Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 16:1 - ಕನ್ನಡ ಸತ್ಯವೇದವು J.V. (BSI)

1 ಆಮೇಲೆ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆಮೇಲೆ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಆಮೇಲೆ ಸರ್ವೇಶ್ವರ ನನಗೆ ದಯಪಾಲಿಸಿದ ವಾಣಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಮತ್ತೆ ಯೆಹೋವನ ವಾಕ್ಯವು ನನಗೆ ಬಂತು. ಆತನು ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರ ವಾಕ್ಯವು ನನಗೆ ಬಂದಿತು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 16:1
13 ತಿಳಿವುಗಳ ಹೋಲಿಕೆ  

ಅವರು ದ್ರೋಹಮಾಡಿದ್ದರಿಂದ ನಾನು ದೇಶವನ್ನು ಹಾಳುಮಾಡುವೆನು; ಇದು ಕರ್ತನಾದ ಯೆಹೋವನ ನುಡಿ.


ನರಪುತ್ರನೇ, ನೀನು ಯೆರೂಸಲೇವಿುಗೆ ಅದರ ಅಸಹ್ಯಕಾರ್ಯಗಳನ್ನು ತಿಳಿಯಪಡಿಸಿ ಹೀಗೆ ನುಡಿ -


ಪ್ರಜೆಗೆ ಧರ್ಮವು ಉನ್ನತಿ, ಅಧರ್ಮವು ಅವಮಾನ.


ಅಯ್ಯೋ, ಸುವ್ರತೆಯಾಗಿದ್ದ ನಗರಿಯು ಸೂಳೆಯಾದಳಲ್ಲಾ! ನ್ಯಾಯದಿಂದ ತುಂಬಿ ಧರ್ಮಕ್ಕೆ ನೆಲೆಯಾಗಿದ್ದವಳು ಈಗ ಕೊಲೆಪಾತಕರಿಗೆ ನೆಲೆಯಾಗಿದ್ದಾಳೆ.


ನನಗೆ ಮುಡಚಟ್ಟಾಗಲಿಲ್ಲ, ಅನ್ಯದೇವತೆಗಳನ್ನು ನಾನು ಹಿಂಬಾಲಿಸಲಿಲ್ಲವೆಂದು ಹೇಗೆ ಹೇಳುತ್ತೀ? ಆ ತಗ್ಗಿನಲ್ಲಿನ ನಿನ್ನ ನಡತೆಯನ್ನು ನೋಡು, ನೀನು ಮಾಡಿದ ಕೆಲಸವನ್ನು ಮನಸ್ಸಿಗೆ ತಂದುಕೋ, ತನ್ನ ಜಾಡೆಗಳನ್ನು ತಾರುಮಾರು ಮಾಡುವ ವೇಗವಾದ ಹೆಣ್ಣು ಒಂಟೆಯಂತಿದ್ದೀ.


ಅಯ್ಯೋ, ನೋವು ನಿಲ್ಲದು ಎಂದು ನಿನ್ನ ವ್ರಣಕ್ಕಾಗಿ ಏಕೆ ಅರಚಿಕೊಳ್ಳುತ್ತೀ? ನಿನ್ನ ಅಪರಾಧವು ಹೆಚ್ಚಿ ಪಾಪಗಳು ಬಹಳವಾದದರಿಂದ ನಿನಗೆ ಇದನ್ನೆಲ್ಲಾ ಮಾಡಿದೆನು.


ಆತನು ನನಗೆ ಹೀಗೆ ಹೇಳಿದನು - ನರಪುತ್ರನೇ, ನನಗೆ ವಿರುದ್ಧವಾಗಿ ತಿರುಗಿಬಿದ್ದು ದ್ರೋಹಮಾಡಿದ ಜನಾಂಗದವರಾದ ಇಸ್ರಾಯೇಲ್ಯರ ಬಳಿಗೆ ನಿನ್ನನ್ನು ಕಳುಹಿಸುವೆನು; ಈ ದಿನದವರೆಗೆ ಅವರೂ ಅವರ ಪಿತೃಗಳೂ ನನಗೆ ಅಪರಾಧಮಾಡುತ್ತಲೇ ಇದ್ದಾರೆ.


ನರಪುತ್ರನೇ, ರಕ್ತಮಯವಾದ ಆ ಪಟ್ಟಣಕ್ಕೆ ನ್ಯಾಯತೀರಿಸಲು ನಿನ್ನ ಮನಸ್ಸು ಸ್ಥಿರವೋ, ಸ್ಥಿರವಾಗಿದೆಯೋ? ಅದರ ದುರಾಚಾರಗಳನ್ನೆಲ್ಲಾ ಅದಕ್ಕೆ ಹೀಗೆ ತಿಳಿಸು -


ಸಮಸ್ತ ಕಸ್ದೀಯರು, ಪೆಕೋದಿನವರು, ಷೋಯದವರು, ಕೋಯದವರು, ಇವರನ್ನೂ ಇವರೊಂದಿಗೆ ಅಶ್ಶೂರ್ಯರೆಲ್ಲರನ್ನೂ ನಾನು ನಿನಗೆ ವಿರುದ್ಧವಾಗಿ ಎಬ್ಬಿಸಿ ಎಲ್ಲಾ ಕಡೆಯಿಂದಲೂ ನಿನ್ನ ಮೇಲೆ ಬೀಳಮಾಡುವೆನು.


ಯೆಹೋವನು ಹೋಶೇಯನ ಸಂಗಡ ಮೊದಲು ಮಾತಾಡಿದಾಗ ಆತನು ಅವನಿಗೆ - ನೀನು ಹೋಗಿ ವ್ಯಭಿಚಾರಿಣಿಯನ್ನು ಮದುವೆಮಾಡಿಕೊಂಡು ವ್ಯಭಿಚಾರದಿಂದಾಗುವ ಮಕ್ಕಳನ್ನು ಸೇರಿಸಿಕೋ; ದೇಶವು ನನ್ನನ್ನು ಬಿಟ್ಟು ಅಧಿಕ ವ್ಯಭಿಚಾರವನ್ನು ನಡಿಸುತ್ತದೆಂಬದಕ್ಕೆ ಇದು ದೃಷ್ಟಾಂತವಾಗಿರಲಿ ಎಂದು ಹೇಳಿದನು.


ನನ್ನ ಜನರು ತಮ್ಮ ಮರದ ತುಂಡನ್ನು ಪ್ರಶ್ನೆ ಕೇಳುತ್ತಾರೆ, ಅವರ ಕೋಲು ಅವರಿಗೆ ಅರುಹನ್ನು ಉಂಟುಮಾಡುತ್ತದೆ; ವ್ಯಭಿಚಾರ ಗುಣವು ಅವರನ್ನು ಭ್ರಾಂತಿಗೊಳಿಸಿದೆ; ತಮ್ಮ ದೇವರಿಗೆ ಪತಿಭಕ್ತಿಯನ್ನು ಸಲ್ಲಿಸದೆ ದ್ರೋಹಿಗಳಾಗಿದ್ದಾರೆ.


ಯೆಹೋವನು ಇಂತೆನ್ನುತ್ತಾನೆ - ಯೆಹೂದವು ಮೂರು ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವದೇ ಇಲ್ಲ; ಯೆಹೂದ್ಯರು ಯೆಹೋವನ ಧರ್ಮೋಪದೇಶವನ್ನು ನಿರಾಕರಿಸಿ ಆತನ ವಿಧಿಗಳನ್ನು ಕೈಕೊಳ್ಳದೆ ಅವರ ಪಿತೃಗಳು ಹಿಂಬಾಲಿಸಿದ ಸುಳ್ಳುದೇವತೆಗಳ ಮೂಲಕ ಸನ್ಮಾರ್ಗವನ್ನು ತಪ್ಪಿದರಷ್ಟೆ;


ಇಗೋ, ತಟ್ಟೆಯಾಕಾರವಾದ ಸೀಸದ ಮುಚ್ಚಳವು ಎತ್ತಲ್ಪಡಲಾಗಿ ಆಹಾ, ಒಬ್ಬ ಹೆಂಗಸು ಕೊಳಗದೊಳಗೆ ಕೂತಿದ್ದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು