Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 15:8 - ಕನ್ನಡ ಸತ್ಯವೇದವು J.V. (BSI)

8 ಅವರು ದ್ರೋಹಮಾಡಿದ್ದರಿಂದ ನಾನು ದೇಶವನ್ನು ಹಾಳುಮಾಡುವೆನು; ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವರು ದ್ರೋಹ ಮಾಡಿದ್ದರಿಂದ ನಾನು ದೇಶವನ್ನು ಹಾಳುಮಾಡುವೆನು” ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅವರು ದ್ರೋಹ ಮಾಡಿದ್ದರಿಂದ ನಾಡು ಕಾಡಾಗುವುದು ನನ್ನಿಂದ.” ಇದು ಸರ್ವೇಶ್ವರನಾದ ದೇವರ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಜನರು ನನ್ನನ್ನು ತೊರೆದು ಅನ್ಯ ದೇವರುಗಳನ್ನು ಆರಾಧಿಸಿದ್ದಕ್ಕಾಗಿ ನಾನು ಆ ದೇಶವನ್ನು ನಾಶಮಾಡುವೆನು” ಇವುಗಳನ್ನು ನನ್ನ ಒಡೆಯನಾದ ಯೆಹೋವನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವರು ದ್ರೋಹ ಮಾಡಿದ್ದರಿಂದ ನಾನು ಆ ದೇಶವನ್ನು ಹಾಳುಮಾಡುವೆನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 15:8
12 ತಿಳಿವುಗಳ ಹೋಲಿಕೆ  

ನಾನು ಅವರ ಮೇಲೆ ಕೈಯತ್ತಿ ಅವರು ವಾಸವಾಗಿರುವ ದೇಶವನ್ನೆಲ್ಲಾ ಅರಣ್ಯದಿಂದ ದಿಬ್ಲದವರೆಗೂ ಹಾಳುಪಾಳುಮಾಡುವೆನು; ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವದು.


ಯೆಹೋವನ ರೌದ್ರದ ದಿನದಲ್ಲಿ ಅವರ ಬೆಳ್ಳಿಬಂಗಾರಗಳು ಕೂಡಾ ಅವರನ್ನು ರಕ್ಷಿಸಲಾರವು; ಆತನ ರೋಷಾಗ್ನಿಯು ದೇಶವನ್ನೆಲ್ಲಾ ನುಂಗಿಬಿಡುವದು; ಆತನು ದೇಶನಿವಾಸಿಗಳೆಲ್ಲರನ್ನೂ ಕೊನೆಗಾಣಿಸುವನು, ಹೌದು, ಘೋರವಾಗಿ ನಿರ್ಮೂಲ ಮಾಡುವನು.


ಅವರು ನಡಿಸಿದ ಬಹುದುರಾಚಾರಗಳ ನಿವಿುತ್ತ ನಾನು ದೇಶವನ್ನು ಹಾಳುಪಾಳುಮಾಡಿದಾಗ ನಾನೇ ಯೆಹೋವನು ಎಂದು ಅವರಿಗೆ ದೃಢವಾಗುವದು.


ನಾನು ಅವನಿಗೆ ನನ್ನ ಬಲೆಯೊಡ್ಡುವೆನು, ನಾನು ಹಾಕಿದ ಉರುಲಿನಲ್ಲಿ ಸಿಕ್ಕಿಬೀಳುವನು, ಅವನನ್ನು ಬಾಬೆಲಿಗೆ ತಂದು ಅಲ್ಲೇ ಅವನೊಂದಿಗೆ ವಾದಿಸಿ ಅವನು ನನಗೆ ಮಾಡಿದ ಅಪರಾಧವನ್ನು ಅವನ ಮೇಲೆ ಹೊರಿಸುವೆನು.


ಅದಕ್ಕೆ ನಾನು - ಕರ್ತನೇ, ಇದು ಎಂದಿನ ತನಕ? ಎಂದು ಕೇಳಲು ಆತನು - ಯೆಹೋವನು ಜನರನ್ನು ದೂರ ತೊಲಗಿಸಿ


ಅವಳನ್ನು ಗೊತ್ತು ಮಾಡಿಕೊಂಡ ಯಜಮಾನನಿಗೆ ಅವಳಲ್ಲಿ ಇಷ್ಟವಿಲ್ಲದೆ ಹೋದರೆ ಬಿಡಿಸಿಕೊಳ್ಳಲಿಕ್ಕೆ ಅವಳಿಗೆ ಅನುಕೂಲಕೊಡಬೇಕು. ಅವನು ಕೊಟ್ಟ ಮಾತನ್ನು ತಪ್ಪಿದವನಾದದರಿಂದ ಅನ್ಯಜನರಿಗೆ ಅವಳನ್ನು ಮಾರುವದಕ್ಕೆ ಅವನಿಗೆ ಅಧಿಕಾರವಿಲ್ಲ.


ಆಮೇಲೆ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು -


ನಾನು ನನ್ನ ಜನರನ್ನು ಅನ್ಯಜನಾಂಗಗಳ ವಶದಿಂದ ತಪ್ಪಿಸಿ ಆ ಶತ್ರುಗಳ ದೇಶಗಳಿಂದ ಒಟ್ಟುಗೂಡಿಸಿ ಬಹು ಜನಾಂಗಗಳ ಕಣ್ಣೆದುರಿಗೆ ಅವರ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಂಡ ನಂತರ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು