Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 18:26 - ಕನ್ನಡ ಸತ್ಯವೇದವು J.V. (BSI)

26 ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು ಅಧರ್ಮ ಮಾಡಿ ಅದರಲ್ಲಿ ಸತ್ತರೆ ತಾನು ಮಾಡಿದ ಅಧರ್ಮದಿಂದಲೇ ಸಾಯಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು, ಅಧರ್ಮಮಾಡಿ, ಅದರಲ್ಲಿ ಸತ್ತರೆ ತಾನು ಮಾಡಿದ ಅಧರ್ಮದಿಂದಲೇ ಸಾಯಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು ಅಧರ್ಮದಿಂದಲೇ ಸಾಯಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಒಬ್ಬ ಒಳ್ಳೆಯವನು ಬದಲಾವಣೆ ಹೊಂದಿ ಕೆಟ್ಟಕಾರ್ಯಗಳನ್ನು ಮಾಡಿದರೆ, ಅವನ ದುಷ್ಟತ್ವಕ್ಕಾಗಿ ಅವನು ಸಾಯಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಒಬ್ಬ ನೀತಿವಂತನು ತನ್ನ ನೀತಿಯನ್ನು ಬಿಟ್ಟು ಪಾಪವನ್ನು ಮಾಡಿದರೆ, ಅವನು ಅದಕ್ಕಾಗಿ ಸಾಯಬೇಕು; ಹೌದು, ಅವನು ಮಾಡಿದ ಪಾಪದಿಂದಲೇ ಅವನು ಸಾಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 18:26
11 ತಿಳಿವುಗಳ ಹೋಲಿಕೆ  

ಆದರೆ ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು ಅಧರ್ಮಮಾಡಿ ದುಷ್ಟನು ನಡಿಸುವ ದುರಾಚಾರಗಳನ್ನೆಲ್ಲಾ ನಡಿಸಿದರೆ ಅವನು ಬಾಳುವನೋ? ಅವನು ಮಾಡಿದ ಯಾವ ಸುಕೃತ್ಯವೂ ಅವನ ಲೆಕ್ಕಕ್ಕೆ ಸೇರಿಸಲ್ಪಡದು, ಅವನು ಮಾಡುತ್ತಿರುವ ಪಾಪಾಪರಾಧಗಳಿಂದಲೇ ಸಾಯುವನು.


ಆದರೆ ನೀವು - ಕರ್ತನ ಕ್ರಮವು ಸಮವಲ್ಲ ಎಂದು ಹೇಳುತ್ತಿದ್ದೀರಿ; ಇಸ್ರಾಯೇಲ್ ವಂಶದವರೇ, ನನ್ನ ಕ್ರಮವು ಸಮವಲ್ಲವೋ? ನಿಮ್ಮ ಕ್ರಮವೇ ಸಮವಲ್ಲವಷ್ಟೆ.


ದುಷ್ಟನು ತಾನು ಮಾಡುತ್ತಿದ್ದ ದುಷ್ಟತನವನ್ನು ಬಿಟ್ಟು ನೀತಿನ್ಯಾಯಗಳನ್ನು ನಡಿಸಿದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುವನು.


ನಾನು ಶಿಷ್ಟನಿಗೆ - ನೀನು ಬಾಳೇ ಬಾಳುವಿ ಎಂದು ಹೇಳಲು ಅವನು ತನ್ನ ಪುಣ್ಯದ ಮೇಲೆ ಭರವಸವಿಟ್ಟು ಪಾಪ ಮಾಡಿದರೆ ಅವನು ಮಾಡಿದ ಯಾವ ಸುಕೃತ್ಯವೂ ಅವನ ಲೆಕ್ಕಕ್ಕೆ ಸೇರಿಸಲ್ಪಡದು; ಅವನು ಮಾಡುವ ಪಾಪದಿಂದಲೇ ಅವನು ಸಾಯುವನು.


ಯಾಜಕನು ಅವನಿಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡಿದಾಗ ಅವನು ಯಾವ ವಿಷಯದಲ್ಲಿ ಅಪರಾಧಕ್ಕೆ ಒಳಗಾಗಿದ್ದನೋ ಆ ವಿಷಯದಲ್ಲಿ ಅವನಿಗೆ ಕ್ಷಮಾಪಣೆಯಾಗುವದು.


ಅವರಾದರೋ ಕತ್ತಲ ಹಾದಿಗಳನ್ನು ಹಿಡಿಯಬೇಕೆಂದು ಧರ್ಮಮಾರ್ಗಗಳನ್ನು ತೊರೆದುಬಿಡುವರು;


ಇದಲ್ಲದೆ ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು ಅಧರ್ಮಮಾಡಿ ನಾನು ಅವನ ಮುಂದೆ ಒಡ್ಡಿದ ಆಟಂಕವನ್ನು ಎಡವಿದರೆ ಅವನು ಸತ್ತೇ ಸಾಯುವನು; ನೀನು ಅವನನ್ನು ಎಚ್ಚರಿಸದೆಹೋದ ಕಾರಣ ಅವನು ತನ್ನ ಪಾಪದಿಂದ ಸಾಯಬೇಕಾಯಿತು. ಅವನು ಮಾಡಿದ ಸುಕೃತ್ಯಗಳು ಲೆಕ್ಕಕ್ಕೆ ಬಾರವು; ಅವನ ಮರಣಕ್ಕಾಗಿ ನಿನಗೇ ಮುಯ್ಯಿತೀರಿಸುವೆನು.


ಇವನ ತಂದೆಯೋ ಸ್ವಕುಲದವರನ್ನು ಬಹಳವಾಗಿ ಅರೆದು ಸುಲಿದು ಸ್ವಜನರ ನಡುವೆ ಕೆಟ್ಟದನ್ನು ನಡಿಸಿದ ಕಾರಣ ಇಗೋ, ತನ್ನ ಅಧರ್ಮದಿಂದಲೇ ಸಾಯುವನು.


ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು ಅಧರ್ಮಮಾಡಿದರೆ ಆ ಅಧರ್ಮದಿಂದಲೇ ಸಾಯುವನು.


ನೀವು ಕೇಳಿದಂಥ ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲ್ಪಟ್ಟಂಥ ಸುವಾರ್ತೆಯಿಂದ ಉಂಟಾದ ನಿರೀಕ್ಷೆಯನ್ನು ಬಿಟ್ಟು ತೊಲಗಿಹೋಗದೆ ಅಸ್ತಿವಾರದ ಮೇಲೆ ನಿಂತು ಸ್ಥಿರವಾಗಿದ್ದು ನಂಬಿಕೆಯಲ್ಲಿ ನೆಲೆಗೊಂಡಿರುವದಾದರೆ ಆ ಪದವಿ ನಿಮಗೆ ಪ್ರಾಪ್ತವಾಗುವದು.


ನೀತಿಗೆ ವಿರುದ್ಧವಾದದ್ದೆಲ್ಲಾ ಪಾಪವಾಗಿದೆ; ಆದರೂ ಮರಣಕರವಲ್ಲದ ಪಾಪವುಂಟು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು