ಯೆಹೆಜ್ಕೇಲನು 18:18 - ಕನ್ನಡ ಸತ್ಯವೇದವು J.V. (BSI)18 ಇವನ ತಂದೆಯೋ ಸ್ವಕುಲದವರನ್ನು ಬಹಳವಾಗಿ ಅರೆದು ಸುಲಿದು ಸ್ವಜನರ ನಡುವೆ ಕೆಟ್ಟದನ್ನು ನಡಿಸಿದ ಕಾರಣ ಇಗೋ, ತನ್ನ ಅಧರ್ಮದಿಂದಲೇ ಸಾಯುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಇವನ ತಂದೆಯೋ, ಸ್ವಕುಲದವರನ್ನು ಬಹಳವಾಗಿ ಅರೆದು, ಸುಲಿದು, ಸ್ವಜನರ ನಡುವೆ ಕೆಟ್ಟದನ್ನು ನಡೆಸಿದ ಕಾರಣ, ಇಗೋ, ತನ್ನ ಅಧರ್ಮದಿಂದಲೇ ಸಾಯುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಇವನ ತಂದೆಯಾದರೊ ಸ್ವಕುಲದವರನ್ನು ಬಹಳವಾಗಿ ಅರೆದು, ಸುಲಿದು, ಸ್ವಜನರ ನಡುವೆ ಕೆಟ್ಟದ್ದನ್ನು ನಡೆಸಿದ ಕಾರಣ, ಇಗೋ, ತನ್ನ ಅಧರ್ಮದಿಂದಲೇ ಸಾಯುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ತಂದೆಯು ಜನರನ್ನು ಹೆದರಿಸಿಯಾಗಲಿ ದರೋಡೆ ಮಾಡಿಯಾಗಲಿ ವಸ್ತುಗಳನ್ನು ತೆಗೆದುಕೊಂಡಿರಬಹುದು. ತನ್ನ ಜನರ ಮಧ್ಯದಲ್ಲಿ ಕೆಟ್ಟದಾಗಿರುವುದನ್ನು ಅವನು ಮಾಡಿರಬಹುದು. ಆ ತಂದೆಯು ತನ್ನ ಪಾಪಗಳ ಸಲುವಾಗಿ ಸಾಯುವನು. ಆದರೆ ತಂದೆಯ ಪಾಪಗಳಿಗಾಗಿ ಮಗನು ಶಿಕ್ಷಿಸಲ್ಪಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಇವನ ತಂದೆಯಾದರೊ ಸ್ವಜನರನ್ನು ಬಲಾತ್ಕಾರ ಮಾಡಿದ್ದರಿಂದಲೂ, ತನ್ನ ಸಹೋದರನನ್ನು ಹಿಂಸಿಸಿ ಸುಲಿಗೆ ಮಾಡಿದ್ದರಿಂದಲೂ, ತನ್ನ ಜನರ ಮಧ್ಯದಲ್ಲಿ ಕೆಟ್ಟದ್ದನ್ನು ಮಾಡಿದ್ದರಿಂದಲೂ ಅವನು ತನ್ನ ಅಕ್ರಮದಲ್ಲಿ ಸಾಯುವನು. ಅಧ್ಯಾಯವನ್ನು ನೋಡಿ |