Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 17:8 - ಕನ್ನಡ ಸತ್ಯವೇದವು J.V. (BSI)

8 ಅದು ಸೊಂಪಾದ ಲತೆಯಾಗಿ ರೆಂಬೆಗಳನ್ನು ಹರಡಿಸಿ ಫಲಕೊಡುವದಕ್ಕೆ ಅನುಕೂಲವಾದ ಒಳ್ಳೆಯ ನೀರಾವರಿಯ ನೆಲದಲ್ಲಿ ನಾಟಿಕೊಂಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅದು ಸೊಂಪಾದ ದ್ರಾಕ್ಷಾಲತೆಯಾಗಿ ರೆಂಬೆಗಳನ್ನು ಹರಡಿ ಫಲಕೊಡುವುದಕ್ಕೆ ಅನುಕೂಲವಾದ ಒಳ್ಳೆಯ ನೀರಾವರಿಯ ನೆಲದಲ್ಲಿ ನಾಟಿಕೊಂಡಿತ್ತು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅದು ಸೊಂಪಾದ ಲತೆಯಾಗಿ ರೆಂಬೆಗಳನ್ನು ಹರಡಿಸಿ, ಫಲಕೊಡುವುದಕ್ಕೆ ಅನುಕೂಲವಾದ ಒಳ್ಳೆಯ ನೀರಾವರಿಯ ನೆಲದಲ್ಲಿ ನಾಟಿಕೊಂಡಿತ್ತು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆ ದ್ರಾಕ್ಷಾಲತೆಯು ಸಮೃದ್ಧಿಕರವಾಗಿ ನೀರಿದ್ದ ಒಳ್ಳೆಯ ಭೂಮಿಯಲ್ಲಿ ನೆಡಲ್ಪಟ್ಟಿತ್ತು. ಕೊಂಬೆಗಳನ್ನು ಬೆಳೆಸಿ, ಹಣ್ಣುಗಳನ್ನು ಫಲಿಸಿ ಅಮೋಘವಾದ ದ್ರಾಕ್ಷಾಲತೆಯಾಗಬೇಕೆಂಬುದು ಅದರ ಬಯಕೆಯಾಗಿತ್ತು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅದು ಕೊಂಬೆಗಳನ್ನು ಬೆಳೆಸಿ ಫಲಕೊಡುವ ಹಾಗೆಯೂ, ಒಳ್ಳೆಯ ದ್ರಾಕ್ಷಿಗಿಡ ಆಗುವ ಹಾಗೆಯೂ, ಒಳ್ಳೆಯ ಭೂಮಿಯಲ್ಲಿ ಹೆಚ್ಚು ನೀರಿನ ಬಳಿಯಲ್ಲಿ ಬೆಳೆಸಲಾಗಿತ್ತು.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 17:8
4 ತಿಳಿವುಗಳ ಹೋಲಿಕೆ  

ಅಗಲವಾದ ರೆಕ್ಕೆಗಳುಳ್ಳ ತುಪ್ಪಳತುಂಬಿದ ಮತ್ತೊಂದು ದೊಡ್ಡ ಹದ್ದು ಇತ್ತು; ಇಗೋ, ಆ ದ್ರಾಕ್ಷಾಲತೆಯು ತಾನು ನಾಟಿಕೊಂಡಿದ್ದ ಪಾತಿಯೊಳಗಿಂದ ಅದರ ಕಡೆಗೆ ತನ್ನ ಬೇರುಗಳನ್ನು ತಿರುಗಿಸಿ ತನ್ನ ರೆಂಬೆಗಳನ್ನು ಚಾಚಿ ಅದರಿಂದ ನೀರನ್ನು ಹಾರೈಸುತ್ತಿತ್ತು.


ಈ ಮಾತನ್ನು ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಅದು ಸಮೃದ್ಧವಾಗಿಯೇ ಇರುವದೋ? ಅದನ್ನು ನಾಟಿದ ಹದ್ದು ಅದರ ಬೇರುಗಳನ್ನು ಕಿತ್ತು ಅದರ ಫಲವನ್ನು ಕಡಿದುಬಿಡಲು ಅದು ಒಣಗಿ ಅದರ ಹಸುರೆಲೆಗಳೆಲ್ಲಾ ಬಾಡುವವಲ್ಲವೆ; ಅದು ಬೇರುಸಹಿತ ಕೀಳಲ್ಪಡುವದು; ಬಹು ಬಲದಿಂದಲ್ಲ, ಬಹು ಜನರಿಂದಲ್ಲ.


ಅದನ್ನು ಜಲಪ್ರವಾಹಗಳು ಬೆಳೆಯಿಸಿದವು, ಮಹಾನದಿಯು ವೃದ್ಧಿಗೊಳಿಸಿತು, ನದೀಶಾಖೆಗಳು ಅಲ್ಲಿನ ಉದ್ಯಾನವನ್ನು ಸುತ್ತಿಕೊಂಡಿದ್ದವು, ಭೂವಿುಯ ಎಲ್ಲಾ ಮರಗಳಿಗೂ ನದಿಯು ತನ್ನ ಕಾಲುವೆಗಳನ್ನು ಕೊಟ್ಟಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು