Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 16:32 - ಕನ್ನಡ ಸತ್ಯವೇದವು J.V. (BSI)

32 ನೀನು ಸೂಳೆತನಮಾಡುವ ಪತಿವತಿ! ಗಂಡನಿಗೆ ಬದಲಾಗಿ ಅನ್ಯರನ್ನು ಸೇರುವ ಜಾರಿಣಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 “ನೀನು ವ್ಯಭಿಚಾರಮಾಡುವ ಪತಿವ್ರತೆ! ಗಂಡನಿಗೆ ಬದಲಾಗಿ ಅನ್ಯರನ್ನು ಸೇರುವ ಜಾರಿಣಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ನೀನು ಸೂಳೆತನಮಾಡುವ ಪತಿವ್ರತೆ; ಗಂಡನಿಗೆ ಬದಲಾಗಿ ಅನ್ಯರನ್ನು ಸೇರುವ ಜಾರಿಣಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ವ್ಯಭಿಚಾರಿಣಿಯೇ, ನೀನು ನಿನ್ನ ಸ್ವಂತ ಗಂಡನಿಗಿಂತ ಪರಪುರುಷನನ್ನೇ ಹೆಚ್ಚಾಗಿ ಆಶಿಸುವವಳಾಗಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 “ ‘ಆದರೆ ಗಂಡನಿಗೆ ಬದಲಾಗಿ ಪರರನ್ನು ಬಯಸುವ ವ್ಯಭಿಚಾರಿಯಾದ ಹೆಂಡತಿಯಾಗಿರುವೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 16:32
15 ತಿಳಿವುಗಳ ಹೋಲಿಕೆ  

ಯೆಹೂದವೇ, ನೀನು ನಿರ್ಮಿಸಿಕೊಂಡ ದೇವರುಗಳು ಎಲ್ಲಿ? ನಿನಗೆ ಕೇಡು ಸಂಭವಿಸಿದಾಗ ನಿನ್ನನ್ನುದ್ಧರಿಸಲು ಶಕ್ತರಾದರೆ ಏಳಲಿ! ನಿನ್ನ ಪಟ್ಟಣಗಳೆಷ್ಟೋ, ನಿನ್ನ ದೇವರುಗಳೂ ಅಷ್ಟು.


ಯೆಹೋವನು ನನಗೆ - ಅನ್ಯದೇವತೆಗಳ ಕಡೆಗೆ ತಿರುಗಿಕೊಂಡು ದೀಪದ್ರಾಕ್ಷೆಯ ಅಡೆಗಳನ್ನು ಪ್ರೀತಿಸುವ ಇಸ್ರಾಯೇಲ್ಯರನ್ನು ಯೆಹೋವನು ಪ್ರೀತಿಸುವ ಪ್ರಕಾರ ನೀನು ವಿುಂಡನಿಗೆ ಪ್ರಿಯಳೂ ವ್ಯಭಿಚಾರಾಸಕ್ತಳೂ ಆದ ಹೆಂಗಸನ್ನು ಪ್ರೀತಿಸುತ್ತಾ ಬಾ ಎಂದು ಅಪ್ಪಣೆಕೊಡಲು


ನಿಮ್ಮ ತಾಯಿಯ ಸಂಗಡ ವಾದಿಸಿರಿ, ವಾದಿಸಿರಿ; ಅವಳು ನನ್ನ ಹೆಂಡತಿಯಲ್ಲ. ನಾನು ಅವಳ ಗಂಡನಲ್ಲ; ಅವಳು ಸೂಳೆತನವನ್ನು ತನ್ನ ಮುಖದಿಂದ, ವ್ಯಭಿಚಾರದ ಬೆಡಗನ್ನು ತನ್ನ ಸ್ತನಮಧ್ಯದಿಂದ ತೊಲಗಿಸಲಿ;


ಸದ್ಧರ್ಮಿಗಳು ಅವರಿಗೆ ನ್ಯಾಯತೀರಿಸಿ ವ್ಯಭಿಚಾರಿಣಿಯರಿಗೂ ರಕ್ತಸುರಿಸುವ ಹೆಂಗಸರಿಗೂ ತಕ್ಕ ದಂಡನೆಯನ್ನು ಅವರಿಗೆ ವಿಧಿಸುವರು; ಅವರು ವ್ಯಭಿಚಾರಿಣಿಯರು, ಅವರ ಕೈ ರಕ್ತವಾಗಿದೆ.


ಅವರು ವ್ಯಭಿಚಾರಿಣಿಯರು, ಅವರ ಕೈ ರಕ್ತವಾಗಿದೆ, ತಮ್ಮ ಬೊಂಬೆಗಳಿಂದ ವ್ಯಭಿಚಾರಮಾಡಿದ್ದಾರೆ, ನನಗೆ ಹೆತ್ತ ತಮ್ಮ ಗಂಡುಮಕ್ಕಳನ್ನು ಆ ಬೊಂಬೆಗಳಿಗೆ ಬಲಿಯಾಗಿ ಆಹುತಿಕೊಟ್ಟಿದ್ದಾರೆ.


ನಾನು ಹಾದುಹೋಗುತ್ತಾ ನಿನ್ನನ್ನು ನೋಡಲು ಇಗೋ, ನೀನು ಮದುವೆಗೆ ಸಿದ್ಧಳಾಗಿದ್ದಿ; ಆಗ ನಾನು ನನ್ನ ಹೊದಿಕೆಯ ನೆರಿಗೆಯನ್ನು ನಿನ್ನ ಮೇಲೆ ಹಾಕಿ ನಿನ್ನ ಮಾನವನ್ನು ಕಾಪಾಡಿದೆನು; ಇದಲ್ಲದೆ ನಾನು ನಿನಗೆ ಮಾತುಕೊಟ್ಟು ಒಡಂಬಡಿಕೆ ಮಾಡಿಕೊಂಡದರಿಂದ ನೀನು ನನ್ನವಳಾದಿ; ಇದು ಕರ್ತನಾದ ಯೆಹೋವನ ನುಡಿ.


ಇಸ್ರಾಯೇಲ್ ವಂಶದವರೇ, ಒಬ್ಬ ಹೆಂಗಸು ಪತಿದ್ರೋಹ ಮಾಡಿದಂತೆ ನೀವು ನನಗೆ ದ್ರೋಹವನ್ನು ಮಾಡಿಯೇ ಇದ್ದೀರಿ ಎಂದು ಯೆಹೋವನು ಅನ್ನುತ್ತಾನೆ.


ನಿನ್ನ ಕಾಲು ಸವೆಯದಂತೆಯೂ ನಿನ್ನ ಗಂಟಲು ಆರದಂತೆಯೂ ತಡೆದುಕೋ; ಆದರೆ ನೀನು - ನಿರೀಕ್ಷೆಯಿಲ್ಲ, ಆಗಲಾರದು, ಅನ್ಯರ ಮೇಲೆ ಮೋಹಗೊಂಡಿದ್ದೇನೆ. ಅವರ ಹಿಂದೆಯೇ ಹೋಗುವೆನು ಅಂದುಕೊಂಡಿದ್ದೀ.


ಯೆಹೋವನು ಹೀಗನ್ನುತ್ತಾನೆ - ಗಂಡನು ತ್ಯಜಿಸಿದವಳು ಅವನಿಂದ ಹೊರಟು ಮತ್ತೊಬ್ಬನವಳಾದ ಮೇಲೆ ಅವಳನ್ನು ಆ ಗಂಡನು ತಿರಿಗಿ ಸೇರಿಸಿಕೊಂಡಾನೇ? ಸೇರಿಸಿಕೊಂಡರೆ ಆ ದೇಶವು ಕೇವಲ ಅಪವಿತ್ರವಾಗಿ ಹೋಗುವದಲ್ಲವೆ! ಹೀಗಿರಲು ಬಹುಮಂದಿ ವಿುಂಡರೊಡನೆ ಸೂಳೆತನ ಮಾಡಿದ ನೀನು ನನ್ನ ಬಳಿಗೆ ತಿರಿಗಿ ಬರುತ್ತೀಯಾ?


ವ್ಯಭಿಚಾರಿಗಳು ನೀವು; ಇಹಲೋಕಸ್ನೇಹವು ದೇವವೈರವೆಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಬೇಕೆಂದಿರುವವನು ತನ್ನನ್ನು ದೇವರಿಗೆ ವಿರೋಧಿಯನ್ನಾಗಿ ಮಾಡಿಕೊಳ್ಳುತ್ತಾನೆ.


ಒಂದೊಂದು ಬೀದಿಯ ಕೊನೆಯಲ್ಲಿಯೂ ನೀನು ಗದ್ದುಗೆಯನ್ನು ಕಟ್ಟಿ ಎಲ್ಲಾ ಚೌಕಗಳಲ್ಲಿ ಜಗಲಿಯನ್ನು ಸ್ಥಾಪಿಸಿಕೊಂಡಿದ್ದೀ; ದೊರೆತದ್ದನ್ನು ಕಡಿಮೆಯೆಂದು ತಿರಸ್ಕರಿಸುವ ಸೂಳೆಯಂತೆ ನೀನು ನಡೆಯುವವಳಲ್ಲ.


ಎಲ್ಲಾ ಕಡೆ ಸೂಳೆಯರಿಗೆ ಹಣಕೊಡುವದುಂಟು; ನೀನಾದರೂ ನಿನ್ನ ಎಲ್ಲಾ ವಿುಂಡರಿಗೆ ನೀನೇ ಕೊಡುತ್ತೀ; ಅವರು ಎಲ್ಲಾ ಕಡೆಯಿಂದಲೂ ಬಂದು ನಿನ್ನಲ್ಲಿ ವ್ಯಭಿಚಾರಮಾಡುವಂತೆ ಅವರಿಗೆ ಇನಾಮು ಕೊಡುತ್ತಿ.


ಯಜಮಾನನು ಮನೆಯಲ್ಲಿಲ್ಲ, ದೂರ ಪ್ರಯಾಣದಲ್ಲಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು