ಯೆಹೆಜ್ಕೇಲನು 16:10 - ಕನ್ನಡ ಸತ್ಯವೇದವು J.V. (BSI)10 ಇದಲ್ಲದೆ ನಾನು ಕಸೂತಿಯ ಬಟ್ಟೆಯನ್ನು ನಿನಗೆ ತೊಡಿಸಿ ಕಡಲುಹಂದಿಯ ತೊಗಲಿನ ಕೆರಗಳನ್ನು ನಿನ್ನ ಕಾಲಿಗೆ ಮೆಟ್ಟಿಸಿ ನಯವಾದ ನಾರುಮಡಿಯನ್ನು ನಿನಗೆ ಉಡಿಸಿ ರೇಷ್ಮೆಯ ಹೊದಿಕೆಯನ್ನು ನಿನಗೆ ಹೊದಿಸಿದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಇದಲ್ಲದೆ ನಾನು ಕಸೂತಿಯ ಬಟ್ಟೆಯನ್ನು ನಿನಗೆ ತೊಡಿಸಿ, ಕಡಲಪ್ರಾಣಿಯ ಕೆಂಪು ಚರ್ಮದ ಕೆರಗಳನ್ನು ನಿನ್ನ ಕಾಲಿಗೆ ಮೆಟ್ಟಿಸಿ, ನಯವಾದ ನಾರು ಮಡಿಯನ್ನು ನಿನಗೆ ಉಡಿಸಿ, ರೇಷ್ಮೆಯ ಹೊದಿಕೆಯನ್ನು ನಿನಗೆ ಹೊದಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಇದಲ್ಲದೆ ಕಸೂತಿಯ ಬಟ್ಟೆಯನ್ನು ನಿನಗೆ ತೊಡಿಸಿ, ಕಡಲು ಹಂದಿಯ ತೊಗಲಿನ ಕೆರಗಳನ್ನು ನಿನ್ನ ಕಾಲಿಗೆ ಮೆಟ್ಟಿಸಿ, ನಯವಾದ ನಾರುಮಡಿಯನ್ನು ನಿನಗೆ ಉಡಿಸಿ, ರೇಷ್ಮೆಯ ಹೊದಿಕೆಯನ್ನು ನಿನಗೆ ಹೊದಿಸಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನಿನಗೆ ಅಂದವಾದ ಉಡುಪನ್ನು ಕೊಟ್ಟು ಕಾಲಿಗೆ ನಯವಾದ ಚರ್ಮದ ಕೆರಗಳನ್ನು ಕೊಟ್ಟೆನು. ನಿನ್ನ ತಲೆಗೆ ನಾರುಮಡಿಯ ತಲೆಕಟ್ಟನ್ನು ಕೊಟ್ಟೆನು ಮತ್ತು ನಿನಗೆ ರೇಷ್ಮೆಯ ಬಟ್ಟೆಯನ್ನು ಹೊದಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನಾನು ಕಸೂತಿಯ ಬಟ್ಟೆಯನ್ನು ನಿನಗೆ ತೊಡಿಸಿ, ಕಡಲುಹಂದಿಯ ತೊಗಲಿನ ಪಾದರಕ್ಷೆಗಳನ್ನು ಕೊಟ್ಟೆನು. ನಯವಾದ ನಾರುಮಡಿಯನ್ನು ನಿನಗೆ ಉಡಿಸಿದೆನು, ರೇಷ್ಮೆಯ ಹೊದಿಕೆಯನ್ನು ನಿನಗೆ ಹೊದಿಸಿದೆನು; ಅಧ್ಯಾಯವನ್ನು ನೋಡಿ |