Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 16:42 - ಕನ್ನಡ ಸತ್ಯವೇದವು J.V. (BSI)

42 ಹೀಗೆ ನಾನು ನಿನ್ನ ಮೇಲಣ ಸಿಟ್ಟನ್ನು ತೀರಿಸಲು ನನ್ನ ರೋಷವು ನಿನ್ನ ಕಡೆಯಿಂದ ತೊಲಗಿಬಿಡುವದು; ನಾನು ಶಾಂತನಾಗಿ ಇನ್ನು ಮೇಲೆ ಕೋಪಗೊಳ್ಳೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಹೀಗೆ ನಾನು ನಿನ್ನ ಮೇಲಣ ಸಿಟ್ಟನ್ನು ತೀರಿಸಲು, ನನ್ನ ರೋಷವು ನಿನ್ನ ಕಡೆಯಿಂದ ತೊಲಗಿ ಬಿಡುವುದು; ನಾನು ಶಾಂತನಾಗಿ ಇನ್ನು ಮೇಲೆ ಕೋಪಗೊಳ್ಳೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಹೀಗೆ ನಾನು ನಿನ್ನ ಮೇಲಣ ಸಿಟ್ಟನ್ನು ತೀರಿಸುವೆನು. ಆಗ ನನ್ನ ರೋಷವು ನಿನ್ನಿಂದ ದೂರವಾಗುವುದು; ನಾನು ಶಾಂತನಾಗಿ ಇನ್ನು ಮೇಲೆ ಕೋಪಗೊಳ್ಳೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಬಳಿಕ ನಿನ್ನ ಮೇಲೆ ನನಗಿರುವ ಕೋಪವನ್ನು ತೊಲಗಿಸುವೆನು; ನಾನು ಶಾಂತನಾಗುವೆನು; ಆ ಬಳಿಕ ನಾನು ಸಿಟ್ಟುಗೊಳ್ಳುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಈ ರೀತಿ ನಿನ್ನ ಮೇಲಿನ ನನ್ನ ಸಿಟ್ಟನ್ನು ತೀರಿಸುವೆನು. ನನ್ನ ರೋಷವನ್ನು ನಿನ್ನ ಕಡೆಯಿಂದ ತೊಲಗಿಸುತ್ತೇನೆ, ಶಾಂತನಾಗಿ ನಿನ್ನ ಮೇಲೆ ಕೋಪಗೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 16:42
10 ತಿಳಿವುಗಳ ಹೋಲಿಕೆ  

ಹೀಗೆ ನನ್ನ ಸಿಟ್ಟನ್ನು ತೀರಿಸಿಕೊಳ್ಳುವೆನು, ನನ್ನ ರೋಷವನ್ನು ಅವರ ಮೇಲೆ ಸುರಿದು ಶಾಂತನಾಗುವೆನು; ಆಗ್ರಹದಿಂದ ಮಾತಾಡಿದವನು ಯೆಹೋವನಾದ ನಾನೇ ಎಂಬದು ನನ್ನ ಕೋಪವನ್ನು ಅವರ ಮೇಲೆ ಹೊಯ್ದುಬಿಟ್ಟ ಬಳಿಕ ಅವರಿಗೆ ಗೊತ್ತಾಗುವದು.


ಇನ್ನೆಂದಿಗೂ ಅವರಿಗೆ ವಿಮುಖನಾಗೆನು; ಇಸ್ರಾಯೇಲ್ ವಂಶದ ಮೇಲೆ ನನ್ನ ಆತ್ಮವನ್ನು ಸುರಿಸಿದ್ದೇನಷ್ಟೆ; ಇದು ಕರ್ತನಾದ ಯೆಹೋವನ ನುಡಿ.


ನಾನು ಚಪ್ಪಾಳೆಬಡಿದು ನನ್ನ ರೋಷವನ್ನು ತೀರಿಸಿಕೊಳ್ಳುವೆನು. ಕರ್ತನಾದ ನಾನೇ ಇದನ್ನು ನುಡಿದಿದ್ದೇನೆ.


ಆಮೇಲೆ ಅವನು ನನಗೆ - ಆಹಾ, ಉತ್ತರದೇಶಕ್ಕೆ ಹೋದವುಗಳು ಅಲ್ಲಿ ನನ್ನ ಕೋಪವನ್ನು ಶಾಂತಿಗೊಳಿಸಿವೆ ಎಂದು ಕೂಗಿ ಹೇಳಿದನು.


ಇಂತಿರಲು ಕರ್ತನೂ ಸೇನಾಧೀಶ್ವರನೂ ಇಸ್ರಾಯೇಲ್ಯರ ಶೂರನೂ ಆಗಿರುವ ಯೆಹೋವನು ಹೀಗೆ ನುಡಿಯುತ್ತಾನೆ - ಆಹಾ, ನನ್ನ ವಿರೋಧಿಗಳನ್ನು ಅಡಗಿಸಿ ಶಾಂತನಾಗುವೆನು, ನನ್ನ ಶತ್ರುಗಳಿಗೆ ಮುಯ್ಯಿತೀರಿಸುವೆನು;


ಅವುಗಳನ್ನೆಲ್ಲಾ ಬೆನ್ಯಾಮೀನ್ ದೇಶದ ಚೇಲಾ ಊರಿನಲ್ಲಿ ಸೌಲನ ತಂದೆಯಾದ ಕೀಷನ ಶ್ಮಶಾನಭೂವಿುಯಲ್ಲಿ ಸಮಾಧಿಮಾಡಿಸಿದನು. ಅರಸನ ಅಪ್ಪಣೆಯಂತೆ ಇದೆಲ್ಲಾ ಆದನಂತರ ದೇಶದ ಮೇಲೆ ದೇವರಿಗಿದ್ದ ಕೋಪವು ಶಾಂತಿಯಾಯಿತು.


ಅಲ್ಲಿ ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ ಅದರ ಮೇಲೆ ಆತನಿಗೆ ಸರ್ವಾಂಗ ಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಅರ್ಪಿಸಿದನು. ಹೀಗೆ ದೇಶದ ಮೇಲಿದ್ದ ಯೆಹೋವನ ಕೋಪವು ಶಾಂತವಾಯಿತು. ಇಸ್ರಾಯೇಲ್ಯರಲ್ಲಿದ್ದ ಸಂಹಾರಕವ್ಯಾಧಿಯು ನಿಂತುಹೋಯಿತು.


ನಿನ್ನಲ್ಲಿನ ಮೂರನೆಯ ಒಂದು ಭಾಗದವರು ವ್ಯಾಧಿಯಿಂದ ಸಾಯುವರು, ನಿನ್ನ ಮಧ್ಯದಲ್ಲಿ ಕ್ಷಾಮದಿಂದ ನಾಶವಾಗುವರು; ಇನ್ನೊಂದು ಭಾಗದವರು ನಿನ್ನ ಸುತ್ತಲು ಖಡ್ಗದಿಂದ ಹತರಾಗುವರು; ಮತ್ತೊಂದು ಭಾಗದವರನ್ನು ನಾನು ಎಲ್ಲಾ ಕಡೆಯ ಗಾಳಿಗೂ ತೂರಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು