Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 17:9 - ಕನ್ನಡ ಸತ್ಯವೇದವು J.V. (BSI)

9 ಈ ಮಾತನ್ನು ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಅದು ಸಮೃದ್ಧವಾಗಿಯೇ ಇರುವದೋ? ಅದನ್ನು ನಾಟಿದ ಹದ್ದು ಅದರ ಬೇರುಗಳನ್ನು ಕಿತ್ತು ಅದರ ಫಲವನ್ನು ಕಡಿದುಬಿಡಲು ಅದು ಒಣಗಿ ಅದರ ಹಸುರೆಲೆಗಳೆಲ್ಲಾ ಬಾಡುವವಲ್ಲವೆ; ಅದು ಬೇರುಸಹಿತ ಕೀಳಲ್ಪಡುವದು; ಬಹು ಬಲದಿಂದಲ್ಲ, ಬಹು ಜನರಿಂದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಈ ಮಾತನ್ನು ನುಡಿ, “ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಅದು ಸಮೃದ್ಧವಾಗಿಯೇ ಇರುವುದೋ? ಅದನ್ನು ನಾಟಿದ ಹದ್ದು ಅದರ ಬೇರುಗಳನ್ನು ಕಿತ್ತು, ಅದರ ಫಲವನ್ನು ಕಡಿದುಬಿಡಲು ಅದು ಒಣಗಿ ಅದರ ಹಸುರೆಲೆಗಳೆಲ್ಲಾ ಬಾಡುವುದಲ್ಲವೆ? ಅದು ಬೇರು ಸಹಿತ ಕೀಳಲ್ಪಡುವುದು; ಬಹಳ ಬಲದಿಂದಲ್ಲ, ಬಹಳ ಜನರಿಂದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 “ಈ ಮಾತನ್ನು ನುಡಿ - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಅದು ಯಾವಾಗಲು ಸಮೃದ್ಧವಾಗಿಯೆ ಇರುವುದೇ? ಅದನ್ನು ನಾಟಿದ ಆ ಹದ್ದು ಅದರ ಬೇರುಗಳನ್ನು ಕಿತ್ತು ಅದರ ಫಲವನ್ನು ಕಡಿದುಬಿಡುವುದು . ಆಗ ಅದು ಒಣಗಿ ಅದರ ಹಸುರೆಲೆಗಳೆಲ್ಲಾ ಬಾಡುವುದಲ್ಲವೆ? ಅದನ್ನು ಬೇರುಸಹಿತ ಕೀಳಲು ಹೆಚ್ಚು ಬಲಬೇಕಾಗಿಲ್ಲ , ಬಹುಜನರ ಅಗತ್ಯವಿಲ್ಲ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನೀನು ಹೀಗೆ ಹೇಳು: ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಆ ದ್ರಾಕ್ಷಾಲತೆಯು ಬದುಕಿ ಬೆಳೆಯುವುದೋ? ಇಲ್ಲ. ಮೊದಲನೆ ಹದ್ದು ದ್ರಾಕ್ಷಾಲತೆಗಳ ಬೇರುಗಳನ್ನು ಎಳೆದುಹಾಕಿ, ಅದರ ದ್ರಾಕ್ಷಿಹಣ್ಣುಗಳನ್ನು ಕಿತ್ತುಹಾಕುವುದು. ಆಗ ಚಿಗುರುಗಳು ಬಾಡಿ ಒಣಗಿಹೋಗುವವು. ಆ ಸಸಿಯು ಬಲಹೀನವಾಗುವುದು. ಆಗ ಅದನ್ನು ಬೇರುಸಹಿತ ಕಿತ್ತುಹಾಕಲು ಮಹಾ ಬಲವಾಗಲಿ ಅಥವಾ ದೊಡ್ಡಸೈನ್ಯವಾಗಲಿ ಅಗತ್ಯವಿರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ಅವರಿಗೆ ಹೀಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಅದು ಸಮೃದ್ಧಿಯಾಗಿರುವುದೋ? ಅದರ ಬೇರುಗಳನ್ನು ಕಿತ್ತು ಅದರ ಹಣ್ಣುಗಳನ್ನು ತೆಗೆದುಬಿಟ್ಟರೆ, ಅದು ಒಣಗುವುದಿಲ್ಲವೇ? ಅದರ ಮೊಳಕೆಯ ಎಲೆಗಳೆಲ್ಲಾ ಒಣಗಿ ಹೋದಾಗ, ಅದನ್ನು ಬೇರುಸಹಿತ ಕೀಳಬೇಕಾದರೆ ಮಹಾಬಲವಾಗಲಿ ಅಥವಾ ಬಹಳ ಜನರಾಗಲಿ ಇರಬೇಕಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 17:9
17 ತಿಳಿವುಗಳ ಹೋಲಿಕೆ  

ಆಹಾ, ನಾಟಿಕೊಂಡಿದ್ದ ಆ ಲತೆಯು ಸಮೃದ್ಧವಾಗಿಯೇ ಇರುವದೋ? ಮೂಡಣ ಗಾಳಿಯು ಬಡಿಯುವಾಗ ಬಾಡೇ ಬಾಡುವದಲ್ಲವೆ; ಬೆಳೆದ ಪಾತಿಯಲ್ಲಿಯೇ ಒಣಗಿ ಹೋಗುವದು.


ನಿಮ್ಮನ್ನು ಪ್ರತಿಭಟಿಸುವ ಕಸ್ದೀಯರಲ್ಲಿ ಗಾಯಪಟ್ಟವರು ಮಾತ್ರ ಉಳಿಯುವಂತೆ ನೀವು ಆ ಸೈನ್ಯವನ್ನೆಲ್ಲಾ ಒಂದು ವೇಳೆ ಹೊಡೆದಿದ್ದರೂ ಆ ಗಾಯಪಟ್ಟವರೇ ತಮ್ಮ ತಮ್ಮ ಗುಡಾರಗಳಿಂದ ಎದ್ದುಬಂದು ಈ ಪಟ್ಟಣವನ್ನು ಬೆಂಕಿಯಿಂದ ಸುಟ್ಟುಬಿಡುತ್ತಿದ್ದರು.


ಆ ಅರಸನು ಚಿದ್ಕೀಯನನ್ನು ಬಾಬೆಲಿಗೆ ಒಯ್ದುಕೊಂಡುಹೋಗುವನು, ನಾನು ಅವನಿಗೆ ದಯೆತೋರಿಸುವ ತನಕ ಅಲ್ಲೇ ಇರುವನು; ನೀವು ಕಸ್ದೀಯರೊಡನೆ ಯುದ್ಧಮಾಡಿದರೂ ನಿಮಗೆ ಜಯವಾಗದು; ಇದು ಯೆಹೋವನ ನುಡಿ ಎಂಬದಾಗಿ ಏಕೆ ನುಡಿಯುತ್ತೀ ಎಂದು ಹೇಳಿ ಅವನನ್ನು ಸೆರೆಯಲ್ಲಿ ಹಾಕಿಸಿದ್ದನು.


ಅವರು ಮರುದಿನ ಬೆಳಿಗ್ಗೆ ಎದ್ದು ತೆಕೋವ ಅರಣ್ಯಕ್ಕೆ ಹೊರಟರು. ಅವರು ಹೊರಡುವಾಗ ಯೆಹೋಷಾಫಾಟನು ನಿಂತು ಅವರಿಗೆ - ಯೆಹೂದ್ಯರೇ, ಯೆರೂಸಲೇವಿುನವರೇ, ನನ್ನ ಮಾತನ್ನು ಕೇಳಿರಿ. ಯೆಹೋವನಲ್ಲಿ ಭರವಸವಿಡಿರಿ, ಆಗ ಸುರಕ್ಷಿತರಾಗಿರುವಿರಿ; ಆತನ ಪ್ರವಾದಿಗಳನ್ನು ನಂಬಿರಿ, ಆಗ ಸಾರ್ಥಕರಾಗುವಿರಿ ಎಂದು ಹೇಳಿದನು.


ಇಗೋ, ದೇವರು ನಾಯಕನಾಗಿ ನಮ್ಮೊಂದಿಗಿರುತ್ತಾನೆ; ನಿಮಗೆ ವಿರೋಧವಾಗಿ ಆರ್ಭಟದಿಂದ ಊದತಕ್ಕ ತುತೂರಿಗಳನ್ನು ಹಿಡಿದಿರುವ ಯಾಜಕರೂ ನಮ್ಮೊಂದಿಗಿರುತ್ತಾರೆ. ಇಸ್ರಾಯೇಲ್ಯರೇ, ನಿಮ್ಮ ಪಿತೃಗಳ ದೇವರಾದ ಯೆಹೋವನೊಡನೆ ಯುದ್ಧ ಮಾಡಬೇಡಿರಿ, ನೀವು ಸಫಲರಾಗಲಿಕ್ಕಿಲ್ಲ ಎಂದು ಕೂಗಿ ಹೇಳಿದನು.


ಆದರೆ ಮೋಶೆ ಅವರಿಗೆ - ನೀವು ಯಾಕೆ ಹೀಗೆ ಮಾಡಿ ಯೆಹೋವನ ಆಜ್ಞೆಯನ್ನು ಮೀರುತ್ತೀರಿ; ಇದು ಕೈಗೂಡುವದಿಲ್ಲ;


ಅದು ಸೊಂಪಾದ ಲತೆಯಾಗಿ ರೆಂಬೆಗಳನ್ನು ಹರಡಿಸಿ ಫಲಕೊಡುವದಕ್ಕೆ ಅನುಕೂಲವಾದ ಒಳ್ಳೆಯ ನೀರಾವರಿಯ ನೆಲದಲ್ಲಿ ನಾಟಿಕೊಂಡಿತ್ತು.


ಆಹಾ, ಅವರಿಗೆ ಎದುರಾಗಿ ನಿಂತ ಅಮೋರಿಯರನ್ನು ನಾನೇ ಧ್ವಂಸಮಾಡಿದೆನು; ಆ ಶತ್ರುವು ದೇವದಾರು ಮರದಷ್ಟು ಎತ್ತರವಾಗಿ ಅಲ್ಲೋನ್ ಮರದ ಹಾಗೆ ದೃಢವಾಗಿ ಇದ್ದರೂ ಮೇಲೆ ಅದರ ಫಲವನ್ನು, ಕೆಳಗೆ ಅದರ ಬುಡವನ್ನು ನಾಶಪಡಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು