Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 16:6 - ಕನ್ನಡ ಸತ್ಯವೇದವು J.V. (BSI)

6 ನಾನು ಹಾದುಹೋಗುತ್ತಾ ನಿನ್ನ ರಕ್ತದಲ್ಲೇ ಹೊರಳಾಡುತ್ತಿದ್ದ ನಿನ್ನನ್ನು ನೋಡಿ ನೀನು ರಕ್ತದಿಂದ ಹೊಲೆಯಾಗಿದ್ದರೂ ಬದುಕು ಎಂದು ಹೇಳಿದೆನು, ಹೌದು, ನೀನು ರಕ್ತದಿಂದ ಹೊಲೆಯಾಗಿದ್ದರೂ ಬದುಕು ಎಂದು ಹೇಳಿ ಬದುಕಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 “‘ನಾನು ಹಾದುಹೋಗುತ್ತಾ, ನಿನ್ನ ರಕ್ತದಲ್ಲೇ ಹೊರಳಾಡುತ್ತಿದ್ದ ನಿನ್ನನ್ನು ನೋಡಿ, ನೀನು ರಕ್ತದಿಂದ ಹೊಲೆಯಾಗಿದ್ದರೂ ಬದುಕು’ ಎಂದು ಹೇಳಿದೆನು. ಹೌದು, ‘ನೀನು ರಕ್ತದಿಂದ ಹೊಲೆಯಾಗಿದ್ದರೂ ಬದುಕು’ ಎಂದು ಹೇಳಿ ಬದುಕಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 “ನಾನು ಹಾದುಹೋಗುತ್ತಾ, ನಿನ್ನ ರಕ್ತದಲ್ಲೇ ಹೊರಳಾಡುತ್ತಿದ್ದ ನಿನ್ನನ್ನು ನೋಡಿ, ‘ನೀನು ರಕ್ತದಿಂದ ಅಶುದ್ಧವಾಗಿದ್ದರೂ ಬದುಕು’ ಎಂದು ಹೇಳಿದೆ; ಹೌದು, ‘ನೀನು ರಕ್ತದಿಂದ ಅಶುದ್ಧವಾಗಿದ್ದರೂ ಬದುಕು’ ಎಂದು ಹೇಳಿ ಬದುಕಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “‘ಆಗ ನಾನು (ದೇವರು) ಆ ಮಾರ್ಗವಾಗಿ ಹಾದುಹೋಗುವಾಗ ನೀನು ರಕ್ತಮಯವಾಗಿ ಹೊರಳಾಡುತ್ತಾ ಬಿದ್ದಿದ್ದೆ. ಆಗ ನಾನು “ಜೀವಿಸು” ಅಂದೆನು. ಹೌದು, ನೀನು ರಕ್ತದಲ್ಲಿ ಮುಳುಗಿದ್ದೀ. ಆಗ ನಾನು “ಜೀವಿಸು” ಅಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ ‘ನಾನು ನಿನ್ನ ಬಳಿಯಲ್ಲಿ ಹಾದುಹೋಗುವಾಗ, ನೀನು ನಿನ್ನ ಸ್ವಂತ ರಕ್ತದಲ್ಲಿ ಬಿದ್ದು ಹೊರಳಾಡುತ್ತಿದ್ದುದನ್ನು ನೋಡಿದಾಗ, “ಬದುಕು” ಎಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 16:6
21 ತಿಳಿವುಗಳ ಹೋಲಿಕೆ  

ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಸತ್ತವರು ದೇವಕುಮಾರನ ಧ್ವನಿಯನ್ನು ಕೇಳುವ ಕಾಲ ಬರುತ್ತದೆ, ಈಗಲೇ ಬಂದಿದೆ; ಕೇಳಿದವರು ಬದುಕುವರು.


ಐಗುಪ್ತದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನೋಡೇ ನೋಡಿದ್ದೇನೆ; ಅವರ ಮೊರೆಯನ್ನು ಕೇಳಿ ಅವರನ್ನು ಬಿಡಿಸುವದಕ್ಕೆ ಇಳಿದುಬಂದಿದ್ದೇನೆ; ಈಗ ನಿನ್ನನ್ನು ಐಗುಪ್ತದೇಶಕ್ಕೆ ಕಳುಹಿಸುತ್ತೇನೆ, ಬಾ, ಎಂದು ಹೇಳಿದನು.


ನೀವು ಭೂವಿುಗೆ ಉಪ್ಪಾಗಿದ್ದೀರಿ. ಉಪ್ಪು ಸಪ್ಪಗಾದರೆ ಅದಕ್ಕೆ ಇನ್ನಾತರಿಂದ ಉಪ್ಪಿನ ರುಚಿ ಬಂದೀತು? ಜನರು ಅದನ್ನು ಹೊರಗೆಹಾಕಿ ತುಳಿಯುವದಕ್ಕೆ ಅದು ಯೋಗ್ಯವೇ ಹೊರತು ಮತ್ತಾವ ಕೆಲಸಕ್ಕೂ ಬಾರದು.


ನಿನ್ನ ದೇವರಾದ ಯೆಹೋವನು ಎಲ್ಲಿ ಎಂದು ನನ್ನನ್ನು ಜರೆದ ಶತ್ರುಗಳು ಇದನ್ನು ನೋಡುವಾಗ ನಾಚಿಕೆಯು ಅವರನ್ನು ಕವಿದುಕೊಳ್ಳುವದು; ನಾನು ಅವರನ್ನು ಕಣ್ಣಾರೆ ನೋಡುವೆನು. ಈಗಲೇ ಬೀದಿಗಳ ಕೆಸರಂತೆ ತುಳಿತಕ್ಕೀಡಾಗುವರು.


ನಿನ್ನನ್ನು ಬಾಧಿಸುವವರ ಕೈಗೆ ಅದನ್ನು ಕೊಡುವೆನು; ಅವರು ನಿನಗೆ - ನೀನು ಬಿದ್ದುಕೋ, ನಿನ್ನನ್ನು ತುಳಿಯುತ್ತಾ ಹೋಗುವೆವು ಎಂದು ಹೇಳಲು ನೀನು ಹಾದುಹೋಗುವ ಅವರಿಗೆ ನಿನ್ನ ಬೆನ್ನನ್ನು ನೆಲವನ್ನಾಗಿಯೂ ಬೀದಿಯ ಮಣ್ಣನ್ನಾಗಿಯೂ ಮಾಡಿಕೊಂಡಿಯಲ್ಲಾ.


ನಿಮ್ಮ ದೇವರಾದ ಯೆಹೋವನು ಅವರನ್ನು ನಿಮ್ಮ ಎದುರಿನಿಂದ ಹೊರಡಿಸಿದನಂತರ ನೀವು ಮನಸ್ಸಿನಲ್ಲಿ - ಯೆಹೋವನು ನಮ್ಮನ್ನು ಈ ದೇಶಕ್ಕೆ ಕರತಂದು ಅದನ್ನು ನಮಗೆ ಸ್ವಾಧೀನಪಡಿಸಿದ್ದು ನಮ್ಮ ಪುಣ್ಯಫಲವೇ ಅಂದುಕೊಳ್ಳಬಾರದು. ಆ ಜನಾಂಗಗಳ ದುರ್ನಡತೆಯ ದೆಸೆಯಿಂದಲೇ ಯೆಹೋವನು ನಿಮ್ಮ ಎದುರಿನಿಂದ ಅವರನ್ನು ಹೊರಡಿಸುತ್ತಾನೆ.


ಯಾವನ ಮೇಲೆ ನನ್ನ ಕರುಣೆ ಉಂಟೋ ಅವನನ್ನು ಕರುಣಿಸುವೆನು, ಯಾವನ ಮೇಲೆ ನನ್ನ ಕನಿಕರವದೆಯೋ ಅವನಿಗೆ ಕನಿಕರ ತೋರಿಸುವೆನು ಎಂದು ದೇವರು ಮೋಶೆಗೆ ಹೇಳಿರುತ್ತಾನಷ್ಟೆ.


ಅದನ್ನು ಪಟ್ಟಣದ ಹೊರಗೆ ಆ ತೊಟ್ಟಿಯಲ್ಲಿ ತುಳಿದರು. ಆ ತೊಟ್ಟಿಯೊಳಗಿಂದ ರಕ್ತವು ಹೊರಟು ಕುದುರೆಗಳ ಕಡಿವಾಣಗಳನ್ನು ಮುಟ್ಟುವಷ್ಟು ಆಳವಾಗಿ ಇನ್ನೂರು ಮೈಲಿ ದೂರ ಹರಿಯಿತು.


ಯಾವನು ದೇವಕುಮಾರನನ್ನು ತುಳಿದು ಒಡಂಬಡಿಕೆಯನ್ನು ಸ್ಥಿರಪಡಿಸಿದಂಥ ತನ್ನನ್ನು ಪವಿತ್ರಮಾಡಿದಂಥ ರಕ್ತವನ್ನು ಅಶುದ್ಧವೆಂದೆಣಿಸಿ ದೇವರ ಕೃಪಾವರವಾಗಿರುವ ಆತ್ಮನನ್ನು ತಿರಸ್ಕಾರ ಮಾಡಿದ್ದಾನೋ ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗಬೇಕೆಂಬದನ್ನು ಯೋಚಿಸಿರಿ.


ನೀನಾದರೋ ನಿನ್ನ ಗೋರಿಗೆ ದೂರವಾಗಿ ಕೆಟ್ಟ ಮೊಳಿಕೆಯಂತೆ ಬಿಸಾಡಲ್ಪಟ್ಟಿದ್ದೀ; ನಿನ್ನ ಶವವು ತುಳಿತಕ್ಕೆ ಈಡಾಗಿದೆ, ಕತ್ತಿ ತಿವಿದು ಗುಂಡಿಯ ಕಲ್ಲುಗಳ ಪಾಲಾದ ಹತರೇ ಅದಕ್ಕೆ ಹೊದಿಕೆ.


ನಿನ್ನನ್ನು ಕಟಾಕ್ಷಿಸಿ ಕರುಣಿಸಿ ಯಾರೂ ನಿನಗೆ ಇಂಥಾ ಸಹಾಯ ಮಾಡಲಿಲ್ಲ; ನಿನ್ನ ಜನನ ದಿವಸದಲ್ಲಿ ನೀನು ಹೇಸಿಗೆಯಾಗಿದ್ದಿ, ನಿನ್ನನ್ನು ಬೈಲಿನಲ್ಲಿ ಬಿಸಾಟುಬಿಟ್ಟರು.


ಭೂವಿುಯಲ್ಲಿ ಮೊಳಿಕೆಯನ್ನೋ ಎಂಬಂತೆ ನಾನು ನಿನ್ನನ್ನು ಬೆಳೆಯಿಸಲು ನೀನು ಬಲಿತು ಪ್ರಾಯತುಂಬಿ ಅತಿಸುಂದರಿಯಾದಿ; ನಿನಗೆ ಸ್ತನಬಂತು, ನಿನ್ನ ಕೂದಲು ಉದ್ದವಾಯಿತು; ಆದರೆ ನೀನು ಬಟ್ಟೆಯಿಲ್ಲದೆ ಬೆತ್ತಲೆಯಾಗಿದ್ದಿ.


ಈ ನಿನ್ನ ಅಸಹ್ಯಕಾರ್ಯಗಳನ್ನೂ ಸೂಳೆತನವನ್ನೂ ನೀನು ಪದೇಪದೇ ನಡಿಸುತ್ತಿದ್ದಾಗ ನೀನು ಬಟ್ಟೆಯಿಲ್ಲದೆ ಬೆತ್ತಲೆಯಾಗಿ ನಿನ್ನ ರಕ್ತದಲ್ಲಿ ಹೊರಳಾಡುತ್ತಿದ್ದ ನಿನ್ನ ಎಳೆತನವನ್ನು ನೀನು ಜ್ಞಾಪಕಕ್ಕೆ ತಂದುಕೊಳ್ಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು