Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 14:7 - ಕನ್ನಡ ಸತ್ಯವೇದವು J.V. (BSI)

7 ಏಕಂದರೆ ಇಸ್ರಾಯೇಲ್ ವಂಶದವರಲ್ಲಾಗಲಿ ಇಸ್ರಾಯೇಲಿನೊಳಗೆ ವಾಸವಾಗಿರುವ ವಿದೇಶಿಗಳಲ್ಲಾಗಲಿ ಯಾವನು ನನ್ನಿಂದ ಅಗಲಿ ತನ್ನ ಬೊಂಬೆಗಳನ್ನು ಮನಸ್ಸಿನಲ್ಲಿ ನೆಲೆಗೊಳಿಸಿ ತನಗೆ ಪಾಪಕಾರಿಯಾದ ವಿಘ್ನವನ್ನು ತನ್ನ ಮುಂದೆ ಇಟ್ಟುಕೊಂಡು ಪ್ರವಾದಿಯ ಬಳಿಗೆ ಬಂದು ಅವನ ಮೂಲಕ ದೈವೋತ್ತರವನ್ನು ಕೇಳಿಕೊಳ್ಳುವನೋ ಅವನಿಗೆ ಯೆಹೋವನಾದ ನಾನೇ ಉತ್ತರಕೊಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 “ಏಕೆಂದರೆ ಇಸ್ರಾಯೇಲ್ ವಂಶದವರಲ್ಲಾಗಲಿ ಮತ್ತು ಇಸ್ರಾಯೇಲಿನೊಳಗೆ ವಾಸವಾಗಿರುವ ವಿದೇಶಿಗಳಲ್ಲಾಗಲಿ ಯಾವನು ನನ್ನಿಂದ ದೂರವಾಗಿ, ತನ್ನ ವಿಗ್ರಹಗಳನ್ನು ಮನಸ್ಸಿನಲ್ಲಿ ನೆಲೆಗೊಳಿಸಿ, ತನಗೆ ಪಾಪಕಾರಿಯಾದ ವಿಘ್ನವನ್ನು ತನ್ನ ಮುಂದೆ ಇಟ್ಟುಕೊಂಡು ಪ್ರವಾದಿಯ ಬಳಿಗೆ ಬಂದು ಅವನ ಮೂಲಕ ದೈವೋತ್ತರವನ್ನು ಕೇಳಿಕೊಳ್ಳುವನೋ ಅವನಿಗೆ ಯೆಹೋವನಾದ ನಾನೇ ಉತ್ತರಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 “ಏಕೆಂದರೆ ಇಸ್ರಯೇಲ್ ವಂಶದವರಲ್ಲಾಗಲಿ ಇಸ್ರಯೇಲಿನಲ್ಲಿ ನೆಲೆಸಿರುವ ವಿದೇಶಿಗಳಲ್ಲಾಗಲಿ ಯಾವನಾದರೂ ನನ್ನಿಂದ ಅಗಲಿ ವಿಗ್ರಹಗಳನ್ನು ಹೃದಯದಲ್ಲಿ ನೆಲೆಗೊಳಿಸಿಕೊಂಡು ಪಾಪಕಾರಿಯಾದ ಆ ವಿಘ್ನವನ್ನು ತನ್ನ ಮುಂದೆಯೇ ಇಟ್ಟುಕೊಂಡು, ಪ್ರವಾದಿಯ ಬಳಿಗೆ ಬಂದು, ಅವನ ಮೂಲಕ ದೈವೋತ್ತರವನ್ನು ಕೇಳಿಕೊಂಡರೆ ಅವನಿಗೆ ಸರ್ವೇಶ್ವರನಾದ ನಾನೇ ಉತ್ತರಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೋವನಾದ ನಾನೇ ಸ್ವತಃ ಪ್ರತಿಯೊಬ್ಬನಿಗೂ ಉತ್ತರಿಸುವೆನು ಅಂದರೆ ಅವನು ತನ್ನನ್ನು ಪಾಪಕ್ಕೆ ಬೀಳಿಸುವ ವಿಗ್ರಹಗಳನ್ನು ಹೊಂದಿದ್ದರೂ ಆ ವಿಗ್ರಹಗಳನ್ನು ಪೂಜಿಸುತ್ತಿದ್ದರೂ ಮತ್ತು ನನ್ನಿಂದ ತನ್ನನ್ನು ಬೇರ್ಪಡಿಸಿಕೊಳ್ಳುತ್ತಿದ್ದರೂ ನನ್ನ ಉಪದೇಶಕ್ಕಾಗಿ ನನ್ನ ಬಳಿಗೆ ಬಂದರೆ ಅವನು ಇಸ್ರೇಲನಾಗಿದ್ದರೂ ಇಸ್ರೇಲಿನಲ್ಲಿ ವಾಸವಾಗಿರುವ ಪರದೇಶಿಯಾಗಿದ್ದರೂ ನಾನು ಶಾಪವೆಂಬ ಉತ್ತರ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ ‘ಏಕೆಂದರೆ ಇಸ್ರಾಯೇಲ್ ವಂಶದವರಲ್ಲಾಗಲಿ ಇಸ್ರಾಯೇಲಿನಲ್ಲಿ ನೆಲೆಸಿರುವ ವಿದೇಶಿಗಳಲ್ಲಾಗಲಿ, ಯಾವನಾದರೂ ನನ್ನಿಂದ ಅಗಲಿ ವಿಗ್ರಹಗಳನ್ನು ಹೃದಯದಲ್ಲಿ ನೆಲೆಗೊಳಿಸಿಕೊಂಡು ಪಾಪಕಾರಿಯಾದ ಆ ವಿಘ್ನವನ್ನು ತನ್ನ ಮುಂದೆಯೇ ಇಟ್ಟುಕೊಂಡು, ಪ್ರವಾದಿಯ ಬಳಿಗೆ ಬಂದು, ಅವನ ಮೂಲಕ ದೈವೋತ್ತರವನ್ನು ಕೇಳಿಕೊಂಡರೆ, ಯೆಹೋವ ದೇವರಾದ ನಾನೇ ಉತ್ತರಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 14:7
24 ತಿಳಿವುಗಳ ಹೋಲಿಕೆ  

ನಿಮ್ಮ ಬಳಿಯಲ್ಲಿ ವಾಸವಾಗಿರುವ ಪರದೇಶದವನು ಯೆಹೋವನಿಗೆ ಈ ಪಸ್ಕ ಹಬ್ಬವನ್ನು ಆಚರಿಸಬೇಕೆಂದು ಅಪೇಕ್ಷಿಸಿದರೆ ಅವನೂ ಅವನಿಗೆ ಸೇರಿರುವ ಗಂಡಸರೆಲ್ಲರೂ ಸುನ್ನತಿ ಮಾಡಿಸಿಕೊಳ್ಳಬೇಕು; ತರುವಾಯ ಅವನು ಹತ್ತಿರ ಬಂದು ಈ ಹಬ್ಬವನ್ನು ಆಚರಿಸಬಹುದು. ಅಂಥವನು ಸ್ವದೇಶದವನಂತೆಯೇ ಇರುವನು; ಆದರೆ ಸುನ್ನತಿ ಮಾಡಿಸಿಕೊಳ್ಳದವನು ಆ ಭೋಜನವನ್ನು ಮಾಡಲೇ ಕೂಡದು.


ಇವರು ಭೇದಗಳನ್ನು ಉಂಟುಮಾಡುವವರೂ ಪ್ರಾಕೃತಮನುಷ್ಯರೂ ದೇವರಾತ್ಮವಿಲ್ಲದವರೂ ಆಗಿದ್ದಾರೆ.


ಕಾಡಿನಲ್ಲಿ ದ್ರಾಕ್ಷೆಯ ಹಣ್ಣು ಸಿಕ್ಕಿದಂತೆ ಇಸ್ರಾಯೇಲು ನನಗೆ ಸಿಕ್ಕಿತು; ಹೊಸದಾಗಿ ಫಲಕ್ಕೆ ಬಂದ ಅಂಜೂರದ ಗಿಡದಲ್ಲಿ ಮೊದಲು ಮಾಗಿದ ಹಣ್ಣನ್ನು ಕಂಡ ಹಾಗೆ ನಿಮ್ಮ ಪಿತೃಗಳನ್ನು ಕಂಡೆನು; ಆದರೆ ಅವರು ಬಾಳ್‍ಪೆಗೋರಿಗೆ ಬಂದು ಬಾಳ್‍ದೇವತೆಯ ಭಕ್ತರಾಗಿ ದೀಕ್ಷೆಗೊಂಡು ತಾವು ಪ್ರೀತಿಸಿದ ದೇವತೆಯ ಹಾಗೆ ಅಸಹ್ಯರಾದರು.


ಸೂಳೆಯರಾಗಿ ನಡೆಯುವ ನಿಮ್ಮ ಕುಮಾರಿಯರನ್ನೂ ವ್ಯಭಿಚಾರಮಾಡುವ ನಿಮ್ಮ ವಧುಗಳನ್ನೂ ನಾನು ದಂಡಿಸುವದಿಲ್ಲ; ನೀವೇ ಸೂಳೆಯರನ್ನು ಕರಕೊಂಡು ಓರೆಯಾಗಿ ಹೋಗುತ್ತೀರಿ; ದೇವದಾಸಿಯರೊಂದಿಗೆ ಯಜ್ಞಮಾಡುತ್ತೀರಿ; ಆಹಾ, ವಿವೇಕವಿಲ್ಲದ ಜನರು ಕೆಡವಲ್ಪಡುವರು.


ಅರಸನಾದ ಚಿದ್ಕೀಯನು ಅವನನ್ನು ಕರತರಿಸಿ ಯೆಹೋವನಿಂದ ದೈವೋಕ್ತಿಯು ದೊರೆಯಿತೋ ಎಂದು ತನ್ನ ಮನೆಯಲ್ಲಿ ರಹಸ್ಯವಾಗಿ ವಿಚಾರಿಸಲು ಯೆರೆಮೀಯನು - ಹೌದು, ದೊರೆಯಿತು, ನೀನು ಬಾಬೆಲಿನ ಅರಸನ ಕೈಯಲ್ಲಿ ಸಿಕ್ಕಿ ಬೀಳುವಿ ಅಂದನು.


ಈ ವಿಷಯದಲ್ಲಿ ಇಸ್ರಾಯೇಲ್ಯರಲ್ಲಿರುವ ಸ್ವದೇಶದವರಿಗೂ ಅನ್ಯದೇಶದವರಿಗೂ ಒಂದೇ ವಿಧಿಯಿರಬೇಕು.


ಸರ್ವರಿಗೂ ಅಂದರೆ ನಿಮಗೂ ನಿಮ್ಮಲ್ಲಿರುವ ಅನ್ಯದೇಶದವರಿಗೂ ಒಂದೇ ವಿಧಿಯಿರಬೇಕು; ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತವಾದ ನಿಯಮ. ಯೆಹೋವನ ಸನ್ನಿಧಿಯಲ್ಲಿ ನೀವು ಹೇಗೋ ಅನ್ಯದೇಶದವನೂ ಹಾಗೆಯೇ ಇರುವನು.


ಅನ್ಯರಿಗಾಗಲಿ ಸ್ವದೇಶದವರಿಗಾಗಲಿ ಪಕ್ಷಪಾತವಿಲ್ಲದೆ ಒಂದೇ ವಿಧಿಯಿರಬೇಕು. ನಾನು ನಿಮ್ಮ ದೇವರಾದ ಯೆಹೋವನು.


ನೀನು ಇಸ್ರಾಯೇಲ್ಯರಿಗೆ ಹೀಗೆ ಹೀಗೆ ಆಜ್ಞಾಪಿಸಬೇಕು - ಇಸ್ರಾಯೇಲ್ಯರಲ್ಲಾಗಲಿ ಅವರ ನಡುವೆ ಇಳುಕೊಂಡಿರುವ ಪರದೇಶದವರಲ್ಲಾಗಲಿ ಯಾವನಾದರೂ ತನ್ನ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಕೊಟ್ಟರೆ ಅವನಿಗೆ ಮರಣಶಿಕ್ಷೆಯಾಗಬೇಕು; ದೇಶದ ಜನರು ಅವನನ್ನು ಕಲ್ಲೆಸೆದು ಕೊಲ್ಲಬೇಕು.


ಇದು ನಿಮಗೆ ಶಾಶ್ವತವಾದ ನಿಯಮ; ಯಾವದಂದರೆ ಸ್ವದೇಶಸ್ಥರಾದ ನೀವೂ ನಿಮ್ಮಲ್ಲಿ ಇಳುಕೊಂಡಿರುವ ಅನ್ಯದೇಶದವರೂ ಎಲ್ಲರೂ ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಸಕಲ ವಿಧವಾದ ಕೆಲಸಗಳನ್ನೂ ಬಿಟ್ಟು [ಉಪವಾಸಮಾಡಿ] ಪ್ರಾಣವನ್ನು ಕುಂದಿಸಿಕೊಳ್ಳಬೇಕು.


ಏಳನೆಯ ದಿನವು ನಿನ್ನ ದೇವರಾದ ಯೆಹೋವನಿಗೆ ಮೀಸಲಾದ ವಿಶ್ರಾಂತಿ ದಿನವಾಗಿದೆ; ಅದರಲ್ಲಿ ನೀನು ಯಾವ ಕೆಲಸವನ್ನೂ ಮಾಡಬಾರದು. ನಿನ್ನ ಗಂಡು ಮಕ್ಕಳು ಹೆಣ್ಣು ಮಕ್ಕಳು ಗಂಡಾಳು ಹೆಣ್ಣಾಳು ಪಶುಗಳು ನಿನ್ನ ಊರಲ್ಲಿ ಇರುವ ಅನ್ಯದೇಶದವರು ಯಾವ ಕೆಲಸವನ್ನೂ ಮಾಡಬಾರದು.


ಯೆಹೋವನೇ, ನಾವು ನಿನ್ನ ಮಾರ್ಗದಿಂದ ತಪ್ಪಿ ಅಲೆಯುವಂತೆ ಏಕೆ ಮಾಡುತ್ತೀ? ನಾವು ನಿನಗೆ ಭಯಪಡದ ಹಾಗೆ ನಮ್ಮ ಹೃದಯವನ್ನು ಕಠಿನ ಪಡಿಸುವದೇಕೆ? ನಿನ್ನ ಸೇವಕರ ನಿವಿುತ್ತ ನಿನ್ನ ಬಾಧ್ಯವಾದ ಕುಲಗಳಿಗಾಗಿ ತಿರುಗಿ ಪ್ರಸನ್ನನಾಗು,


ಇದಲ್ಲದೆ ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು ಅಧರ್ಮಮಾಡಿ ನಾನು ಅವನ ಮುಂದೆ ಒಡ್ಡಿದ ಆಟಂಕವನ್ನು ಎಡವಿದರೆ ಅವನು ಸತ್ತೇ ಸಾಯುವನು; ನೀನು ಅವನನ್ನು ಎಚ್ಚರಿಸದೆಹೋದ ಕಾರಣ ಅವನು ತನ್ನ ಪಾಪದಿಂದ ಸಾಯಬೇಕಾಯಿತು. ಅವನು ಮಾಡಿದ ಸುಕೃತ್ಯಗಳು ಲೆಕ್ಕಕ್ಕೆ ಬಾರವು; ಅವನ ಮರಣಕ್ಕಾಗಿ ನಿನಗೇ ಮುಯ್ಯಿತೀರಿಸುವೆನು.


[ಆಹಾ, ಯಾಜಕರೇ,] ನೀವು ಹಗಲಿನಲ್ಲಿ ಎಡವುವಿರಿ; ರಾತ್ರಿಯಲ್ಲಿ ನಿಮ್ಮೊಂದಿಗೆ ಪ್ರವಾದಿಗಳೂ ಎಡವುವರು; ನಾನು ನಿಮ್ಮ ವಂಶಮೂಲವನ್ನು ನಾಶಮಾಡುವೆನು.


ಶಾಪದಿಂದ ಕೂಡಿರುವ ಈ ಪ್ರತಿಜ್ಞೆಯನ್ನು ಕೇಳಿದ ಯಾವನಾದರೂ ತನ್ನೊಳಗೆ - ನಾನು ಹಟವನ್ನು ಹಿಡಿದು ಅವಿಧೇಯನಾದರೂ ನನಗೆ ಕ್ಷೇಮವಾಗಿಯೇ ಇರುವದು ಅಂದುಕೊಂಡು ಹಿಗ್ಗಬಾರದು. ಹಾಗೆ ಮಾಡುವವನು ದೋಷಿಗಳಿಗೂ ನಿರ್ದೋಷಿಗಳಿಗೂ ನಾಶನವನ್ನುಂಟುಮಾಡಾನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು