Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 18:30 - ಕನ್ನಡ ಸತ್ಯವೇದವು J.V. (BSI)

30 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪುಮಾಡುವೆನು; ಅಧರ್ಮವು ನಿಮ್ಮನ್ನು ನಾಶಮಾಡದಂತೆ ತಿರುಗಿಕೊಂಡು ನಿಮ್ಮ ಅಪರಾಧಗಳನ್ನೆಲ್ಲಾ ಬಿಟ್ಟುಬಿಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪುಮಾಡುವೆನು; ಅಧರ್ಮವು ನಿಮ್ಮನ್ನು ನಾಶಮಾಡದಂತೆ ತಿರುಗಿಕೊಂಡು ನಿಮ್ಮ ಅಪರಾಧಗಳನ್ನೆಲ್ಲಾ ಬಿಟ್ಟುಬಿಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ಇಸ್ರಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪು ನೀಡುವೆನು; ಅಧರ್ಮವು ನಿಮ್ಮನ್ನು ನಾಶಮಾಡದಂತೆ ಪಾಪಕ್ಕೆ ವಿಮುಖರಾಗಿರಿ; ನಿಮ್ಮ ಅಪರಾಧಗಳನ್ನೆಲ್ಲಾ ತೊರೆದುಬಿಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಇಸ್ರೇಲರೇ, ನಾನು ಪ್ರತಿಯೊಬ್ಬನನ್ನು ಅವನವನ ಕಾರ್ಯಗಳ ಪ್ರಕಾರ ನ್ಯಾಯತೀರಿಸುವೆನು” ಎಂದು ಹೇಳಿದನು. ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಆದ್ದರಿಂದ ನನ್ನ ಬಳಿಗೆ ಬನ್ನಿರಿ, ದುಷ್ಟತನ ಮಾಡುವದನ್ನು ನಿಲ್ಲಿಸಿರಿ, ಪಾಪವು ನಿಮ್ಮ ನಾಶನಕ್ಕೆ ಕಾರಣವಾಗದಂತೆ ಎಚ್ಚರಿಕೆಯಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 “ಆದ್ದರಿಂದ ಇಸ್ರಾಯೇಲ್ ಜನರೇ, ನಿಮ್ಮ ನಿಮ್ಮ ಮಾರ್ಗಗಳ ಪ್ರಕಾರ ಪ್ರತಿಯೊಬ್ಬನಿಗೆ ನ್ಯಾಯತೀರಿಸುವೆನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ನಿಮ್ಮ ದುಷ್ಟತನಗಳನ್ನೆಲ್ಲಾ ಬಿಟ್ಟು ತಿರುಗಿಕೊಳ್ಳಿರಿ. ಆಗ ಪಾಪವು ನಿಮ್ಮ ಪತನಕ್ಕೆ ಕಾರಣವಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 18:30
44 ತಿಳಿವುಗಳ ಹೋಲಿಕೆ  

ಮನುಷ್ಯಕುಮಾರನು ತನ್ನ ತಂದೆಯ ಪ್ರಭಾವದೊಡನೆ ತನ್ನ ದೂತರ ಸಮೇತವಾಗಿ ಬರುವನು; ಆವಾಗ ಆತನು ಒಬ್ಬೊಬ್ಬನಿಗೆ ಅವನವನ ನಡತೆಗೆ ತಕ್ಕ ಫಲವನ್ನು ಕೊಡುವನು.


ಪರಲೋಕರಾಜ್ಯವು ಸಮೀಪವಾಯಿತು; ದೇವರ ಕಡೆಗೆ ತಿರುಗಿಕೊಳ್ಳಿರಿ ಎಂದು ಯೂದಾಯದ ಅಡವಿಯಲ್ಲಿ ಸಾರಿ ಹೇಳುತ್ತಾ ಬಂದನು.


ಆದರೆ ದುಷ್ಟನು ತಾನು ಮಾಡುತ್ತಿದ್ದ ಪಾಪಗಳನ್ನೆಲ್ಲಾ ಬಿಟ್ಟುಬಿಟ್ಟು ನನ್ನ ಸಕಲ ವಿಧಿಗಳನ್ನು ಕೈಕೊಂಡು ನೀತಿನ್ಯಾಯಗಳನ್ನು ನಡಿಸಿದರೆ ಸಾಯನು, ಬಾಳೇ ಬಾಳುವನು.


ಹಾಗೆ ಭಾವಿಸಕೂಡದೆಂದು ನಿಮಗೆ ಹೇಳುತ್ತೇನೆ. ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ನೀವೆಲ್ಲರೂ ಹಾಗೆಯೇ ಹಾಳಾಗಿ ಹೋಗುವಿರಿ.


ಈಗಲೇ ನಿನಗೆ ಪ್ರಳಯವು ಬಂದುಬಿಟ್ಟಿತು; ನಾನು ನನ್ನ ಕೋಪವನ್ನು ನಿನ್ನ ಮೇಲೆ ಬರಮಾಡಿ ನಿನ್ನ ನಡತೆಗೆ ತಕ್ಕಂತೆ ನ್ಯಾಯತೀರಿಸಿ ನಿನ್ನ ಸಮಸ್ತ ಅಸಹ್ಯಕಾರ್ಯಗಳ ಫಲವನ್ನು ನಿನಗೆ ಉಣ್ಣಿಸುವೆನು.


[ಇಸ್ರಾಯೇಲೇ,] ನೀನು ನಿನ್ನ ದೇವರ ಸಹಾಯದಿಂದ ತಿರುಗಿಕೋ; ನೀತಿಪ್ರೀತಿಗಳನ್ನನುಸರಿಸಿ ನಿನ್ನ ದೇವರನ್ನು ಎಡೆಬಿಡದೆ ನಿರೀಕ್ಷಿಸಿಕೊಂಡಿರು.


ಆದಕಾರಣ ನೀನು ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀವು ನಿಮ್ಮ ಬೊಂಬೆಗಳನ್ನು ತೊರೆದುಬಿಟ್ಟು ಹಿಂದಿರುಗಿರಿ, ನಿಮ್ಮ ಎಲ್ಲಾ ಅಸಹ್ಯವಸ್ತುಗಳ ಕಡೆಗೆ ಬೆನ್ನುಮಾಡಿರಿ.


ಹಾಗಲ್ಲವೆಂದು ನಿಮಗೆ ಹೇಳುತ್ತೇನೆ. ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ನೀವೆಲ್ಲರೂ ಅವರಂತೆ ಹಾಳಾಗಿ ಹೋಗುವಿರಿ ಎಂದು ಹೇಳಿದನು.


ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಂತೆಯೇ ಈ ವಿಪತ್ತೆಲ್ಲಾ ನಮ್ಮ ಮೇಲೆ ಬಂದಿದೆ; ಆದರೂ ನಾವು ನಮ್ಮ ದುರ್ಮಾರ್ಗಗಳನ್ನು ತೊರೆದುಬಿಟ್ಟು ನಿನ್ನ ಸತ್ಯೋಪದೇಶವನ್ನು ಗ್ರಹಿಸಿ ನಡೆಯುವಂತೆ ನಮ್ಮ ದೇವರಾದ ಯೆಹೋವನೆಂಬ ನಿನ್ನ ದಯೆಯನ್ನು ಬೇಡಿಕೊಳ್ಳಲಿಲ್ಲ.


ಆದರೆ ನೀವು ಯೆಹೋವನ ಕ್ರಮವು ಸಮವಲ್ಲವೆಂದು ಹೇಳುತ್ತಿದ್ದೀರಿ; ಇಸ್ರಾಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪುಮಾಡುವೆನು.


ನನ್ನ ಜೀವದಾಣೆ, ದುಷ್ಟನ ಸಾವಿನಲ್ಲಿ ನನಗೆ ಲೇಶವಾದರೂ ಸಂತೋಷವಿಲ್ಲ; ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ಬಾಳುವದೇ ನನಗೆ ಸಂತೋಷ. ಇಸ್ರಾಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳನ್ನು ಬಿಡಿರಿ, ಬಿಟ್ಟುಬಿಡಿರಿ; ನೀವು ಸಾಯಲೇಕೆ? ಇದು ಕರ್ತನಾದ ಯೇಹೋವನ ನುಡಿ.


ಒಳ್ಳೇದಾಗಲಿ ಕೆಟ್ಟದಾಗಲಿ ಸಕಲ ರಹಸ್ಯ ಸಂಗತಿಗಳನ್ನು ವಿಮರ್ಶಿಸುವ ನ್ಯಾಯವಿಚಾರಣೆಗೆ ದೇವರು ಪ್ರತಿಯೊಂದು ಕಾರ್ಯವನ್ನು ಗುರಿಮಾಡುವನು.


ಹಾಗಾದರೆ ನಿಮ್ಮ ಮನಸ್ಸು ದೇವರ ಕಡೆಗೆ ತಿರುಗಿತೆಂಬದನ್ನು ತಕ್ಕ ಫಲದಿಂದ ತೋರಿಸಿರಿ.


ನೀನು ನಿನ್ನ ಮೊಂಡತನವನ್ನೂ ಪಶ್ಚಾತ್ತಾಪವಿಲ್ಲದ ಮನಸ್ಸನ್ನೂ ಅನುಸರಿಸುವದರಿಂದ ನಿನಗೋಸ್ಕರ ದೇವರ ಕೋಪವನ್ನು ಕೂಡಿಟ್ಟುಕೊಳ್ಳುತ್ತಾ ಇದ್ದೀ. ದೇವರ ಕೋಪವೂ ನ್ಯಾಯವಾದ ತೀರ್ಪು ಪ್ರಕಟವಾಗುವ ದಿವಸ ಬರುತ್ತದಷ್ಟೆ.


ಇಗೋ, ಬೇಗ ಬರುತ್ತೇನೆ; ನಾನು ಪ್ರತಿಯೊಬ್ಬನಿಗೆ ಅವನವನ ನಡತೆಯ ಪ್ರಕಾರ ಕೊಡತಕ್ಕ ಪ್ರತಿಫಲವು ನನ್ನ ಕೈಯಲ್ಲಿ ಅದೆ.


ಇದಲ್ಲದೆ ಸತ್ತವರಾದ ದೊಡ್ಡವರೂ ಚಿಕ್ಕವರೂ ಸಿಂಹಾಸನದ ಮುಂದೆ ನಿಂತಿರುವದನ್ನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು; ಮತ್ತು ಜೀವಬಾಧ್ಯರ ಪಟ್ಟಿ ಎಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು; ಆ ಪುಸ್ತಕಗಳಲ್ಲಿ ಬರೆದಿದ್ದ ಸಂಗತಿಗಳ ಆಧಾರದಿಂದ ಅವರವರ ಕೃತ್ಯಗಳ ಪ್ರಕಾರ ಸತ್ತವರಿಗೆ ನ್ಯಾಯತೀರ್ಪಾಯಿತು.


ಆದದರಿಂದ ದೇವರ ಕಡೆಗೆ ತಿರುಗಿಕೋ, ತಿರುಗಿಕೊಳ್ಳದಿದ್ದರೆ ನಾನು ಬೇಗನೆ ನಿನ್ನ ಬಳಿಗೆ ಬಂದು ನನ್ನ ಬಾಯಕತ್ತಿಯಿಂದ ಅವರ ಮೇಲೆ ಯುದ್ಧಮಾಡುವೆನು.


ಆದದರಿಂದ ನೀನು ಎಲ್ಲಿಂದ ಬಿದ್ದಿದ್ದೀಯೋ ಅದನ್ನು ನಿನ್ನ ನೆನಪಿಗೆ ತಂದುಕೊಂಡು ದೇವರ ಕಡೆಗೆ ತಿರುಗಿಕೋ. ನೀನು ಮೊದಲು ಮಾಡುತ್ತಿದ್ದ ಕೃತ್ಯಗಳನ್ನು ಮಾಡು. ನೀನು ದೇವರ ಕಡಗೆ ತಿರುಗಿಕೊಳ್ಳದೆ ಹೋದರೆ ನಾನು ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದುಹಾಕುವೆನು.


ಪ್ರತಿಯೊಬ್ಬನ ಕೆಲಸವನ್ನು ನೋಡಿ ಪಕ್ಷಪಾತವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆಯೆಂದು ಕರೆಯುವವರಾಗಿರಲಾಗಿ ಈ ಲೋಕದಲ್ಲಿ ನಿಮ್ಮ ಪ್ರವಾಸಕಾಲವನ್ನು ಭಯಭಕ್ತಿಯುಳ್ಳವರಾಗಿ ಕಳೆಯಿರಿ.


ಆಮೇಲೆ ಆಶೆಯು ಬಸುರಾಗಿ ಪಾಪವನ್ನು ಹೆರುತ್ತದೆ; ಪಾಪವು ತುಂಬಾ ಬೆಳೆದು ಮರಣವನ್ನು ಹಡೆಯುತ್ತದೆ.


ಮತ್ತು ಎಲ್ಲಾ ದೇಶಗಳ ಜನರು ಆತನ ಮುಂದೆ ಕೂಡಿಸಲ್ಪಡುವರು. ಕುರುಬನು ಆಡುಗಳನ್ನೂ ಕುರಿಗಳನ್ನೂ ಬೇರೆಬೇರೆಮಾಡುವ ಪ್ರಕಾರ ಆತನು ಅವರನ್ನು ಬೇರೆಬೇರೆಮಾಡಿ


ಆಗ ಶಿಷ್ಟರಿಗೂ ದುಷ್ಟರಿಗೂ ದೇವರನ್ನು ಸೇವಿಸುವವರಿಗೂ ಸೇವಿಸದವರಿಗೂ ಇರುವ ತಾರತಮ್ಯವನ್ನು ಮತ್ತೆ ಕಾಣುವಿರಿ.


ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನೇ ಕೊಬ್ಬಿದ ಟಗರುಹೋತಗಳಿಗೂ ಬಡ ಕುರಿಮೇಕೆಗಳಿಗೂ ನ್ಯಾಯತೀರಿಸುವೆನು.


ಆದರೆ ನೀನು ದುಷ್ಟನನ್ನು ದುರ್ಮಾಗದಿಂದ ತಪ್ಪಿಸಲು ಅವನನ್ನು ಎಚ್ಚರಿಸಿದರೂ ಅವನು ಅದನ್ನು ಬಿಡದೆಹೋದರೆ ತನ್ನ ಅಪರಾಧದಲ್ಲೇ ಸಾಯುವನು; ನೀನೋ ನಿನ್ನ ಪ್ರಾಣವನ್ನು ಉಳಿಸಿಕೊಂಡಿರುವಿ.


ಅರಸನು ದುಃಖಿಸುವನು. ದಿಗಿಲು ಪ್ರಭುವನ್ನು ಮುಸುಕುವದು, ಸಾಧಾರಣ ಜನರ ಕೈಗಳು ತತ್ತರಿಸುವವು; ನಾನು ಅವರ ದುರ್ನಡತೆಗೆ ತಕ್ಕ ಪ್ರತೀಕಾರವನ್ನು ಮಾಡಿ ಅವರ ದುಷ್ಕರ್ಮಗಳಿಗೆ ಸರಿಯಾಗಿ ದಂಡನೆಯನ್ನು ವಿಧಿಸುವೆನು; ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವದು.


ಆಗ ನಾನು ಮನಸ್ಸಿನಲ್ಲಿ - ದೇವರು ಧರ್ಮಿಗಳಿಗೂ ಅಧರ್ಮಿಗಳಿಗೂ ನ್ಯಾಯತೀರಿಸುವನು.; ಆತನ ನ್ಯಾಯಕ್ರಮದಲ್ಲಿ ಎಲ್ಲಾ ಕೆಲಸಕಾರ್ಯಗಳಿಗೂ ತಕ್ಕ ಸಮಯವುಂಟಲ್ಲವೆ ಅಂದುಕೊಂಡೆನು.


ಮೊದಲು ದಮಸ್ಕದವರಿಗೆ, ಆಮೇಲೆ ಯೆರೂಸಲೇವಿುನಲ್ಲಿಯೂ ಯೂದಾಯದ ಎಲ್ಲಾ ಸೀಮೆಯಲ್ಲಿಯೂ ಇರುವವರಿಗೆ ಮತ್ತು ಅನ್ಯಜನರಿಗೆ ಸಹ - ನೀವು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ ಮಾನಸಾಂತರಕ್ಕೆ ಯೋಗ್ಯವಾದ ಕೃತ್ಯಗಳನ್ನು ಮಾಡಬೇಕೆಂತಲೂ ಸಾರಿದೆನು.


ಆದರೆ ಚೀಯೋನಿಗೂ ದ್ರೋಹವನ್ನು ಬಿಟ್ಟುಬಿಟ್ಟ ಯಾಕೋಬ್ಯರ ಬಳಿಗೂ ವಿಮೋಚಕನಾಗಿ ಬರುವನು. ಯೆಹೋವನೇ ಇದನ್ನು ನುಡಿದಿದ್ದಾನೆ.


ಆತನು ನಿಮಗೆ ಹೇಳಿಕಳುಹಿಸಿದ ಮಾತೇನಂದರೆ - ನೀವೆಲ್ಲರು ನಿಮ್ಮ ನಿಮ್ಮ ದುರ್ಮಾರ್ಗದಿಂದಲೂ ದುಷ್ಕೃತ್ಯಗಳಿಂದಲೂ ಹಿಂದಿರುಗಿರಿ, ನಿಮಗೆ ಶಾಶ್ವತ ಸ್ವಾಸ್ತ್ಯವಾಗಿರಲಿ ಎಂದು ಯೆಹೋವನು ಪುರಾತನ ಕಾಲದಲ್ಲಿ ನಿಮಗೂ ನಿಮ್ಮ ಪಿತೃಗಳಿಗೂ ಅನುಗ್ರಹಿಸಿದ ದೇಶದೊಳಗೆ ನೆಲೆಗೊಳ್ಳಿರಿ;


ಇದಲ್ಲದೆ ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿತ್ಯವೂ ಕಳುಹಿಸುತ್ತಾ - ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ, ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸದಿರಿ; ಹೀಗೆ ಮಾಡಿದರೆ ನಾನು ನಿಮಗೂ ನಿಮ್ಮ ಪಿತೃಗಳಿಗೂ ದಯಪಾಲಿಸಿದ ದೇಶದಲ್ಲಿ ನೀವು ಸುಖವಾಸಿಗಳಾಗಿರುವಿರಿ ಎಂದು ಹೇಳಿಸಿದರೂ ನೀವು ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.


ಆದರೆ ಇಸ್ರಾಯೇಲ್ ವಂಶದವರು ಕರ್ತನ ಕ್ರಮವು ಸಮವಲ್ಲ ಎಂದು ಹೇಳುತ್ತಿದ್ದಾರೆ; ಇಸ್ರಾಯೇಲ್ ವಂಶದವರೇ, ನನ್ನ ಕ್ರಮವು ಸಮವಲ್ಲವೋ? ನಿಮ್ಮ ಕ್ರಮ ಸಮವಲ್ಲವಷ್ಟೆ.


ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ; ಇದು ಸಾಗುವದು, ನಾನು ನೆರವೇರಿಸುವೆನು; ಹಿಂದೆಗೆಯೆನು, ಕ್ಷವಿುಸೆನು, ಕರುಣಿಸೆನು; ನಿನ್ನ ದುರ್ಮಾರ್ಗ ದುಷ್ಕೃತ್ಯಗಳಿಗೆ ಸರಿಯಾಗಿ ನಿನಗೆ ನ್ಯಾಯತೀರ್ಪು ಆಗುವದು; ಇದು ಕರ್ತನಾದ ಯೇಹೋವನ ನುಡಿ.


ಈಗಲಾದರೂ ತಮ್ಮ ದೇವದ್ರೋಹವನ್ನು ಮತ್ತು ಅರಸರ ಶವಗಳನ್ನು ನನಗೆ ದೂರಮಾಡಲಿ; ಆಗ ನಾನು ಅವರ ಮಧ್ಯೆ ಸದಾ ವಾಸಿಸುವೆನು.


ಈಗ ನಿಮ್ಮ ಪಿತೃಗಳ ದೇವರಾದ ಯೆಹೋವನಿಗೆ ನಿಮ್ಮ ಪಾಪಗಳನ್ನು ಅರಿಕೆಮಾಡಿ ಆತನ ಚಿತ್ತಕ್ಕನುಸಾರವಾಗಿ ದೇಶನಿವಾಸಿಗಳನ್ನೂ ಅನ್ಯಜನರಿಂದ ತಂದ ಹೆಂಡತಿಯರನ್ನೂ ಬಿಟ್ಟು ಬೇರೆಯಾಗಿರಿ ಅನ್ನಲು


ಉದಯವು ಬರುತ್ತದೆ, ರಾತ್ರಿಯೂ ಬರುತ್ತದೆ; ವಿಚಾರಿಸಬೇಕಾದರೆ ವಿಚಾರಿಸಿರಿ, ತಿರಿಗಿ ಬನ್ನಿರಿ ಎಂದು ಕಾವಲುಗಾರನು ಹೇಳಿದನು.


ಭ್ರಷ್ಟರಾದ ಮಕ್ಕಳೇ, ಹಿಂದಿರುಗಿರಿ, ನಿಮ್ಮ ಭ್ರಷ್ಟತ್ವವನ್ನು ಪರಿಹರಿಸುವೆನು [ಎಂದು ಯೆಹೋವನು ಅನ್ನುತ್ತಾನೆ. ಅದಕ್ಕೆ ಜನರು] - ಇಗೋ, ನಿನ್ನ ಬಳಿಗೆ ಬಂದೆವು. ನೀನು ಯೆಹೋವನು, ನಮ್ಮ ದೇವರು.


ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಹೀಗನ್ನುತ್ತಾನೆ - ನೀವು ನಿಮ್ಮ ನಡತೆಯನ್ನೂ ಕೃತ್ಯಗಳನ್ನೂ ತಿದ್ದಿಕೊಳ್ಳಿರಿ; ಹೀಗೆ ಮಾಡಿದರೆ ನಾನು ನಿಮ್ಮನ್ನು ಈ ಸ್ಥಳದಲ್ಲಿ ನೆಲೆಗೊಳಿಸುವೆನು.


ಜನಾಂಗಗಳೊಳಗೆ ಅವರನ್ನು ಚದರಿಸಿ ದೇಶದೇಶಗಳಿಗೆ ತೂರಿಬಿಟ್ಟು ಅವರ ದುರ್ಮಾರ್ಗ ದುರಾಚಾರಗಳಿಗೆ ಸರಿಯಾಗಿ ದಂಡಿಸಿದೆನು.


ನಿಮ್ಮ ಪಿತೃಗಳಂತಿರಬೇಡಿರಿ; ಪೂರ್ವಕಾಲದ ಪ್ರವಾದಿಗಳು ಅವರಿಗೆ - ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನಿಮ್ಮ ದುರ್ಮಾರ್ಗ ದುಷ್ಕೃತ್ಯಗಳಿಂದ ಹಿಂದಿರುಗಿರಿ ಎಂದು ಸಾರಿದರೂ ಅವರು ನನ್ನ ಮಾತನ್ನು ಕಿವಿಗೊಟ್ಟು ಕೇಳಲಿಲ್ಲ; ಇದು ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು