Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 16:41 - ಕನ್ನಡ ಸತ್ಯವೇದವು J.V. (BSI)

41 ನಿನ್ನ ಮನೆಗಳನ್ನು ಬೆಂಕಿಯಿಂದ ಸುಡುವರು; ಬಹುಮಂದಿ ಹೆಂಗಸರ ಕಣ್ಣೆದುರಿನಲ್ಲಿ ನಿನ್ನನ್ನು ದಂಡಿಸುವರು; ನೀನು ನಿನ್ನ ಸೂಳೆತನವನ್ನು ನಿಲ್ಲಿಸಿಬಿಡುವಂತೆ ನಾನು ಮಾಡುವೆನು; ನೀನು [ನಿನ್ನ ವಿುಂಡರಿಗೆ] ಇನ್ನು ಹಣಕೊಡದಿರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ನಿನ್ನ ಮನೆಗಳನ್ನು ಬೆಂಕಿಯಿಂದ ಸುಡುವರು; ಬಹುಮಂದಿ ಹೆಂಗಸರ ಕಣ್ಣೆದುರಿನಲ್ಲಿ ನಿನ್ನನ್ನು ದಂಡಿಸುವರು; ನೀನು ನಿನ್ನ ಸೂಳೆತನವನ್ನು ನಿಲ್ಲಿಸಿಬಿಡುವಂತೆ ನಾನು ಮಾಡುವೆನು; ನೀನು ನಿನ್ನ ಮಿಂಡರಿಗೆ ಇನ್ನು ಹಣಕೊಡದಿರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ನಿನ್ನ ಮನೆಗಳನ್ನು ಬೆಂಕಿಯಿಂದ ಸುಡುವರು; ಬಹುಮಂದಿ ಹೆಂಗಸರ ಕಣ್ಣೆದುರಿನಲ್ಲಿ ನಿನ್ನನ್ನು ದಂಡಿಸುವರು; ನೀನು ನಿನ್ನ ಸೂಳೆತನವನ್ನು ನಿಲ್ಲಿಸಿಬಿಡುವಂತೆ ಮಾಡುವೆನು; ನೀನು ನಿನ್ನ ಮಿಂಡರಿಗೆ ಇನ್ನು ಬಹುಮಾನ ತರದಂತೆಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಬಳಿಕ, ಅನೇಕ ಸ್ತ್ರೀಯರು ನೋಡಲೆಂದು ನಿನ್ನ ಮನೆಗಳನ್ನು ಸುಟ್ಟು, ನಿನ್ನನ್ನು ದಂಡಿಸುವರು. ನೀನು ಸೂಳೆಯಂತೆ ಜೀವಿಸುವದನ್ನು ನಾನು ನಿಲ್ಲಿಸುವೆನು. ನೀನು ನಿನ್ನ ಪ್ರಿಯತಮರಿಗೆ ಹಣ ಕೊಡುವದನ್ನು ನಿಲ್ಲಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಅವರು ನಿನ್ನ ಮನೆಗಳನ್ನು ಸುಟ್ಟು, ಬಹಳ ಸ್ತ್ರೀಯರ ಕಣ್ಣುಗಳ ಮುಂದೆ ನಿನಗೆ ನ್ಯಾಯತೀರಿಸುವರು. ನೀನು ವ್ಯಭಿಚಾರ ಮಾಡುವುದನ್ನು ನಾನು ನಿಲ್ಲಿಸುವೆನು. ನೀನು ನಿನ್ನ ಪ್ರಿಯರಿಗೆ ಕೂಲಿ ಸಹ ಕೊಡುವುದನ್ನು ನಿಲ್ಲಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 16:41
24 ತಿಳಿವುಗಳ ಹೋಲಿಕೆ  

ಹೀಗೆ ನಾನು ದೇಶದೊಳಗಿಂದ ಪುಂಡಾಟವನ್ನು ತೊಲಗಿಸುವೆನು; ಇದರಿಂದ ಸಮಸ್ತ ಸ್ತ್ರೀಯರಿಗೂ ನಿಮ್ಮ ಪುಂಡಾಟವನ್ನು ಅನುಸರಿಸಬಾರದೆಂದು ಬುದ್ಧಿಬರುವದು. ನಿಮ್ಮ ಪುಂಡಾಟದ ಫಲವನ್ನು ನಿಮಗೆ ತಿನ್ನಿಸುವರು;


ಹೀಗೆ ನಾನು ನಿನ್ನ ಪುಂಡಾಟವನ್ನೂ ನೀನು ಐಗುಪ್ತದಲ್ಲಿದ್ದಂದಿನಿಂದ ನಡೆದು ಬಂದ ನಿನ್ನ ಸೂಳೆತನವನ್ನೂ ನಿನ್ನಿಂದ ತೊಲಗಿಸುವೆನು; ಆಮೇಲೆ ನೀನು ಅವರ ಕಡೆಗೆ ಇನ್ನು ಕಣ್ಣೆತ್ತದೆ ಐಗುಪ್ತವನ್ನು ಜ್ಞಾಪಕಕ್ಕೆ ತಾರದೆ ಇರುವಿ.


ಯೆಹೋವನ ಆಲಯವನ್ನೂ ಅರಮನೆಯನ್ನೂ ಯೆರೂಸಲೇವಿುನ ಎಲ್ಲಾ ದೊಡ್ಡ ಮನೆಗಳನ್ನೂ ಸುಟ್ಟುಬಿಟ್ಟನು.


ಮತ್ತು ಕಸ್ದೀಯರು ಅರಮನೆಯನ್ನೂ ಪ್ರಜೆಗಳ ಮನೆಗಳನ್ನೂ ಬೆಂಕಿಯಿಂದ ಸುಟ್ಟು ಯೆರೂಸಲೇವಿುನ ಸುತ್ತಣ ಗೋಡೆಗಳನ್ನು ಕೆಡವಿದರು.


ಯೆಹೋವನ ಆಲಯವನ್ನೂ ಅರಮನೆಯನ್ನೂ ಯೆರೂಸಲೇವಿುನ ಎಲ್ಲಾ ದೊಡ್ಡ ಮನೆಗಳನ್ನೂ ಸುಟ್ಟುಬಿಟ್ಟನು.


ಇವರು ಅವಳನ್ನು ಅವಮಾನಪಡಿಸಿ ಅವಳ ಗಂಡು ಹೆಣ್ಣುಮಕ್ಕಳನ್ನು ಎತ್ತಿಕೊಂಡು ಹೋಗಿ ಅವಳನ್ನು ಖಡ್ಗದಿಂದ ಸಂಹರಿಸಿದರು. ಇವರು ಅವಳಿಗೆ ದಂಡನೆಮಾಡಿದ್ದರಿಂದ ಹೆಂಗಸರಲ್ಲಿ ಅವಳಿಗೆ ಕೆಟ್ಟಹೆಸರು ಬಂತು.


ಇಗೋ, ನಾನೇ ನಿನಗೆ ವಿರುದ್ಧನಾಗಿದ್ದೇನೆ, ಜನಾಂಗಗಳ ಕಣ್ಣೆದುರಿಗೆ ನಿನ್ನ ಜನರನ್ನು ದಂಡಿಸುವೆನು; ಇದು ಕರ್ತನಾದ ಯೆಹೋವನ ನುಡಿ.


ಅದರಲ್ಲಿರುವ ಎಲ್ಲಾ ಸಾಮಾನುಗಳನ್ನು ಗ್ರಾಮಮಧ್ಯದಲ್ಲಿ ಕೂಡಿಸಿ ಊರನ್ನೂ ಅದರಲ್ಲಿರುವ ಎಲ್ಲಾ ಸಾಮಾನುಗಳನ್ನೂ ನಿಮ್ಮ ದೇವರಾದ ಯೆಹೋವನಿಗೋಸ್ಕರ ನಿಶ್ಶೇಷವಾಗಿ ಸುಟ್ಟುಬಿಡಬೇಕು. ಅದು ತಿರಿಗಿ ಕಟ್ಟಲ್ಪಡದೆ ಯಾವಾಗಲೂ ಹಾಳುದಿಬ್ಬವಾಗಿರಬೇಕು.


ಪಾಪದಲ್ಲಿ ನಡೆಯುವವರನ್ನು ಎಲ್ಲರ ಮುಂದೆಯೇ ಗದರಿಸು; ಇವರಿಂದ ವಿುಕ್ಕಾದವರಿಗೂ ಭಯವುಂಟಾಗುವದು.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಆ ದಿನದಲ್ಲಿ ನಾನು ವಿಗ್ರಹಗಳನ್ನು ದೇಶದೊಳಗಿಂದ ನಿರ್ನಾಮಮಾಡುವೆನು, ಅವು ಇನ್ನು ಯಾರ ನೆನಪಿಗೂ ಬಾರವು; ಅಲ್ಲದೆ ಪ್ರವಾದಿಗಳನ್ನೂ ದುರಾತ್ಮವನ್ನೂ ದೇಶದೊಳಗಿಂದ ತೊಲಗಿಸಿಬಿಡುವೆನು.


ಹೀಗಿರಲು ನಿಮ್ಮ ದೆಸೆಯಿಂದ ಚೀಯೋನ್ ಪಟ್ಟಣವು ಹೊಲದಂತೆ ಗೇಯಲ್ಪಡುವದು, ಯೆರೂಸಲೇಮು ಹಾಳುದಿಬ್ಬಗಳಾಗುವದು, ಯೆಹೋವನ ಆಲಯದ ಪರ್ವತವು ಕಾಡುಗುಡ್ಡಗಳಂತಾಗುವದು.


ತಮ್ಮ ಬೊಂಬೆಗಳಿಂದಾಗಲಿ ಅಸಹ್ಯ ವಸ್ತುಗಳಿಂದಾಗಲಿ ಯಾವ ದುರಾಚಾರದಿಂದಲೇ ಆಗಲಿ ತಮ್ಮನ್ನು ಇನ್ನು ಮುಂದೆ ಹೊಲೆಗೆಯ್ದುಕೊಳ್ಳರು; ಅವರು ಪಾಪಮಾಡಿಮಾಡಿ ಸಿಕ್ಕಿಬಿದ್ದ ದೇವದ್ರೋಹದಿಂದೆಲ್ಲಾ ನಾನು ಅವರನ್ನು ಉದ್ಧರಿಸಿ ಶುದ್ಧೀಕರಿಸುವೆನು; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು.


ಹೀಗಿರಲು ಯಾಕೋಬ್ಯರು ಯಜ್ಞವೇದಿಯ ಕಲ್ಲುಗಳನ್ನೆಲ್ಲಾ ಸುಣ್ಣದಂತೆ ಪುಡಿ ಪುಡಿಮಾಡಿ ಅಶೇರವೆಂಬ ವಿಗ್ರಹಸ್ತಂಭಗಳನ್ನೂ ಸೂರ್ಯಸ್ತಂಭಗಳನ್ನೂ ಇನ್ನು ಪ್ರತಿಷ್ಠಿಸದೆ ಹೋದರೆ ಅದೇ ಅವರ ಅಧರ್ಮಕ್ಕೆ ಪ್ರಾಯಶ್ಚಿತ್ತವಾಗುವದು, ಮತ್ತು ಅವರ ಪಾಪಪರಿಹಾರಕ್ಕೆ ಗುರುತಾದ ಪೂರ್ಣಫಲವೂ ಇದೇ.


ವಿಗ್ರಹಗಳು ಸಂಪೂರ್ಣವಾಗಿ ಹೋಗಿಬಿಡುವವು.


ಅಪರಾಧಿಗಳಿಗೋ ಎಂಬಂತೆ ಬಹಿರಂಗವಾಗಿ ಅವರಿಗೆ ಪೆಟ್ಟು ಹಾಕುವನು.


ನೀವು ಅವರಿಬ್ಬರನ್ನೂ ಊರುಬಾಗಿಲಿನ ಹೊರಕ್ಕೆ ತರಿಸಿ ಕಲ್ಲೆಸೆದು ಕೊಲ್ಲಬೇಕು. ಒಬ್ಬನಿಗೆ ನಿಶ್ಚಿತಳಾದ ಸ್ತ್ರೀಯನ್ನು ಕೆಡಿಸಿದ್ದರಿಂದ ಆ ಪುರುಷನಿಗೂ ಊರಲ್ಲಿದ್ದು ಕೂಗಿಕೊಳ್ಳದೆಹೋದದರಿಂದ ಆ ಸ್ತ್ರೀಗೂ ಮರಣಶಿಕ್ಷೆಯಾಗಬೇಕು. ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.


ಅವಳು ತಂದೆಯ ಮನೆಯಲ್ಲೇ ಸೂಳೆತನಮಾಡಿ ಇಸ್ರಾಯೇಲ್ಯರೊಳಗೆ ದುರಾಚಾರವನ್ನು ನಡಿಸಿದ್ದರಿಂದ ಅವರು ಅವಳನ್ನು ತಂದೆಯ ಮನೆಯ ಬಾಗಿಲಿಗೆ ತರಿಸಬೇಕು; ಊರಿನವರೆಲ್ಲರು ಕಲ್ಲೆಸೆದು ಅವಳನ್ನು ಕೊಲ್ಲಬೇಕು. ಹೀಗೆ ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.


ಇದನ್ನು ಇಸ್ರಾಯೇಲ್ಯರೆಲ್ಲರೂ ಕೇಳಿ ಭಯಪಟ್ಟು ಅಂಥ ದುಷ್ಕಾರ್ಯವನ್ನು ಅಲ್ಲಿಂದ ಮುಂದೆ ಮಾಡದೆ ಇರುವರು.


ನಾನು ಪಟ್ಟಣದೊಳಗಿಂದ ನಿಮ್ಮನ್ನು ಕಿತ್ತು ಅನ್ಯರ ಕೈಗೆ ಕೊಟ್ಟು ದಂಡಿಸುವೆನು. ನೀವು ಖಡ್ಗಕ್ಕೆ ತುತ್ತಾಗುವಿರಿ.


ಎಲ್ಲಾ ಕಡೆ ಸೂಳೆಯರಿಗೆ ಹಣಕೊಡುವದುಂಟು; ನೀನಾದರೂ ನಿನ್ನ ಎಲ್ಲಾ ವಿುಂಡರಿಗೆ ನೀನೇ ಕೊಡುತ್ತೀ; ಅವರು ಎಲ್ಲಾ ಕಡೆಯಿಂದಲೂ ಬಂದು ನಿನ್ನಲ್ಲಿ ವ್ಯಭಿಚಾರಮಾಡುವಂತೆ ಅವರಿಗೆ ಇನಾಮು ಕೊಡುತ್ತಿ.


ನಾನು ಕೋಪದಿಂದಲೂ ರೋಷದಿಂದಲೂ ಕಠಿನವಾದ ಖಂಡನೆಯಿಂದಲೂ ನಿನಗೆ ಮಾಡುವ ದಂಡನೆಗಳು ಸುತ್ತಲಿನ ಜನಾಂಗಗಳ ದೂಷಣಪರಿಹಾಸಗಳಿಗೂ ಬುದ್ಧಿವಾದಾಶ್ಚರ್ಯಗಳಿಗೂ ಆಸ್ಪದವಾಗುವವು; ಇದು ಯೆಹೋವನಾದ ನನ್ನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು