Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 16:3 - ಕನ್ನಡ ಸತ್ಯವೇದವು J.V. (BSI)

3 ಕರ್ತನಾದ ಯೆಹೋವನು ಯೆರೂಸಲೇಮೆಂಬಾಕೆಗೆ ಈ ಮಾತನ್ನು ಹೇಳಿಕಳುಹಿಸಿದ್ದಾನೆ - ನೀನು ಹುಟ್ಟಿದ್ದು ಕಾನಾನ್ ದೇಶ, ಅದೇ ನಿನ್ನ ಜನ್ಮಭೂವಿು, ನಿನ್ನ ತಂದೆ ಅಮೋರಿಯನು, ನಿನ್ನ ತಾಯಿ ಹಿತ್ತೀಯಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಕರ್ತನಾದ ಯೆಹೋವನು ಯೆರೂಸಲೇಮ್ ಎಂಬಾಕೆಗೆ ಈ ಮಾತನ್ನು ಹೇಳಿಕಳುಹಿಸಿದ್ದಾನೆ, ‘ನೀನು ಹುಟ್ಟಿದ್ದು ಕಾನಾನ್ ದೇಶದಲ್ಲಿ, ಅದೇ ನಿನ್ನ ಜನ್ಮಭೂಮಿ, ನಿನ್ನ ತಂದೆ ಅಮೋರಿಯನು, ನಿನ್ನ ತಾಯಿ ಹಿತ್ತಿಯಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಸರ್ವೇಶ್ವರ ದೇವರು ಜೆರುಸಲೇಮೆಂಬಾಕೆಗೆ ಈ ಮಾತನ್ನು ಹೇಳಿ ಕಳುಹಿಸಿದ್ದಾರೆ: “ನೀನು ಹುಟ್ಟಿದ್ದು ಕಾನಾನ್ ದೇಶದಲ್ಲಿ, ಅದೇ ನಿನ್ನ ಜನ್ಮಭೂಮಿ. ನಿನ್ನ ತಂದೆ ಅಮೋರಿಯನು, ನಿನ್ನ ತಾಯಿ ಹಿತ್ತಿಯಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನೀನು ಏನು ಹೇಳಬೇಕೆಂದರೆ, ‘ಜೆರುಸಲೇಮಿಗೆ ನನ್ನ ದೇವರಾದ ಯೆಹೋವನು ಹೀಗೆನ್ನುತ್ತಾನೆ: ನಿನ್ನ ಇತಿಹಾಸವನ್ನು ನೋಡು. ನೀನು ಕಾನಾನ್‌ನಲ್ಲಿ ಜನಿಸಿರುತ್ತೀ. ನಿನ್ನ ತಂದೆಯು ಅಮೋರಿಯನು, ನಿನ್ನ ತಾಯಿ ಹಿತ್ತಿಯಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಹೀಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಯೆರೂಸಲೇಮಿನವರಿಗೆ ಹೀಗೆ ಹೇಳುತ್ತಾರೆ: ನಿಮ್ಮ ಪೂರ್ವಜರು ಮತ್ತು ನೀನು ಹುಟ್ಟಿದ್ದು ಕಾನಾನ್ ದೇಶದಲ್ಲಿ; ಅದೇ ನಿನ್ನ ಜನ್ಮಭೂಮಿ. ನಿನ್ನ ತಂದೆ ಅಮೋರಿಯನು, ನಿನ್ನ ತಾಯಿ ಹಿತ್ತಿಯಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 16:3
24 ತಿಳಿವುಗಳ ಹೋಲಿಕೆ  

ಗಂಡನಿಗೂ ಮಕ್ಕಳಿಗೂ ಬೇಸರಪಡುವವಳಾದ ನಿನ್ನ ತಾಯಿಗೆ ನೀನು ತಕ್ಕ ಮಗಳು; ಗಂಡನಿಗೂ ಮಕ್ಕಳಿಗೂ ಬೇಸರಪಡುವವರಾದ ನಿನ್ನ ಅಕ್ಕಂದಿರಿಗೆ ನೀನು ತಕ್ಕ ತಂಗಿ; ನಿನ್ನ ತಾಯಿ ಹಿತ್ತಿಯಳು, ನಿನ್ನ ತಂದೆ ಅಮೋರಿಯನು;


ನಿಮ್ಮ ದೇವರಾದ ಯೆಹೋವನು ನಿಮಗೆ ಅಪ್ಪಣೆಕೊಟ್ಟಂತೆ ಇವರನ್ನು ಅಂದರೆ ಹಿತ್ತಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು, ಯೆಬೂಸಿಯರು, ಇವರೆಲ್ಲರನ್ನೂ ನಾಶಮಾಡಿಬಿಡಬೇಕು.


ಸೈತಾನನು ನಿಮ್ಮ ತಂದೆ; ನೀವು ಆ ತಂದೆಯಿಂದ ಹುಟ್ಟಿದವರಾಗಿದ್ದು ನಿಮ್ಮ ತಂದೆಯ ದುರಿಚ್ಫೆಗಳನ್ನೇ ನಡಿಸಬೇಕೆಂದಿದ್ದೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನಿಲ್ಲಲಿಲ್ಲ; ಅವನಲ್ಲಿ ಸತ್ಯವು ಇಲ್ಲವೇ ಇಲ್ಲ. ಅವನು ಸುಳ್ಳಾಡುವಾಗ ಸ್ವಭಾವಾನುಸಾರವಾಗಿ ಆಡುತ್ತಾನೆ; ಅವನು ಸುಳ್ಳುಗಾರನೂ ಸುಳ್ಳಿಗೆ ಮೂಲಪುರುಷನೂ ಆಗಿದ್ದಾನೆ.


ಆಕಾಶ ಸೈನ್ಯದವರು ನಿನಗೆ ಅಡ್ಡಬೀಳುತ್ತಾರೆ. ಯೆಹೋವನೇ, ಅಬ್ರಾಮನನ್ನು ಆರಿಸಿಕೊಂಡು ಕಸ್ದೀಯರ ಊರ್ ಎಂಬ ಪಟ್ಟಣದಿಂದ ಬರಮಾಡಿ ಅವನಿಗೆ ಅಬ್ರಹಾಮನೆಂಬ ಹೆಸರನ್ನು ಕೊಟ್ಟ ದೇವರು ನೀನೇ.


ಹೀಗಿರಲಾಗಿ ಅವನು ತನ್ನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳುವದಕ್ಕಾಗಿ ಹೊರಟುಬಂದ ಜನರ ಗುಂಪುಗಳಿಗೆ - ಎಲೈ ಸರ್ಪಜಾತಿಯವರೇ, ಮುಂದೆ ಕಾಣಬರುವ ದೈವಕೋಪದಿಂದ ತಪ್ಪಿಸಿಕೊಳ್ಳುವದಕ್ಕೆ ನಿಮಗೂ ಉಪದೇಶ ಮಾಡಿದವರಾರು?


ಕತ್ತಿಯನ್ನು ಒರೆಗೆ ಸೇರಿಸು. ನಿನ್ನ ಸೃಷ್ಟಿಸ್ಥಳದಲ್ಲಿ, ನಿನ್ನ ಜನ್ಮಭೂವಿುಯಲ್ಲಿ ನಿನಗೆ ನ್ಯಾಯತೀರಿಸುವೆನು.


ಸೊದೋವಿುನ ಅಧಿಪತಿಗಳೇ, ಯೆಹೋವನ ಮಾತನ್ನು ಆಲಿಸಿರಿ; ಗೊಮೋರದ ಪ್ರಜೆಗಳೇ, ನಮ್ಮ ದೇವರ ಧರ್ಮೋಪದೇಶವನ್ನು ಕೇಳಿರಿ!


ಯೆಹೋವನು ಇಸ್ರಾಯೇಲ್ಯರ ಎದುರಿನಿಂದ ಓಡಿಸಿಬಿಟ್ಟ ಅಮೋರಿಯರಂತೆ ವಿಗ್ರಹಗಳನ್ನು ಪೂಜಿಸಿದ ಅಹಾಬನ ನಡತೆಯು ಕೇವಲ ಅಸಹ್ಯವಾಗಿತ್ತು.


ನಿನ್ನ ಸಂತತಿಯವರು ನಾಲ್ಕನೆಯ ತಲಾಂತರದಲ್ಲಿ ಇಲ್ಲಿಗೆ ತಿರಿಗಿಬರುವರು; ಅಮೋರಿಯರ ಅಪರಾಧವು ಇನ್ನೂ ಪೂರ್ಣಸ್ಥಿತಿಗೆ ಬರಲಿಲ್ಲ ಎಂದು ಹೇಳಿದನು.


ಇವರು ದೇವರ ಮಕ್ಕಳೆಂಬದೂ ಅವರು ಸೈತಾನನ ಮಕ್ಕಳೆಂಬದೂ ಇದರಿಂದ ವ್ಯಕ್ತವಾಗುತ್ತದೆ. ನೀತಿಯನ್ನು ಅನುಸರಿಸದವನೂ ತನ್ನ ಸಹೋದರನನ್ನು ಪ್ರೀತಿಸದವನೂ ದೇವರಿಂದ ಹುಟ್ಟಿದವರಲ್ಲ.


ಇದಾದನಂತರ ಪ್ರಧಾನಪುರುಷರು ನನ್ನ ಬಳಿಗೆ ಬಂದು - ಇಸ್ರಾಯೇಲ್ಯರಲ್ಲಿ ಸಾಧಾರಣಜನರೂ ಯಾಜಕರೂ ಲೇವಿಯರೂ ಕಾನಾನ್ಯರು, ಹಿತ್ತಿಯರು, ಪೆರಿಜ್ಜೀಯರು, ಯೆಬೂಸಿಯರು, ಅಮ್ಮೋನಿಯರು, ಮೋವಾಬ್ಯರು, ಐಗುಪ್ತ್ಯರು, ಅಮೋರಿಯರು ಎಂಬ ಅನ್ಯದೇಶಗಳವರ ಬಳಕೆಯನ್ನು ತೊರೆಯದೆ ಅವರ ಅಸಹ್ಯಕಾರ್ಯಗಳನ್ನು ಅನುಸರಿಸಿ


ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಸೇರಿಸಿ ಸಂಖ್ಯೆಯಲ್ಲಿಯೂ ಬಲದಲ್ಲಿಯೂ ನಿಮಗೆ ಮೀರುವ ಹಿತ್ತಿಯರು, ಗಿರ್ಗಾಷಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು, ಯೆಬೂಸಿಯರು ಎಂಬ ಏಳು ಜನಾಂಗಗಳನ್ನು


ಅಬ್ರಾಮನೂ ನಾಹೋರನೂ ಮದುವೆಮಾಡಿಕೊಂಡರು. ಅಬ್ರಾಮನ ಹೆಂಡತಿಯ ಹೆಸರು ಸಾರಯಳು, ನಾಹೋರನ ಹೆಂಡತಿಯ ಹೆಸರು ವಿುಲ್ಕಾ; ಈಕೆಯು ಹಾರಾನನ ಮಗಳು; ಹಾರಾನನು ವಿುಲ್ಕಳಿಗೂ ಇಸ್ಕಳಿಗೂ ತಂದೆ.


ನಾವೆಲ್ಲರೂ ಪೂರ್ವದಲ್ಲಿ ಅವಿಧೇಯರಾಗಿದ್ದು ಶರೀರಭಾವದ ಆಶೆಗಳಿಗೆ ಅಧೀನರಾಗಿ ಶರೀರಕ್ಕೂ ಮನಸ್ಸಿಗೂ ಸಂಬಂಧಪಟ್ಟ ಇಚ್ಫೆಗಳನ್ನು ನೆರವೇರಿಸುತ್ತಾ ನಡೆದು ವಿುಕ್ಕಾದವರಂತೆ ಸ್ವಭಾವಸಿದ್ಧವಾಗಿ ದೇವರ ಕೋಪಕ್ಕೆ ಗುರಿಯಾಗಿದ್ದೆವು.


ಆದರೆ ನ್ಯಾಯವಿಚಾರಣೆಯ ದಿನದಲ್ಲಿ ನಿನ್ನ ಗತಿಗಿಂತಲೂ ಸೊದೋಮ್ ಸೀಮೆಯ ಗತಿಯು ಮೇಲಾಗಿರುವದು ಎಂದು ನಿಮಗೆ ಹೇಳುತ್ತೇನೆ ಅಂದನು.


ಆದರೆ ಅವನು ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ಸ್ನಾನಮಾಡಿಸಿಕೊಳ್ಳುವದಕ್ಕೆ ಬರುವದನ್ನು ಕಂಡು ಅವರಿಗೆ - ಎಲೈ ಸರ್ಪಜಾತಿಯವರೇ, ಮುಂದೆ ಕಾಣಬರುವ ದೈವಕೋಪದಿಂದ ತಪ್ಪಿಸಿಕೊಳ್ಳುವದಕ್ಕೆ ನಿಮಗೆ ಉಪದೇಶ ಮಾಡಿದವರಾರು?


ಯೆಹೂದ್ಯರ ಅರಸನಾದ ಮನಸ್ಸೆಯು ಮುಂಚೆ ಇದ್ದ ಅಮೋರಿಯರ ಕೃತ್ಯಗಳಿಗಿಂತ ಅಸಹ್ಯವಾದ ಕೃತ್ಯಗಳನ್ನು ನಡಿಸಿದದರಿಂದಲೂ ವಿಗ್ರಹಗಳಿಂದ ಯೆಹೂದ್ಯರನ್ನು ಪಾಪಕ್ಕೆ ಪ್ರೇರಿಸಿದದರಿಂದಲೂ


ಹೀಗಿರುವದರಿಂದ ನೀವು ಯೆಹೋವನಲ್ಲಿ ಭಯ ಭಕ್ತಿಯುಳ್ಳವರಾಗಿರ್ರಿ; ಆತನನ್ನು ಪೂರ್ಣಮನಸ್ಸಿನಿಂದಲೂ ಯಥಾರ್ಥಚಿತ್ತದಿಂದಲೂ ಸೇವಿಸಿರಿ. ನಿಮ್ಮ ಪೂರ್ವಿಕರು [ಯೂಫ್ರೇಟೀಸ್] ನದಿಯ ಆಚೆಯಲ್ಲಿಯೂ ಐಗುಪ್ತದಲ್ಲಿಯೂ ಪೂಜಿಸುತ್ತಿದ್ದ ದೇವತೆಗಳನ್ನು ನಿಮ್ಮಲ್ಲಿಂದ ತೆಗೆದುಹಾಕಿರಿ; ಯೆಹೋವನನ್ನೇ ಸೇವಿಸಿರಿ.


ಅವನು ತೆರಹನನ್ನು ಪಡೆದ ಮೇಲೆ ಗಂಡು ಹೆಣ್ಣು ಮಕ್ಕಳನ್ನು ಪಡೆದು ನೂರ ಹತ್ತೊಂಭತ್ತು ವರುಷ ಬದುಕಿದನು.


ಗೆಷೂರ್ಯರ ಸೀಮೆಯು, ದಕ್ಷಿಣದಲ್ಲಿದ್ದ ಅವ್ವೀಯರ ದೇಶವು ಇವುಗಳೂ ಚೀದೋನ್ಯರಿಗೆ ಸೇರಿದ ಮೆಯಾರಾ ಮೊದಲುಗೊಂಡು ಅಮೋರಿಯರ ಮೇರೆಯಾದ ಅಫೇಕದವರೆಗಿರುವ ಕಾನಾನ್ಯರ ದೇಶವು,


ನಿನ್ನ ಮೂಲಪಿತೃವು ಪಾಪಿಷ್ಠನು, ನಿನ್ನ ಮಧ್ಯಸ್ಥರು ನನಗೆ ದ್ರೋಹಮಾಡಿದವರು.


ನರಪುತ್ರನೇ, ನೀನು ಯೆರೂಸಲೇವಿುಗೆ ಅದರ ಅಸಹ್ಯಕಾರ್ಯಗಳನ್ನು ತಿಳಿಯಪಡಿಸಿ ಹೀಗೆ ನುಡಿ -


ನಿನ್ನ ಜನನವನ್ನು ಕುರಿತು ಏನು ಹೇಳಲಿ! ನೀನು ಹುಟ್ಟಿದ ದಿವಸದಲ್ಲಿ ಯಾರೂ ನಿನ್ನ ಹೊಕ್ಕಳು ಕೊಯ್ದುಕಟ್ಟಲಿಲ್ಲ, ನಿನ್ನನ್ನು ನೀರಿನಿಂದ ತೊಳೆದು ಶುಚಿಮಾಡಲಿಲ್ಲ, ನಿನಗೆ ಉಪ್ಪನ್ನು ಸ್ವಲ್ಪವೂ ಸವರಲಿಲ್ಲ, ನಿನ್ನನ್ನು ಬಟ್ಟೆಯಲ್ಲಿ ಎಷ್ಟು ಮಾತ್ರವೂ ಸುತ್ತಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು