Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 19:10 - ಕನ್ನಡ ಸತ್ಯವೇದವು J.V. (BSI)

10 ನಿನ್ನ ಹೆತ್ತ ತಾಯಿ ನೀರಾವರಿಯಲ್ಲಿ ನಾಟಿಕೊಂಡಿದ್ದ ದ್ರಾಕ್ಷಾಲತೆಯಾಗಿದ್ದಳು, ಆ ಲತೆಯು ತುಂಬಾ ತಂಪಿನಿಂದ ಫಲವತ್ತಾಗಿಯೂ ಪೊದೆಯಾಗಿಯೂ ಬೆಳೆದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 “‘ನಿನ್ನ ಹೆತ್ತ ತಾಯಿ ನೀರಾವರಿಯಲ್ಲಿ ನಾಟಿಕೊಂಡಿದ್ದ ದ್ರಾಕ್ಷಾಲತೆಯಾಗಿದ್ದಳು, ಆ ಲತೆಯು ತುಂಬಾ ನೀರಾವರಿಯಿಂದ ಫಲವತ್ತಾಗಿಯೂ, ಪೊದೆಯಾಗಿಯೂ ಬೆಳೆದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನಿನ್ನ ಹೆತ್ತ ತಾಯಿ ದ್ರಾಕ್ಷಾಲತೆಯಂತೆ ನೀರಾವರಿಯಲಿ ನಾಟಿದ್ದಾ ಲತೆಯಂತೆ ಬೆಳೆದಿತ್ತದು ಫಲವತ್ತಾಗಿ, ಹುಲುಸಾಗಿ, ಅತಿ ತಂಪಾಗಿಯೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “‘ನಿನ್ನ ತಾಯಿಯು ನೀರಾವರಿಯಲ್ಲಿ ನೆಟ್ಟ ದ್ರಾಕ್ಷಾಲತೆಯಂತಿದ್ದಳು. ಬೇಕಾದಷ್ಟು ನೀರು ಇದ್ದುದರಿಂದ ಅದು ಫಲಭರಿತವಾಗಿದ್ದು ಅನೇಕ ಕೊಂಬೆಗಳನ್ನು ಹೊಂದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ ‘ನಿನ್ನ ತಾಯಿ ನೀರಿನ ಬಳಿಯಲ್ಲಿ ನೆಟ್ಟ ದ್ರಾಕ್ಷಿ ಗಿಡದ ಹಾಗೆ ಇದ್ದಾಳೆ. ಅದು ಸಮೃದ್ಧಿಯಾದ ನೀರಾವರಿಯಿಂದ ಫಲವುಳ್ಳದ್ದಾಗಿಯೂ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 19:10
16 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವನು ಉತ್ತಮದೇಶಕ್ಕೆ ನಿಮ್ಮನ್ನು ಸೇರಿಸುತ್ತಾನೆ. ಆ ದೇಶದ ಹಳ್ಳಗಳಲ್ಲಿ ನೀರು ಯಾವಾಗಲೂ ಹರಿಯುತ್ತದೆ; ಮತ್ತು ತಗ್ಗುಗಳಲ್ಲಾಗಲಿ ಗುಡ್ಡಗಳಲ್ಲಾಗಲಿ ಎಲ್ಲಾ ಕಡೆಯೂ ಬಾವಿಗಳಲ್ಲಿಯೂ ಬುಗ್ಗೆಗಳಿಂದಲೂ ನೀರು ಉಕ್ಕುತ್ತದೆ.


ಅವರ ತಾಯಿಯು ಸೂಳೆತನ ಮಾಡಿದ್ದಾಳೆ, ಹೆತ್ತವಳು ನಾಚಿಕೆಗೇಡಿಯಾಗಿ ನಡೆದಿದ್ದಾಳೆ; ನನಗೆ ಬೇಕಾದ ಅನ್ನಪಾನಗಳನ್ನೂ ಉಣ್ಣೆನಾರುಗಳನ್ನೂ ತೈಲವನ್ನೂ ಪಾಯಸ ಪಾನಕಗಳನ್ನೂ ನನಗೆ ಕೊಡುವ ನನ್ನ ವಿುಂಡರ ಹಿಂದೆ ಹೋಗುವೆನು ಅಂದುಕೊಂಡಿದ್ದಾಳೆ.


ನಿಮ್ಮ ತಾಯಿಯ ಸಂಗಡ ವಾದಿಸಿರಿ, ವಾದಿಸಿರಿ; ಅವಳು ನನ್ನ ಹೆಂಡತಿಯಲ್ಲ. ನಾನು ಅವಳ ಗಂಡನಲ್ಲ; ಅವಳು ಸೂಳೆತನವನ್ನು ತನ್ನ ಮುಖದಿಂದ, ವ್ಯಭಿಚಾರದ ಬೆಡಗನ್ನು ತನ್ನ ಸ್ತನಮಧ್ಯದಿಂದ ತೊಲಗಿಸಲಿ;


ಆಹಾ, ನಿನ್ನ ತಾಯಿಯು ಸಿಂಹಗಳೊಳಗಿನ ಸಿಂಹಿ, ಪ್ರಾಯದ ಸಿಂಹಗಳ ನಡುವೆ ಮಲಗಿತು, ಮರಿಗಳನ್ನು ಸಾಕಿತು.


ಅದು ಗುಜ್ಜಾಗಿ ಬೆಳೆದು ದ್ರಾಕ್ಷಾಲತೆಯಾಗಿ ತುಂಬಾ ಹರಡಿಕೊಂಡು ತನ್ನ ರೆಂಬೆಗಳನ್ನು ಆ ಹದ್ದಿನ ಕಡೆಗೆ ಚಾಚಿ ಅದರ ಕೆಳಗೆ ತನ್ನ ಬೇರುಗಳನ್ನು ಬಿಟ್ಟಿತು; ಅದು ಲತೆಯಾಗಿ ರೆಂಬೆಗಳನ್ನು ಹರಡಿಸಿ ಚಿಗುರುಗಳನ್ನು ಹೊರಡಿಸಿತು.


ಅಲ್ಲಿ ನೀವು ದುರ್ಭಿಕ್ಷವನ್ನೇ ಕಾಣದೆ ಸಮೃದ್ಧಿಯಾಗಿ ಉಂಡು ಯಾವ ಕೊರತೆಯೂ ಇಲ್ಲದೆ ಇರುವಿರಿ. ಆ ದೇಶದಲ್ಲಿ ಕಬ್ಬಿಣದ ಕಲ್ಲು ಸಿಕ್ಕುತ್ತದೆ; ಅಲ್ಲಿಯ ಬೆಟ್ಟಗಳಲ್ಲಿ ತಾಮ್ರದ ಗಣಿಗಳುಂಟು.


ನಾನೇ ನಿಜವಾದ ದ್ರಾಕ್ಷೇಬಳ್ಳಿ. ನನ್ನ ತಂದೆ ತೋಟಗಾರನು.


ಅವನು ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದ ಹಾಗಿರುವನು. ಅಂಥ ಮರವು ತಕ್ಕ ಕಾಲದಲ್ಲಿ ಫಲಕೊಡುತ್ತದಲ್ಲಾ; ಅದರ ಎಲೆ ಬಾಡುವದೇ ಇಲ್ಲ. ಅದರಂತೆ ಅವನ ಕಾರ್ಯವೆಲ್ಲವೂ ಸಫಲವಾಗುವದು.


ಅಂತಃಪುರದಲ್ಲಿರುವ ನಿನ್ನ ಹೆಂಡತಿಯು ಫಲಭರಿತವಾದ ದ್ರಾಕ್ಷಾಲತೆಯಂತಿರುವಳು; ನಿನ್ನ ಸಂಗಡ ಊಟದ ಮಣೆಯ ಸುತ್ತಲೂ ಕೂತುಕೊಳ್ಳುವ ನಿನ್ನ ಮಕ್ಕಳು ಎಣ್ಣೇಮರದ ಸಸಿಗಳಂತಿರುವರು.


ಈಗ ಅದು ನೀರಿಲ್ಲದ ಬೆಂಗಾಡಿನಲ್ಲಿ ನಾಟಿಕೊಂಡಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು