Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 17:23 - ಕನ್ನಡ ಸತ್ಯವೇದವು J.V. (BSI)

23 ನಾನು ಅದನ್ನು ಇಸ್ರಾಯೇಲಿನ ಪರ್ವತಾಗ್ರದಲ್ಲಿ ನೆಡಲು ಅದು ಸೊಂಪಾದ ದೇವದಾರುಮರವಾಗಿ ರೆಂಬೆಗಳನ್ನು ಹರಡಿಸಿ ಫಲಕೊಡುವದು; ಅದರಲ್ಲಿ ಸಕಲವಿಧಪಕ್ಷಿಗಳು ವಾಸಿಸುತ್ತಾ ಅದರ ರೆಂಬೆಗಳ ನೆರಳನ್ನು ಆಶ್ರಯಿಸುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನಾನು ಅದನ್ನು ಇಸ್ರಾಯೇಲಿನ ಉನ್ನತ ಪರ್ವತಾಗ್ರದಲ್ಲಿ ನೆಡಲು, ಅದು ಸೊಂಪಾದ ದೇವದಾರು ಮರವಾಗಿ ರೆಂಬೆಗಳನ್ನು ಹರಡಿ ಫಲಕೊಡುವುದು; ಅದರಲ್ಲಿ ಸಕಲವಿಧವಾದ ಪಕ್ಷಿಗಳು ವಾಸಿಸುತ್ತಾ ಅದರ ರೆಂಬೆಗಳ ನೆರಳನ್ನು ಆಶ್ರಯಿಸುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಹೌದು, ನೆಡುವೆನು ಇಸ್ರಯೇಲಿನಾ ಪರ್ವತಾಗ್ರದಲ್ಲಿ. ಆಗುವುದದು ಸೊಂಪಾದ ದೇವದಾರು ಮರ, ರೆಂಬೆಗಳನದು ಹರಡಿಕೊಂಡು ಕೊಡುವುದು ಫಲ. ಸಕಲವಿಧ ಪಕ್ಷಿಗಳು ವಾಸಿಸುವುವು ಅದರಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಸ್ವತಃ ನಾನೇ ಅದನ್ನು ಇಸ್ರೇಲಿನ ಉನ್ನತವಾದ ಪರ್ವತದ ಮೇಲೆ ನೆಡುವೆನು. ಅದು ಕೊಂಬೆಗಳನ್ನು ಬೆಳೆಸಿ, ಫಲವನ್ನು ಫಲಿಸಿ, ಅಮೋಘವಾದ ದೇವದಾರು ಮರವಾಗುವುದು; ಅದರ ಕೊಂಬೆಗಳ ಮೇಲೆ ಅನೇಕ ಬಗೆಯ ಪಕ್ಷಿಗಳು ವಾಸಿಸುವವು. ಅದರ ಕೊಂಬೆಯ ನೆರಳಿನಲ್ಲಿ ವಿವಿಧ ಬಗೆಯ ಪಕ್ಷಿಗಳು ವಾಸಿಸುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಇಸ್ರಾಯೇಲಿನ ಉನ್ನತ ಪರ್ವತದಲ್ಲಿ ನಾನು ಅದನ್ನು ನೆಡುವೆನು. ಅದು ಕೊಂಬೆಗಳಲ್ಲಿ ಹುಟ್ಟಿಕೊಂಡು ಫಲಫಲಿಸುವುದು; ಸೊಂಪಾದ ದೇವದಾರು ಆಗುವುದು. ರೆಕ್ಕೆಗಳುಳ್ಳ ಪ್ರತಿಯೊಂದು ಪಕ್ಷಿಗಳೂ, ಅದರ ಕೊಂಬೆಗಳ ನೆರಳಿನ ಕೆಳಗೆ ವಾಸಮಾಡುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 17:23
34 ತಿಳಿವುಗಳ ಹೋಲಿಕೆ  

ಅದು ಎಲ್ಲಾ ಬೀಜಗಳಿಗಿಂತಲೂ ಸಣ್ಣದಾಗಿದೆ, ಬೆಳೆದ ಮೇಲೆ ಕಾಯಿಪಲ್ಯದ ಗಿಡಗಳಿಗಿಂತ ದೊಡ್ಡದಾಗಿ ಮರವಾಗುತ್ತದೆ; ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಬಂದು ಅದರ ಕೊಂಬೆಗಳಲ್ಲಿ ವಾಸಮಾಡುತ್ತವೆ.


ಎಲ್ಲಾ ಆಕಾಶಪಕ್ಷಿಗಳು ಅದರ ರೆಂಬೆಗಳಲ್ಲಿ ಗೂಡುಮಾಡಿಕೊಂಡಿದ್ದವು; ಸಮಸ್ತಭೂಜಂತುಗಳು ಅದರ ಕೊಂಬೆಗಳ ಕೆಳಗೆ ಇದ್ದುಕೊಂಡು ಮರಿಗಳನ್ನು ಈಯುತ್ತಿದ್ದವು; ಮಹಾಜನಾಂಗಗಳೆಲ್ಲಾ ಅದರ ನೆರಳನ್ನು ಆಶ್ರಯಿಸಿದ್ದವು.


ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವದು; ಆಗ ಸಕಲದೇಶಗಳವರು ಅದರ ಕಡೆಗೆ ಪ್ರವಾಹಗಳಂತೆ ಬರುವರು.


ಇದನ್ನು ಧರಿಸಿಕೊಂಡಿರುವದರಲ್ಲಿ ಗ್ರೀಕನು ಯೆಹೂದ್ಯನು ಎಂಬ ಭೇದವಿಲ್ಲ; ಸುನ್ನತಿ ಮಾಡಿಸಿಕೊಂಡವರು ಸುನ್ನತಿಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ; ಮ್ಲೇಚ್ಫ ಹೂಣ ಎಂಬ ಹೆಸರುಗಳಿಲ್ಲ; ಆಳು ಒಡೆಯ ಎಂಬ ಭೇದವಿಲ್ಲ. ಆದರೆ ಕ್ರಿಸ್ತನೇ ಸಮಸ್ತರಲ್ಲಿಯೂ ಸಮಸ್ತವೂ ಆಗಿರುವನು.


ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವದರಿಂದ ಯೆಹೂದ್ಯನು ಗ್ರೀಕನು ಎಂದೂ, ಆಳು ಒಡೆಯ ಎಂದೂ, ಗಂಡು ಹೆಣ್ಣು ಎಂದೂ ಭೇದವಿಲ್ಲ.


ಅದರ ನೆರಳನ್ನು ಆಶ್ರಯಿಸಿರುವವರು ಹಿಂದಿರುಗಿ ಬೆಳೆಯನ್ನು ಬೆಳೆದು ದ್ರಾಕ್ಷೆಯಂತೆ ಪಲ್ಲವಿಸುವರು; ಅದರ ಕೀರ್ತಿಯು ಲೆಬನೋನಿನ ದ್ರಾಕ್ಷಾರಸದ ಹಾಗೆ ಸ್ವಾರಸ್ಯವಾಗಿರುವದು.


ಏಳನೆಯ ದೇವದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾ ಶಬ್ದಗಳುಂಟಾಗಿ - ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನು ಅಭಿಷೇಕಿಸಿದವನಿಗೂ ಉಂಟಾಯಿತು; ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು ಎಂದು ಹೇಳಿದವು.


ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಗೋದಿಯ ಕಾಳು ಭೂವಿುಯಲ್ಲಿ ಬಿದ್ದು ಸಾಯದಿದ್ದರೆ ಒಂದೇಯಾಗಿ ಉಳಿಯುವದು; ಸತ್ತರೆ ಬಹಳ ಫಲಕೊಡುವದು.


ಕಣ್ಣೆತ್ತಿ ಸುತ್ತಲು ನೋಡು! ಇವರೆಲ್ಲರೂ ಕೂಡಿಕೊಂಡು ನಿನ್ನ ಬಳಿಗೆ ಬರುತ್ತಿದ್ದಾರೆ. ಯೆಹೋವನು ಹೀಗನ್ನುತ್ತಾನೆ - ನನ್ನ ಜೀವದಾಣೆ, ನೀನು ಇವರನ್ನೆಲ್ಲಾ ಆಭರಣವನ್ನಾಗಿ ಧರಿಸಿಕೊಳ್ಳುವಿ, ವಧುವು ಒಡ್ಯಾಣವನ್ನು ಕಟ್ಟಿಕೊಳ್ಳುವಂತೆ ನೀನು ಇವರನ್ನು ಕಟ್ಟಿಕೊಳ್ಳುವಿ.


ಮುಂದಿನ ಕಾಲದಲ್ಲಿ ಯಾಕೋಬು ಬೇರೂರುವದು, ಇಸ್ರಾಯೇಲು ಹೂಬಿಟ್ಟು ಚಿಗುರುವದು, ಆ ವೃಕ್ಷವು ಭೂಮಂಡಲವನ್ನೆಲ್ಲಾ ಫಲದಿಂದ ತುಂಬಿಸುವದು.


ರಾಜದಂಡವನ್ನು ಹಿಡಿಯತಕ್ಕವನು ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವದಿಲ್ಲ, ಮುದ್ರೆಕೋಲು ಅವನ ಪಾದಗಳ ಬಳಿಯಿಂದ ಕದಲುವದಿಲ್ಲ; ಅವನಿಗೆ ಅನ್ಯಜನಗಳೂ ವಿಧೇಯರಾಗಿರುವರು.


ಬಿತ್ತಿದ ಮೇಲೆ ಅದು ಬೆಳೆದು ಎಲ್ಲಾ ಕಾಯಿಪಲ್ಯದ ಗಿಡಗಳಿಗಿಂತ ದೊಡ್ಡದಾಗಿ ದೊಡ್ಡ ದೊಡ್ಡ ಕೊಂಬೆಗಳನ್ನು ಬಿಡುವದರಿಂದ ಆಕಾಶದಲ್ಲಿ ಹಾರಾಡುವ ಹಕ್ಕಿಗಳು ಅದರ ನೆರಳಿನಲ್ಲಿ ವಾಸಮಾಡುವದಕ್ಕಾಗುತ್ತದೆ ಅಂದನು.


ಅದನ್ನು ನಾನು ಯಾವದಕ್ಕೆ ಹೋಲಿಸಲಿ? ಅದು ಸಾಸಿವೆಕಾಳಿಗೆ ಹೋಲಿಕೆಯಾಗಿದೆ. ಒಬ್ಬ ಮನುಷ್ಯನು ಅದನ್ನು ತೆಗೆದುಕೊಂಡುಹೋಗಿ ತನ್ನ ತೋಟದಲ್ಲಿ ಹಾಕಿದನು; ಅದು ಬೆಳೆದು ಮರವಾಯಿತು; ಮತ್ತು ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಅದರ ಕೊಂಬೆಗಳಲ್ಲಿ ವಾಸಮಾಡಿದವು ಅಂದನು.


ನೀನು ಐಗುಪ್ತದೇಶದಿಂದ ಒಂದು ದ್ರಾಕ್ಷಾಲತೆಯನ್ನು ತಂದು ಜನಾಂಗಗಳನ್ನು ಹೊರಗೆ ಹಾಕಿ ಅದನ್ನು ನೆಟ್ಟಿ.


ಅವನ ಕಾಲುಗಳು ಅಪರಂಜಿಯ ಸುಣ್ಣಪಾದಗಳ ಮೇಲಿಟ್ಟ ಚಂದ್ರಕಾಂತ ಸ್ತಂಭಗಳು; ದೇವದಾರುಗಳಷ್ಟು ರಮಣೀಯವಾದ ಅವನ ಗಾಂಭೀರ್ಯವು ಲೆಬನೋನಿಗೆ ಸಮಾನ.


ಅವರು ಬಂದು ಚೀಯೋನ್ ಶಿಖರದಲ್ಲಿ ಹಾಡುವರು; ಧಾನ್ಯ, ದ್ರಾಕ್ಷಾರಸ, ಎಣ್ಣೆ, ಕರು, ಕುರಿಮರಿ, ಅಂತು ಯೆಹೋವನು ಅನುಗ್ರಹಿಸುವ ಎಲ್ಲಾ ಮೇಲುಗಳನ್ನು ಅನುಭವಿಸಲು ಪ್ರವಾಹ ಪ್ರವಾಹವಾಗಿ ಬರುವರು; ಅವರ ಆತ್ಮವು ಹದವಾಗಿ ನೀರು ಹಾಯಿಸಿದ ತೋಟದಂತಿರುವದು; ಅವರು ಇನ್ನು ಕಳೆಗುಂದರು.


ಇಸ್ರಾಯೇಲಿನ ಪರ್ವತಗಳೇ, ನಿಮ್ಮ ಗಿಡಗಳು ರೆಂಬೆಗಳನ್ನು ಹರಡಿಕೊಂಡು ನನ್ನ ಜನರಾದ ಇಸ್ರಾಯೇಲ್ಯರಿಗೆ ಫಲಕೊಡುವವು; ಅವರ ಬರುವಿಕೆಯು ಸಮೀಪವಾಯಿತು.


ಆತನು ನನ್ನನ್ನು ಇಸ್ರಾಯೇಲ್ ದೇಶಕ್ಕೆ ತಂದು ಅತ್ಯುನ್ನತ ಪರ್ವತದ ಮೇಲೆ ಇಳಿಸಿದನೆಂದು ದೇವರ ದರ್ಶನದಲ್ಲಿ ನನಗೆ ಕಂಡುಬಂತು. ತೆಂಕಲಕಡೆಯಲ್ಲಿ ಆ ಪರ್ವತದ ಮೇಲೆ ಪಟ್ಟಣದಂತಿರುವ ಒಂದು ಕಟ್ಟಡವು ಕಾಣಿಸಿತು.


ಎಫ್ರಾಯೀಮು - ವಿಗ್ರಹಗಳ ಗೊಡವೆ ನನಗೆ ಇನ್ನೇಕೆ [ಅಂದುಕೊಳ್ಳುವದು]; ನಾನು ಅದಕ್ಕೆ ಒಲಿದು ಕಟಾಕ್ಷಿಸುವೆನು; ನಾನು ಸೊಂಪಾದ ತುರಾಯಿ ಮರದಂತಿದ್ದೇನೆ; ನನ್ನಿಂದಲೇ ನೀನು ಫಲಿಸುವಿ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ದೇಶದಲ್ಲಿ ಇಸ್ರಾಯೇಲ್ ವಂಶದವರೆಲ್ಲರೂ ನನ್ನ ಪರಿಶುದ್ಧವಾದ ಬೆಟ್ಟದಲ್ಲಿ, ಇಸ್ರಾಯೇಲಿನ ಪರ್ವತಾಗ್ರದಲ್ಲಿ ನನ್ನನ್ನು ಸೇವಿಸುವರು; ಅಲ್ಲೇ ಅವರಿಗೆ ಪ್ರಸನ್ನನಾಗುವೆನು, ಅಲ್ಲೇ ನಿಮ್ಮ ಕಾಣಿಕೆಗಳನ್ನೂ ಉತ್ತಮ ನೈವೇದ್ಯಗಳನ್ನೂ ಮೀಸಲಾದದೆಲ್ಲವನ್ನೂ ಬರಮಾಡಿಕೊಳ್ಳುವೆನು.


ನನ್ನ ದೇವರ ಹೆಸರು ಸೇರಿರುವ ಬೇಲ್ತೆಶಚ್ಚರನೆಂಬ ಅಡ್ಡಹೆಸರನ್ನು ಹೊಂದಿದವನೂ ಪರಿಶುದ್ಧದೇವರುಗಳ ಆತ್ಮವುಳ್ಳವನೂ ಆದ ದಾನಿಯೇಲನು ಕಟ್ಟಕಡೆಯಲ್ಲಿ ನನ್ನ ಸನ್ನಿಧಿಗೆ ಬರಲು ನಾನು ಆ ಕನಸನ್ನು ಅವನಿಗೆ ಹೀಗೆ ತಿಳಿಸಿದೆನು -


ಬೇಲ್ತೆಶಚ್ಚರನೇ, ಜೋಯಿಸರಲ್ಲಿ ಪ್ರಧಾನನೇ, ಪರಿಶುದ್ಧದೇವರುಗಳ ಆತ್ಮವು ನಿನ್ನಲ್ಲಿ ನೆಲೆಯಾಗಿದೆ ಎಂದು ತಿಳಿದಿದ್ದೇನೆ, ಯಾವ ರಹಸ್ಯವೂ ನಿನಗೆ ಅಶೋಧ್ಯವಲ್ಲವೆಂಬದು ನನಗೆ ಗೊತ್ತು. ಆದದರಿಂದ ನಾನು ಕಂಡ ಕನಸನ್ನೂ ಅದರ ಅರ್ಥವನ್ನೂ ನನಗೆ ತಿಳಿಸು.


ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವದು; ಆಗ ಜನಾಂಗಗಳು ಅದರ ಕಡೆಗೆ ಪ್ರವಾಹಗಳಂತೆ ಬರುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು