Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 16:61 - ಕನ್ನಡ ಸತ್ಯವೇದವು J.V. (BSI)

61 ಇದಕ್ಕನುಸಾರ ನಾನು ಕುಮಾರ್ತೆಯರನ್ನೋ ಎಂಬಂತೆ ನಿನಗೆ ದಯಪಾಲಿಸುವ ನಿನ್ನ ಅಕ್ಕಂದಿರೂ ತಂಗಿಯರೂ ನಿನ್ನಲ್ಲಿ ಸೇರಿಕೊಳ್ಳುವಾಗ ನೀನು ನಿನ್ನ ದುರ್ಮಾರ್ಗಗಳನ್ನು ನೆನಸಿಕೊಂಡು ನಾಚಿಕೆಪಡುವಿ; ಈ ನನ್ನ ದಯೆ ನಿನ್ನ [ಹಿಂದಿನ] ಒಡಂಬಡಿಕೆಯ ಫಲವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

61 ಇದಕ್ಕನುಸಾರ ನಾನು ಕುಮಾರ್ತೆಯರನ್ನೋ ಎಂಬಂತೆ ನಿನಗೆ ದಯಪಾಲಿಸುವ ನಿನ್ನ ಅಕ್ಕಂದಿರೂ ಮತ್ತು ತಂಗಿಯರೂ ನಿನ್ನಲ್ಲಿ ಸೇರಿಕೊಳ್ಳುವಾಗ ನೀನು ನಿನ್ನ ದುರ್ಮಾರ್ಗಗಳನ್ನು ನೆನಪಿಸಿಕೊಂಡು ನಾಚಿಕೆಪಡುವಿ; ಈ ನನ್ನ ದಯೆ ನಿನ್ನ ಹಿಂದಿನ ಒಡಂಬಡಿಕೆಯ ಫಲವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

61 ಇದಕ್ಕನುಸಾರ ನಾನು ಕುವರಿಯನ್ನೋ ಎಂಬಂತೆ ನಿನಗೆ ದಯಪಾಲಿಸುವ ನಿನ್ನ ಅಕ್ಕಂದಿರೂ ತಂಗಿಯರೂ ನಿನ್ನಲ್ಲಿ ಸೇರಿಕೊಳ್ಳುವರು. ಆಗ ನೀನು ನಿನ್ನ ದುರ್ಮಾರ್ಗಗಳನ್ನು ನೆನಸಿಕೊಂಡು ನಾಚಿಕೆಪಡುವೆ; ಈ ನನ್ನ ದಯೆ ನಿನ್ನ ಹಿಂದಿನ ಒಡಂಬಡಿಕೆಯ ಫಲವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

61 ನಿನ್ನ ಅಕ್ಕತಂಗಿಯಂದಿರನ್ನು ನಾನು ನಿನ್ನ ಬಳಿಗೆ ತಂದು ಅವರನ್ನು ನಿನ್ನ ಮಕ್ಕಳನ್ನಾಗಿ ಮಾಡುವೆನು. ಅದು ನಮ್ಮ ಒಡಂಬಡಿಕೆಯಲ್ಲಿಲ್ಲದಿದ್ದರೂ ನಾನು ಅದನ್ನು ನಿನಗಾಗಿ ಮಾಡುವೆನು. ಆಗ ನೀನು ಮಾಡಿದ ಭಯಂಕರ ಸಂಗತಿಗಳನ್ನು ಜ್ಞಾಪಕಕ್ಕೆ ತಂದು ನೀನು ನಾಚಿಕೊಳ್ಳುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

61 ಆಗ ನೀನು ನಿನ್ನ ಮಾರ್ಗಗಳನ್ನು ಜ್ಞಾಪಕಮಾಡಿಕೊಂಡು, ನಿನ್ನ ಸಹೋದರಿಗಳಾದ ನಿನ್ನ ಅಕ್ಕತಂಗಿಯರನ್ನು ಸೇರುವಾಗ ನಾಚಿಕೆಪಡುವೆ. ಅವರನ್ನು ನಿನ್ನ ಪುತ್ರಿಯರಂತೆ ಕೊಡುವೆನು. ಆದರೆ ಇದು ನಿನ್ನ ಒಡಂಬಡಿಕೆಯಿಂದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 16:61
31 ತಿಳಿವುಗಳ ಹೋಲಿಕೆ  

ಇಲ್ಲಿ ಹೊಸ ಒಡಂಬಡಿಕೆಯೆಂದು ಹೇಳಿದ್ದರಲ್ಲಿ ಮೊದಲಿದ್ದದ್ದನ್ನು ಹಳೇದಾಗಿ ಮಾಡಿದ್ದಾನೆ. ಆದರೆ ಹಳೇದಾಗುತ್ತಾ ಮುದಿಯಾಗುವಂಥದಕ್ಕೆ ಅಂತ್ಯವು ಸಮೀಪವಾಗಿದೆ.


ಅದು ಯಾವದಂದರೆ, ಅನ್ಯಜನರು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿರುವವರಾಗಿ ಯೆಹೂದ್ಯರೊಂದಿಗೆ ಬಾಧ್ಯರೂ ಒಂದೇ ದೇಹದೊಳಗಣ ಅಂಗಗಳೂ ಅಬ್ರಹಾಮನಿಗುಂಟಾದ ವಾಗ್ದಾನದಲ್ಲಿ ಪಾಲುಗಾರರೂ ಆಗಿದ್ದಾರೆಂಬದೇ.


ಹಾಗಾದರೆ ಅವರು ಬಿದ್ದೇ ಹೋಗುವಂತೆ ಎಡವಿದರೇನು ಎಂದು ಕೇಳುತ್ತೇನೆ. ಹಾಗೆ ಎಂದಿಗೂ ಹೇಳಬಾರದು. ಅವರು ಬಿದ್ದುಹೋದದ್ದರಿಂದ ಕ್ರಿಸ್ತನಿಂದ ಉಂಟಾಗುವ ರಕ್ಷಣೆಯು ಅನ್ಯಜನರಿಗೆ ಉಂಟಾಯಿತು. ಇದರಿಂದ ದೇವರು ಅವರಲ್ಲಿ ಹುರುಡು ಹುಟ್ಟಿಸುತ್ತಾನೆ.


ನೀವು ನಿಮ್ಮನ್ನು ಹೊಲಸುಮಾಡಿಕೊಂಡಿರುವ ನಿಮ್ಮ ನಡತೆಯನ್ನೂ ನಿಮ್ಮ ಎಲ್ಲಾ ಕಾರ್ಯಗಳನ್ನೂ ಅಲ್ಲಿ ಜ್ಞಾಪಕಕ್ಕೆ ತಂದುಕೊಂಡು ನೀವು ನಡಿಸಿರುವ ಸಕಲ ದುಷ್ಕೃತ್ಯಗಳ ನಿವಿುತ್ತ ನಿಮ್ಮನ್ನು ನೋಡಿ ನೀವೇ ಅಸಹ್ಯಪಡುವಿರಿ.


ನೀವು ನನ್ನನ್ನು ಆರಿಸಿ ತೆಗೆದುಕೊಂಡಿಲ್ಲ; ನಾನು ನಿಮ್ಮನ್ನು ಆರಿಸಿ ತೆಗೆದುಕೊಂಡೆನು. ನೀವು ಹೊರಟುಹೋಗಿ ಫಲಕೊಡುವವರಾಗಬೇಕೆಂತಲೂ ನೀವು ಕೊಡುವ ಫಲವು ನಿಲ್ಲುವಂಥದಾಗಬೇಕೆಂತಲೂ ನಿಮ್ಮನ್ನು ನೇವಿುಸಿದ್ದೇನೆ. ಹೀಗಿರಲಾಗಿ ನನ್ನ ಹೆಸರಿನಲ್ಲಿ ತಂದೆಯನ್ನು ಏನೇನು ಬೇಡಿಕೊಳ್ಳುವಿರೋ ಅದನ್ನು ಆತನು ನಿಮಗೆ ಕೊಡುವನು.


ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷವಿುಸಿಬಿಟ್ಟ ಮೇಲೆ ನೀನು ಅವುಗಳನ್ನು ಜ್ಞಾಪಕಕ್ಕೆ ತಂದು ನಾಚಿಕೆಪಟ್ಟು ನಿನ್ನ ಅವಮಾನದ ನಿವಿುತ್ತ ಇನ್ನು ಬಾಯಿ ತೆರೆಯದಿರುವಿ. ಇದು ಕರ್ತನಾದ ಯೆಹೋವನ ನುಡಿ.


ಆಗ ತಪ್ಪಿಸಿಕೊಂಡು ಸೆರೆಗೆ ಒಯ್ಯಲ್ಪಟ್ಟು ಜನಾಂಗಗಳ ಮಧ್ಯೆ ವಾಸಿಸುವ ನಿಮ್ಮವರು ಅನ್ಯದೇವತೆಗಳಲ್ಲಿನ ಮೋಹದಿಂದ ನನ್ನನ್ನು ತೊರೆದ ತಮ್ಮ ಹೃದಯವನ್ನೂ ತಮ್ಮ ಬೊಂಬೆಗಳ ಮೇಲಣ ಕಾಮದಿಂದ ದೇವದ್ರೋಹಮಾಡಿದ ತಮ್ಮ ಕಣ್ಣುಗಳನ್ನೂ ಭಂಗಪಡಿಸಿದವನು ನಾನೇ ಎಂಬದಾಗಿ ನನ್ನನ್ನು ಜ್ಞಾಪಕಮಾಡಿಕೊಂಡು ತಾವು ಬಹಳ ಅಸಹ್ಯಕಾರ್ಯಗಳನ್ನು ನಡಿಸಿ ಕೆಟ್ಟತನವನ್ನು ಮಾಡಿದ್ದೇವೆಂದು ತಮ್ಮನ್ನು ತಾವೇ ಹೇಸಿಕೊಳ್ಳುವರು.


ಕಣ್ಣೆತ್ತಿ ಸುತ್ತಲು ನೋಡು, ನಿನ್ನ ಮಕ್ಕಳೆಲ್ಲರೂ ಗುಂಪುಕೂಡಿ ನಿನ್ನ ಬಳಿಗೆ ಸೇರುತ್ತಿದ್ದಾರೆ; ಗಂಡು ಮಕ್ಕಳು ದೂರದಿಂದ ಸಮೀಪಿಸುತ್ತಾರೆ, ಹೆಣ್ಣುಮಕ್ಕಳು ಕಂಕುಳಿನಲ್ಲಿ ಕುಳಿತು ಬರುತ್ತಾರೆ.


ನನ್ನ ನಡತೆಯನ್ನು ಶೋಧಿಸಿದೆನು. ನಿನ್ನ ಕಟ್ಟಳೆಗಳ ಕಡೆಗೆ ತಿರುಗಿಕೊಂಡಿದ್ದೇನೆ.


ನರಪುತ್ರನೇ, ಇಸ್ರಾಯೇಲ್ ವಂಶದವರು ತಮ್ಮ ಅಪರಾಧಗಳ ನಿವಿುತ್ತ ನಾಚಿಕೆಪಡುವಂತೆ ದೇವಾಲಯವನ್ನು ಅವರಿಗೆ ತೋರಿಸು; ಅವರು ಅದನ್ನು ಅಳತೆ ಮಾಡಲಿ.


ಅವರು ನನಗೆ ಯಾಜಕಸೇವೆಮಾಡುವದಕ್ಕೆ ನನ್ನ ಸನ್ನಿಧಿಗೆ ಸೇರಕೂಡದು; ನನ್ನ ಅತಿಪವಿತ್ರವಾದ ಪರಿಶುದ್ಧವಸ್ತುಗಳಲ್ಲಿ ಯಾವದನ್ನೂ ಸಮೀಪಿಸಬಾರದು; ತಮಗಾದ ಅವಮಾನವನ್ನೂ ತಾವು ನಡಿಸಿದ ದುರಾಚಾರಗಳ ಫಲವನ್ನೂ ಅನುಭವಿಸುವರು.


ಪ್ರತಿವರುಷವೂ ಆ ಎರಡು ದಿವಸಗಳನ್ನು ಅವುಗಳ ವಿಷಯವಾದ ಶಾಸನದ ಪ್ರಕಾರ ನೇವಿುತವಾದ ಕಾಲದಲ್ಲಿ ಆಚರಿಸುವದು ತಮ್ಮಲ್ಲಿಯೂ ತಮ್ಮ ಸಂತಾನದವರಲ್ಲಿಯೂ ತಮ್ಮೊಂದಿಗೆ ಕೂಡಿಕೊಳ್ಳುವವರಲ್ಲಿಯೂ ಮೀರಕೂಡದ ಪದ್ಧತಿನಿಯಮಗಳಾಗಬೇಕೆಂದೂ


ಆದಕಾರಣ ನೀನು ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲ್ ವಂಶದವರೇ, ನಿಮ್ಮ ನಿವಿುತ್ತವಲ್ಲ, ನೀವು ಜನಾಂಗಗಳೊಳಗೆ ಸೇರಿ ಅಪಕೀರ್ತಿಗೆ ಗುರಿಮಾಡಿದ ನನ್ನ ಪರಿಶುದ್ಧನಾಮದ ನಿವಿುತ್ತವೇ ಈ ರಕ್ಷಣಕಾರ್ಯವನ್ನು ಮಾಡುತ್ತೇನೆ.


ಯಾಜಕತ್ವವು ಬೇರೆಯಾದರೆ ಧರ್ಮಶಾಸ್ತ್ರವು ಕೂಡ ಬೇರೆಯಾಗುವದು ಅಗತ್ಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು