯೇಲ್ಯರು ಮುಗ್ಗರಿಸಿ ಬೀಳಬೇಕೆಂದು ಬಿಳಾಮನು ಬಾಲಾಕನಿಗೆ ಹೇಳಿದ ದುರ್ಬೋಧನೆಯನ್ನು ಅವಲಂಬಿಸಿರುವವರು ನಿನ್ನಲ್ಲಿದ್ದಾರೆ.


ಅದು ಎಡವುವ ಕಲ್ಲು ಮುಗ್ಗರಿಸುವ ಬಂಡೆ ಎಂತಲೂ ಬರೆದಿರುವ ಮಾತು ಸರಿಬೀಳುತ್ತದೆ. ಅವರು ದೇವರ ವಾಕ್ಯವನ್ನು ನಂಬಲೊಲ್ಲದೆ ಇರುವದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ; ಅದಕ್ಕಾಗಿಯೇ ಅವರು ನೇಮಕವಾದರು.


ನಾನು ನಿಮ್ಮ ಮೇಲೆ ನಿರ್ಮಲೋದಕವನ್ನು ಪ್ರೋಕ್ಷಿಸಲು ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ ಸಕಲವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.


ಆದರೆ ಯಾರ ಚಿತ್ತವು ತಮ್ಮ ಅಸಹ್ಯವಸ್ತುಗಳನ್ನೂ ಹೇಯವಿಗ್ರಹಗಳನ್ನೂ ಅನುಸರಿಸುತ್ತದೋ ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು. ಇದು ಕರ್ತನಾದ ಯೆಹೋವನ ನುಡಿ.


ಆದಕಾರಣ ಯೆಹೋವನೆಂಬ ನಾನು ಹೀಗನ್ನುತ್ತೇನೆ - ಇಗೋ, ಅವರು ತಪ್ಪಿಸಿಕೊಳ್ಳಲಾರದ ಕೇಡನ್ನು ಅವರ ಮೇಲೆ ಬರಮಾಡುವೆನು; ನನಗೆ ಮೊರೆಯಿಟ್ಟರೂ ಕೇಳೆನು.


ಯೆಹೋವನು ದುಷ್ಟರಿಗೆ ದೂರ, ಶಿಷ್ಟರ ಬಿನ್ನಹಕ್ಕೆ ಹತ್ತಿರ.


ಅವನು ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಿದರೂ ಆತನು ಅವನಿಗೆ ಕನಸುಗಳಿಂದಾಗಲಿ ಊರೀವಿುನಿಂದಾಗಲಿ ಪ್ರವಾದಿಗಳಿಂದಾಗಲಿ ಉತ್ತರಕೊಡಲೇ ಇಲ್ಲ.


ಇವುಗಳನ್ನು ಬಿಟ್ಟು ದೇವರಿಗೆ ಉಪಕಾರಸ್ತುತಿ ಮಾಡುವದು ಉತ್ತಮ. ಜಾರರು ದುರಾಚಾರಿಗಳು ವಿಗ್ರಹಾರಾಧಕರಂತಿರುವ ಲೋಭಿಗಳು ಇವರಲ್ಲಿ ಒಬ್ಬರಿಗಾದರೂ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯತೆ ಇಲ್ಲವೇ ಇಲ್ಲವೆಂದು ನೀವು ಚೆನ್ನಾಗಿ ಬಲ್ಲಿರಲ್ಲವೇ.


ಆಗ ಯೇಸು ಅವರಿಗೆ - ಇದನ್ನೆಲ್ಲಾ ಯಾವ ಅಧಿಕಾರದಿಂದ ಮಾಡುತ್ತೇನೋ ಅದನ್ನು ನಾನೂ ನಿಮಗೆ ಹೇಳುವದಿಲ್ಲ ಎಂದು ಹೇಳಿದನು. ಆಗ ಆತನು ಜನರಿಗೆ ಒಂದು ಸಾಮ್ಯವನ್ನು ಹೇಳುವದಕ್ಕೆ ತೊಡಗಿದನು.


ಆಗ ಸೇನಾಧೀಶ್ವರ ಯೆಹೋವನು ಇಂತೆಂದನು - ನಾನು ಕೂಗಿದರೂ ಅವರು ಹೇಗೆ ಕೇಳಲಿಲ್ಲವೋ ಹಾಗೆ ಅವರು ಕೂಗಿದರೂ ನಾನು ಕೇಳುವದಿಲ್ಲ;


ಜನಪಶುಗಳನ್ನೂ ಆಕಾಶದ ಪಕ್ಷಿಗಳನ್ನೂ ಸಮುದ್ರದ ಮೀನುಗಳನ್ನೂ ನಾಶಪಡಿಸುವೆನು; ವಿಗ್ರಹಗಳೆಂಬ ವಿಘ್ನಗಳನ್ನೂ ಅವುಗಳಿಗೆ ಎಡವುವ ದುಷ್ಟರನ್ನೂ ಸಂಹರಿಸುವೆನು; ಭೂವಿುಯ ಮೇಲಿಂದ ನರಸಂತಾನವನ್ನು ಕಿತ್ತುಹಾಕುವೆನು; ಇದು ಯೆಹೋವನ ನುಡಿ.


ಆಗ ತಪ್ಪಿಸಿಕೊಂಡು ಸೆರೆಗೆ ಒಯ್ಯಲ್ಪಟ್ಟು ಜನಾಂಗಗಳ ಮಧ್ಯೆ ವಾಸಿಸುವ ನಿಮ್ಮವರು ಅನ್ಯದೇವತೆಗಳಲ್ಲಿನ ಮೋಹದಿಂದ ನನ್ನನ್ನು ತೊರೆದ ತಮ್ಮ ಹೃದಯವನ್ನೂ ತಮ್ಮ ಬೊಂಬೆಗಳ ಮೇಲಣ ಕಾಮದಿಂದ ದೇವದ್ರೋಹಮಾಡಿದ ತಮ್ಮ ಕಣ್ಣುಗಳನ್ನೂ ಭಂಗಪಡಿಸಿದವನು ನಾನೇ ಎಂಬದಾಗಿ ನನ್ನನ್ನು ಜ್ಞಾಪಕಮಾಡಿಕೊಂಡು ತಾವು ಬಹಳ ಅಸಹ್ಯಕಾರ್ಯಗಳನ್ನು ನಡಿಸಿ ಕೆಟ್ಟತನವನ್ನು ಮಾಡಿದ್ದೇವೆಂದು ತಮ್ಮನ್ನು ತಾವೇ ಹೇಸಿಕೊಳ್ಳುವರು.


ಇದಲ್ಲದೆ ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು ಅಧರ್ಮಮಾಡಿ ನಾನು ಅವನ ಮುಂದೆ ಒಡ್ಡಿದ ಆಟಂಕವನ್ನು ಎಡವಿದರೆ ಅವನು ಸತ್ತೇ ಸಾಯುವನು; ನೀನು ಅವನನ್ನು ಎಚ್ಚರಿಸದೆಹೋದ ಕಾರಣ ಅವನು ತನ್ನ ಪಾಪದಿಂದ ಸಾಯಬೇಕಾಯಿತು. ಅವನು ಮಾಡಿದ ಸುಕೃತ್ಯಗಳು ಲೆಕ್ಕಕ್ಕೆ ಬಾರವು; ಅವನ ಮರಣಕ್ಕಾಗಿ ನಿನಗೇ ಮುಯ್ಯಿತೀರಿಸುವೆನು.


ಹೃದಯವು ಎಲ್ಲಕ್ಕಿಂತಲೂ ವಂಚಕ; ಗುಣವಾಗದ ರೋಗಕ್ಕೆ ಒಳಗಾಗಿದೆ; ಅದನ್ನು ಯಾರು ತಿಳಿದಾರು?


[ಕೇಳಿರಿ], ಸನ್ಮಾರ್ಗದಲ್ಲಿ ನಡೆದು ಯಥಾರ್ಥವಾಗಿ ನುಡಿದು ದೋಚಿಕೊಂಡ ಲಾಭ ಬೇಡವೆಂದು ಲಂಚ ಮುಟ್ಟದಂತೆ ಕೈ ಒದರಿ ಕೊಲೆಯ ಮಾತಿಗೆ ಕಿವಿಗೊಡದೆ ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನೇ ಉನ್ನತಸನ್ನಿಧಾನದಲ್ಲಿ ವಾಸಿಸುವನು;


ದುಷ್ಟರ ಯಜ್ಞವೇ ಅಸಹ್ಯ, ಅದನ್ನು ದುರ್ಬುದ್ಧಿಯಿಂದ ಅರ್ಪಿಸುವದು ಮತ್ತೂ ಅಸಹ್ಯ.


ದುಷ್ಟರ ಯಜ್ಞ ಯೆಹೋವನಿಗೆ ಅಸಹ್ಯ; ಶಿಷ್ಟರ ಬಿನ್ನಪ ಆತನಿಗೆ ಒಪ್ಪಿತ.


ಯಾವ ನೀಚವಾದ ಕಾರ್ಯವನ್ನೂ ದೃಷ್ಟಿಸುವದಿಲ್ಲ; ದುರಾಚಾರವನ್ನು ಹಗೆಮಾಡುತ್ತೇನೆ, ಅದರ ಗೊಡವೆಯೇ ನನಗೆ ಬೇಡ.


ನಾನು ಕೆಟ್ಟತನದ ಮೇಲೆ ಮನಸ್ಸಿಟ್ಟಿದ್ದರೆ ಸ್ವಾವಿುಯು ನನ್ನ ವಿಜ್ಞಾಪನೆಯನ್ನು ಕೇಳುತ್ತಿದ್ದಿಲ್ಲ.


ಎಲೀಷನು ಇಸ್ರಾಯೇಲ್ಯರ ಅರಸನಿಗೆ - ನನಗೂ ನಿನಗೂ ಗೊಡವೆಯೇನು? ನಿನ್ನ ತಂದೆತಾಯಿಗಳ ಪ್ರವಾದಿಗಳ ಬಳಿಗೆ ಹೋಗು ಎಂದು ಹೇಳಿದನು. ಅದಕ್ಕೆ ಇಸ್ರಾಯೇಲ್ಯರ ಅರಸನು - ಹಾಗನ್ನಬೇಡ; ಯೆಹೋವನು ಈ ಮೂರು ಮಂದಿ ಅರಸರಾದ ನಮ್ಮನ್ನು ಮೋವಾಬ್ಯರ ಕೈಗೆ ಒಪ್ಪಿಸುವದಕ್ಕೋಸ್ಕರ ಇಲ್ಲಿಗೆ ಬರಮಾಡಿದನಲ್ಲವೋ ಅಂದನು.


ಯೆಹೋವನು ಈ ವಾಕ್ಯವನ್ನು ನನಗೆ ಅನುಗ್ರಹಿಸಿದನು -


ನರಪುತ್ರನೇ, ನಿನ್ನ ಜನರು ಗೋಡೆಗಳ ನೆರಳಿನಲ್ಲಿಯೂ ಮನೆಯ ಬಾಗಿಲುಗಳಲ್ಲಿಯೂ ನಿನ್ನ ಪ್ರಸ್ತಾಪವನ್ನೆತ್ತಿ ಪರಸ್ಪರವಾಗಿ ಒಬ್ಬರಿಗೊಬ್ಬರು - ಯೆಹೋವನ ಬಾಯಿಂದ ಹೊರಟ ಮಾತೇನು ಕೇಳೋಣ ಬನ್ನಿರಿ ಎಂದು ಹೇಳಿಕೊಳ್ಳುತ್ತಿದ್ದಾರೆ.


[ಆಹಾ, ಯಾಜಕರೇ,] ನೀವು ಹಗಲಿನಲ್ಲಿ ಎಡವುವಿರಿ; ರಾತ್ರಿಯಲ್ಲಿ ನಿಮ್ಮೊಂದಿಗೆ ಪ್ರವಾದಿಗಳೂ ಎಡವುವರು; ನಾನು ನಿಮ್ಮ ವಂಶಮೂಲವನ್ನು ನಾಶಮಾಡುವೆನು.


ದಯಮಾಡಿ ಯೆಹೋವನ ಚಿತ್ತವೇನೆಂದು ಆತನನ್ನು ನಮಗೋಸ್ಕರ ವಿಚಾರಿಸು; ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಮಗೆ ವಿರುದ್ಧವಾಗಿ ಯುದ್ಧಮಾಡುತ್ತಿದ್ದಾನಲ್ಲಾ; ಒಂದುವೇಳೆ ಯೆಹೋವನು ತನ್ನ ಸಮಸ್ತ ಅದ್ಭುತಕಾರ್ಯಗಳಿಗೆ ಅನುಗುಣವಾಗಿ ನಮ್ಮ ಪಕ್ಷವನ್ನು ವಹಿಸಿ ಈ ಶತ್ರುವು ನಮ್ಮ ಕಡೆಯಿಂದ ತೊಲಗುವಂತೆ ಮಾಡಿಯಾನು ಎಂದು ಅವರ ಮೂಲಕ ವಿಜ್ಞಾಪಿಸಿದಾಗ ಯೆಹೋವನಿಂದ ಯೆರೆಮೀಯನಿಗೆ ದೈವೋಕ್ತಿಯು ದೊರೆಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು