Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 16:31 - ಕನ್ನಡ ಸತ್ಯವೇದವು J.V. (BSI)

31 ಒಂದೊಂದು ಬೀದಿಯ ಕೊನೆಯಲ್ಲಿಯೂ ನೀನು ಗದ್ದುಗೆಯನ್ನು ಕಟ್ಟಿ ಎಲ್ಲಾ ಚೌಕಗಳಲ್ಲಿ ಜಗಲಿಯನ್ನು ಸ್ಥಾಪಿಸಿಕೊಂಡಿದ್ದೀ; ದೊರೆತದ್ದನ್ನು ಕಡಿಮೆಯೆಂದು ತಿರಸ್ಕರಿಸುವ ಸೂಳೆಯಂತೆ ನೀನು ನಡೆಯುವವಳಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಒಂದೊಂದು ಬೀದಿಯ ಕೊನೆಯಲ್ಲಿಯೂ ನೀನು ಗದ್ದುಗೆಯನ್ನು ಕಟ್ಟಿ, ಎಲ್ಲಾ ಚೌಕಗಳಲ್ಲಿ ಜಗಲಿಯನ್ನು ಸ್ಥಾಪಿಸಿಕೊಂಡಿರುವೆ; ದೊರೆತದ್ದನ್ನು ಕಡಿಮೆಯೆಂದು ತಿರಸ್ಕರಿಸುವ ವ್ಯಭಿಚಾರಿಯಂತೆ ನೀನು ನಡೆಯುವವಳಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಒಂದೊಂದು ಬೀದಿಯ ಕೊನೆಯಲ್ಲೂ ನೀನು ಮಂಟಪವನ್ನು ಕಟ್ಟಿ ಎಲ್ಲಾ ಚೌಕಗಳಲ್ಲಿ ಜಗಲಿಯನ್ನು ಸ್ಥಾಪಿಸಿಕೊಂಡಿರುವೆ; ದೊರೆತದ್ದನ್ನು ಇದು ಕಡಿಮೆಯೆಂದು ತಿರಸ್ಕರಿಸುವ ಸೂಳೆಯಂತೆ ನೀನು ನಡೆಯುವವಳಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ದೇವರು ಹೇಳಿದ್ದೇನೆಂದರೆ, “ಆದರೆ ನೀನು ವೇಶ್ಯೆಯ ಹಾಗೆ ಪೂರ್ಣವಾಗಿರಲಿಲ್ಲ. ನೀನು ಎತ್ತರದ ಪೂಜಾಸ್ಥಳಗಳನ್ನು ಪ್ರತೀ ರಸ್ತೆಯ ಪ್ರಾರಂಭದಲ್ಲಿಯೂ ಯಜ್ಞವೇದಿಕೆಗಳನ್ನು ಪ್ರತೀ ರಸ್ತೆಯ ಮೂಲೆಗಳಲ್ಲಿಯೂ ಕಟ್ಟಿಸಿರುವೆ. ಆ ಎಲ್ಲಾ ಪುರುಷರೊಂದಿಗೆ ನೀನು ಸಂಭೋಗಿಸಿರುವೆ. ಆದರೆ ಸೂಳೆಯಂತೆ ಅವರಿಂದ ನೀನು ಹಣ ತೆಗೆದುಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಪ್ರತಿಯೊಂದು ಬೀದಿಯ ಕೊನೆಯಲ್ಲಿಯೂ, ದಿಬ್ಬವನ್ನು ಕಟ್ಟಿ ಪ್ರತಿಯೊಂದು ಹಾದಿಯಲ್ಲಿಯೂ ಉನ್ನತಸ್ಥಾನವನ್ನು ಮಾಡಿಕೊಂಡು, ಕೂಲಿಯನ್ನು ಉದಾಸೀನ ಮಾಡುವ ವ್ಯಭಿಚಾರಿಣಿ ನೀನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 16:31
7 ತಿಳಿವುಗಳ ಹೋಲಿಕೆ  

ಯೆಹೋವನ ಈ ಮಾತನ್ನು ಕೇಳಿರಿ, ಲಾಭಪಡೆಯದೆ ನಿಮ್ಮನ್ನು ಮಾರಿದೆನು, ಹಣತಕ್ಕೊಳ್ಳದೆ ನಿಮ್ಮನ್ನು ಬಿಡುಗಡೆ ಮಾಡುವೆನು.


ಗಿಲ್ಯಾದು ಅಧರ್ಮಮಯವೋ? ಅದು ಶೂನ್ಯದ ಗತಿಗೆ ಬರುವದು; ಗಿಲ್ಗಾಲಿನಲ್ಲಿ ಗೋಮೇಧವು ನಡೆಯುವದೋ? ಅಲ್ಲಿನ ಯಜ್ಞವೇದಿಗಳು ಹೊಲದ ನೇಗಿಲ ಗೆರೆಗಳಲ್ಲಿ ಕಲ್ಲುಕುಪ್ಪೆಗಳಾಗಿ ಸಿಕ್ಕುವವು.


ನಾನು ನಿನ್ನನ್ನು ಸುತ್ತಲಿನವರ ಕೈವಶಮಾಡುವೆನು; ಅವರು ನಿನ್ನ ದಿಬ್ಬವನ್ನು ಕೆಡವಿ ನಿನ್ನ ಜಗಲಿಗಳನ್ನು ಒಡೆದು ನಿನ್ನ ಬಟ್ಟೆಗಳನ್ನು ಕಿತ್ತು ನಿನ್ನ ಒಡವೆಗಳನ್ನು ಸುಲಿದುಕೊಂಡು ನಿನ್ನನ್ನು ಬಟ್ಟಬರಿದಾಗಿ ಬಿಟ್ಟುಹೋಗುವರು.


ನೀನು ಸೂಳೆತನಮಾಡುವ ಪತಿವತಿ! ಗಂಡನಿಗೆ ಬದಲಾಗಿ ಅನ್ಯರನ್ನು ಸೇರುವ ಜಾರಿಣಿ!


ನೀವು ಹೋಗುವ ಬಾ-ಮಾ [ಎಂಬ ಪೂಜಾಸ್ಥಾನ] ಏನು ಸ್ಥಾನ? (ಇಂದಿನವರೆಗೂ ಇಂಥಾ ಪೂಜಾಸ್ಥಾನಗಳಿಗೆ ಬಾಮಾ ಎಂಬದು ಹೆಸರು).


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು