Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 14:9 - ಕನ್ನಡ ಸತ್ಯವೇದವು J.V. (BSI)

9 ಒಬ್ಬ ಪ್ರವಾದಿಯು ಮರುಳುಗೊಂಡು ದೈವೋಕ್ತಿಯನ್ನು ನುಡಿದರೆ ಆ ಪ್ರವಾದಿಯನ್ನು ಮರುಳುಗೊಳಿಸಿದವನು ಯೆಹೋವನಾದ ನಾನೇ; ನಾನು ಅವನ ಮೇಲೆ ಕೈಯೆತ್ತಿ ಇಸ್ರಾಯೇಲ್ಯರಾದ ನನ್ನ ಜನರೊಳಗಿಂದ ಅವನನ್ನು ಕಿತ್ತು ನಿರ್ನಾಮಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ಒಬ್ಬ ಪ್ರವಾದಿಯು ಮರುಳುಗೊಂಡು ದೈವೋಕ್ತಿಯನ್ನು ನುಡಿದರೆ, ಆ ಪ್ರವಾದಿಯನ್ನು ಮರುಳುಗೊಳಿಸಿದವನು ಯೆಹೋವನಾದ ನಾನೇ; ನಾನು ಅವನ ಮೇಲೆ ಕೈಯೆತ್ತಿ ಇಸ್ರಾಯೇಲರಾದ ನನ್ನ ಜನರೊಳಗಿಂದ ಅವನನ್ನು ಕಿತ್ತು ನಿರ್ನಾಮಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 “ಒಬ್ಬ ಪ್ರವಾದಿ ಮರುಳುಗೊಂಡು ದೈವೋಕ್ತಿಯೊಂದನ್ನು ನುಡಿದರೆ, ಆ ಪ್ರವಾದಿಯನ್ನು ಮರುಳುಗೊಳಿಸಿದವನು ಸರ್ವೇಶ್ವರನಾದ ನಾನೇ. ನಾನು ಅವನ ಮೇಲೆ ಕೈಯೆತ್ತಿ ಇಸ್ರಯೇಲರಾದ ನನ್ನ ಜನರಿಂದ ತೆಗೆದುಹಾಕಿ ಅವನನ್ನು ನಿರ್ನಾಮ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆದರೆ ಒಬ್ಬ ಪ್ರವಾದಿಯು ಅವನಿಗೆ ತನ್ನದೇ ಆದ ಉತ್ತರವನ್ನು ಕೊಡುವಷ್ಟು ಮೂರ್ಖನಾಗಿದ್ದರೆ, ಆಗ ನಾನು, ಅವನು ಎಂಥಾ ಮೂರ್ಖನಾಗಿದ್ದಾನೆಂದು ತೋರಿಸುವೆನು. ಅವನ ಮೇಲೆ ನನ್ನ ಸಾಮರ್ಥ್ಯವನ್ನು ಪ್ರಯೋಗಿಸುವೆನು. ಅವನನ್ನು ನಾಶಮಾಡಿ ನನ್ನ ಜನರ ಮಧ್ಯದಿಂದ ಅವನನ್ನು ತೆಗೆದುಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ ‘ಪ್ರವಾದಿಯು ಮೋಸಹೋಗಿ ವಾಕ್ಯವನ್ನು ಹೇಳಿದರೆ, ಯೆಹೋವ ದೇವರಾದ ನಾನೇ ಆ ಪ್ರವಾದಿಯನ್ನು ಮೋಸಗೊಳಿಸಿರುತ್ತೇನೆ. ನಾನು ನನ್ನ ಕೈಯನ್ನು ಅವನ ವಿರುದ್ಧವಾಗಿ ಚಾಚಿ, ನನ್ನ ಜನರಾದ ಇಸ್ರಾಯೇಲರ ಮಧ್ಯದೊಳಗಿಂದ ಅವನನ್ನು ನಾಶಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 14:9
24 ತಿಳಿವುಗಳ ಹೋಲಿಕೆ  

ಇದಲ್ಲದೆ ನಾನೇ ಯೆಹೋವನು ಎಂದು ಅವರು ತಿಳುಕೊಳ್ಳುವಂತೆ ನಾನು ಅವರಿಗೆ ಅಹಿತವಾದ ಆಜ್ಞೆಗಳನ್ನೂ ಜೀವಾಧಾರವಲ್ಲದ ವಿಧಿಗಳನ್ನೂ ನೇವಿುಸಿ


ಆಗ ನಾನು - ಅಯ್ಯೋ, ಕರ್ತನಾದ ಯೆಹೋವನೇ, ನೀನು ಈ ಜನರಿಗೂ ಯೆರೂಸಲೇವಿುಗೂ ನಿಮಗೆ ಸಮಾಧಾನವಾಗುವದೆಂದು ಹೇಳಿ ನಿಶ್ಚಯವಾಗಿ ಇವರನ್ನು ಬಹಳ ಮೋಸಗೊಳಿಸಿದ್ದೀ; ಖಡ್ಗವು ಪ್ರಾಣದ ಮಟ್ಟಿಗೂ ಇಳಿಯುತ್ತದಲ್ಲಾ ಅಂದೆನು.


ಆದಕಾರಣ ನಾನು ನಿನ್ನ ಮೇಲೆ ಕೈಯೆತ್ತಿ ನಿನ್ನ ಆಹಾರವನ್ನು ಕಡಿಮೆಮಾಡಿದೆನು; ನಿನ್ನನ್ನು ದ್ವೇಷಿಸಿ ನಿನ್ನ ಕೆಟ್ಟ ನಡತೆಗೆ ಅಸಹ್ಯಪಡುವವರಾದ ಫಿಲಿಷ್ಟಿಯದ ಕುಮಾರ್ತೆಯರ ಕೈಗೆ ನಿನ್ನನ್ನು ಸಿಕ್ಕಿಸಿದೆನು.


ಆದಕಾರಣ ನನ್ನ ಅಪ್ಪಣೆಯಿಲ್ಲದೆ ನನ್ನ ಹೆಸರಿನಿಂದ ಪ್ರವಾದಿಸುತ್ತಾ ಖಡ್ಗವೂ ಕ್ಷಾಮವೂ ಈ ದೇಶಕ್ಕೆ ಬಾರವು ಎಂದು ಬೋಧಿಸುವ ಪ್ರವಾದಿಗಳ ವಿಷಯದಲ್ಲಿ ಯೆಹೋವನಾದ ನಾನು - ಖಡ್ಗದಿಂದಲೂ ಕ್ಷಾಮದಿಂದಲೂ ಈ ಪ್ರವಾದಿಗಳು ನಿರ್ಮೂಲರಾಗುವರು ಎಂದು ಹೇಳುತ್ತೇನೆ.


ಅದಕ್ಕೆ ತಕ್ಕಂತೆ ನಾನು ಇವರಿಗೋಸ್ಕರ ಕುತಂತ್ರಗಳನ್ನು ಆರಿಸಿಕೊಂಡು ಇವರು ಅಂಜುತ್ತಿದ್ದ ವಿಪತ್ತುಗಳನ್ನು ಬರಮಾಡುವೆನು; ಏಕೆಂದರೆ ನಾನು ಕೂಗಿದಾಗ ಯಾರೂ ಉತ್ತರಕೊಡಲಿಲ್ಲ, ನಾನು ಹೇಳಿದಾಗ ಇವರು ಕೇಳಲಿಲ್ಲ; ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನು ನಡಿಸಿ ನನಗೆ ಇಷ್ಟವಲ್ಲದ್ದನ್ನು ಆರಿಸಿಕೊಂಡರು.


ನೀನೇ ನಮ್ಮ ಪಿತೃವಾಗಿದ್ದೀಯಲ್ಲಾ; ಅಬ್ರಹಾಮನು ನಮ್ಮನ್ನರಿಯನು, ಇಸ್ರಾಯೇಲನು ನಮ್ಮನ್ನು ಗುರುತಿಸನು; ಯೆಹೋವಾ, ನೀನೇ ನಮ್ಮ ಪಿತೃ; ಆದಿಯಿಂದಲೂ ನಮ್ಮ ವಿಮೋಚಕನು ಅನ್ನಿಸಿಕೊಂಡಿದ್ದೀ.


ಕೈದಿಗಳ [ಕಾಲ] ಕೆಳಗೆ ಮುದುರಿಕೊಂಡು ಹತರಾದವರ ಕೆಳಗೆ ಬಿದ್ದಿರುವದೇ ಇವರ ಗತಿ! ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈ ಎತ್ತಿಯೇ ಇದೆ.


ಮನಸ್ಸೆಯು ಎಫ್ರಾಯೀಮನ್ನು, ಎಫ್ರಾಯೀಮು ಮನಸ್ಸೆಯನ್ನು ತಿಂದು ಬಿಡುತ್ತದೆ, ಈ ಎರಡೂ ಯೆಹೂದಕ್ಕೆ ವಿರುದ್ಧವಾಗಿವೆ. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈ ಎತ್ತಿಯೇ ಇದೆ.


ಹೀಗಿರಲು ಕರ್ತನು ಅವರ ಯೌವನಸ್ಥರಲ್ಲಿ ಉಲ್ಲಾಸಿಸನು, ಅವರಲ್ಲಿನ ಅನಾಥರನ್ನೂ ವಿಧವೆಯರನ್ನೂ ಕರುಣಿಸನು; ಪ್ರತಿಯೊಬ್ಬನೂ ಭ್ರಷ್ಟನೂ ದುಷ್ಟನೂ ಆಗಿದ್ದಾನೆ; ಎಲ್ಲರ ಬಾಯೂ ನೀಚವಾಗಿ ಮಾತಾಡುತ್ತದೆ. ಎಷ್ಟು ದಂಡಿಸಿದರೂ ಆತನ ಕೋಪವು ತೀರದೆ ಕೈ ಎತ್ತಿಯೇ ಇದೆ.


ಇವರು ಇಸ್ರಾಯೇಲ್ಯರನ್ನು ಬಾಯಿತೆರೆದು ನುಂಗಿದ್ದಾರೆ. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈ ಎತ್ತಿಯೇ ಇದೆ.


ಹೀಗಿರಲು ಯೆಹೋವನು ತನ್ನ ಜನರಲ್ಲಿ ಉರಿಗೊಂಡು ಅವರ ಮೇಲೆ ಕೈಯೆತ್ತಿ ಅವರನ್ನು ಹೊಡೆದು ಬಿಡುವನು; ಆಗ ಬೆಟ್ಟಗಳು ನಡಗುವವು, ಹೆಣಗಳು ಬೀದಿಗಳಲ್ಲಿ ಕಸವಾಗಿ ಬಿದ್ದಿರುವವು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈಯೆತ್ತಿಯೇ ಇರುವದು.


ಆತನಲ್ಲಿ ಬಲವೂ ಸಾಮರ್ಥ್ಯವೂ ಉಂಟು; ತಪ್ಪಿದವನೂ ತಪ್ಪಿಸಿದವನೂ ಆತನಿಗೆ ಒಳಪಟ್ಟಿರುವರು.


ನೋಡು, ಯೆಹೋವನು ನಿನ್ನ ವಿಷಯದಲ್ಲಿ ಕೇಡು ನುಡಿದು ನಿನ್ನ ಪ್ರವಾದಿಗಳಲ್ಲಿ ಅಸತ್ಯವನ್ನಾಡುವ ಆತ್ಮವನ್ನು ಕಳುಹಿಸಿದ್ದಾನೆ ಎಂದು ಹೇಳಿದನು.


ಮೇಲಾಗದಿದ್ದರೂ ಮೇಲು ಮೇಲು ಎಂದು ಹೇಳಿ ನನ್ನ ಜನರ ಗಾಯವನ್ನು ಮೇಲೆ ಮೇಲೆ ವಾಸಿಮಾಡಿದ್ದಾರೆ.


ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳ್ಳಷ್ಟೂ ನಾಚಿಕೆಪಡಲಿಲ್ಲ, ಲಜ್ಜೆಯ ಗಂಧವನ್ನೂ ತಿಳಿಯಲಿಲ್ಲ; ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಗರಿಸುವರು, ಬೀಳುವವರ ಸಂಗಡ ಬಿದ್ದೇ ಹೋಗುವರು ಎಂದು ಯೆಹೋವನು ಅನ್ನುತ್ತಾನೆ.


ಪ್ರವಾದಿಯ ದೋಷವು ಎಷ್ಟೋ, ಅವನನ್ನು ಪ್ರಶ್ನೆಕೇಳುವವನ ದೋಷವೂ ಅಷ್ಟೇ; ಉಭಯರೂ ತಮ್ಮ ತಮ್ಮ ದೋಷಫಲವನ್ನು ಅನುಭವಿಸುವರು.


ದಂಡನೆಯ ದಿನಗಳು ಹತ್ತರಿಸಿವೆ, ಮುಯ್ಯಿತೀರಿಸುವ ದಿವಸಗಳು ಸಮೀಪಿಸಿವೆ; ಇಸ್ರಾಯೇಲಿನ ಅನುಭವಕ್ಕೆ ಬಂದೇ ಬರುವವು; [ಇಸ್ರಾಯೇಲೇ,] ನಿನ್ನ ಅಧರ್ಮವು ಬಹಳವಾಗಿರುವದರಿಂದಲೂ ವಿರೋಧವು ಹೆಚ್ಚಾಗಿರುವದರಿಂದಲೂ ಪ್ರವಾದಿಯು ಮೂರ್ಖನು, ದೇವರಾತ್ಮಾವಿಷ್ಟನು ಹುಚ್ಚನು [ಅಂದುಕೊಳ್ಳುತ್ತಿ].


ಆಗ ಯಾವನಾದರೂ ಮತ್ತೆ ಪ್ರವಾದನೆಮಾಡಿದರೆ ಅವನ ಹೆತ್ತ ತಾಯಿತಂದೆಗಳು ಅವನಿಗೆ - ನೀನುಳಿಯಬೇಡ; ಯೆಹೋವನ ಹೆಸರೆತ್ತಿ ಸುಳ್ಳಾಡುತ್ತೀ ಎಂದು ಹೇಳಿ ಆ ಹೆತ್ತ ತಾಯಿತಂದೆಗಳೇ ಅವನ ಪ್ರವಾದನೆಯ ನಿವಿುತ್ತ ಅವನನ್ನು ಇರಿದುಬಿಡುವರು.


ವಿುಥ್ಯಾದರ್ಶನ ಹೊಂದಿ ಸುಳ್ಳು ಕಣಿ ಹೇಳುವ ಪ್ರವಾದಿಗಳ ಮೇಲೆ ನಾನು ಕೈ ಮಾಡುವೆನು; ಅವರು ನನ್ನ ಜನರ ಹಿರೀ ಸಭೆಯಲ್ಲಿ ಸೇರಕೂಡದು, ಇಸ್ರಾಯೇಲ್ ವಂಶದವರ ಪಟ್ಟಿಯಲ್ಲಿ ಅವರ ಹೆಸರುಗಳು ಲಿಖಿತವಾಗವು, ಅವರು ಇಸ್ರಾಯೇಲ್ ದೇಶದಲ್ಲಿ ಪ್ರವೇಶಿಸಲೂಬಾರದು; ನಾನೇ ಕರ್ತನಾದ ಯೆಹೋವನು ಎಂದು ನಿಮಗೆ ಗೊತ್ತಾಗುವದು.


ಇಸ್ರಾಯೇಲ್ ವಂಶದವರೆಲ್ಲರೂ ತಮ್ಮ ಬೊಂಬೆಗಳ ನಿವಿುತ್ತ ನನ್ನನ್ನು ತೊರೆದದರಿಂದ ನಾನು ಅವರನ್ನೆಲ್ಲಾ ಅವರ ಆಶಾಪಾಶದಲ್ಲಿ ಸಿಕ್ಕಿಸಿ ಹಿಡಿಯುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು