Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 14:8 - ಕನ್ನಡ ಸತ್ಯವೇದವು J.V. (BSI)

8 ಅವನ ಮೇಲೆ ಉಗ್ರಕೋಪಗೊಂಡು ಅವನ ಗತಿಯನ್ನು ಬೆರಗಿಗೂ ಎಚ್ಚರಿಕೆಯ ಮಾತುಗಳಿಗೂ ಕಟ್ಟುಗಾದೆಗಳಿಗೂ ಈಡುಮಾಡಿ ಅವನನ್ನು ನನ್ನ ಜನರೊಳಗಿಂದ ಕಿತ್ತುಹಾಕುವೆನು; ಹೀಗೆ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವನ ಮೇಲೆ ಉಗ್ರಕೋಪಗೊಂಡು, ಅವನನ್ನು ಎಚ್ಚರಿಕೆಗೆ ಗುರುತಾಗಿಯೂ, ಕಟ್ಟು ಗಾದೆಗಳಿಗೂ ವಸ್ತುವಾಗಿ ಮಾಡಿ, ನನ್ನ ಜನರೊಳಗಿಂದ ಕಿತ್ತುಹಾಕುವೆನು; ಹೀಗೆ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವನಿಗೆ ವಿಮುಖನಾಗಿ ಅವನ ದುರ್ಗತಿಯು ಎಚ್ಚರಿಕೆಗೆ ಗುರುತಾಗಿಯೂ ಕಟ್ಟುಗಾದೆಗಳಿಗೆ ವಸ್ತುವಾಗಿಯೂ ಆಗುವಂತೆ ಮಾಡುವೆನು; ಅವನನ್ನು ನನ್ನ ಜನರಿಂದ ಹೊರಹಾಕುವೆನು; ಹೀಗೆ ನಾನೇ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಾನು ಅವನ ವಿರುದ್ಧವಾಗಿ ತಿರುಗಿ ಅವನನ್ನು ನಾಶಮಾಡುವೆನು. ಅವನು ಇಸ್ರೇಲರಿಗೆ ನಿದರ್ಶನವಾಗಿರಬೇಕು, ಜನರು ಅವನನ್ನು ನೋಡಿ ನಗಾಡುವರು. ನಾನು ಅವನನ್ನು ನನ್ನ ಜನರ ಮಧ್ಯದಿಂದ ತೆಗೆದು ಬಿಡುವೆನು. ಆಗ ನೀವು ನಾನೇ ಯೆಹೋವನೆಂದು ತಿಳಿಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಾನು ಅಂಥವನ ಮೇಲೆ ಬಹುಕೋಪಗೊಂಡು, ಅವನನ್ನು ಗುರುತನ್ನಾಗಿಯೂ, ಗಾದೆಯನ್ನಾಗಿಯೂ ಮಾಡಿ, ನನ್ನ ಜನರ ಮಧ್ಯದೊಳಗಿಂದ ತೆಗೆದುಬಿಡುವೆನು. ಹೀಗೆ ನಾನೇ ಯೆಹೋವ ದೇವರು ಎಂದು ನಿಮಗೆ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 14:8
25 ತಿಳಿವುಗಳ ಹೋಲಿಕೆ  

ಅವರ ಮೇಲೆ ಕೋಪದೃಷ್ಟಿಯನ್ನಿಡುವೆನು; ಅವರು ಬೆಂಕಿಯೊಳಗಿಂದ ತಪ್ಪಿಸಿಕೊಂಡರೂ ಬೆಂಕಿಯು ಅವರನ್ನು ನುಂಗಿಬಿಡುವದು; ನಾನು ಅವರ ಮೇಲೆ ಕೋಪದೃಷ್ಟಿಯನ್ನಿಡುವಾಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.


ನಾನು ಕೋಪದಿಂದಲೂ ರೋಷದಿಂದಲೂ ಕಠಿನವಾದ ಖಂಡನೆಯಿಂದಲೂ ನಿನಗೆ ಮಾಡುವ ದಂಡನೆಗಳು ಸುತ್ತಲಿನ ಜನಾಂಗಗಳ ದೂಷಣಪರಿಹಾಸಗಳಿಗೂ ಬುದ್ಧಿವಾದಾಶ್ಚರ್ಯಗಳಿಗೂ ಆಸ್ಪದವಾಗುವವು; ಇದು ಯೆಹೋವನಾದ ನನ್ನ ನುಡಿ.


ಆದಕಾರಣ ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಹೀಗನ್ನುತ್ತಾನೆ - ಆಹಾ, ಯೆಹೂದವನ್ನೆಲ್ಲಾ ನಿರ್ಮೂಲಮಾಡುವೆನು, ಕೇಡಿಗಾಗಿಯೇ ನಿಮ್ಮ ಮೇಲೆ ದೃಷ್ಟಿಯಿಡುವೆನು.


ಹತರಾದವರು ನಿಮ್ಮ ಮಧ್ಯದಲ್ಲಿ ಬೀಳುವರು; ಆಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.


ಕರ್ತನಾದ ಯೆಹೋವನು ನಿಮ್ಮನ್ನು ಕೊಂದುಹಾಕುವನು, ನಿಮ್ಮ ಹೆಸರು ನನ್ನ ಆಪ್ತಜನರು ಶಪಿಸುವ ಶಾಪದ ಮಾತಾಗಿಯೇ ಉಳಿಯುವದು; ನಾನು ನನ್ನ ಸೇವಕರಿಗೆ ಹೊಸ ಹೆಸರನ್ನು ಕೊಡುವೆನು.


ಯೆಹೋವನು ನಿಮ್ಮನ್ನು ಒಯ್ಯಿಸಿದ ಜನಾಂಗಗಳಲ್ಲಿ ನೀವು ಆಶ್ಚರ್ಯಕ್ಕೂ ಗಾದೆಗೂ ಪರಿಹಾಸ್ಯಕ್ಕೂ ಗುರಿಯಾಗುವಿರಿ.


ಇದಲ್ಲದೆ ಇಸ್ರಾಯೇಲ್ಯರಲ್ಲಿಯಾಗಲಿ ಅವರ ನಡುವೆ ಇಳುಕೊಂಡಿರುವ ಅನ್ಯದೇಶದವರಲ್ಲಿಯಾಗಲಿ ಯಾವನಾದರೂ ರಕ್ತಭೋಜನಮಾಡಿದರೆ ನಾನು ಆತನ ಮೇಲೆ ಉಗ್ರವಾದ ಕೋಪವನ್ನು ಮಾಡಿ ಅವನನ್ನು ಕುಲದಿಂದ ತೆಗೆದುಹಾಕುವೆನು.


ಅವರಿಗೆ ಸಂಭವಿಸಿದ ಈ ಸಂಗತಿಗಳು ನಿದರ್ಶನರೂಪವಾಗಿವೆ; ಮತ್ತು ಯುಗಾಂತ್ಯಕ್ಕೆ ಬಂದಿರುವವರಾದ ನಮಗೆ ಬುದ್ಧಿವಾದಗಳಾಗಿ ಬರೆದವೆ.


ಆದದರಿಂದ ದೇವರ ದಯೆಯನ್ನೂ ಕಾಠಿಣ್ಯವನ್ನೂ ನೋಡು; ಬಿದ್ದವರ ಕಡೆಗೆ ಕಾಠಿಣ್ಯ; ನಿನ್ನ ಕಡೆಗೆ ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡೇ ಇದ್ದರೆ ಆತನ ದಯೆ; ಇಲ್ಲವಾದರೆ ನಿನ್ನನ್ನೂ ಕಡಿದುಹಾಕುವನು.


ನೀವು ವಿುಥ್ಯಾದರ್ಶನವನ್ನು ಹೊಂದಿ ಕಣಿಹೇಳುವ ಕೆಲಸವು ಇನ್ನು ನಡಿಯುವದೇ ಇಲ್ಲ; ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು; ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.


ಇವರ ಚರಿತ್ರೆಯನ್ನು ಬಾಬೆಲಿನಲ್ಲಿ ಸೆರೆಯಾಗಿರುವ ಯೆಹೂದ್ಯರೆಲ್ಲರು ಶಪಿಸುವ ಮಾತಾಗಿ ತೆಗೆದುಕೊಂಡು ಬಾಬೆಲಿನ ಅರಸನು ಬೆಂಕಿಯಲ್ಲಿ ಸುಟ್ಟುಬಿಟ್ಟ ಚಿದ್ಕೀಯನ ಮತ್ತು ಅಹಾಬನ ಗತಿಯನ್ನು ಯೆಹೋವನು ನಿನಗೆ ತರಲಿ ಎಂದು ಶಪಿಸುವರು;


ಅವರ ಕೇಡಿಗಾಗಿ ನಾನು ಅವರನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು; ನಾನು ಅವರನ್ನು ಅಟ್ಟಿಬಿಡುವ ಸ್ಥಳಗಳಲ್ಲೆಲ್ಲಾ ಅವರು ನಿಂದೆ, ಕಟ್ಟುಗಾದೆ, ಪರಿಹಾಸ್ಯ, ಶಾಪ, ಇವುಗಳಿಗೆ ಗುರಿಯಾಗುವರು.


ಮೇಲಿಗಲ್ಲ ಕೇಡಿಗಾಗಿಯೇ ಈ ಪಟ್ಟಣದ ಮೇಲೆ ದೃಷ್ಟಿಯಿಟ್ಟಿದ್ದೇನೆ; ಇದು ಬಾಬೆಲಿನ ಅರಸನ ಕೈವಶವಾಗುವದು, ಅವನು ಸುಟ್ಟು ಬಿಡುವನು; ಇದು ಯೆಹೋವನ ನುಡಿ.


ಯೆಹೋವನ ಆಶೀರ್ವಾದವು ಯಾರಿಗಿರುವದೋ ಅವರು ದೇಶವನ್ನು ಅನುಭವಿಸುವರು; ಆತನ ಶಾಪವು ಯಾರಿಗಿರುವದೋ ಅವರು ತೆಗೆದುಹಾಕಲ್ಪಡುವರು.


ಕೆಡುಕರಿಗೋ ಯೆಹೋವನು ಕೋಪದ ಮುಖವುಳ್ಳವನಾಗಿರುವನು; ಲೋಕದಲ್ಲಿ ಅವರ ನೆನಪೇ ಉಳಿಯದಂತೆ ತೆಗೆದುಹಾಕುವನು.


ಭೂವಿುಯು ಬಾಯ್ದೆರೆದು ಅವರನ್ನೂ ಕೋರಹನನ್ನೂ ನುಂಗಿಬಿಟ್ಟಿತಷ್ಟೆ; ಮತ್ತು ಬೆಂಕಿಯು ಆ ಗುಂಪಿನವರಲ್ಲಿ ಬೇರೆ ಇನ್ನೂರೈವತ್ತು ಮಂದಿಯನ್ನು ದಹಿಸಿ ಇಸ್ರಾಯೇಲ್ಯರಿಗೆ ಎಚ್ಚರವುಂಟಾಗುವಂತೆ ಮಾಡಿತಲ್ಲಾ.


ಅಶುದ್ಧನಾಗಿ ದೋಷಪರಿಹಾರಮಾಡಿಕೊಳ್ಳದವನು ಯೆಹೋವನ ದೇವಸ್ಥಾನವನ್ನು ಅಪವಿತ್ರಪಡಿಸಿದ ಕಾರಣ ಸಭೆಯಿಂದ ತೆಗೆಯಲ್ಪಡಬೇಕು. ಹೊಲೆಗಳೆವ ನೀರನ್ನು ತನ್ನ ಮೇಲೆ ಚಿವಿುಕಿಸಿಕೊಳ್ಳದೆ ಹೋದದರಿಂದ ಅವನು ಅಶುದ್ಧನೇ.


ನಾನು ನಿಮ್ಮ ಮೇಲೆ ಉಗ್ರಕೋಪವನ್ನು ಮಾಡುವದರಿಂದ ನೀವು ನಿಮ್ಮ ಶತ್ರುಗಳ ಎದುರಿನಿಂದ ಸೋತು ಬೀಳುವಿರಿ; ನಿಮ್ಮ ವೈರಿಗಳು ನಿಮ್ಮನ್ನು ಆಳುವರು; ಯಾರೂ ಹಿಂದಟ್ಟದೆ ಇರುವಾಗಲೂ ನೀವು ಹೆದರಿ ಓಡುವಿರಿ.


ಅವರಿಗೆ ನೀನು ಹೀಗೆ ಆಜ್ಞಾಪಿಸಬೇಕು - ನಿಮ್ಮಲ್ಲಿಯಾಗಲಿ ನಿಮ್ಮ ಸಂತತಿಯವರಲ್ಲಿಯಾಗಲಿ ಯಾವನಾದರೂ ಅಶುದ್ಧನಾಗಿರುವಾಗ ಇಸ್ರಾಯೇಲ್ಯರು ಯೆಹೋವನಿಗೆ ಮೀಸಲೆಂದು ಸಮರ್ಪಿಸುವ ದ್ರವ್ಯಗಳ ಬಳಿಗೆ ಬಂದರೆ ಅವನು ನನ್ನ ಸಾನ್ನಿಧ್ಯಸೇವೆಯಿಂದ ತೆಗೆಯಲ್ಪಡಬೇಕು; ನಾನು ಯೆಹೋವನು.


ಪ್ರಾಣವನ್ನು ಹೋಗಲಾಡಿಸಿಕೊಂಡ ಆ ದೋಷಿಗಳ ಧೂಪಾರತಿಗಳು ಯೆಹೋವನ ಸನ್ನಿಧಿಗೆ ತರಲ್ಪಟ್ಟ ಕಾರಣ ಪರಿಶುದ್ಧವಾದವು; ಆದದರಿಂದ ಅವುಗಳನ್ನು ತಗಡುಗಳಾಗಿ ಹೊಡೆದು ಯಜ್ಞವೇದಿಗೆ ಮುಚ್ಚಳವನ್ನು ಮಾಡಿಸಬೇಕು; ಹಾಗೆ ಅವು ಇಸ್ರಾಯೇಲ್ಯರಿಗೆ ನೆನಪುಹುಟ್ಟಿಸುವವು ಎಂದು ಹೇಳಿದನು.


ಇವು ನಿಮಗೂ ನಿಮ್ಮ ಸಂತತಿಯವರಿಗೂ ಯಾವಾಗಲೂ ಪ್ರಾಪ್ತವಾಗುತ್ತಾ [ಎಲ್ಲರಿಗೂ] ಎಚ್ಚರಿಕೆಯನ್ನೂ ಬೆರಗನ್ನೂ ಉಂಟುಮಾಡುವವು.


ಶಾಪದಿಂದ ಕೂಡಿರುವ ಈ ಪ್ರತಿಜ್ಞೆಯನ್ನು ಕೇಳಿದ ಯಾವನಾದರೂ ತನ್ನೊಳಗೆ - ನಾನು ಹಟವನ್ನು ಹಿಡಿದು ಅವಿಧೇಯನಾದರೂ ನನಗೆ ಕ್ಷೇಮವಾಗಿಯೇ ಇರುವದು ಅಂದುಕೊಂಡು ಹಿಗ್ಗಬಾರದು. ಹಾಗೆ ಮಾಡುವವನು ದೋಷಿಗಳಿಗೂ ನಿರ್ದೋಷಿಗಳಿಗೂ ನಾಶನವನ್ನುಂಟುಮಾಡಾನು.


ಯೆಹೋವನು ನೀತಿವಂತರ ಕೂಗನ್ನು ಕೇಳಿ ಎಲ್ಲಾ ಕಷ್ಟಗಳಿಂದ ಅವರನ್ನು ಬಿಡಿಸುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು