Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 16:33 - ಕನ್ನಡ ಸತ್ಯವೇದವು J.V. (BSI)

33 ಎಲ್ಲಾ ಕಡೆ ಸೂಳೆಯರಿಗೆ ಹಣಕೊಡುವದುಂಟು; ನೀನಾದರೂ ನಿನ್ನ ಎಲ್ಲಾ ವಿುಂಡರಿಗೆ ನೀನೇ ಕೊಡುತ್ತೀ; ಅವರು ಎಲ್ಲಾ ಕಡೆಯಿಂದಲೂ ಬಂದು ನಿನ್ನಲ್ಲಿ ವ್ಯಭಿಚಾರಮಾಡುವಂತೆ ಅವರಿಗೆ ಇನಾಮು ಕೊಡುತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಎಲ್ಲಾ ಕಡೆ ವ್ಯಭಿಚಾರಿ ಸ್ತ್ರೀಗೆ ಹಣಕೊಡುವುದುಂಟು; ನೀನಾದರೋ ನಿನ್ನ ಪ್ರಿಯರಿಗೆಲ್ಲ ನೀನೇ ಹಣವನ್ನು ಕೊಡುತ್ತಿರುವೆ; ಅವರು ಎಲ್ಲಾ ಕಡೆಯಿಂದಲೂ ಬಂದು ನಿನ್ನಲ್ಲಿ ವ್ಯಭಿಚಾರಮಾಡುವಂತೆ ಅವರಿಗೆ ಬಹುಮಾನ ಕೊಡುತ್ತಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಸಾಮಾನ್ಯವಾಗಿ ಸೂಳೆಯರಿಗೆ ಹಣ ಕೊಡುವುದುಂಟು; ನೀನಾದರೋ ನಿನ್ನ ಎಲ್ಲಾ ಮಿಂಡರಿಗೆ ನೀನೇ ಹಣ ನೀಡುತ್ತಿರುವೆ. ಅವರು ಎಲ್ಲ ಕಡೆಯಿಂದಲೂ ಬಂದು ನಿನ್ನಲ್ಲಿ ವ್ಯಭಿಚಾರಮಾಡುವಂತೆ ಅವರಿಗೆ ಬಹುಮಾನ ಕೊಡುತ್ತಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ವೇಶ್ಯೆಯರು ತಮ್ಮೊಡನೆ ಕೂಡುವದಕ್ಕಾಗಿ ಪುರುಷರಿಂದ ಹಣ ವಸೂಲಿ ಮಾಡುವರು. ಆದರೆ ನಿನ್ನ ಪ್ರಿಯತಮರಿಗೆ ನೀನೇ ಹಣವನ್ನು ಕೊಟ್ಟಿರುವೆ. ನಿನ್ನೊಂದಿಗೆ ಸಂಭೋಗ ಮಾಡಲು ನೀನೇ ಅವರಿಗೆ ಹಣವನ್ನು ಕೊಟ್ಟಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಸಾಮಾನ್ಯವಾಗಿ ವ್ಯಭಿಚಾರಿಗಳಿಗೆ ಬಹುಮಾನ ಕೊಡುತ್ತಾರೆ. ಆದರೆ ನೀನೇ ನಿನ್ನ ಪ್ರಿಯರಿಗೆಲ್ಲ ಬಹುಮಾನಗಳನ್ನು ಕೊಟ್ಟು, ನಿನ್ನ ವ್ಯಭಿಚಾರಕ್ಕಾಗಿ ನಿನ್ನ ಬಳಿಗೆ ಬರುವ ಹಾಗೆ ಅವರಿಗೆ ಲಂಚ ಕೊಡುತ್ತಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 16:33
14 ತಿಳಿವುಗಳ ಹೋಲಿಕೆ  

ಬಹು ಸುಗಂಧದ್ರವ್ಯಗಳನ್ನು ಕೂಡಿಸಿ ತೈಲವನ್ನೂ ತೆಗೆದುಕೊಂಡು ಪರರಾಜನ ಬಳಿಗೆ ಪ್ರಯಾಣಮಾಡಿದ್ದೀ; ನಿನ್ನ ರಾಯಭಾರಿಗಳನ್ನು ದೂರ ದೂರ ಕಳುಹಿಸಿದ್ದೀ. ನಿನ್ನನ್ನು ಪಾತಾಳದವರೆಗೂ ತಗ್ಗಿಸಿಕೊಂಡಿದ್ದೀ.


ಆದರೆ ಸೂಳೆಯರನ್ನು ಕಟ್ಟಿಕೊಂಡು ನಿನ್ನ ಬದುಕನ್ನು ನುಂಗಿಬಿಟ್ಟ ಈ ನಿನ್ನ ಮಗನು ಬಂದಾಗ ಕೊಬ್ಬಿಸಿದ ಕರುವನ್ನು ಅವನಿಗೆ ಕೊಯ್ಸಿದಿ ಎಂದು ಉತ್ತರಕೊಟ್ಟನು.


ಅದರ ಎರಕದ ಬೊಂಬೆಗಳೆಲ್ಲಾ ಒಡೆಯಲ್ಪಡುವವು; ಅದರ ಸಮಸ್ತ ಸಂಪಾದನೆಯು ಸುಟ್ಟುಹೋಗುವದು, ಅದರ ಸಕಲ ವಿಗ್ರಹಗಳನ್ನು ಹಾಳುಮಾಡುವೆನು; ಅದು ಸೂಳೆತನದ ಸಂಪಾದನೆಯಾಗಿ ಕೂಡಿಸಿಟ್ಟುಕೊಂಡವುಗಳು, ಸೂಳೆತನದ ಸಂಪಾದನೆಯಾಗಿಯೇ ಪರರಪಾಲಾಗುವವು.


ಹೌದು, ನನ್ನ ಜನರಿಗಾಗಿ ಚೀಟುಹಾಕಿವೆ, ಸೂಳೆಗಾಗಿ ಹುಡುಗನನ್ನು ಬದಲು ಮಾಡಿವೆ, ದ್ರಾಕ್ಷಾರಸಕ್ಕೆ ಹುಡುಗಿಯನ್ನು ಬದಲು ಕೊಟ್ಟು ಪಾನಮಾಡಿವೆ.


ಅವಳು ಯಾವ ಅಂಜೂರ ದ್ರಾಕ್ಷೆಗಳನ್ನು ಇವು ನನ್ನ ವಿುಂಡರಿಂದಾದ ಪ್ರತಿಫಲ ಅಂದುಕೊಂಡಳೋ ಅವುಗಳನ್ನು ನಾನು ಹಾಳುಮಾಡಿ ಕಾಡುಗಿಡಗಳ ಗತಿಗೆ ತರುವೆನು; ಅವು ಭೂಜಂತುಗಳಿಗೆ ಆಹಾರವಾಗುವವು.


ನಿನ್ನ ಮನೆಗಳನ್ನು ಬೆಂಕಿಯಿಂದ ಸುಡುವರು; ಬಹುಮಂದಿ ಹೆಂಗಸರ ಕಣ್ಣೆದುರಿನಲ್ಲಿ ನಿನ್ನನ್ನು ದಂಡಿಸುವರು; ನೀನು ನಿನ್ನ ಸೂಳೆತನವನ್ನು ನಿಲ್ಲಿಸಿಬಿಡುವಂತೆ ನಾನು ಮಾಡುವೆನು; ನೀನು [ನಿನ್ನ ವಿುಂಡರಿಗೆ] ಇನ್ನು ಹಣಕೊಡದಿರುವಿ.


ಆದಕಾರಣ ಫರೋಹನ ಆಶ್ರಯದಿಂದ ನಿಮಗೆ ನಾಚಿಕೆ, ಐಗುಪ್ತವನ್ನು ಮರೆಹೊಗುವದರಿಂದ ಅವಮಾನ.


ನೀನು ಸೂಳೆತನಮಾಡುವ ಪತಿವತಿ! ಗಂಡನಿಗೆ ಬದಲಾಗಿ ಅನ್ಯರನ್ನು ಸೇರುವ ಜಾರಿಣಿ!


ನಿನ್ನ ಸೂಳೆತನಕ್ಕೂ ಇತರ ವೇಶಿಗಳ ಸೂಳೆತನಕ್ಕೂ ವ್ಯತ್ಯಾಸವುಂಟು; ನಿನ್ನಲ್ಲಿ ವ್ಯಭಿಚಾರಮಾಡಲಿಕ್ಕೆ ಯಾರೂ ನಿನ್ನ ಹಿಂದೆ ಬಾರರು; ನೀನೇ ಕೊಡುತ್ತೀಯೇ ಹೊರತು ನಿನಗೇನೂ ಸಿಕ್ಕದು; ನಿನ್ನ ದುರಾಚಾರವು ವಿಪರೀತವೇ ಸರಿ.


ಅಡವಿಯಲ್ಲಿ ಪಳಗಿದ್ದು ಮದದಿಂದ ಗಾಳಿಯನ್ನು ಬುಸುಬುಸನೆ ಮೂಸಿನೋಡುವ ಹೆಣ್ಣು ಕಾಡುಕತ್ತೆಯ ಹಾಗಿದ್ದೀ; ಅದಕ್ಕೆ ಬೆದೆ ಏರಿದಾಗ ಯಾವ ಗಂಡುಕತ್ತೆಯು ನೂಕಿಬಿಟ್ಟೀತು? ಆಯಾ ತಿಂಗಳಿನಲ್ಲಿ ಅದನ್ನು ಹುಡುಕುವವುಗಳೆಲ್ಲಾ ಆಯಾಸಗೊಳ್ಳದೆ ಅದನ್ನು ದೊರಕಿಸಿಕೊಳ್ಳುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು