Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 18:24 - ಕನ್ನಡ ಸತ್ಯವೇದವು J.V. (BSI)

24 ಆದರೆ ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು ಅಧರ್ಮಮಾಡಿ ದುಷ್ಟನು ನಡಿಸುವ ದುರಾಚಾರಗಳನ್ನೆಲ್ಲಾ ನಡಿಸಿದರೆ ಅವನು ಬಾಳುವನೋ? ಅವನು ಮಾಡಿದ ಯಾವ ಸುಕೃತ್ಯವೂ ಅವನ ಲೆಕ್ಕಕ್ಕೆ ಸೇರಿಸಲ್ಪಡದು, ಅವನು ಮಾಡುತ್ತಿರುವ ಪಾಪಾಪರಾಧಗಳಿಂದಲೇ ಸಾಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆದರೆ ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು, ಅಧರ್ಮಮಾಡಿ, ದುಷ್ಟನು ನಡೆಸುವ ದುರಾಚಾರಗಳನ್ನೆಲ್ಲಾ ನಡೆಸಿದರೆ ಅವನು ಜೀವಿಸುವನೋ? ಅವನು ಮಾಡಿದ ಯಾವ ಸುಕೃತ್ಯವು ಅವನ ಲೆಕ್ಕಕ್ಕೆ ಸೇರಿಸಲ್ಪಡುವುದಿಲ್ಲ, ಅವನು ಮಾಡುತ್ತಿರುವ ಪಾಪ ಅಪರಾಧಗಳಿಂದಲೇ ಸಾಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಆದರೆ ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು, ಅಧರ್ಮಮಾಡಿ, ದುಷ್ಟನು ನಡೆಸುವ ದುರಾಚಾರಗಳನ್ನೆಲ್ಲಾ ನಡೆಸಿದರೆ, ಅವನು ಜೀವಿಸುವನೇ? ಅವನು ಮಾಡಿದ ಯಾವ ಸುಕೃತ್ಯವೂ ಅವನ ಲೆಕ್ಕಕ್ಕೆ ಸೇರಿಸಲ್ಪಡದು, ಅವನು ಮಾಡುತ್ತಿರುವ ಪಾಪಾಪರಾಧಗಳಿಂದಲೇ ಸಾಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 “ಒಂದುವೇಳೆ ಒಳ್ಳೆಯವನೊಬ್ಬನು ತನ್ನ ಒಳ್ಳೆಯತನವನ್ನು ಬಿಟ್ಟು ಪಾಪ ಮಾಡಬಹುದು; ದುಷ್ಟರು ಮಾಡುವ ಅಸಹ್ಯಕೃತ್ಯಗಳನ್ನೆಲ್ಲ ಮಾಡಬಹುದು. ಅವನು ಹೀಗೆ ಮಾಡುತ್ತಾ ಬದುಕಲು ಸಾಧ್ಯವೇ ಇಲ್ಲ! ಅವನು ಅಪನಂಬಿಗಸ್ತನಾದ್ದರಿಂದ ಮತ್ತು ಪಾಪ ಮಾಡಿದ್ದರಿಂದ ದೇವರು ಅವನ ಎಲ್ಲಾ ಒಳ್ಳೆಯ ಕಾರ್ಯಗಳನ್ನೂ ಮರೆತುಬಿಡುವನು. ಅವನು ತನ್ನ ಪಾಪಗಳ ದೆಸೆಯಿಂದ ಸಾಯುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 “ಆದರೆ ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯ ಮಾಡಿ, ದುಷ್ಟನು ಮಾಡುವ ಎಲ್ಲಾ ಅಸಹ್ಯವಾದವುಗಳ ಹಾಗೆ ಮಾಡಿದರೆ ಅವನು ಬದುಕುವನೇ? ಅವನು ಮಾಡಿರುವ ಎಲ್ಲಾ ಸುಕೃತ್ಯಗಳು ಅವನ ಲೆಕ್ಕಕ್ಕೆ ಸೇರುವುದಿಲ್ಲ. ಅವನು ಮಾಡಿರುವ ಅಪರಾಧದಿಂದಲೂ, ಪಾಪದಿಂದಲೂ ಅವುಗಳಲ್ಲಿಯೇ ಅವನು ಸಾಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 18:24
42 ತಿಳಿವುಗಳ ಹೋಲಿಕೆ  

ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು ಅಧರ್ಮಮಾಡಿದರೆ ಆ ಅಧರ್ಮದಿಂದಲೇ ಸಾಯುವನು.


ಜ್ಞಾನಮಾರ್ಗದಿಂದ ತಪ್ಪಿದವನಿಗೆ ಪ್ರೇತ ಸಮೂಹವೇ ವಿಶ್ರಾಂತಿಸ್ಥಾನ.


ನಾವು ಪ್ರಯಾಸಪಟ್ಟು ಮಾಡಿದವುಗಳನ್ನು ನೀವು ಕಳಕೊಳ್ಳದೆ ಪೂರ್ಣಫಲವನ್ನು ಹೊಂದುವಂತೆ ಜಾಗರೂಕರಾಗಿರಿ.


ನೀವು ಅಷ್ಟು ಬಾಧೆಗಳನ್ನು ಅನುಭವಿಸಿದ್ದು ವ್ಯರ್ಥವೋ? ವ್ಯರ್ಥವೇ ಎಂದು ಹೇಳಬೇಕೇನು?


ಅವರು ನಮ್ಮನ್ನು ಬಿಟ್ಟು ಹೊರಟುಹೋದರು, ಆದರೆ ಅವರು ನಮ್ಮವರಾಗಿರಲಿಲ್ಲ. ಅವರು ನಮ್ಮವರಾಗಿದ್ದರೆ ನಮ್ಮ ಜೊತೆಯಲ್ಲೇ ಇರುತ್ತಿದ್ದರು, ಆದರೆ ಅವರು ನಮ್ಮನ್ನು ಬಿಟ್ಟುಹೋದದರಿಂದ ಕ್ರೈಸ್ತರೆನಿಸಿಕೊಳ್ಳುವವರೆಲ್ಲರೂ ನಮ್ಮವರಲ್ಲವೆಂಬದು ಸ್ಪಷ್ಟವಾಗಿ ತೋರಬಂತು.


ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು ಅಧರ್ಮ ಮಾಡಿ ಅದರಲ್ಲಿ ಸತ್ತರೆ ತಾನು ಮಾಡಿದ ಅಧರ್ಮದಿಂದಲೇ ಸಾಯಬೇಕಾಯಿತು.


ಬೇಗನೆ ಬರುತ್ತೇನೆ; ನಿನಗಿರುವದನ್ನು ಹಿಡಿದುಕೊಂಡಿರು; ನಿನ್ನ ಜಯಮಾಲೆಯನ್ನು ಯಾರೂ ಅಪಹರಿಸಬಾರದು.


ನಿನಗೆ ಸಂಭವಿಸುವದಕ್ಕಿರುವ ಬಾಧೆಗಳಿಗೆ ಹೆದರಬೇಡ. ಇಗೋ ನೀವು ದುಷ್ಪ್ರೇರಣೆಗೆ ಒಳಗಾಗುವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವದಕ್ಕಿದ್ದಾನೆ; ಮತ್ತು ಹತ್ತು ದಿವಸಗಳ ತನಕ ನಿಮಗೆ ಸಂಕಟವಿರುವದು. ನೀನು ಸಾಯಬೇಕಾದರೂ ನಂಬಿಗಸ್ತನಾಗಿರು; ನಾನು ನಿನಗೆ ಜೀವವೆಂಬ ಜಯಮಾಲೆಯನ್ನು ಕೊಡುವೆನು.


ಚೆನ್ನಾಗಿ ಓಡುತ್ತಾ ಇದ್ದಿರಿ; ನೀವು ಸತ್ಯವನ್ನು ಅನುವರ್ತಿಸದಂತೆ ಯಾರು ನಿಮ್ಮನ್ನು ತಡೆದರು?


ಮತ್ತು ನನ್ನ ಹೆಸರಿನ ನಿವಿುತ್ತವಾಗಿ ನಿಮ್ಮನ್ನು ಎಲ್ಲರೂ ಹಗೆಮಾಡುವರು. ಆದರೆ ಕಡೇವರೆಗೂ ತಾಳುವವನು ರಕ್ಷಣೆ ಹೊಂದುವನು.


ಯೆಹೋವನನ್ನು ಆಶ್ರಯಿಸದೆ ಯೆಹೋವನ ದರ್ಶನವನ್ನು ಬಯಸದೆ ಯೆಹೋವನ ಮಾರ್ಗಬಿಟ್ಟವರನ್ನೂ ಧ್ವಂಸಪಡಿಸುವೆನು.


ಅವನು ಮಾಡಿದ ಯಾವ ಅಪರಾಧವೂ ಅವನ ಲೆಕ್ಕಕ್ಕೆ ಸೇರಿಸಲ್ಪಡದು, ಅವನು ಮಾಡುತ್ತಿರುವ ಸದ್ಧರ್ಮದಿಂದಲೇ ಅವನು ಬಾಳುವನು.


ಯೆಹೋವನು ಡೊಂಕುದಾರಿಹಿಡಿದವರನ್ನು ಪಾತಕಿಗಳ ಗತಿಗೆ ಹೋಗಮಾಡಲಿ. ಇಸ್ರಾಯೇಲ್ಯರಿಗೆ ಶುಭವುಂಟಾಗಲಿ.


ಇವರು ಸಮುದ್ರದೊಳಗಿರುವ ಗುಪ್ತವಾದ ಬಂಡೆಗಳಂತಿದ್ದು ನಿಮ್ಮ ಪ್ರೇಮಭೋಜನಗಳಲ್ಲಿ ಸೇರಿ ತಿಂದು ಕುಡಿಯುತ್ತಾರೆ; ನಿರ್ಭಯವಾಗಿ ಸ್ವಂತ ಹೊಟ್ಟೆಯನ್ನೇ ನೋಡಿಕೊಳ್ಳುವ ಕುರುಬರಾಗಿದ್ದಾರೆ. ಇವರು ಗಾಳಿಯಿಂದ ಹೊಡಿಸಿಕೊಂಡು ಹೋಗುವ ನೀರಿಲ್ಲದ ಮೇಘಗಳೂ, ಎಲೆಗಳುದುರಿ ಹಣ್ಣುಬಿಡದೆ ಒಣಗಿಹೋಗಿ ಬೇರು ಸಹಿತ ಕಿತ್ತುಬಿದ್ದ ಮರಗಳೂ,


ಆದದರಿಂದ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರೆಂದು ನಿಮಗೆ ಹೇಳಿದೆನು; ನನ್ನನ್ನು ಆತನೆಂದು ನೀವು ನಂಬದೆ ಹೋದರೆ ನಿಮ್ಮ ಪಾಪಗಳಲ್ಲಿಯೇ ಸಾಯುವಿರೆಂದು ಹೇಳಿದನು.


ಯೇಸು ತಿರಿಗಿ ಅವರಿಗೆ - ನಾನು ಹೋಗುತ್ತೇನೆ; ನೀವು ನನ್ನನ್ನು ಹುಡುಕುವಿರಿ; ಮತ್ತು ನಿಮ್ಮ ಪಾಪದಲ್ಲೇ ಸಾಯುವಿರಿ. ನಾನು ಹೋಗುವಲ್ಲಿಗೆ ನೀವು ಬರಲಾರಿರಿ ಅಂದನು.


ಹೀಗಿರಲು, ನರಪುತ್ರನೇ, ಇಸ್ರಾಯೇಲ್ ವಂಶದವರಿಗೆ ಈ ಮಾತನ್ನು ಹೇಳು - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಿಮ್ಮ ಪಿತೃಗಳು ಇನ್ನೂ ಒಂದು ದ್ರೋಹವನ್ನು ಮಾಡಿ ನನ್ನನ್ನು ದೂಷಿಸಿದ್ದಾರೆ.


ಇವನ ತಂದೆಯೋ ಸ್ವಕುಲದವರನ್ನು ಬಹಳವಾಗಿ ಅರೆದು ಸುಲಿದು ಸ್ವಜನರ ನಡುವೆ ಕೆಟ್ಟದನ್ನು ನಡಿಸಿದ ಕಾರಣ ಇಗೋ, ತನ್ನ ಅಧರ್ಮದಿಂದಲೇ ಸಾಯುವನು.


ದುಷ್ಟನು ವಿಪತ್ತಿಗೊಳಗಾಗಿ ಹಾಳಾಗುವನು; ಶಿಷ್ಟನು ಮರಣಕಾಲದಲ್ಲಿಯೂ ಆಶ್ರಯಹೊಂದುವನು.


ಅವನು ಯಾಜಕನಾದ ಯೆಹೋಯಾದನ ಜೀವಮಾನದಲ್ಲೆಲ್ಲಾ ಯೆಹೋವನ ಚಿತ್ತಾನುಸಾರವಾಗಿ ನಡೆದುಕೊಳ್ಳುತ್ತಿದ್ದನು.


ಇಷ್ಟು ಬುದ್ಧಿಯಿಲ್ಲದವರಾಗಿದ್ದೀರಾ? ದೇವರಾತ್ಮಾನುಸಾರವಾಗಿ ಪ್ರಾರಂಭಿಸಿ ಈಗ ಬಹಿರಾಚಾರಗಳಿಂದ ಸಿದ್ಧಿಗೆ ಬರಬೇಕೆಂದಿದ್ದೀರಾ?


ಆಮೇಲೆ ನೀವು ಮನಸ್ಸನ್ನು ಬೇರೆ ಮಾಡಿಕೊಂಡಿರಿ; ಸ್ವತಂತ್ರರನ್ನಾಗಿ ಬಿಟ್ಟಿದ್ದವರನ್ನು ಪುನಃ ದಾಸದಾಸಿಯರನ್ನಾಗಿ ಸೇರಿಸಿಕೊಂಡು ಅಧೀನಮಾಡಿಕೊಂಡು ನನ್ನ ನಾಮವನ್ನು ಅಪಕೀರ್ತಿಗೆ ಗುರಿಮಾಡಿದಿರಿ.


ನಾನು ಅವನಿಗೆ ನನ್ನ ಬಲೆಯೊಡ್ಡುವೆನು, ನಾನು ಹಾಕಿದ ಉರುಲಿನಲ್ಲಿ ಸಿಕ್ಕಿಬೀಳುವನು, ಅವನನ್ನು ಬಾಬೆಲಿಗೆ ತಂದು ಅಲ್ಲೇ ಅವನೊಂದಿಗೆ ವಾದಿಸಿ ಅವನು ನನಗೆ ಮಾಡಿದ ಅಪರಾಧವನ್ನು ಅವನ ಮೇಲೆ ಹೊರಿಸುವೆನು.


ಆದರೆ ಕಾವಲುಗಾರನು ಬೀಳುವ ಖಡ್ಗವನ್ನು ನೋಡಿಯೂ ಕೊಂಬನ್ನೂದದೆ ಸ್ವಜನರನ್ನು ಎಚ್ಚರಿಸದೆ ಇರುವಲ್ಲಿ ಖಡ್ಗವು ಬಿದ್ದು ಆ ಜನರೊಳಗೆ ಯಾವನನ್ನೇ ಆಗಲಿ ನಾಶಮಾಡಿದರೆ ತನ್ನ ಅಧರ್ಮದಲ್ಲೇ ನಾಶಗೊಂಡ ಆ ಮನುಷ್ಯನ ಮರಣಕ್ಕೆ ಹೊಣೆಯಾದ ಕಾವಲುಗಾರನಿಗೆ ಮುಯ್ಯಿತೀರಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು