ಯೆಹೆಜ್ಕೇಲನು 16:30 - ಕನ್ನಡ ಸತ್ಯವೇದವು J.V. (BSI)30 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಿನ್ನ ಮನಸ್ಸು ಮೋಹಕ್ಕೆ ಎಷ್ಟೋ ಸೋತಿದೆ! ಇಷ್ಟೆಲ್ಲಾ ದುಷ್ಕೃತ್ಯಗಳನ್ನು ನಡಿಸಿ ಕಟ್ಟಿಲ್ಲದ ಜಾರಸ್ತ್ರೀಯಾಗಿದ್ದೀಯಲ್ಲಾ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಿನ್ನ ಮನಸ್ಸು ಮೋಹಕ್ಕೆ ಎಷ್ಟೋ ಸೋತಿದೆ! ಇಷ್ಟೆಲ್ಲಾ ದುಷ್ಕೃತ್ಯಗಳನ್ನು ನಡೆಸಿ ಕಟ್ಟಿಲ್ಲದ ಜಾರಸ್ತ್ರೀಯಾಗಿರುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಸರ್ವಶಕ್ತ ದೇವರು ಇಂತೆನ್ನುತ್ತಾರೆ: “ನಿನ್ನ ಮನಸ್ಸು ಮೋಹಪಾಶಕ್ಕೆ ಸಿಕ್ಕಿ ಎಷ್ಟೋ ಸೋತಿದೆ! ಇಷ್ಟೆಲ್ಲಾ ದುಷ್ಕೃತ್ಯಗಳನ್ನು ನಡೆಸಿ ಕಟ್ಟಿಲ್ಲದ ಜಾರಿಣಿಯಾಗಿರುವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ನಾಚಿಕೆಯಿಲ್ಲದ ಸೂಳೆಯಂತೆ ನೀನು ಮಾಡಿದ ಈ ಎಲ್ಲಾ ಕಾರ್ಯಗಳಿಂದ ನಾನು ನಿನ್ನ ವಿರುದ್ಧ ಕೋಪದಿಂದ ತುಂಬಿರುವೆ.” ನನ್ನ ಒಡೆಯನಾದ ಯೆಹೋವನು ಈ ಸಂಗತಿಗಳನ್ನು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 “ ‘ನೀನು ನಾಚಿಕೆಯಿಲ್ಲದ ವೇಶ್ಯೆಯಂತೆ ವರ್ತಿಸಿದಾಗ ನಾನು ಕೋಪದಿಂದ ತುಂಬಿದೆನು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |