Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 16:25 - ಕನ್ನಡ ಸತ್ಯವೇದವು J.V. (BSI)

25 ಒಂದೊಂದು ಬೀದಿಯ ಕೊನೆಯಲ್ಲಿಯೂ ನೀನು ಜಗಲಿಯನ್ನು ಕಟ್ಟಿಕೊಂಡು ನಿನ್ನ ಸೌಂದರ್ಯವನ್ನು ನೀಚ ಕೆಲಸಕ್ಕೆ ಒಪ್ಪಿಸಿ ಹಾದುಹೋಗುವವರೆಲ್ಲರನ್ನು ಸೇರಿ ಸೂಳೆತನವನ್ನು ಹೆಚ್ಚಾಗಿ ನಡಿಸಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಒಂದೊಂದು ಬೀದಿಯ ಕೊನೆಯಲ್ಲಿಯೂ ನೀನು ಜಗಲಿಯನ್ನು ಕಟ್ಟಿಕೊಂಡು, ನಿನ್ನ ಸೌಂದರ್ಯವನ್ನು ನೀಚ ಕೆಲಸಕ್ಕೆ ಒಪ್ಪಿಸಿ, ಹಾದುಹೋಗುವವರೆಲ್ಲರನ್ನು ಸೇರಿಸಿ ವ್ಯಭಿಚಾರವನ್ನು ಹೆಚ್ಚಾಗಿ ನಡೆಸಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಒಂದೊಂದು ಬೀದಿಯ ಕೊನೆಯಲ್ಲಿ ನೀನು ಜಗಲಿಯನ್ನು ಕಟ್ಟಿಕೊಂಡು, ನಿನ್ನ ಸೌಂದರ್ಯವನ್ನು ನೀಚಕೆಲಸಕ್ಕೆ ಒಪ್ಪಿಸಿ, ಹಾದುಹೋಗುವವರೆಲ್ಲರನ್ನೂ ಸೇರಿ ಸೂಳೆತನವನ್ನು ಅಧಿಕಗೊಳಿಸಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಪ್ರತೀ ರಸ್ತೆಯ ಪ್ರಾರಂಭದಲ್ಲಿ ಅಂಥಾ ಪೂಜಾಸ್ಥಳಗಳನ್ನು ನಿರ್ಮಿಸಿದ್ದೀ. ನೀನು ನಿನ್ನ ಸೌಂದರ್ಯವನ್ನು ಹಾಳುಮಾಡಿಕೊಂಡಿ. ನೀನು ಅಸಹ್ಯವಾದ ಕಾರ್ಯಗಳನ್ನು ಮಾಡಲು ನಿನ್ನ ಸೌಂದರ್ಯವನ್ನು ಬಳಸಿಕೊಂಡೆ. ಹಾದಿಯಲ್ಲಿ ಹೋಗುವ ಪ್ರತಿಯೊಬ್ಬ ಗಂಡಸಿಗೂ ನೀನು ಲೈಂಗಿಕ ತೃಪ್ತಿ ನೀಡಿ ನಿನ್ನ ಸೂಳೆತನವನ್ನು ಹೆಚ್ಚಿಸಿಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಪ್ರತಿಯೊಂದು ದಾರಿಯ ಕೊನೆಯಲ್ಲಿಯೂ ಎತ್ತರದ ದೇವಾಲಯವನ್ನು ನಿರ್ಮಿಸಿ, ನಿನ್ನ ಸೌಂದರ್ಯವನ್ನು ದುರುಪಯೋಗಪಡಿಸಿಕೊಂಡು, ಹಾದುಹೋಗುವ ಪ್ರತಿಯೊಬ್ಬನಿಗೂ ನಿನ್ನ ಕಾಲುಗಳನ್ನು ಅಗಲಿಸಿದೆ; ನಿನ್ನ ವ್ಯಭಿಚಾರವನ್ನು ವೃದ್ಧಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 16:25
18 ತಿಳಿವುಗಳ ಹೋಲಿಕೆ  

ಒಂದೊಂದು ಬೀದಿಯ ಕೊನೆಯಲ್ಲಿಯೂ ನೀನು ಗದ್ದುಗೆಯನ್ನು ಕಟ್ಟಿ ಎಲ್ಲಾ ಚೌಕಗಳಲ್ಲಿ ಜಗಲಿಯನ್ನು ಸ್ಥಾಪಿಸಿಕೊಂಡಿದ್ದೀ; ದೊರೆತದ್ದನ್ನು ಕಡಿಮೆಯೆಂದು ತಿರಸ್ಕರಿಸುವ ಸೂಳೆಯಂತೆ ನೀನು ನಡೆಯುವವಳಲ್ಲ.


ಕಣ್ಣೆತ್ತಿ ಬೋಳುಗುಡ್ಡಗಳನ್ನು ನೋಡು, ಯಾವದರಲ್ಲಿ ನಿನ್ನನ್ನು ಕೆಡಿಸಲಿಲ್ಲ? ಅರಬಿಯನು ಅಡವಿಯಲ್ಲಿ ಹೊಂಚುಹಾಕುವ ಹಾಗೆ ನೀನು ದಾರಿಯ ಮಗ್ಗುಲಲ್ಲಿ ಅವರಿಗಾಗಿ ಹೊಂಚುತ್ತಾ ಕೂತಿದ್ದೀ; ನಿನ್ನ ಸೂಳೆತನದಿಂದಲೂ ನಿನ್ನ ಕೆಟ್ಟತನದಿಂದಲೂ ದೇಶವನ್ನು ಅಪವಿತ್ರಮಾಡಿದ್ದೀ.


ಇದಲ್ಲದೆ ಹತ್ತು ಕೊಂಬುಗಳನ್ನೂ ಮೃಗವನ್ನೂ ಕಂಡಿಯಲ್ಲ? ಇವುಗಳಿಂದ ಸೂಚಿತರಾದವರು ಆ ಜಾರಸ್ತ್ರೀಯನ್ನು ದ್ವೇಷಿಸಿ ಅವಳನ್ನು ಗತಿಗೆಟ್ಟವಳನ್ನಾಗಿಯೂ ಬಟ್ಟೆಯಿಲ್ಲದವಳನ್ನಾಗಿಯೂ ಮಾಡಿ ಅವಳ ಮಾಂಸವನ್ನು ತಿಂದು ಅವಳನ್ನು ಬೆಂಕಿಯಿಂದ ಸುಟ್ಟುಬಿಡುವರು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಉದ್ದವೂ ಅಗಲವೂ ಬಹಳ ಹಿಡಿಯುವದೂ ಆದ ನಿನ್ನ ಅಕ್ಕನ ಪಾತ್ರೆಯಲ್ಲಿ ನೀನು ಕುಡಿದು ಹಾಸ್ಯಕ್ಕೂ ಕುಚೋದ್ಯಕ್ಕೂ ಗುರಿಯಾಗುವಿ.


ಆದರೆ ನೀನು ನಿನ್ನ ಸೌಂದರ್ಯದಲ್ಲಿಯೇ ನಂಬಿಕೆಯಿಟ್ಟು ನಾನು ಪ್ರಸಿದ್ಧಳಾಗಿದ್ದೇನಲ್ಲಾ ಎಂದು ಉಬ್ಬಿಕೊಂಡು ಸೂಳೆತನಮಾಡಿದಿ; ಹಾದುಹೋಗುವ ಪ್ರತಿಯೊಬ್ಬನ ಸಂಗಡ ವಿುತಿಮೀರಿ ಹಾದರಮಾಡಿದಿ, ಒಬ್ಬೊಬ್ಬನಿಗೂ ಒಳಗಾದಿ.


ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳ್ಳಷ್ಟೂ ನಾಚಿಕೆಪಡಲಿಲ್ಲ, ಲಜ್ಜೆಯ ಗಂಧವನ್ನೂ ತಿಳಿಯಲಿಲ್ಲ; ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಗರಿಸುವರು, ಬೀಳುವವರ ಸಂಗಡ ಬಿದ್ದೇ ಹೋಗುವರು ಎಂದು ಯೆಹೋವನು ಅನ್ನುತ್ತಾನೆ.


ಅವರ ಮುಖಭಾವವೇ ಅವರಿಗೆ ವಿರುದ್ಧ ಸಾಕ್ಷಿಯಾಗಿದೆ; ತಮ್ಮ ಪಾಪವನ್ನು ಮರೆಮಾಜದೆ ಸೊದೋವಿುನವರಂತೆ ಮೆರೆಯಿಸುತ್ತಾರೆ. ಅಯ್ಯೋ, ಅವರ ಆತ್ಮದ ಗತಿಯೇ! ತಮಗೆ ತಾವೇ ಕೇಡು ಮಾಡಿಕೊಂಡಿದ್ದಾರೆ.


ಅವನು ಅವಳ ಊರಿನವರನ್ನು - ಏನಯಿವಿುನ ಸಮೀಪದಲ್ಲಿ ದಾರಿಯ ಬಳಿಯಲ್ಲಿ ಕೂತಿದ್ದ ದೇವದಾಸಿ ಎಲ್ಲಿರುವಳು ಎಂದು ಕೇಳಿದ್ದಕ್ಕೆ ಅವರು - ಇಲ್ಲಿ ಯಾವ ದೇವದಾಸಿಯೂ ಇಲ್ಲ ಅಂದರು.


ಆಗ ಆಕೆ - ಶೇಲಹನು ಪ್ರಾಯಸ್ಥನಾದಾಗ್ಯೂ ನನ್ನನ್ನು ಅವನಿಗೆ ಮದುವೆ ಮಾಡಿಸಲಿಲ್ಲವಲ್ಲಾ ಅಂದುಕೊಂಡು ತನ್ನ ವಿಧವಾವಸ್ತ್ರಗಳನ್ನು ತೆಗೆದಿಟ್ಟು ಮುಸುಕನ್ನು ಹಾಕಿಕೊಂಡು [ವೇಶ್ಯಾಸ್ತ್ರೀಯಂತೆ] ಅಲಂಕೃತಳಾಗಿ ತಿಮ್ನಾವೂರಿನ ದಾರಿಯಲ್ಲಿರುವ ಏನಯಿಮೂರಿನ ಬಾಗಿಲ ಬಳಿಯಲ್ಲಿ ಕೂತುಕೊಂಡಳು.


ಎಪ್ಪತ್ತು ವರುಷಗಳ ಮೇಲೆ ಯೆಹೋವನು ತೂರ್ ಎಂಬವಳಿಗೆ ನೇವಿುಸಲು ಅವಳು ತನ್ನ ಆದಾಯಕ್ಕಾಗಿ ಹಿಂದಿರುಗಿ ಭೂಮಂಡಲದಲ್ಲಿ ಲೋಕದ ಸಕಲ ರಾಜ್ಯಗಳೊಂದಿಗೆ ಕಲೆಯುವಳು.


ನನ್ನ ಆಪ್ತಜನವು ನನ್ನ ಮನೆಯಲ್ಲಿ ಅಸಹ್ಯಕಾರ್ಯವನ್ನು ಮಾಡಿದ್ದೇಕೆ? ವ್ರತಗಳೂ ಮೀಸಲಿನ ಮಾಂಸವೂ ನಿನ್ನ ದುಷ್ಟತನವನ್ನು ಪರಿಹರಿಸಿಯಾವೇ? ಇಂಥವುಗಳ ಮೂಲಕ ತಪ್ಪಿಸಿಕೊಂಡೀಯಾ?


ಅತಿಸುಂದರಿಯೂ ಮಂತ್ರತಂತ್ರನಿಪುಣಳೂ ಜನಾಂಗಗಳನ್ನು ತನ್ನ ಸೂಳೆತನದಿಂದ, ಕುಲಗಳನ್ನು ತನ್ನ ಮಂತ್ರತಂತ್ರಗಳಿಂದ ಗುಲಾಮತನಕ್ಕೆ ತಂದವಳೂ ಆದ ಸೂಳೆಯ ಲೆಕ್ಕವಿಲ್ಲದ ಸೂಳೆತನಗಳ ನಿವಿುತ್ತ ಇದೆಲ್ಲಾ ಆಗುವದು.


ಇಸ್ರಾಯೇಲ್ ವಂಶದವರೇ, ಒಬ್ಬ ಹೆಂಗಸು ಪತಿದ್ರೋಹ ಮಾಡಿದಂತೆ ನೀವು ನನಗೆ ದ್ರೋಹವನ್ನು ಮಾಡಿಯೇ ಇದ್ದೀರಿ ಎಂದು ಯೆಹೋವನು ಅನ್ನುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು