Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 16:22 - ಕನ್ನಡ ಸತ್ಯವೇದವು J.V. (BSI)

22 ಈ ನಿನ್ನ ಅಸಹ್ಯಕಾರ್ಯಗಳನ್ನೂ ಸೂಳೆತನವನ್ನೂ ನೀನು ಪದೇಪದೇ ನಡಿಸುತ್ತಿದ್ದಾಗ ನೀನು ಬಟ್ಟೆಯಿಲ್ಲದೆ ಬೆತ್ತಲೆಯಾಗಿ ನಿನ್ನ ರಕ್ತದಲ್ಲಿ ಹೊರಳಾಡುತ್ತಿದ್ದ ನಿನ್ನ ಎಳೆತನವನ್ನು ನೀನು ಜ್ಞಾಪಕಕ್ಕೆ ತಂದುಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಈ ನಿನ್ನ ಅಸಹ್ಯಕಾರ್ಯಗಳನ್ನೂ, ವ್ಯಭಿಚಾರವನ್ನು ನೀನು ಪದೇ ಪದೇ ನಡೆಸುತ್ತಿದ್ದಾಗ ನೀನು ಬಟ್ಟೆಯಿಲ್ಲದೆ ಬೆತ್ತಲೆಯಾಗಿ ನಿನ್ನ ರಕ್ತದಲ್ಲಿ ಹೊರಳಾಡುತ್ತಿದ್ದ ನಿನ್ನ ಎಳೆತನವನ್ನು ನೀನು ಜ್ಞಾಪಕಕ್ಕೆ ತಂದುಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಈ ನಿನ್ನ ಅಸಹ್ಯಕಾರ್ಯಗಳನ್ನೂ ಸೂಳೆತನವನ್ನೂ ನೀನು ಪದೇ ಪದೇ ನಡಿಸುತ್ತಿದ್ದಾಗ ನೀನು ಬಟ್ಟೆಯಿಲ್ಲದೆ ಬೆತ್ತಲೆಯಾಗಿ ನಿನ್ನ ರಕ್ತದಲ್ಲಿ ಹೊರಳಾಡುತ್ತಿದ್ದ ನಿನ್ನ ಎಳೆತನವನ್ನು ನೀನು ಜ್ಞಾಪಕಕ್ಕೆ ತಂದುಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನಿನ್ನ ಅಸಹ್ಯಕೃತ್ಯಗಳನ್ನೂ ಸೂಳೆಯಂತೆ ವರ್ತಿಸುತ್ತಿರುವುದನ್ನೂ ನಿನ್ನ ಎಳೆತನದ ಸಮಯವನ್ನೂ ಮತ್ತು ನಿನ್ನ ಸ್ವಂತ ರಕ್ತದಲ್ಲಿ ಬೆತ್ತಲೆಯಾಗಿ ಹೊರಳಾಡುತ್ತಿದ್ದುದನ್ನೂ ನೀನು ಮರೆತುಬಿಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಎಲ್ಲಾ ಅಸಹ್ಯ ಕಾರ್ಯಗಳನ್ನೂ, ವ್ಯಭಿಚಾರಗಳನ್ನೂ ಮಾಡುತ್ತಿದ್ದಾಗ, ನಿನ್ನ ಎಳೆಯ ಪ್ರಾಯದ ದಿವಸಗಳನ್ನು ನೀನು ಬರೀ ಬೆತ್ತಲೆಯಾಗಿ, ನಿನ್ನ ರಕ್ತದಲ್ಲಿ ಹೊರಳಾಡುತ್ತಿದ್ದುದನ್ನು ನೀನು ಜ್ಞಾಪಕಕ್ಕೆ ತಂದುಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 16:22
8 ತಿಳಿವುಗಳ ಹೋಲಿಕೆ  

ನೀನು ಹೋಗಿ ಯೆರೂಸಲೇವಿುನ ಕಿವಿಗೆ ಮುಟ್ಟುವಂತೆ ಈ ಮಾತುಗಳನ್ನು ಸಾರು - ಯೆಹೋವನು ಹೀಗನ್ನುತ್ತಾನೆ, ನೀನು ಯೌವನದಲ್ಲಿ [ನನ್ನ ಮೇಲೆ] ಇಟ್ಟಿದ್ದ ಪ್ರೀತಿಯನ್ನೂ ವಿವಾಹ ಕಾಲದ ನಿನ್ನ ಪ್ರೇಮವನ್ನೂ ಬೀಜಬಿತ್ತಿಯೇ ಇಲ್ಲದ ಅರಣ್ಯದಲ್ಲಿ ನೀನು ನನ್ನನ್ನು ಹಿಂಬಾಲಿಸಿದ ನಿನ್ನ ಪಾತಿವ್ರತ್ಯವನ್ನೂ ನಿನ್ನ ಹಿತಕ್ಕಾಗಿ ಜ್ಞಾಪಕದಲ್ಲಿಟ್ಟಿದ್ದೇನೆ.


ಇಸ್ರಾಯೇಲು ಕೇವಲ ಬಾಲ್ಯದಲ್ಲಿದ್ದಾಗ ನಾನು ಅದರ ಮೇಲೆ ಪ್ರೀತಿಯನ್ನಿಟ್ಟು ಆ ನನ್ನ ಮಗನನ್ನು ಐಗುಪ್ತದೇಶದಿಂದ ಕರೆದೆನು.


ನೀನು ನಿನ್ನ ಯೌವನಕಾಲವನ್ನು ಜ್ಞಾಪಕಮಾಡಿಕೊಳ್ಳದೆ ಈ ದುಷ್ಕೃತ್ಯಗಳನ್ನೆಲ್ಲಾ ನಡಿಸಿ ನನ್ನನ್ನು ರೇಗಿಸಿದ್ದರಿಂದ ಇಗೋ, ನಾನು ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು; ನೀನು ಲೆಕ್ಕವಿಲ್ಲದ ದುರಾಚಾರಗಳನ್ನು ನಡಿಸಿದ್ದಲ್ಲದೆ ಈ ಅಸಹ್ಯ ಕಾರ್ಯವನ್ನೂ ಮಾಡಿದ್ದೀಯಲ್ಲಾ. ಇದು ಕರ್ತನಾದ ಯೆಹೋವನ ನುಡಿ.


ಇಲ್ಲವಾದರೆ ನಾನು ಅವಳ ಬಟ್ಟೆಯನ್ನು ಕಿತ್ತು ಅವಳನ್ನು ಹುಟ್ಟಿದಾಗ ಇದ್ದಂತೆ ಬೆತ್ತಲೆಯಾಗಿ ನಿಲ್ಲಿಸಿಬಿಟ್ಟು ಕಾಡನ್ನಾಗಿ ಮಾಡಿ ಮರುಭೂವಿುಯ ಸ್ಥಿತಿಗೆ ತಂದು ನೀರಡಿಕೆಯಿಂದ ಸಾಯಿಸುವೆನು;


ನಮ್ಮ ಯೌವನಾರಭ್ಯ ಶತ್ರುಗಳು ನಮ್ಮನ್ನು ಹಲವು ಸಾರಿ ಬಾಧಿಸಿದ್ದಾರೆಂದು ಇಸ್ರಾಯೇಲು ಹೇಳಲಿ.


ಅಯ್ಯಯ್ಯೋ, ನಿನ್ನ ಗತಿಯನ್ನು ಏನು ಹೇಳಲಿ ಎಂಬದು ಕರ್ತನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು