Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 16:27 - ಕನ್ನಡ ಸತ್ಯವೇದವು J.V. (BSI)

27 ಆದಕಾರಣ ನಾನು ನಿನ್ನ ಮೇಲೆ ಕೈಯೆತ್ತಿ ನಿನ್ನ ಆಹಾರವನ್ನು ಕಡಿಮೆಮಾಡಿದೆನು; ನಿನ್ನನ್ನು ದ್ವೇಷಿಸಿ ನಿನ್ನ ಕೆಟ್ಟ ನಡತೆಗೆ ಅಸಹ್ಯಪಡುವವರಾದ ಫಿಲಿಷ್ಟಿಯದ ಕುಮಾರ್ತೆಯರ ಕೈಗೆ ನಿನ್ನನ್ನು ಸಿಕ್ಕಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆದಕಾರಣ ನಾನು ನಿನ್ನ ಮೇಲೆ ಕೈಯೆತ್ತಿ ನಿನ್ನ ಆಹಾರವನ್ನು ಕಡಿಮೆಮಾಡಿದೆನು; ನಿನ್ನನ್ನು ದ್ವೇಷಿಸಿ ನಿನ್ನ ಕೆಟ್ಟ ನಡತೆಗೆ ಅಸಹ್ಯಪಡುವವರಾದ ಫಿಲಿಷ್ಟಿಯದ ಕುಮಾರ್ತೆಯರ ಕೈಗೆ ನಿನ್ನನ್ನು ಸಿಕ್ಕಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 “ಆದಕಾರಣ ನಾನು ನಿನ್ನ ಮೇಲೆ ಕೈಯೆತ್ತಿ ನಿನ್ನ ಆಹಾರವನ್ನು ಕಡಿಮೆಮಾಡಿದೆ; ನಿನ್ನನ್ನು ದ್ವೇಷಿಸಿ, ನಿನ್ನ ಕೆಟ್ಟನಡತೆಗೆ ಅಸಹ್ಯಪಡುವ ಪಿಲಿಷ್ಟಿಯ ಕುವರಿಯರ ಕೈಗೆ ನಿನ್ನನ್ನು ಒಪ್ಪಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆಗ ನಾನು ನಿನ್ನನ್ನು ಶಿಕ್ಷಿಸಿದೆನು. ನಾನು ನಿನಗೆ ಕೊಟ್ಟ ದೇಶದಿಂದ ಸ್ವಲ್ಪ ಭಾಗವನ್ನು ಕಿತ್ತುಕೊಂಡೆನು. ನಿನ್ನ ಶತ್ರುಗಳಾದ ಫಿಲಿಷ್ಟಿಯರ ಹೆಣ್ಣುಮಕ್ಕಳು ನಿನ್ನೊಂದಿಗೆ ತಮಗೆ ಇಷ್ಟ ಬಂದಂತೆ ವರ್ತಿಸಲುಬಿಟ್ಟೆನು. ನಿನ್ನ ಕೆಟ್ಟಕಾರ್ಯಗಳನ್ನು ನೋಡಿ ಅವರೂ ಅಚ್ಚರಿಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆದ್ದರಿಂದ ನಾನು ನನ್ನ ಕೈಯನ್ನು ನಿನ್ನ ಮೇಲೆ ಚಾಚಿ ನಿನ್ನ ಭೂಪ್ರದೇಶವನ್ನು ಕಡಿಮೆ ಮಾಡಿದೆ; ನಿನ್ನ ದುರ್ಮಾರ್ಗಕ್ಕೆ ನಾಚಿಕೆಪಟ್ಟು, ನಿನ್ನ ಕೆಟ್ಟ ನಡತೆಗೆ ಅಸಹ್ಯಪಡುವವರಾದ ಫಿಲಿಷ್ಟಿಯರ ಪುತ್ರಿಯರ ಚಿತ್ತಕ್ಕೆ ನಿನ್ನನ್ನು ಒಪ್ಪಿಸಿಬಿಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 16:27
21 ತಿಳಿವುಗಳ ಹೋಲಿಕೆ  

ಇವರು ಇಸ್ರಾಯೇಲ್ಯರನ್ನು ಬಾಯಿತೆರೆದು ನುಂಗಿದ್ದಾರೆ. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈ ಎತ್ತಿಯೇ ಇದೆ.


ನಿನ್ನ ಕೆಟ್ಟತನವು ಬೈಲಿಗೆ ಬರುವದಕ್ಕೆ ಮೊದಲು ಆ ನಿನ್ನ ಗರ್ವಕಾಲದಲ್ಲಿ ಸೊದೋಮೆಂಬ ನಿನ್ನ ತಂಗಿಯ ಹೆಸರು ನಿನ್ನ ಬಾಯಲ್ಲಿ ಬರಲೇ ಇಲ್ಲ;


ಇವುಗಳನ್ನು ನಾನು ನೋಡಿ ನೀನು ರವಿುಸಿದ ನಿನ್ನ ಎಲ್ಲಾ ವಿುಂಡರನ್ನೂ ನೀನು ಮೋಹಿಸಿದ ಸಮಸ್ತರನ್ನೂ ನೀನು ಹಗೆಮಾಡಿದ ಎಲ್ಲರೊಂದಿಗೆ ಸುತ್ತುಮುತ್ತಲು ನಿನಗೆ ವಿರುದ್ಧವಾಗಿ ಕೂಡಿಸಿ ಅವರ ಕಣ್ಣೆದುರಿಗೆ ನಿನ್ನನ್ನು ಬೆತ್ತಲೆಗೈದು ನಿನ್ನ ಮಾನವನ್ನು ಬಟ್ಟಬೈಲುಮಾಡುವೆನು.


ಇದಲ್ಲದೆ ಹತ್ತು ಕೊಂಬುಗಳನ್ನೂ ಮೃಗವನ್ನೂ ಕಂಡಿಯಲ್ಲ? ಇವುಗಳಿಂದ ಸೂಚಿತರಾದವರು ಆ ಜಾರಸ್ತ್ರೀಯನ್ನು ದ್ವೇಷಿಸಿ ಅವಳನ್ನು ಗತಿಗೆಟ್ಟವಳನ್ನಾಗಿಯೂ ಬಟ್ಟೆಯಿಲ್ಲದವಳನ್ನಾಗಿಯೂ ಮಾಡಿ ಅವಳ ಮಾಂಸವನ್ನು ತಿಂದು ಅವಳನ್ನು ಬೆಂಕಿಯಿಂದ ಸುಟ್ಟುಬಿಡುವರು.


ನಾನು ನನ್ನ ರೋಷವನ್ನು ನಿನ್ನ ಮೇಲೆ ಸುರಿಯಲು ಅವರು ನಿನ್ನಲ್ಲಿ ಕೋಪತೀರಿಸಿಕೊಳ್ಳುವರು; ನಿನ್ನ ಮೂಗು ಕಿವಿಗಳನ್ನು ಕಿತ್ತುಬಿಡುವರು; ನಿನ್ನಲ್ಲಿ ಉಳಿದವರು ಖಡ್ಗಕ್ಕೆ ತುತ್ತಾಗುವರು; ನಿನ್ನ ಗಂಡುಹೆಣ್ಣುಮಕ್ಕಳನ್ನು ಅಪಹರಿಸುವರು; ನಿನ್ನ ಜನಶೇಷವು ಅಗ್ನಿಗೆ ಆಹುತಿಯಾಗುವದು.


ಹೀಗಿರಲು, ಒಹೊಲೀಬಳೇ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ಯಾವ ವಿುಂಡರಿಂದ ನಿನ್ನ ಆಶೆ ತೊಲಗಿತೋ ಆ ವಿುಂಡರನ್ನು ಅಂದರೆ ಮನೋಹರ ಯುವಕರೂ ಯಾರೂ ತಪ್ಪದೆ ನಾಯಕೋಪನಾಯಕರೂ ಪ್ರಭುಪ್ರಧಾನರೂ ಅಶ್ವಾರೂಢರೂ ಆದ ಬಾಬೆಲಿನವರು,


ಆದರೆ ನೀನು ನಡೆದ ದುರ್ಮಾರ್ಗವು ಅವರು ನಡೆದಂಥದಲ್ಲ, ನಿನ್ನ ಅಸಹ್ಯಕಾರ್ಯಗಳು ಅವರು ನಡಿಸಿದಂಥವುಗಳಲ್ಲ, ಅವರ ದುರ್ನಡತೆಯು ಅತ್ಯಲ್ಪವೆಂದು ಸರ್ವದಾ ಅವರಿಗಿಂತ ಬಹುಕೆಟ್ಟವಳಾಗಿ ನಡೆದುಕೊಂಡಿ.


ಒಬ್ಬ ಪ್ರವಾದಿಯು ಮರುಳುಗೊಂಡು ದೈವೋಕ್ತಿಯನ್ನು ನುಡಿದರೆ ಆ ಪ್ರವಾದಿಯನ್ನು ಮರುಳುಗೊಳಿಸಿದವನು ಯೆಹೋವನಾದ ನಾನೇ; ನಾನು ಅವನ ಮೇಲೆ ಕೈಯೆತ್ತಿ ಇಸ್ರಾಯೇಲ್ಯರಾದ ನನ್ನ ಜನರೊಳಗಿಂದ ಅವನನ್ನು ಕಿತ್ತು ನಿರ್ನಾಮಮಾಡುವೆನು.


ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಪ್ರಧಾನರನ್ನೂ ಅವರ ಪ್ರಾಣ ಹುಡುಕುವ ಶತ್ರುಗಳ ಕೈಗೆ, ಅಂದರೆ ನಿಮ್ಮನ್ನು ಬಿಟ್ಟುಹೋಗಿರುವ ಬಾಬೆಲಿನ ಅರಸನ ಕೈಗೆ ಕೊಡುವೆನು.


ಹೀಗಿರಲು ಕರ್ತನು ಅವರ ಯೌವನಸ್ಥರಲ್ಲಿ ಉಲ್ಲಾಸಿಸನು, ಅವರಲ್ಲಿನ ಅನಾಥರನ್ನೂ ವಿಧವೆಯರನ್ನೂ ಕರುಣಿಸನು; ಪ್ರತಿಯೊಬ್ಬನೂ ಭ್ರಷ್ಟನೂ ದುಷ್ಟನೂ ಆಗಿದ್ದಾನೆ; ಎಲ್ಲರ ಬಾಯೂ ನೀಚವಾಗಿ ಮಾತಾಡುತ್ತದೆ. ಎಷ್ಟು ದಂಡಿಸಿದರೂ ಆತನ ಕೋಪವು ತೀರದೆ ಕೈ ಎತ್ತಿಯೇ ಇದೆ.


ಹೀಗಿರಲು ಯೆಹೋವನು ತನ್ನ ಜನರಲ್ಲಿ ಉರಿಗೊಂಡು ಅವರ ಮೇಲೆ ಕೈಯೆತ್ತಿ ಅವರನ್ನು ಹೊಡೆದು ಬಿಡುವನು; ಆಗ ಬೆಟ್ಟಗಳು ನಡಗುವವು, ಹೆಣಗಳು ಬೀದಿಗಳಲ್ಲಿ ಕಸವಾಗಿ ಬಿದ್ದಿರುವವು. ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೆ ಕೈಯೆತ್ತಿಯೇ ಇರುವದು.


ಇಗೋ, ಕರ್ತನೂ ಸೇನಾಧೀಶ್ವರನೂ ಆಗಿರುವ ಯೆಹೋವನೆಂಬ ನಾನು ಜೀವನಕ್ಕೆ ಆಧಾರಕೋದ್ಧಾರಕವಾದ ಅನ್ನಪಾನಗಳನ್ನೆಲ್ಲಾ ಯೆರೂಸಲೇವಿುನಿಂದಲೂ ಯೆಹೂದದಿಂದಲೂ ತೆಗೆದುಬಿಡುವೆನು.


ಅವರನ್ನು ಅನ್ಯಜನಾಂಗಗಳ ಕೈಗೆ ಒಪ್ಪಿಸಿದನು. ವೈರಿಗಳು ಅವರ ಮೇಲೆ ಅಧಿಕಾರ ನಡಿಸಿದರು;


ಯೆಹೋವನು ತನ್ನ ಸೇವಕರಾದ ಪ್ರವಾದಿಗಳ ಮುಖಾಂತರವಾಗಿ ಮುಂತಿಳಿಸಿದ ಪ್ರಕಾರ ಯೆಹೂದರಾಜ್ಯವನ್ನು ಹಾಳುಮಾಡುವದಕ್ಕೋಸ್ಕರ ಕಸ್ದೀಯರ, ಅರಾಮ್ಯರ, ಮೋವಾಬ್ಯರ, ಅಮ್ಮೋನಿಯರ ಸುಲಿಗೆಯ ಗುಂಪುಗಳನ್ನು ಕಳುಹಿಸಿದನು.


ಆಹಾ, ಆ ಕಾಲದಲ್ಲಿ ನಿನ್ನನ್ನು ಬಾಧಿಸುವವರಿಗೆ ತಕ್ಕದ್ದನ್ನು ಮಾಡುವೆನು; ನಿನ್ನಲ್ಲಿ ಕುಂಟುವವರನ್ನು ಉದ್ಧರಿಸುವೆನು, ಚದರಿಸಲ್ಪಟ್ಟವರನ್ನು ಕೂಡಿಸುವೆನು; ಅಂತು ಲೋಕದಲ್ಲೆಲ್ಲಾ ಅವಮಾನಪಟ್ಟವರಿಗೆ ಸ್ತೋತ್ರಕೀರ್ತಿಗಳನ್ನು ಉಂಟುಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು