Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 16:8 - ಕನ್ನಡ ಸತ್ಯವೇದವು J.V. (BSI)

8 ನಾನು ಹಾದುಹೋಗುತ್ತಾ ನಿನ್ನನ್ನು ನೋಡಲು ಇಗೋ, ನೀನು ಮದುವೆಗೆ ಸಿದ್ಧಳಾಗಿದ್ದಿ; ಆಗ ನಾನು ನನ್ನ ಹೊದಿಕೆಯ ನೆರಿಗೆಯನ್ನು ನಿನ್ನ ಮೇಲೆ ಹಾಕಿ ನಿನ್ನ ಮಾನವನ್ನು ಕಾಪಾಡಿದೆನು; ಇದಲ್ಲದೆ ನಾನು ನಿನಗೆ ಮಾತುಕೊಟ್ಟು ಒಡಂಬಡಿಕೆ ಮಾಡಿಕೊಂಡದರಿಂದ ನೀನು ನನ್ನವಳಾದಿ; ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಾನು ಹಾದುಹೋಗುತ್ತಾ ನಿನ್ನನ್ನು ನೋಡಲು ಇಗೋ, ನೀನು ಮದುವೆಗೆ ಸಿದ್ಧಳಾಗಿದ್ದಿ; ಆಗ ನಾನು ನನ್ನ ಹೊದಿಕೆಯನ್ನು ನಿನಗೆ ಹೊದಿಸಿ ನಿನ್ನ ಮಾನವನ್ನು ಕಾಪಾಡಿದೆನು; ಇದಲ್ಲದೆ ನಾನು ನಿನಗೆ ಪ್ರಮಾಣಮಾಡಿ ಒಡಂಬಡಿಕೆ ಮಾಡಿಕೊಂಡೆ ಆದುದರಿಂದ ನೀನು ನನ್ನವಳಾದೆ’” ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 “ನಾನು ಪುನಃ ಹಾದುಹೋಗುತ್ತಾ ನಿನ್ನನ್ನು ನೋಡಲು ಇಗೋ, ನೀನು ಮದುವೆಗೆ ಸಿದ್ಧಳಾಗಿದ್ದೆ; ಆಗ ನಾನು ನನ್ನ ಹೊದಿಕೆಯ ಸೆರಗನ್ನು ನಿನಗೆ ಹೊದಿಸಿ, ನಿನ್ನ ಮಾನವನ್ನು ಕಾಪಾಡಿದೆ; ಇದಲ್ಲದೆ ನಾನು ನಿನಗೆ ಮಾತುಕೊಟ್ಟು ಒಡಂಬಡಿಕೆ ಮಾಡಿಕೊಂಡೆ. ಆದ್ದರಿಂದ ನೀನು ನನ್ನವಳಾದೆ; ಇದು ಸರ್ವೇಶ್ವರನಾದ ದೇವರ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಾನು ಮತ್ತೆ ಹಾದುಹೋಗುವಾಗ ನಿನ್ನನ್ನು ನೋಡಲಾಗಿ ನೀನು ಸಂಭೋಗಿಸಲು ತಯಾರಾಗಿದ್ದೆ. ನಾನು ನನ್ನ ಹೊದಿಕೆಯನ್ನು ನಿನ್ನ ಮೇಲೆ ಹಾಕಿ ನಿನ್ನ ಬೆತ್ತಲೆ ದೇಹವನ್ನು ಮುಚ್ಚಿದೆನು. ನಿನ್ನನ್ನು ವಿವಾಹವಾಗಲು ಮಾತುಕೊಟ್ಟೆನು. ನಾನು ನಿನ್ನೊಡನೆ ಒಡಂಬಡಿಕೆ ಮಾಡಿಕೊಂಡೆನು. ಆಗ ನೀನು ನನ್ನವಳಾದೆ.’” ಇದು ನನ್ನ ಒಡೆಯನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ ‘ಈಗ ನಾನು ನಿನ್ನ ಬಳಿ ಹಾದುಹೋಗುವಾಗ ನಿನ್ನನ್ನು ನೋಡಲು, ನಿನ್ನ ಕಾಲವು ಪ್ರೇಮಿಸುವ ಕಾಲವಾಗಿತ್ತು. ಆಗ ನಾನು ನನ್ನ ಸೆರಗನ್ನು ನಿನ್ನ ಮೇಲೆ ಹೊದಿಸಿ, ನಿನ್ನ ಮಾನವನ್ನು ಕಾಪಾಡಿದೆ. ಹೌದು, ನಾನು ನಿನಗೆ ಆಣೆಯಿಟ್ಟು ಒಡಂಬಡಿಕೆ ಮಾಡಿಕೊಂಡಿದ್ದರಿಂದ ನೀನು ನನ್ನವಳಾದೆ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 16:8
25 ತಿಳಿವುಗಳ ಹೋಲಿಕೆ  

ಅವನು ಆಕೆಯನ್ನು - ನೀನು ಯಾರು ಎಂದು ಕೇಳಲು ಆಕೆಯು - ನಾನು ನಿನ್ನ ದಾಸಿಯಾದ ರೂತಳು. ನೀನು ಸಮೀಪಬಂಧುವಾಗಿರುವದರಿಂದ ನಿನ್ನ ಹೊದಿಕೆಯ ಅಂಚನ್ನು ನನ್ನ ಮೇಲೆ ಹಾಕು ಅಂದಳು.


ಆದರೆ ನಾವು ಪಾಪಿಗಳಾಗಿದ್ದಾಗಲೂ ಕ್ರಿಸ್ತನು ನಮಗೋಸ್ಕರ ಪ್ರಾಣ ಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ಸಿದ್ಧಾಂತಪಡಿಸಿದ್ದಾನೆ.


ನೀನು ನನ್ನ ದೃಷ್ಟಿಯಲ್ಲಿ ಅಮೂಲ್ಯನೂ ಮಾನ್ಯನೂ ಪ್ರಿಯನೂ ಆಗಿರುವದರಿಂದ ನಾನು ನಿನಗೆ ಬದಲಾಗಿ ಮನುಷ್ಯರನ್ನೂ ನಿನ್ನ ಪ್ರಾಣಕ್ಕೆ ಪ್ರತಿಯಾಗಿ ಜನಾಂಗಗಳನ್ನೂ ಕೊಡುವೆನು.


ಇಸ್ರಾಯೇಲು ಕೇವಲ ಬಾಲ್ಯದಲ್ಲಿದ್ದಾಗ ನಾನು ಅದರ ಮೇಲೆ ಪ್ರೀತಿಯನ್ನಿಟ್ಟು ಆ ನನ್ನ ಮಗನನ್ನು ಐಗುಪ್ತದೇಶದಿಂದ ಕರೆದೆನು.


ನಿಮ್ಮ ದೇವರಾದ ಯೆಹೋವನು ಕನಿಕರವುಳ್ಳ ದೇವರಾದದರಿಂದ ಆತನು ನಿಮ್ಮನ್ನು ಅಲಕ್ಷ್ಯಮಾಡುವದಿಲ್ಲ, ನಾಶನಕ್ಕೆ ಬಿಡುವದಿಲ್ಲ; ತಾನು ನಿಮ್ಮ ಪಿತೃಗಳ ಸಂಗಡ ಪ್ರಮಾಣಪೂರ್ವಕವಾಗಿ ಮಾಡಿಕೊಂಡ ಒಡಂಬಡಿಕೆಯನ್ನು ಮರೆಯುವದಿಲ್ಲ.


ನಿನ್ನ ಸೇವಕರಾದ ಅಬ್ರಹಾಮ್ ಇಸಾಕ್ ಯಾಕೋಬರನ್ನು ನೆನಪಿಗೆ ತಂದುಕೋ. ನೀನು ನಿನ್ನ ಜೀವದಾಣೆ ಪ್ರಮಾಣಮಾಡಿ ಅವರಿಗೆ - ನಾನು ನಿಮ್ಮ ಸಂತತಿಯನ್ನು ಹೆಚ್ಚಿಸಿ ಆಕಾಶದ ನಕ್ಷತ್ರಗಳಷ್ಟು ಅಸಂಖ್ಯವಾಗಿ ಮಾಡುವೆನೆಂದೂ ನಾನು ಸೂಚಿಸಿರುವ ಈ ಪ್ರದೇಶಗಳನ್ನೆಲ್ಲಾ ನಿಮ್ಮ ಸಂತತಿಯವರಿಗೆ ಕೊಡುವೆನೆಂದೂ ಅವರು ಈ ದೇಶವನ್ನು ಶಾಶ್ವತವಾಗಿ ಸ್ವಾಧೀನದಲ್ಲಿಟ್ಟುಕೊಳ್ಳುವರೆಂದೂ ಮಾತುಕೊಡಲಿಲ್ಲವೇ ಅಂದನು.


ಯೆಹೋವನು ದಯದಿಂದ ನಿಮ್ಮನ್ನು ಸ್ವಕೀಯಜನವನ್ನಾಗಿ ಆರಿಸಿಕೊಂಡ ಮೇಲೆ ಆತನು ತನ್ನ ಮಹೋನ್ನತ ನಾಮದ ನಿವಿುತ್ತವಾಗಿ ನಿಮ್ಮನ್ನು ಕೈಬಿಡುವದೇ ಇಲ್ಲ.


ನಾನು ಹಾದುಹೋಗುತ್ತಾ ನಿನ್ನ ರಕ್ತದಲ್ಲೇ ಹೊರಳಾಡುತ್ತಿದ್ದ ನಿನ್ನನ್ನು ನೋಡಿ ನೀನು ರಕ್ತದಿಂದ ಹೊಲೆಯಾಗಿದ್ದರೂ ಬದುಕು ಎಂದು ಹೇಳಿದೆನು, ಹೌದು, ನೀನು ರಕ್ತದಿಂದ ಹೊಲೆಯಾಗಿದ್ದರೂ ಬದುಕು ಎಂದು ಹೇಳಿ ಬದುಕಿಸಿದೆನು.


ನಾನು ನಿನ್ನನ್ನು ಪ್ರೀತಿಸಿರುವದು ಶಾಶ್ವತ ಪ್ರೇಮದಿಂದಲೇ; ಆದಕಾರಣ ನಿನ್ನನ್ನು ಮಮತೆಯಿಂದ ಸೆಳೆದುಕೊಂಡಿದ್ದೇನೆ,


ಯೆಹೋವನು ಇಂತೆನ್ನುತ್ತಾನೆ - ನಾನು ನಿಮ್ಮನ್ನು ಪ್ರೀತಿಸಿದ್ದೇನೆ; ನೀವೋ - ಯಾವ ವಿಷಯದಲ್ಲಿ ನಮ್ಮನ್ನು ಪ್ರೀತಿಸಿದ್ದೀ ಅಂದುಕೊಳ್ಳುತ್ತೀರಲ್ಲಾ. ಏಸಾವನು ಯಾಕೋಬನ ಅಣ್ಣನಲ್ಲವೆ,


ಈ ಒಡಂಬಡಿಕೆಯು ನಾನು ಇವರ ಪಿತೃಗಳನ್ನು ಕೈಹಿಡಿದು ಐಗುಪ್ತದೇಶದೊಳಗಿಂದ ಕರತಂದಾಗ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ನಾನು ಅವರಿಗೆ ಪತಿಯಾಗಿದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿದರಷ್ಟೆ.


ಯೆಹೋವನು ನುಡಿದದ್ದನ್ನು ಕೇಳು; ನೀನು ನಿನ್ನ ಒಬ್ಬನೇ ಮಗನನ್ನು ಸಮರ್ಪಿಸುವದಕ್ಕೆ ಹಿಂದೆಗೆಯದೆ ಹೋದದ್ದರಿಂದ ನಾನು ನಿನ್ನನ್ನು ಆಶೀರ್ವದಿಸೇ ಆಶೀರ್ವದಿಸುವೆನು;


ಅವಳು ತನ್ನ ವಿುಂಡರನ್ನು ಹಿಂದಟ್ಟಿದರೂ ಅವರನ್ನು ಸಂಧಿಸಳು; ಅವರನ್ನು ಹುಡುಕಿದರೂ ಅವರು ಸಿಕ್ಕರು; ಆಗ ಅವಳು - ನನ್ನ ಮದುವೆಯ ಗಂಡನ ಬಳಿಗೆ ಹಿಂದಿರುಗಿ ಹೋಗುವೆನು, ಈಗಿನ ನನ್ನ ಸ್ಥಿತಿಗಿಂತ ಆಗಿನ ಸ್ಥಿತಿಯು ಎಷ್ಟೋ ಲೇಸು ಅಂದುಕೊಳ್ಳುವಳು.


ಅವಳ ದ್ರಾಕ್ಷೆಯ ತೋಟಗಳನ್ನು ಅಲ್ಲಿರುವಾಗಲೇ ಅವಳಿಗೆ ಹಿಂದಕ್ಕೆ ಕೊಡುವೆನು; ಆಕೋರಿನ ತಗ್ಗನ್ನೇ ಅವಳ ಸುಖನಿರೀಕ್ಷೆಗೆ ದ್ವಾರವನ್ನಾಗಿ ಮಾಡುವೆನು; ಯೌವನದಲ್ಲಿ, ಐಗುಪ್ತ ದೇಶದೊಳಗಿಂದ ಹೊರಟುಬಂದ ದಿನದಲ್ಲಿ ಇದ್ದಂತೆ ಅಲ್ಲಿ ಒಲುಮೆಯಿಂದಿರುವಳು.


ಗಾಬರಿಯೂ ಹೆದರಿಕೆಯೂ ಅವರನ್ನು ಹಿಡಿದವೆ. ನಿನ್ನ ಭುಜಬಲದ ದೆಸೆಯಿಂದ ಅವರು ಕಲ್ಲಿನಂತೆ ಸ್ತಬ್ಧರಾಗಿದ್ದಾರೆ. ಅಷ್ಟರಲ್ಲಿ ಯೆಹೋವನೇ, ನೀನು ಸಂಪಾದಿಸಿಕೊಂಡ ನಿನ್ನ ಪ್ರಜೆಗಳು ಸಾಗಿಹೋಗಿ ದೇಶವನ್ನು ಸೇರುವರು.


ಈಗಲಾದರೋ, ಯಾಕೋಬವಂಶವೇ, ಇಸ್ರಾಯೇಲ್ ಸಂತಾನವೇ, ನಿನ್ನನ್ನು ಸೃಷ್ಟಿಸಿ ರೂಪಿಸಿದವನಾದ ಯೆಹೋವನು ಹೀಗನ್ನುತ್ತಾನೆ - ಭಯಪಡಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ, ನಿನ್ನ ಹೆಸರುಹಿಡಿದು ಕರೆದೆನಲ್ಲಾ; ನೀನು ನನ್ನವನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು