Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 16:15 - ಕನ್ನಡ ಸತ್ಯವೇದವು J.V. (BSI)

15 ಆದರೆ ನೀನು ನಿನ್ನ ಸೌಂದರ್ಯದಲ್ಲಿಯೇ ನಂಬಿಕೆಯಿಟ್ಟು ನಾನು ಪ್ರಸಿದ್ಧಳಾಗಿದ್ದೇನಲ್ಲಾ ಎಂದು ಉಬ್ಬಿಕೊಂಡು ಸೂಳೆತನಮಾಡಿದಿ; ಹಾದುಹೋಗುವ ಪ್ರತಿಯೊಬ್ಬನ ಸಂಗಡ ವಿುತಿಮೀರಿ ಹಾದರಮಾಡಿದಿ, ಒಬ್ಬೊಬ್ಬನಿಗೂ ಒಳಗಾದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 “ಆದರೆ ನೀನು ನಿನ್ನ ಸೌಂದರ್ಯದಲ್ಲಿಯೇ ನಂಬಿಕೆಯಿಟ್ಟು, ನಾನು ಪ್ರಸಿದ್ಧಳಾಗಿದ್ದೇನಲ್ಲಾ ಎಂದು ಉಬ್ಬಿಕೊಂಡು ವ್ಯಭಿಚಾರಮಾಡಿದಿ; ಹಾದುಹೋಗುವ ಪ್ರತಿಯೊಬ್ಬನ ಸಂಗಡ ಮಿತಿಮೀರಿ ವ್ಯಭಿಚಾರಮಾಡಿದೆ, ಪ್ರತಿಯೊಬ್ಬನ ಸಂಗಡ ವ್ಯಭಿಚಾರಕ್ಕೆ ಒಳಗಾದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 “ಆದರೆ ನೀನು ನಿನ್ನ ಸೌಂದರ್ಯವನ್ನೇ ನೆಚ್ಚಿಕೊಂಡೆ, ‘ನಾನು ಪ್ರಸಿದ್ಧಳಾದೆ’ ಎಂದು ಉಬ್ಬಿಕೊಂಡು ಸೂಳೆತನಮಾಡಿದೆ; ಹಾದುಹೋಗುವ ಪ್ರತಿಯೊಬ್ಬನ ಸಂಗಡ ಮಿತಿಮೀರಿ ಹಾದರಮಾಡಿದೆ. ಒಬ್ಬೊಬ್ಬನಿಗೂ ಒಳಗಾದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ದೇವರು ಹೀಗೆಂದನು: “ನೀನು ನಿನ್ನ ಸೌಂದರ್ಯದ ಮೇಲೆ ಭರವಸೆ ಉಳ್ಳವಳಾಗಿದ್ದೆ. ನಿನ್ನ ಪ್ರಖ್ಯಾತಿಯಿಂದಾಗಿ ನನಗೆ ಅಪನಂಬಿಗಸ್ತಳಾದಿ. ನಿನ್ನನ್ನು ಹಾದುಹೋಗುವ ಪ್ರತಿವ್ಯಕ್ತಿಯೊಂದಿಗೆ ನೀನು ವೇಶ್ಯೆಯಂತೆ ನಡೆದುಕೊಂಡಿ. ನೀನು ನಿನ್ನನ್ನು ಅವರಿಗೊಪ್ಪಿಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ ‘ಆದರೆ ನೀನು ನಿನ್ನ ಸೌಂದರ್ಯದಲ್ಲಿ ಭರವಸೆಯಿಟ್ಟು, ನಿನ್ನ ಕೀರ್ತಿಯ ನಿಮಿತ್ತವಾಗಿ ವೇಶ್ಯೆಯಾದೆ. ಹಾದುಹೋಗುವ ಪ್ರತಿಯೊಬ್ಬನ ಸಂಗಡ ಮಿತಿಮೀರಿ ವ್ಯಭಿಚಾರ ಮಾಡಿದೆ ಮತ್ತು ನಿನ್ನ ಸೌಂದರ್ಯ ಅವನದಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 16:15
34 ತಿಳಿವುಗಳ ಹೋಲಿಕೆ  

ಒಂದೊಂದು ಬೀದಿಯ ಕೊನೆಯಲ್ಲಿಯೂ ನೀನು ಜಗಲಿಯನ್ನು ಕಟ್ಟಿಕೊಂಡು ನಿನ್ನ ಸೌಂದರ್ಯವನ್ನು ನೀಚ ಕೆಲಸಕ್ಕೆ ಒಪ್ಪಿಸಿ ಹಾದುಹೋಗುವವರೆಲ್ಲರನ್ನು ಸೇರಿ ಸೂಳೆತನವನ್ನು ಹೆಚ್ಚಾಗಿ ನಡಿಸಿದ್ದೀ.


ಬಹುಕಾಲದಿಂದ ನೀನು ನಿನ್ನ ನೊಗವನ್ನು ಮುರಿದು ಕಣ್ಣಿಗಳನ್ನು ಕಿತ್ತು ನಾನು ಸೇವೆ ಮಾಡುವದಿಲ್ಲವೆಂದು ಅಂದುಕೊಳ್ಳುತ್ತಿದ್ದೀ; ಎತ್ತರವಾದ ಎಲ್ಲಾ ಗುಡ್ಡಗಳ ಮೇಲೂ ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೂ ನೀನು ಅಡ್ಡಬಿದ್ದು ಸೂಳೆಯಾಗಿ ನಡೆದಿದ್ದೀ.


ಕದದ ಮತ್ತು ನಿಲುವಿನ ಹಿಂಭಾಗದಲ್ಲಿ ನೀನು ವಿಗ್ರಹವನ್ನು ಇಟ್ಟುಕೊಂಡಿದ್ದೀ; ನನ್ನನ್ನು ಬಿಟ್ಟುಬಿಟ್ಟು ನಿನ್ನ ಮಂಚದ ಗವಸಣಿಗೆಯನ್ನು ತೆಗೆದು ಅದನ್ನು ಹತ್ತಿ ಅದರಲ್ಲಿ ಅನ್ಯರಿಗೆ ಸ್ಥಳಕೊಟ್ಟು ಅವರೊಂದಿಗೆ ಒಪ್ಪಂದಮಾಡಿಕೊಂಡಿದ್ದೀ. ಅವರ ಸಂಗಮವನ್ನು ಆಶಿಸಿ ಸ್ಥಳವನ್ನು ಸಂಕೇತಮಾಡಿಕೊಂಡಿದ್ದೀ.


ಅವರು ಐಗುಪ್ತದಲ್ಲಿ ಸೂಳೆತನ ಮಾಡುತ್ತಿದ್ದರು, ಬಾಲ್ಯದಲ್ಲೇ ಸೂಳೆಯರಾಗಿ ನಡೆಯುತ್ತಿದ್ದರು; ಅಲ್ಲಿ ಅವರ ಸ್ತನಗಳು ಹಿಸಕಲ್ಪಟ್ಟವು, ಎಳೆಯ ತೊಟ್ಟುಗಳು ನಸುಕಲ್ಪಟ್ಟವು.


ಈ ಕಟ್ಟಡಗಳೇ ಯೆಹೋವನ ಆಲಯ, ಯೆಹೋವನ ಆಲಯ, ಯೆಹೋವನ ಆಲಯ ಎಂಬುವ ಸುಳ್ಳುಮಾತುಗಳ ಮೇಲೆ ಭರವಸವಿಡಬೇಡಿರಿ.


ಯೆಹೋವನು ಹೋಶೇಯನ ಸಂಗಡ ಮೊದಲು ಮಾತಾಡಿದಾಗ ಆತನು ಅವನಿಗೆ - ನೀನು ಹೋಗಿ ವ್ಯಭಿಚಾರಿಣಿಯನ್ನು ಮದುವೆಮಾಡಿಕೊಂಡು ವ್ಯಭಿಚಾರದಿಂದಾಗುವ ಮಕ್ಕಳನ್ನು ಸೇರಿಸಿಕೋ; ದೇಶವು ನನ್ನನ್ನು ಬಿಟ್ಟು ಅಧಿಕ ವ್ಯಭಿಚಾರವನ್ನು ನಡಿಸುತ್ತದೆಂಬದಕ್ಕೆ ಇದು ದೃಷ್ಟಾಂತವಾಗಿರಲಿ ಎಂದು ಹೇಳಿದನು.


ಅವಳು ಐಗುಪ್ತದಲ್ಲಿದ್ದಂದಿಂನಿಂದಲೂ ತನ್ನ ಸೂಳೆತನವನ್ನು ಬಿಡಲಿಲ್ಲ; ಅವಳ ಬಾಲ್ಯದಲ್ಲಿಯೇ ಅಲ್ಲಿನವರು ಅವಳೊಂದಿಗೆ ಮಲಗಿ ಅವಳ ಎಳೆಯ ತೊಟ್ಟುಗಳನ್ನು ನಸುಕಿ ಅವಳ ಸಂಗಡ ಸೂಳೆಗಾರಿಕೆಯನ್ನು ಹೆಚ್ಚೆಚ್ಚಾಗಿ ಮಾಡಿದರು.


ಅಯ್ಯೋ, ಸುವ್ರತೆಯಾಗಿದ್ದ ನಗರಿಯು ಸೂಳೆಯಾದಳಲ್ಲಾ! ನ್ಯಾಯದಿಂದ ತುಂಬಿ ಧರ್ಮಕ್ಕೆ ನೆಲೆಯಾಗಿದ್ದವಳು ಈಗ ಕೊಲೆಪಾತಕರಿಗೆ ನೆಲೆಯಾಗಿದ್ದಾಳೆ.


ಅವಳ ಹಣೆಯ ಮೇಲೆ - ಬಾಬೆಲೆಂಬ ಮಹಾನಗರಿ, ಭೂವಿುಯಲ್ಲಿರುವ ಜಾರಸ್ತ್ರೀಯರಿಗೂ ಅಸಹ್ಯವಾದ ಕಾರ್ಯಗಳಿಗೂ ತಾಯಿ ಎಂದು ಗೂಢಾರ್ಥವುಳ್ಳ ಹೆಸರು ಬರೆದಿತ್ತು.


ಅಬ್ರಹಾಮನು ನಮಗೆ ಮೂಲಪುರುಷನಲ್ಲವೇ ಎಂಬುವ ಆಲೋಚನೆಯನ್ನು ಬಿಡಿರಿ. ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದಲೂ ಮಕ್ಕಳನ್ನು ಹುಟ್ಟಿಸಬಲ್ಲನೆಂದು ನಿಮಗೆ ಹೇಳುತ್ತೇನೆ.


ನೀನು ನನಗೆ ಮಾಡಿದ ನಾನಾ ದುಷ್ಕೃತ್ಯಗಳು ಮುಂದಿನ ಆ ಕಾಲದಲ್ಲಿ ನಿನಗೆ ನಾಚಿಕೆಗೀಡಾಗವು; ಆಗ ಅತಿಗರ್ವದಿಂದ ಮೆರೆಯುವವರನ್ನು ನಿನ್ನೊಳಗಿಂದ ತೊಲಗಿಸಿಬಿಡುವೆನು; ಅಂದಿನಿಂದ ನನ್ನ ಪವಿತ್ರಪರ್ವತದಲ್ಲಿ ಗರ್ವಪಡದೆ ಇರುವಿ.


ಮುಖಂಡರು ಲಂಚಕ್ಕೆ ನ್ಯಾಯತೀರಿಸುತ್ತಾರೆ, ಯಾಜಕರು ಸಂಬಳಕ್ಕಾಗಿ ಉಪದೇಶಿಸುತ್ತಾರೆ, ಪ್ರವಾದಿಗಳು ಹಣಕ್ಕೋಸ್ಕರ ಕಣಿಹೇಳುತ್ತಾರೆ; ಆದರೂ ಯೆಹೋವನ ಮೇಲೆ ಭಾರಹಾಕಿ - ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನಲ್ಲಾ, ನಮಗೆ ಯಾವ ಕೇಡೂ ಸಂಭವಿಸದು ಅಂದುಕೊಳ್ಳುತ್ತಾರೆ.


ಹಾದರ ಮಾಡುತ್ತಿದ್ದರೂ ಪ್ರಜಾಭಿವೃದ್ಧಿಯಾಗದು; ಯೆಹೋವನ ಕಡೆಗೆ ಗಮನಿಸುವದನ್ನು ಬಿಟ್ಟುಬಿಟ್ಟಿದ್ದಾರಷ್ಟೆ.


ನಾನು ಶಿಷ್ಟನಿಗೆ - ನೀನು ಬಾಳೇ ಬಾಳುವಿ ಎಂದು ಹೇಳಲು ಅವನು ತನ್ನ ಪುಣ್ಯದ ಮೇಲೆ ಭರವಸವಿಟ್ಟು ಪಾಪ ಮಾಡಿದರೆ ಅವನು ಮಾಡಿದ ಯಾವ ಸುಕೃತ್ಯವೂ ಅವನ ಲೆಕ್ಕಕ್ಕೆ ಸೇರಿಸಲ್ಪಡದು; ಅವನು ಮಾಡುವ ಪಾಪದಿಂದಲೇ ಅವನು ಸಾಯುವನು.


ಸಮುದ್ರದ್ವಾರದಲ್ಲಿ ವಾಸಿಸುತ್ತಾ ಜನಾಂಗಗಳಿಗಾಗಿ ಬಹುದ್ವೀಪಗಳೊಂದಿಗೆ ವ್ಯಾಪಾರಮಾಡುವ ಪುರಿಯೇ! ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ತೂರೇ, ಪರಿಪೂರ್ಣಸುಂದರಿಯಾಗಿದ್ದೇನೆ ಅಂದುಕೊಂಡಿಯಲ್ಲಾ!


ಅವರಾದರೋ ನನ್ನ ಮಾತನ್ನು ಕೇಳಲೊಲ್ಲದೆ ನನ್ನ ಮೇಲೆ ತಿರುಗಿಬಿದ್ದರು; ತಮ್ಮ ಕಣ್ಣಿಗೆ ಇಷ್ಟವಾದ ಅಸಹ್ಯವಸ್ತುಗಳನ್ನು ಯಾರೂ ಬಿಸಾಟುಬಿಡಲಿಲ್ಲ. ಐಗುಪ್ತದ ವಿಗ್ರಹಗಳನ್ನು ತ್ಯಜಿಸಲಿಲ್ಲ; ಆಗ ನಾನು ಇವರ ಮೇಲೆ ಐಗುಪ್ತದೇಶದೊಳಗೆ ನನ್ನ ರೋಷಾಗ್ನಿಯನ್ನು ಸುರಿಸಿ ನನ್ನ ಕೋಪವನ್ನು ತೀರಿಸಿಕೊಳ್ಳುವೆನು ಅಂದುಕೊಂಡೆನು.


ಯೆಹೋವನು ಹೀಗನ್ನುತ್ತಾನೆ - ಗಂಡನು ತ್ಯಜಿಸಿದವಳು ಅವನಿಂದ ಹೊರಟು ಮತ್ತೊಬ್ಬನವಳಾದ ಮೇಲೆ ಅವಳನ್ನು ಆ ಗಂಡನು ತಿರಿಗಿ ಸೇರಿಸಿಕೊಂಡಾನೇ? ಸೇರಿಸಿಕೊಂಡರೆ ಆ ದೇಶವು ಕೇವಲ ಅಪವಿತ್ರವಾಗಿ ಹೋಗುವದಲ್ಲವೆ! ಹೀಗಿರಲು ಬಹುಮಂದಿ ವಿುಂಡರೊಡನೆ ಸೂಳೆತನ ಮಾಡಿದ ನೀನು ನನ್ನ ಬಳಿಗೆ ತಿರಿಗಿ ಬರುತ್ತೀಯಾ?


ಇಸ್ರಾಯೇಲೆಂಬ ಹೆಸರಿನವರೂ ಯೆಹೂದವಂಶೋತ್ಪನ್ನರೂ ಆದ ಯಾಕೋಬನ ಮನೆತನದವರೇ, ನೀವು ಯೆಹೋವನ ನಾಮದ ಮೇಲೆ ಆಣೆಯಿಟ್ಟು ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ, ನಿಜ, ಆದರೆ ಈ ನಿಮ್ಮ ಕಾರ್ಯಗಳು ಸತ್ಯಕ್ಕೂ ಧರ್ಮಕ್ಕೂ ಅನುಸಾರವಾಗಿಲ್ಲ.


ಅವರೊಡನೆ ಕೂಡಿಕೊಂಡು ಅವರ ದುರಾಚಾರಗಳನ್ನು ಕಲಿತುಕೊಂಡರು.


ತನ್ನ ತಂದೆಯಾದ ಹಿಜ್ಕೀಯನು ತೆಗೆದುಹಾಕಿದ ಪೂಜಾಸ್ಥಾನಗಳನ್ನು ತಿರಿಗಿ ಸ್ಥಾಪಿಸಿ ಇಸ್ರಾಯೇಲ್ಯರ ಅರಸನಾದ ಅಹಾಬನಂತೆ ಬಾಳನಿಗೋಸ್ಕರ ಯಜ್ಞವೇದಿಗಳನ್ನು ಕಟ್ಟಿಸಿ ಅಶೇರ ವಿಗ್ರಹಸ್ತಂಭವನ್ನು ನಿಲ್ಲಿಸಿ ನಕ್ಷತ್ರಮಂಡಲಕ್ಕೆ ಕೈಮುಗಿದು ಆರಾಧಿಸಿದನು.


ಇಸ್ರಾಯೇಲ್ಯರ ಈ ದುರ್ಗತಿಗೆ ಅವರ ದುರ್ನಡತೆಯೇ ಕಾರಣ; ಹೇಗಂದರೆ - ಅವರು ತಮ್ಮನ್ನು ಐಗುಪ್ತದ ಅರಸನಾದ ಫರೋಹನ ಕೈಯಿಂದ ಬಿಡಿಸಿ ಅವನ ರಾಜ್ಯದಿಂದ ಹೊರತಂದ ದೇವರಾದ ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿ ಅನ್ಯದೇವತೆಗಳನ್ನು ಸೇವಿಸಿದರು.


ಬಹಳವಾಗಿ ಆಲೋಚಿಸಿ ಕಡೆಯಲ್ಲಿ ಬಂಗಾರದ ಎರಡು ಬಸವ ಮೂರ್ತಿಗಳನ್ನು ಮಾಡಿಸಿ ಇಸ್ರಾಯೇಲ್ಯರಿಗೆ - ನೀವು ಜಾತ್ರೆಗಾಗಿ ಯೆರೂಸಲೇವಿುಗೆ ಹೋದದ್ದು ಸಾಕಾಯಿತು; ಇಗೋ, ನಿಮ್ಮನ್ನು ಐಗುಪ್ತದಿಂದ ಕರತಂದ ದೇವರುಗಳು ಇಲ್ಲಿರುತ್ತವೆ ಎಂದು ಹೇಳಿ


ಅವನು ಚೀದೋನ್ಯರ ಅಷ್ಟೋರೆತ್ ದೇವತೆಯನ್ನೂ ಅಮ್ಮೋನಿಯರ ವಿುಲ್ಕೋಮ್ ಎಂಬ ಅಸಹ್ಯ ವಿಗ್ರಹವನ್ನೂ ಆರಾಧಿಸತೊಡಗಿ


ಇಸ್ರಾಯೇಲ್ಯರು ತಿರಿಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು; ಅವರು ಆತನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನೂ ಅರಾಮ್ಯರು, ಚೀದೋನ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಇವರ ದೇವತೆಗಳನ್ನೂ ಪೂಜಿಸಹತ್ತಿ ಯೆಹೋವನನ್ನು ಬಿಟ್ಟೇ ಬಿಟ್ಟರು.


ಅವರ ಕನ್ಯೆಯರನ್ನು ತಾವು ತಂದು ತಮ್ಮ ಕನ್ಯೆಯರನ್ನು ಅವರ ಕುಮಾರರಿಗೆ ಕೊಟ್ಟು ಅವರ ದೇವತೆಗಳನ್ನು ಸೇವಿಸಿದರು.


ತಮ್ಮ ಪಿತೃಗಳನ್ನು ಐಗುಪ್ತದಿಂದ ಕರತಂದ ದೇವರಾದ ಯೆಹೋವನನ್ನು ಬಿಟ್ಟು ಅನ್ಯದೇವತೆಗಳನ್ನು ಅಂದರೆ ತಮ್ಮ ಸುತ್ತಣ ಜನಾಂಗಗಳ ದೇವರುಗಳನ್ನು ಅವಲಂಬಿಸಿ ಅವುಗಳಿಗೆ ಅಡ್ಡಬಿದ್ದು ಯೆಹೋವನನ್ನು ರೇಗಿಸಿದರು.


ಆದರೆ ಯೆಶುರೂನು ಚೆನ್ನಾಗಿ ತಿಂದು ಕೊಬ್ಬಿ ಅಗಡಾಗಿ ತನ್ನನ್ನು ಸೃಷ್ಟಿಸಿದ ದೇವರನ್ನು ಬಿಟ್ಟು ತನ್ನ ಆಶ್ರಯದುರ್ಗವನ್ನು ತಿರಸ್ಕರಿಸಿತು.


ನೀನು ಪೂಜಾಸ್ಥಾನಗಳನ್ನು ಕಟ್ಟಿಕೊಂಡು ನಿನ್ನ ಚಿತ್ರವಿಚಿತ್ರ ವಸ್ತ್ರಗಳಿಂದ ಅವುಗಳನ್ನು ಅಲಂಕರಿಸಿ ಅಲ್ಲಿ ವ್ಯಭಿಚಾರನಡಿಸಿದಿ. (ಇದು ನಡೆಯತಕ್ಕದ್ದಲ್ಲ. ಆಗಬಾರದಾಗಿತ್ತು.)


ಸುರಾಪಾನಮುಗಿದ ಕೂಡಲೆ ಸೂಳೆತನದಲ್ಲಿ ಬೀಳುತ್ತಾರೆ; ದೇಶಪಾಲಕರು ಅವಮಾನದಲ್ಲಿ ಅತ್ಯಾಶೆಪಡುತ್ತಾರೆ.


ಇಸ್ರಾಯೇಲೇ, ಜನಾಂಗಗಳಂತೆ ವಿುತಿಮೀರಿ ಉಲ್ಲಾಸಿಸಬೇಡ; ನೀನು ನಿನ್ನ ದೇವರನ್ನು ಬಿಟ್ಟು ಸೂಳೆತನ ನಡಿಸಿದ್ದೀ; ಎಲ್ಲಾ ಕಣಗಳಲ್ಲಿನ ಫಲವನ್ನು ಅದರ ಪ್ರತಿಫಲವನ್ನಾಗಿ ಆಶಿಸಿದ್ದೀ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು