Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 16:35 - ಕನ್ನಡ ಸತ್ಯವೇದವು J.V. (BSI)

35 ಹೀಗಿರಲು, ಸೂಳೆಯೇ, ಯೆಹೋವನ ಈ ವಾಕ್ಯವನ್ನು ಕೇಳು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಹೀಗಿರಲು ವ್ಯಭಿಚಾರಿಯೇ, ಯೆಹೋವನ ಈ ವಾಕ್ಯವನ್ನು ಕೇಳು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಹೀಗಿರಲು ಎಲೌ ಜಾರಿಣಿಯೇ, ಸರ್ವೇಶ್ವರನ ಈ ವಾಕ್ಯವನ್ನು ಕೇಳು: ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಸೂಳೆಯೇ, ಯೆಹೋವನ ಸಂದೇಶವನ್ನು ಕೇಳು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 “ ‘ಆದಕಾರಣ ವ್ಯಭಿಚಾರಿಣಿಯೇ, ನೀನು ಯೆಹೋವ ದೇವರ ವಾಕ್ಯವನ್ನು ಕೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 16:35
19 ತಿಳಿವುಗಳ ಹೋಲಿಕೆ  

ಅವಳ ಹಣೆಯ ಮೇಲೆ - ಬಾಬೆಲೆಂಬ ಮಹಾನಗರಿ, ಭೂವಿುಯಲ್ಲಿರುವ ಜಾರಸ್ತ್ರೀಯರಿಗೂ ಅಸಹ್ಯವಾದ ಕಾರ್ಯಗಳಿಗೂ ತಾಯಿ ಎಂದು ಗೂಢಾರ್ಥವುಳ್ಳ ಹೆಸರು ಬರೆದಿತ್ತು.


ನಿನಗೆ ಐದುಮಂದಿ ಗಂಡಂದಿರಿದ್ದರು, ಈಗ ಇರುವವನು ನಿನಗೆ ಗಂಡನಲ್ಲ; ನೀನು ಹೇಳಿದ್ದು ನಿಜವಾದ ಸಂಗತಿ ಅಂದನು.


ಅದಕ್ಕೆ ಯೇಸು - ದೇವರು ಕೊಡುವ ವರವೇನೆಂಬದೂ ಕುಡಿಯುವದಕ್ಕೆ ನೀರುಕೊಡು ಎಂದು ನಿನಗೆ ಹೇಳಿದವನು ಯಾರೆಂಬದೂ ನಿನಗೆ ತಿಳಿದಿದ್ದರೆ ನೀನು ಅವನನ್ನು ಬೇಡಿಕೊಳ್ಳುತ್ತಿದ್ದಿ, ಅವನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು ಅಂದನು.


ಅತಿಸುಂದರಿಯೂ ಮಂತ್ರತಂತ್ರನಿಪುಣಳೂ ಜನಾಂಗಗಳನ್ನು ತನ್ನ ಸೂಳೆತನದಿಂದ, ಕುಲಗಳನ್ನು ತನ್ನ ಮಂತ್ರತಂತ್ರಗಳಿಂದ ಗುಲಾಮತನಕ್ಕೆ ತಂದವಳೂ ಆದ ಸೂಳೆಯ ಲೆಕ್ಕವಿಲ್ಲದ ಸೂಳೆತನಗಳ ನಿವಿುತ್ತ ಇದೆಲ್ಲಾ ಆಗುವದು.


ಈಗ ಯೆಹೋವನ ವಾಕ್ಯವನ್ನು ಕೇಳು; ಇಸ್ರಾಯೇಲಿಗೆ ವಿರುದ್ಧವಾಗಿ ಪ್ರವಾದನೆ ಮಾಡಬೇಡ, ಇಸಾಕನ ವಂಶಕ್ಕೆ ಖಂಡನೆಯಾಗಿ ಬಾಯೆತ್ತಬೇಡ ಎಂದು ನೀನು ಹೇಳಿದ ಕಾರಣ


ಇಸ್ರಾಯೇಲ್ಯರೇ, ಯೆಹೋವನ ವಾಕ್ಯವನ್ನು ಕೇಳಿರಿ; ಯೆಹೋವನು ದೇಶನಿವಾಸಿಗಳ ಮೇಲೆ ವಿವಾದಹಾಕಿದ್ದಾನೆ. ಏಕಂದರೆ ಪ್ರೀತಿ ಸತ್ಯತೆ ದೇವಜ್ಞಾನಗಳು ದೇಶದಲ್ಲಿಲ್ಲ;


ಅವರ ತಾಯಿಯು ಸೂಳೆತನ ಮಾಡಿದ್ದಾಳೆ, ಹೆತ್ತವಳು ನಾಚಿಕೆಗೇಡಿಯಾಗಿ ನಡೆದಿದ್ದಾಳೆ; ನನಗೆ ಬೇಕಾದ ಅನ್ನಪಾನಗಳನ್ನೂ ಉಣ್ಣೆನಾರುಗಳನ್ನೂ ತೈಲವನ್ನೂ ಪಾಯಸ ಪಾನಕಗಳನ್ನೂ ನನಗೆ ಕೊಡುವ ನನ್ನ ವಿುಂಡರ ಹಿಂದೆ ಹೋಗುವೆನು ಅಂದುಕೊಂಡಿದ್ದಾಳೆ.


ಕುರುಬರೇ, ಯೆಹೋವನ ಮಾತನ್ನು ಕೇಳಿರಿ; ಕರ್ತನಾದ ಯೆಹೋವನು ಇಂತೆನ್ನುತ್ತಾನೆ -


ಯೆಹೋವನ ಮಾತನ್ನು ಕೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನು ನಿನ್ನೊಳಗೆ ಬೆಂಕಿಯನ್ನು ಹೊತ್ತಿಸುವೆನು, ಅದು ನಿನ್ನಲ್ಲಿನ ಎಲ್ಲಾ ಹಸುರುಮರಗಳನ್ನೂ ಒಣಮರಗಳನ್ನೂ ನುಂಗಿಬಿಡುವದು; ಧಗಧಗಿಸುವ ಉರಿಯು ಆರದೆ ತೆಂಕಲಿಂದ ಬಡಗಲವರೆಗೆ ಎಲ್ಲರ ಮುಖಗಳನ್ನು ಕಂದಿಸುವದು.


ನರಪುತ್ರನೇ, ಪ್ರವಾದನೆಮಾಡಿ ಸ್ವಕಲ್ಪಿತವಾದದ್ದನ್ನೇ ಸಾರುತ್ತಲಿರುವ ಇಸ್ರಾಯೇಲಿನ ಪ್ರವಾದಿಗಳಿಗೆ ಖಂಡನೆಯಾಗಿ ನೀನು ಪ್ರವಾದಿಸುತ್ತಾ ಹೀಗೆ ಹೇಳು - ಯೆಹೋವನ ವಾಕ್ಯವನ್ನು ಕೇಳಿರಿ,


ಯೆಹೋವನು ಹೀಗನ್ನುತ್ತಾನೆ - ಗಂಡನು ತ್ಯಜಿಸಿದವಳು ಅವನಿಂದ ಹೊರಟು ಮತ್ತೊಬ್ಬನವಳಾದ ಮೇಲೆ ಅವಳನ್ನು ಆ ಗಂಡನು ತಿರಿಗಿ ಸೇರಿಸಿಕೊಂಡಾನೇ? ಸೇರಿಸಿಕೊಂಡರೆ ಆ ದೇಶವು ಕೇವಲ ಅಪವಿತ್ರವಾಗಿ ಹೋಗುವದಲ್ಲವೆ! ಹೀಗಿರಲು ಬಹುಮಂದಿ ವಿುಂಡರೊಡನೆ ಸೂಳೆತನ ಮಾಡಿದ ನೀನು ನನ್ನ ಬಳಿಗೆ ತಿರಿಗಿ ಬರುತ್ತೀಯಾ?


ಆದಕಾರಣ ಯೆರೂಸಲೇವಿುನ ಈ ಜನರನ್ನಾಳುವ ಧರ್ಮನಿಂದಕರೇ, ಯೆಹೋವನ ಮಾತನ್ನು ಕೇಳಿರಿ,


ಅಯ್ಯೋ, ಸುವ್ರತೆಯಾಗಿದ್ದ ನಗರಿಯು ಸೂಳೆಯಾದಳಲ್ಲಾ! ನ್ಯಾಯದಿಂದ ತುಂಬಿ ಧರ್ಮಕ್ಕೆ ನೆಲೆಯಾಗಿದ್ದವಳು ಈಗ ಕೊಲೆಪಾತಕರಿಗೆ ನೆಲೆಯಾಗಿದ್ದಾಳೆ.


ಸೊದೋವಿುನ ಅಧಿಪತಿಗಳೇ, ಯೆಹೋವನ ಮಾತನ್ನು ಆಲಿಸಿರಿ; ಗೊಮೋರದ ಪ್ರಜೆಗಳೇ, ನಮ್ಮ ದೇವರ ಧರ್ಮೋಪದೇಶವನ್ನು ಕೇಳಿರಿ!


ಅದಕ್ಕೆ ಮೀಕಾಯೆಹುವು - ಅದಿರಲಿ, ಯೆಹೋವನ ವಾಕ್ಯವನ್ನು ಕೇಳು. ಯೆಹೋವನು ತನ್ನ ಸಿಂಹಾಸನದ ಮೇಲೆ ಕೂತುಕೊಂಡದ್ದನ್ನೂ ಪರಲೋಕ ಸೈನ್ಯಗಳು ಆತನ ಎಡಬಲಗಡೆಗಳಲ್ಲಿ ನಿಂತದ್ದನ್ನೂ ಕಂಡೆನು.


ನಿನ್ನ ಸೂಳೆತನಕ್ಕೂ ಇತರ ವೇಶಿಗಳ ಸೂಳೆತನಕ್ಕೂ ವ್ಯತ್ಯಾಸವುಂಟು; ನಿನ್ನಲ್ಲಿ ವ್ಯಭಿಚಾರಮಾಡಲಿಕ್ಕೆ ಯಾರೂ ನಿನ್ನ ಹಿಂದೆ ಬಾರರು; ನೀನೇ ಕೊಡುತ್ತೀಯೇ ಹೊರತು ನಿನಗೇನೂ ಸಿಕ್ಕದು; ನಿನ್ನ ದುರಾಚಾರವು ವಿಪರೀತವೇ ಸರಿ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ವಿುತಿಮೀರಿದ ನಿನ್ನ ಕಾಮಾತುರ, ನಿನ್ನಲ್ಲಿ ವ್ಯಭಿಚಾರಮಾಡಿದ ನಿನ್ನ ವಿುಂಡರ ಮೂಲಕ ನಿನಗಾದ ಮಾನಭಂಗ, ನಿನ್ನ ಎಲ್ಲಾ ಅಸಹ್ಯ ವಿಗ್ರಹಗಳು, ನೀನು ಅವುಗಳಿಗೆ ಅರ್ಪಿಸಿದ ನಿನ್ನ ಮಕ್ಕಳ ರಕ್ತ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು