Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 17:21 - ಕನ್ನಡ ಸತ್ಯವೇದವು J.V. (BSI)

21 ಅವನ ಸೇನೆಗಳೆಲ್ಲಾ ಚದರಿ ಓಡಿಹೋಗಿ ಕತ್ತಿಯ ಬಾಯಿಗೆ ತುತ್ತಾಗುವವು; ಉಳಿದವರನ್ನು ಎಲ್ಲಾ ಕಡೆಯ ಗಾಳಿಗೂ ತೂರಿಬಿಡುವೆನು; ಈ ಮಾತನ್ನು ಆಡಿದವನು ಯೆಹೋವನಾದ ನಾನೇ ಎಂದು ನಿಮಗೆ ಗೊತ್ತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅವನ ಸೇನೆಗಳೆಲ್ಲಾ ಚದರಿ ಓಡಿಹೋಗಿ, ಕತ್ತಿಯ ಬಾಯಿಗೆ ತುತ್ತಾಗುವುವು; ಉಳಿದವರನ್ನು ಎಲ್ಲಾ ಕಡೆಯ ಗಾಳಿಗೂ ತೂರಿಬಿಡುವೆನು; ಈ ಮಾತನ್ನು ಆಡಿದವನು ಯೆಹೋವನಾದ ನಾನೇ ಎಂದು ನಿಮಗೆ ಗೊತ್ತಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅವನ ಸೇನೆಗಳೆಲ್ಲಾ ಚದರಿ ಓಡಿಹೋಗಿ, ಕತ್ತಿಯ ಬಾಯಿಗೆ ತುತ್ತಾಗುವುವು; ಉಳಿದವರನ್ನು ಎಲ್ಲ ಕಡೆಯ ಗಾಳಿಗೆ ತೂರಿಬಿಡುವೆನು; ಈ ಮಾತನ್ನು ಆಡಿದವನು ಸರ್ವೇಶ್ವರನಾದ ನಾನೇ ಎಂದು ನಿಮಗೆ ಗೊತ್ತಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಅವನ ಸೈನ್ಯವನ್ನು ನಾಶಮಾಡುವೆನು. ಅವನಲ್ಲಿದ್ದ ಶೂರರನ್ನು ನಾಶಮಾಡುವೆನು. ಅಳಿದುಳಿದವರನ್ನು ಗಾಳಿ ಬೀಸುವ ಪ್ರತಿಯೊಂದು ದಿಕ್ಕಿನಲ್ಲಿಯೂ ಚದರಿಸಿಬಿಡುವೆನು. ಆಗ ಯೆಹೋವನಾದ ನಾನು ನಿಮಗೆ ಇದನ್ನು ಹೇಳಿದೆನೆಂದು ತಿಳಿಯುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅವನ ಸೈನ್ಯಗಳೆಲ್ಲಾ ಖಡ್ಗದಿಂದ ಬೀಳುವುದು; ಉಳಿದವರು ಎಲ್ಲಾ ದಿಕ್ಕುಗಳಿಗೆ ಚದರಿಹೋಗುವರು. ಆಗ ಯೆಹೋವ ದೇವರಾದ ನಾನೇ ಅದನ್ನು ಹೇಳಿದೆನೆಂದು ನಿಮಗೆ ತಿಳಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 17:21
17 ತಿಳಿವುಗಳ ಹೋಲಿಕೆ  

ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಪಟ್ಟಣದಲ್ಲಿ ಉಳಿದವರನ್ನೂ ಮೊದಲೇ ಬಾಬೆಲಿನ ಅರಸನ ಮರೆಹೊಕ್ಕವರನ್ನೂ ಬೇರೆ ಎಲ್ಲಾ ಜನರನ್ನೂ ಸೆರೆಯೊಯ್ದನು.


ಕಸ್ದೀಯರ ಸೈನ್ಯದವರು ಅವನನ್ನು ಹಿಂದಟ್ಟಿ ಯೆರಿಕೋವಿನ ಬೈಲಿನಲ್ಲಿ ಹಿಡಿದರು. ಅಷ್ಟರಲ್ಲಿ ಅವನ ಎಲ್ಲಾ ಸೈನಿಕರು ಅವನನ್ನು ಬಿಟ್ಟು ಚದರಿಹೋಗಿದ್ದರು.


ಅವನ ಸುತ್ತಲಿನ ಸಕಲ ಸಹಾಯಕರನ್ನೂ ಅವನ ಸಮಸ್ತ ವ್ಯೂಹಗಳವರನ್ನೂ ನಾನು ಎಲ್ಲಾ ಕಡೆಯ ಗಾಳಿಗೂ ತೂರಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.


ನಿನ್ನಲ್ಲಿನ ಮೂರನೆಯ ಒಂದು ಭಾಗದವರು ವ್ಯಾಧಿಯಿಂದ ಸಾಯುವರು, ನಿನ್ನ ಮಧ್ಯದಲ್ಲಿ ಕ್ಷಾಮದಿಂದ ನಾಶವಾಗುವರು; ಇನ್ನೊಂದು ಭಾಗದವರು ನಿನ್ನ ಸುತ್ತಲು ಖಡ್ಗದಿಂದ ಹತರಾಗುವರು; ಮತ್ತೊಂದು ಭಾಗದವರನ್ನು ನಾನು ಎಲ್ಲಾ ಕಡೆಯ ಗಾಳಿಗೂ ತೂರಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.


ಕರ್ತನು ಯಜ್ಞವೇದಿಯ ಪಕ್ಕದಲ್ಲಿ ನಿಂತಿರುವದನ್ನು ಕಂಡೆನು; ಆತನು ಹೀಗೆ ಅಪ್ಪಣೆಕೊಟ್ಟನು - ಹೊಸ್ತಿಲುಗಳು ಕದಲುವಂತೆ ಕಂಬಗಳ ಬೋದಿಗೆಗಳನ್ನು ಬಲವಾಗಿ ಹೊಡೆ; ಅವುಗಳನ್ನು ಒಡೆದುಬಿಟ್ಟು ಎಲ್ಲರ ತಲೆಯ ಮೇಲೆ ಬೀಳಿಸು; ಉಳಿದವರನ್ನು ಖಡ್ಗದಿಂದ ಸಂಹರಿಸುವೆನು; ಅವರಲ್ಲಿ ಯಾರೂ ಓಡಿಹೋಗರು, ಯಾರೂ ತಪ್ಪಿಸಿಕೊಳ್ಳರು.


ಅವರ ಮೇಲೆ ಕೋಪದೃಷ್ಟಿಯನ್ನಿಡುವೆನು; ಅವರು ಬೆಂಕಿಯೊಳಗಿಂದ ತಪ್ಪಿಸಿಕೊಂಡರೂ ಬೆಂಕಿಯು ಅವರನ್ನು ನುಂಗಿಬಿಡುವದು; ನಾನು ಅವರ ಮೇಲೆ ಕೋಪದೃಷ್ಟಿಯನ್ನಿಡುವಾಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.


ನೀವು ವಿುಥ್ಯಾದರ್ಶನವನ್ನು ಹೊಂದಿ ಕಣಿಹೇಳುವ ಕೆಲಸವು ಇನ್ನು ನಡಿಯುವದೇ ಇಲ್ಲ; ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು; ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.


ನೀವು ಸುಣ್ಣ ಬಳಿದ ಗೋಡೆಯನ್ನು ನಾನು ಹೀಗೆ ಕೆಡವಿ ನೆಲಸಮಮಾಡಿ ಅದರ ಅಸ್ತಿವಾರವನ್ನು ಬೈಲುಪಡಿಸುವೆನು; ಅದು ಬಿದ್ದು ಹೋಗುವದು, ಮತ್ತು ನೀವು ಅದರೊಳಗೆ ಸಿಕ್ಕಿಕೊಂಡು ನಾಶವಾಗುವಿರಿ; ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.


ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವದು; ಈ ಕೇಡನ್ನು ಅವರಿಗೆ ಮಾಡುವೆನು ಎಂದು ನಾನು ಹೇಳಿದ್ದು ಬರೀ ಮಾತಲ್ಲ.


ಹತರಾದವರು ನಿಮ್ಮ ಮಧ್ಯದಲ್ಲಿ ಬೀಳುವರು; ಆಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.


ಹೀಗಿರಲು ನಿನ್ನಲ್ಲಿ ತಂದೆಗಳು ಮಕ್ಕಳನ್ನು, ಮಕ್ಕಳು ತಂದೆಗಳನ್ನು, ತಿನ್ನುವರು; ನಾನು ನಿನ್ನನ್ನು ದಂಡಿಸಿ ನಿನ್ನಲ್ಲಿ ಉಳಿದ ಸಮಸ್ತರನ್ನು ಎಲ್ಲಾ ಕಡೆಯ ಗಾಳಿಗೂ ತೂರುವೆನು.


ಕಸ್ದೀಯರ ಸೈನ್ಯದವರು ಅರಸನಾದ ಚಿದ್ಕೀಯನನ್ನು ಹಿಂದಟ್ಟಿ ಯೆರಿಕೋವಿನ ಬೈಲಿನಲ್ಲಿ ಹಿಡಿದರು. ಅಷ್ಟರಲ್ಲಿ ಅವನ ಎಲ್ಲಾ ಸೈನಿಕರು ಅವನನ್ನು ಬಿಟ್ಟು ಚದರಿಹೋಗಿದ್ದರು.


ಭಯಕ್ಕೆ ಓಡುವವನು ಗುಂಡಿಯಲ್ಲಿ ಬೀಳುವನು, ಗುಂಡಿಯಿಂದ ಹತ್ತಿ ಬರುವವನು ಬಲೆಗೆ ಸಿಕ್ಕುವನು; ನಾನು ದಂಡನೆಯ ವರುಷವನ್ನು ಮೋವಾಬಿಗೆ ಬರಮಾಡುವೆನಷ್ಟೆ. ಇದು ಯೆಹೋವನ ನುಡಿ.


ಯೆಹೋವನೇ, ನೀನು ಕೈಯೆತ್ತಿದ್ದರೂ ಅವರು ಲಕ್ಷಿಸರು. ಆದರೆ ನಿನ್ನ ಸ್ವಜನಾಭಿಮಾನವನ್ನು ನೋಡಿ ನಾಚಿಕೆಪಡುವರು; ಹೌದು, ಆ ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವದು.


ಮುತ್ತಿಗೆಯ ದಿನಗಳು ತೀರಿದಕೂಡಲೆ ಕೂದಲಿನ ಒಂದು ಭಾಗವನ್ನು ಪಟ್ಟಣದ ಮಧ್ಯದೊಳಗೆ ಬೆಂಕಿಯಲ್ಲಿ ಸುಡು; ಇನ್ನೊಂದು ಭಾಗವನ್ನು ತೆಗೆದುಕೊಂಡು ಪಟ್ಟಣದ ಸುತ್ತಲು ಖಡ್ಗದಿಂದ ಕಡಿ; ಮತ್ತೊಂದು ಭಾಗವನ್ನು ಗಾಳಿಗೆ ತೂರು (ಹಾಗೆಯೇ ನಾನು ನನ್ನ ಜನರ ಹಿಂದೆ ಕತ್ತಿಯನ್ನು ಬೀಸುವೆನು).


ಹೀಗೆ ನನ್ನ ಸಿಟ್ಟನ್ನು ತೀರಿಸಿಕೊಳ್ಳುವೆನು, ನನ್ನ ರೋಷವನ್ನು ಅವರ ಮೇಲೆ ಸುರಿದು ಶಾಂತನಾಗುವೆನು; ಆಗ್ರಹದಿಂದ ಮಾತಾಡಿದವನು ಯೆಹೋವನಾದ ನಾನೇ ಎಂಬದು ನನ್ನ ಕೋಪವನ್ನು ಅವರ ಮೇಲೆ ಹೊಯ್ದುಬಿಟ್ಟ ಬಳಿಕ ಅವರಿಗೆ ಗೊತ್ತಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು