Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 16:45 - ಕನ್ನಡ ಸತ್ಯವೇದವು J.V. (BSI)

45 ಗಂಡನಿಗೂ ಮಕ್ಕಳಿಗೂ ಬೇಸರಪಡುವವಳಾದ ನಿನ್ನ ತಾಯಿಗೆ ನೀನು ತಕ್ಕ ಮಗಳು; ಗಂಡನಿಗೂ ಮಕ್ಕಳಿಗೂ ಬೇಸರಪಡುವವರಾದ ನಿನ್ನ ಅಕ್ಕಂದಿರಿಗೆ ನೀನು ತಕ್ಕ ತಂಗಿ; ನಿನ್ನ ತಾಯಿ ಹಿತ್ತಿಯಳು, ನಿನ್ನ ತಂದೆ ಅಮೋರಿಯನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಗಂಡನಿಗೂ, ಮಕ್ಕಳಿಗೂ ಬೇಸರಪಡುವವಳಾದ ನಿನ್ನ ತಾಯಿಗೆ ನೀನು ತಕ್ಕ ಮಗಳು; ಗಂಡನಿಗೂ, ಮಕ್ಕಳಿಗೂ ಬೇಸರಪಡುವವರಾದ ನಿನ್ನ ಅಕ್ಕಂದಿರಿಗೆ ನೀನು ತಕ್ಕ ತಂಗಿ; ನಿನ್ನ ತಾಯಿ ಹಿತ್ತಿಯಳು, ನಿನ್ನ ತಂದೆ ಅಮೋರಿಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45 ಗಂಡನನ್ನೂ ಮಕ್ಕಳನ್ನೂ ಅಸಹ್ಯವಾಗಿ ಕಂಡ ನಿನ್ನ ತಾಯಿಗೆ ನೀನು ತಕ್ಕ ಮಗಳು ; ಗಂಡನನ್ನೂ ಮಕ್ಕಳನ್ನೂ ಬೇಸರ ಪಡಿಸಿದ ನಿನ್ನ ಅಕ್ಕಂದಿರಿಗೆ ನೀನು ತಕ್ಕ ತಂಗಿ; ನಿನ್ನ ತಾಯಿ ಹಿತ್ತಿಯಳು, ನಿನ್ನ ತಂದೆ ಅಮೋರಿಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 ನೀನು ನಿನ್ನ ತಾಯಿಯ ಮಗಳು. ನೀನು ನಿನ್ನ ಗಂಡನನ್ನು ಮತ್ತು ಮಕ್ಕಳನ್ನು ತಿರಸ್ಕರಿಸಿರುವೆ. ನೀನು ನಿನ್ನ ಸಹೋದರಿಯಂತಿರುವೆ. ನೀವು ನಿಮ್ಮ ಗಂಡಂದಿರನ್ನೂ ಮಕ್ಕಳನ್ನೂ ತಿರಸ್ಕರಿಸಿದಿರಿ. ನೀವು ನಿಮ್ಮನ್ನು ಹೆತ್ತವರ ತರಹ ಇದ್ದೀರಿ. ನಿಮ್ಮ ತಾಯಿ ಹಿತ್ತಿಯಳಾಗಿದ್ದಳು. ನಿಮ್ಮ ತಂದೆಯು ಅಮೋರಿಯದವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ಗಂಡನಿಗೂ, ಮಕ್ಕಳಿಗೂ ಬೇಸರ ಪಡುವವಳಾದ ನಿನ್ನ ತಾಯಿಗೆ ನೀನು ತಕ್ಕ ಮಗಳು. ಗಂಡನಿಗೂ, ಮಕ್ಕಳಿಗೂ ಬೇಸರ ಪಡುವವರಾದ ನಿನ್ನ ಅಕ್ಕಂದಿರಿಗೆ ನೀನು ತಕ್ಕ ತಂಗಿ. ನಿನ್ನ ತಾಯಿ ಹಿತ್ತಿಯಳು, ನಿನ್ನ ತಂದೆ ಅಮೋರಿಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 16:45
12 ತಿಳಿವುಗಳ ಹೋಲಿಕೆ  

ಒಂದೇ ತಿಂಗಳೊಳಗೆ ಮೂವರು ಕುರುಬರನ್ನು ಅಡಗಿಸಿಬಿಟ್ಟೆನು; ಅನಂತರ ನನಗೆ ಕುರಿಗಳ ವಿಷಯವಾಗಿ ತಾಳ್ಮೆತಪ್ಪಿತು; ಅವೂ ನನಗೆ ಬೇಸರಗೊಂಡವು.


ಪಾಪಿಷ್ಠಜನವೇ, ಅಧರ್ಮಭಾರ ಹೊತ್ತಿರುವ ಪ್ರಜೆಯೇ, ದುಷ್ಟಜಾತಿಯೇ, ದ್ರೋಹಿಗಳಾದ ಮಕ್ಕಳೇ, ನಿಮ್ಮ ಗತಿಯನ್ನು ಏನು ಹೇಳಲಿ! ಯೆಹೋವನನ್ನು ತೊರೆದಿದ್ದಾರೆ, ಇಸ್ರಾಯೇಲ್ಯರ ಸದಮಲಸ್ವಾವಿುಯನ್ನು ಧಿಕ್ಕರಿಸಿದ್ದಾರೆ, ಆತನಿಗೆ ಬೆನ್ನುಮಾಡಿ ಬೇರೆಯಾಗಿದ್ದಾರೆ.


ನರಪುತ್ರನೇ, ಒಬ್ಬ ತಾಯಿಯ ಮಕ್ಕಳಾದ ಇಬ್ಬರು ಹೆಂಗಸರಿದ್ದರು;


ಆದರೆ ನೀನು ನಿನ್ನ ಸೌಂದರ್ಯದಲ್ಲಿಯೇ ನಂಬಿಕೆಯಿಟ್ಟು ನಾನು ಪ್ರಸಿದ್ಧಳಾಗಿದ್ದೇನಲ್ಲಾ ಎಂದು ಉಬ್ಬಿಕೊಂಡು ಸೂಳೆತನಮಾಡಿದಿ; ಹಾದುಹೋಗುವ ಪ್ರತಿಯೊಬ್ಬನ ಸಂಗಡ ವಿುತಿಮೀರಿ ಹಾದರಮಾಡಿದಿ, ಒಬ್ಬೊಬ್ಬನಿಗೂ ಒಳಗಾದಿ.


ನಾನು ಹಾದುಹೋಗುತ್ತಾ ನಿನ್ನನ್ನು ನೋಡಲು ಇಗೋ, ನೀನು ಮದುವೆಗೆ ಸಿದ್ಧಳಾಗಿದ್ದಿ; ಆಗ ನಾನು ನನ್ನ ಹೊದಿಕೆಯ ನೆರಿಗೆಯನ್ನು ನಿನ್ನ ಮೇಲೆ ಹಾಕಿ ನಿನ್ನ ಮಾನವನ್ನು ಕಾಪಾಡಿದೆನು; ಇದಲ್ಲದೆ ನಾನು ನಿನಗೆ ಮಾತುಕೊಟ್ಟು ಒಡಂಬಡಿಕೆ ಮಾಡಿಕೊಂಡದರಿಂದ ನೀನು ನನ್ನವಳಾದಿ; ಇದು ಕರ್ತನಾದ ಯೆಹೋವನ ನುಡಿ.


ಯೆಹೋವನಿಗೆ ಅಸಹ್ಯವಾಗಿರುವ ಹಲವು ಹೇಸಿಗೆ ಕೆಲಸಗಳನ್ನು ಅವರು ತಮ್ಮ ದೇವತೆಗಳಿಗೋಸ್ಕರ ನಡಿಸುತ್ತಾರಲ್ಲಾ; ತಮ್ಮ ಗಂಡು ಹೆಣ್ಣು ಮಕ್ಕಳನ್ನು ತಮ್ಮ ದೇವತೆಗಳಿಗೋಸ್ಕರ ಬೆಂಕಿಯಲ್ಲಿ ಸುಡುತ್ತಾರಲ್ಲಾ. ನೀವು ನಿಮ್ಮ ದೇವರಾದ ಯೆಹೋವನನ್ನು ಹಾಗೆ ಸೇವಿಸಲೇಬಾರದು.


ಅವುಗಳಿಗೆ ಅಡ್ಡ ಬೀಳಲೂಬಾರದು, ಪೂಜೆಮಾಡಲೂಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದವನಾದದರಿಂದ ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುವವನಾಗಿಯೂ


ಆಗ ಅವರು ದೇವರಿಗೂ ಮೋಶೆಗೂ ವಿರೋಧವಾಗಿ ಮಾತಾಡುತ್ತಾ - ನೀವು ನಮ್ಮನ್ನು ಈ ಮರಳುಕಾಡಿನಲ್ಲಿ ಕೊಲ್ಲಬೇಕೆಂದು ಐಗುಪ್ತದೇಶದಿಂದ ಕರೆದುಕೊಂಡು ಬಂದಿರೋ? ಇಲ್ಲಿ ಆಹಾರವೂ ಇಲ್ಲ, ನೀರೂ ಇಲ್ಲ; ಈ ನಿಸ್ಸಾರವಾದ ಆಹಾರವನ್ನು ತಿಂದು ತಿಂದು ನಮಗೆ ಬೇಸರವಾಯಿತೆಂದು ಹೇಳುವವರಾದರು.


ಕರ್ತನಾದ ಯೆಹೋವನು ಯೆರೂಸಲೇಮೆಂಬಾಕೆಗೆ ಈ ಮಾತನ್ನು ಹೇಳಿಕಳುಹಿಸಿದ್ದಾನೆ - ನೀನು ಹುಟ್ಟಿದ್ದು ಕಾನಾನ್ ದೇಶ, ಅದೇ ನಿನ್ನ ಜನ್ಮಭೂವಿು, ನಿನ್ನ ತಂದೆ ಅಮೋರಿಯನು, ನಿನ್ನ ತಾಯಿ ಹಿತ್ತೀಯಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು