Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 17:19 - ಕನ್ನಡ ಸತ್ಯವೇದವು J.V. (BSI)

19 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನ ಜೀವದಾಣೆ, ನನಗೆ ಮಾಡಿದ ಪ್ರಮಾಣವನ್ನು ಅವನು ತಿರಸ್ಕರಿಸಿ ನನ್ನ ಒಡಂಬಡಿಕೆಯನ್ನು ಮೀರಿದ ದೋಷವನ್ನು ಅವನ ತಲೆಗೆ ಕಟ್ಟುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ನನಗೆ ಮಾಡಿದ ಪ್ರಮಾಣವನ್ನು ಅವನು ತಿರಸ್ಕರಿಸಿ, ನನ್ನ ಒಡಂಬಡಿಕೆಯನ್ನು ಮೀರಿದ ದೋಷವನ್ನು ಅವನ ತಲೆಗೆ ಕಟ್ಟುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 “ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನನ್ನ ಜೀವದಾಣೆ, ನನಗೆ ಮಾಡಿದ ಪ್ರಮಾಣವನ್ನು ಅವನು ತಿರಸ್ಕರಿಸಿ ನನ್ನ ಒಡಂಬಡಿಕೆಯನ್ನು ಮೀರಿದ ದೋಷವನ್ನು ಅವನ ತಲೆಯ ಮೇಲೆ ಹೊರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆದ್ದರಿಂದ ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ನನ್ನ ಜೀವದಾಣೆ, ನಾನು ಯೆಹೂದದ ರಾಜನನ್ನು ಶಿಕ್ಷಿಸುವೆನು. ಯಾಕೆಂದರೆ ಅವನು ನನ್ನ ಮುಂದೆ ಮಾಡಿದ ಪ್ರಮಾಣಕ್ಕೆ ಗಮನಕೊಡಲಿಲ್ಲ ಮತ್ತು ನಾನು ಸಾಕ್ಷಿಯಾಗಿದ್ದ ಒಪ್ಪಂದವನ್ನು ಅವನು ಮುರಿದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 “ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಜೀವದಾಣೆ ನಿಶ್ಚಯವಾಗಿ ಅವನು ತಿರಸ್ಕರಿಸಿದ ನನ್ನ ಪ್ರಮಾಣವನ್ನೂ, ಅವನು ಮೀರಿದ ಒಡಂಬಡಿಕೆಯನ್ನೂ ಅವನ ತಲೆಯ ಮೇಲೆಯೇ ಹೊರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 17:19
14 ತಿಳಿವುಗಳ ಹೋಲಿಕೆ  

ನಾನು ಇವುಗಳಿಗಾಗಿ ದಂಡಿಸಬಾರದೋ? ಇಂಥಾ ಜನಾಂಗದ ಮೇಲೆ ನನ್ನ ರೋಷವನ್ನು ತೀರಿಸದಿರುವೆನೋ?


ಜನರು ಯೆಹೋವನ ಜೀವದಾಣೆ ಎಂದರೂ ಆ ಆಣೆಯು ಸುಳ್ಳೇ ಸುಳ್ಳು [ಎಂದು ಯೆಹೋವನು ಅನ್ನುತ್ತಾನೆ].


ನಿನ್ನ ದೇವರಾದ ಯೆಹೋವನ ಹೆಸರನ್ನು ಅಯೋಗ್ಯ ಕಾರ್ಯಕ್ಕಾಗಿ ಎತ್ತಬಾರದು. ಯೆಹೋವನು ತನ್ನ ಹೆಸರನ್ನು ಅಯೋಗ್ಯ ಕಾರ್ಯಕ್ಕಾಗಿ ಎತ್ತುವವನನ್ನು ಶಿಕ್ಷಿಸದೆ ಬಿಡುವದಿಲ್ಲ.


ಯಾವ ಜನಾಂಗ, ಯಾವ ರಾಜ್ಯ, ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಅಡಿಯಾಳಾಗಲಿಕ್ಕೂ ಬಾಬೆಲಿನ ಅರಸನ ನೊಗಕ್ಕೆ ಹೆಗಲು ಕೊಡಲಿಕ್ಕೂ ಒಪ್ಪದೋ ಆ ಜನಾಂಗವನ್ನು ನಾನು ಖಡ್ಗ ಕ್ಷಾಮವ್ಯಾಧಿಗಳಿಂದ ದಂಡಿಸುತ್ತಾ ಬಂದು ಕಡೆಯಲ್ಲಿ ಅವನ ಕೈಯಿಂದಲೇ ನಿರ್ಮೂಲ ಮಾಡಿಸುವೆನು. ಇದು ಯೆಹೋವನ ನುಡಿ.


ಅರಸನಾದ ಚಿದ್ಕೀಯನು ಅವನನ್ನು ಕರತರಿಸಿ ಯೆಹೋವನಿಂದ ದೈವೋಕ್ತಿಯು ದೊರೆಯಿತೋ ಎಂದು ತನ್ನ ಮನೆಯಲ್ಲಿ ರಹಸ್ಯವಾಗಿ ವಿಚಾರಿಸಲು ಯೆರೆಮೀಯನು - ಹೌದು, ದೊರೆಯಿತು, ನೀನು ಬಾಬೆಲಿನ ಅರಸನ ಕೈಯಲ್ಲಿ ಸಿಕ್ಕಿ ಬೀಳುವಿ ಅಂದನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀನು ಒಡಂಬಡಿಕೆಯನ್ನು ಮೀರಿ ನಿನ್ನ ಆಣೆಯನ್ನು ತಿರಸ್ಕರಿಸಿದಿ, ನೀನು ಮಾಡಿದ್ದಕ್ಕೆ ತಕ್ಕದ್ದನ್ನು ನಾನು ನಿನಗೆ ಮಾಡುವೆನು.


ಇವನು ಇಟ್ಟ ಆಣೆಯನ್ನು ತಿರಸ್ಕರಿಸಿ ಒಡಂಬಡಿಕೆಯನ್ನು ಮೀರಿದನಲ್ಲವೇ; [ಕೈಯ ಮೇಲೆ] ಕೈ ಇಟ್ಟರೇನು? ಇದನ್ನೆಲ್ಲಾ ಮಾಡಿಬಿಟ್ಟನಲ್ಲವೇ? ಇವನು ಪಾರಾಗನು.


ನಾನು ಅವನಿಗೆ ನನ್ನ ಬಲೆಯೊಡ್ಡುವೆನು, ನಾನು ಹಾಕಿದ ಉರುಲಿನಲ್ಲಿ ಸಿಕ್ಕಿಬೀಳುವನು, ಅವನನ್ನು ಬಾಬೆಲಿಗೆ ತಂದು ಅಲ್ಲೇ ಅವನೊಂದಿಗೆ ವಾದಿಸಿ ಅವನು ನನಗೆ ಮಾಡಿದ ಅಪರಾಧವನ್ನು ಅವನ ಮೇಲೆ ಹೊರಿಸುವೆನು.


ಯೆಹೋವನು ಈ ರಕ್ತಾಪರಾಧವನ್ನು ಅವನ ತಲೆಯ ಮೇಲೆಯೇ ಬರಮಾಡಲಿ. ಅವನು ನನ್ನ ತಂದೆಯಾದ ದಾವೀದನಿಗೆ ತಿಳಿಯದೆ ತನಗಿಂತ ಉತ್ತಮರೂ ನೀತಿವಂತರೂ ಆದ ಇಬ್ಬರು ಮನುಷ್ಯರನ್ನು ಅಂದರೆ ಇಸ್ರಾಯೇಲ್ ಸೇನಾಪತಿಯೂ ನೇರನ ಮಗನೂ ಆದ ಅಬ್ನೇರನನ್ನೂ ಯೆಹೂದಸೇನಾಪತಿಯೂ ಯೆತೆರೆನ ಮಗನೂ ಆದ ಅಮಾಸನನ್ನೂ ಕೊಂದನಲ್ಲಾ.


ಈ ಇಬ್ಬರನ್ನೂ ವಧಿಸಿದ ಪಾಪವು ಯೋವಾಬನ ತಲೆಯ ಮೇಲೆಯೂ ಅವನ ಸಂತಾನದವರ ತಲೆಯ ಮೇಲೆಯೂ ಇರಲಿ. ಆದರೆ ದಾವೀದನಿಗೂ ಅವನ ಸಿಂಹಾಸನ ಕುಟುಂಬ ಸಂತಾನಗಳಿಗೂ ಯೆಹೋವನಿಂದ ನಿತ್ಯ ಸೌಭಾಗ್ಯವು ದೊರಕಲಿ ಅಂದನು.


ನಾನಂತು ಅವರನ್ನು ಕಟಾಕ್ಷಿಸೆನು, ಉಳಿಸೆನು, ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು ಎಂದು ಹೇಳಿದನು.


ನೀನು ನಿನ್ನ ಯೌವನಕಾಲವನ್ನು ಜ್ಞಾಪಕಮಾಡಿಕೊಳ್ಳದೆ ಈ ದುಷ್ಕೃತ್ಯಗಳನ್ನೆಲ್ಲಾ ನಡಿಸಿ ನನ್ನನ್ನು ರೇಗಿಸಿದ್ದರಿಂದ ಇಗೋ, ನಾನು ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು; ನೀನು ಲೆಕ್ಕವಿಲ್ಲದ ದುರಾಚಾರಗಳನ್ನು ನಡಿಸಿದ್ದಲ್ಲದೆ ಈ ಅಸಹ್ಯ ಕಾರ್ಯವನ್ನೂ ಮಾಡಿದ್ದೀಯಲ್ಲಾ. ಇದು ಕರ್ತನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು