Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 19:7 - ಕನ್ನಡ ಸತ್ಯವೇದವು J.V. (BSI)

7 ಅದು ಪಟ್ಟಣಗಳನ್ನು ಹಾಳುಮಾಡಿ [ಬಹುಮಂದಿ] ವಿಧವೆಯರಾದವರನ್ನು ಕಂಡಿತು, ಅದರ ಗರ್ಜನೆಯ ಶಬ್ದಕ್ಕೆ ದೇಶವೂ ಅದರಲ್ಲಿದ್ದದ್ದೆಲ್ಲವೂ ಕ್ಷೀಣವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅದು ಪಟ್ಟಣಗಳನ್ನು ಹಾಳುಮಾಡಿ, ಬಹಳ ಮಂದಿ ವಿಧವೆಯರಾದವರನ್ನು ಕೆಡಿಸಿತು, ಅದರ ಗರ್ಜನೆಯ ಶಬ್ದಕ್ಕೆ ದೇಶವು ಮತ್ತು ಅದರಲ್ಲಿದ್ದದ್ದೆಲ್ಲವೂ ಕ್ಷೀಣವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನೆಲಸಮ ಮಾಡಿತು ಪಟ್ಟಣಗಳನೆ ನಾಶಮಾಡಿತು ಕೋಟೆಕೊತ್ತಲುಗಳನೆ ನಾಡಿಗೆ ನಾಡೇ ನಡುಗಿತು ಅದರ ಗರ್ಜನೆಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅದು ಸ್ತ್ರೀಯರನ್ನು ವಿಧವೆಯರನ್ನಾಗಿ ಮಾಡಿತು; ಪಟ್ಟಣಗಳನ್ನು ನಿರ್ಜನವನ್ನಾಗಿ ಮಾಡಿತು; ಅದು ಗರ್ಜಿಸಿದಾಗ ದೇಶವೂ ಅದರಲ್ಲಿರುವ ಪ್ರತಿಯೊಂದೂ ಭಯಗೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವರ ಅರಮನೆಗಳನ್ನು ಹಾಳುಮಾಡಿತು, ಅವರ ನಗರಗಳನ್ನೂ ನಾಶಮಾಡಿತು, ಅದರ ಘರ್ಜನೆಯ ಶಬ್ದದಿಂದಾಗಿ ದೇಶವೂ, ಅದರಲ್ಲಿದ್ದ ಎಲ್ಲರೂ ದಂಗಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 19:7
14 ತಿಳಿವುಗಳ ಹೋಲಿಕೆ  

ನಾನು ನದೀಶಾಖೆಗಳನ್ನು ಬತ್ತಿಸಿ ದೇಶವನ್ನು ದುಷ್ಟರ ಕೈಗೆ ಮಾರಿಬಿಡುವೆನು; ಹೌದು, ದೇಶವನ್ನೂ ಅದರಲ್ಲಿನ ಸಮಸ್ತವನ್ನೂ ಅನ್ಯರ ಕೈಯಿಂದ ಹಾಳುಮಾಡಿಸುವೆನು; ಯೆಹೋವನಾದ ನಾನೇ ನುಡಿದಿದ್ದೇನೆ.


ಜನಾಂಗಗಳೇ, ನೀವೆಲ್ಲರೂ ಕೇಳಿರಿ; ಭೂಮಂಡಲವೇ, ಭೂವಿುಯಲ್ಲಿರುವ ಸಮಸ್ತವೇ, ಕಿವಿಗೊಡಿರಿ! ಕರ್ತನು, ಕರ್ತನಾದ ಯೆಹೋವನು ತನ್ನ ಪವಿತ್ರಾಲಯದೊಳಗಿಂದ ನಿಮಗೆ ವಿರುದ್ಧವಾಗಿ ಸಾಕ್ಷಿ ಕೊಡುತ್ತಾನೆ.


ಸೇನಾಧೀಶ್ವರದೇವರಾದ ಯೆಹೋವನ ನುಡಿಯನ್ನು ಕೇಳಿರಿ - ಕರ್ತನಾದ ಯೆಹೋವನು ತನ್ನ ಮೇಲೆ ಆಣೆಯಿಟ್ಟು ಹೀಗಂದಿದ್ದಾನೆ - ನಾನು ಯಾಕೋಬಿನ ಅಟ್ಟಹಾಸಕ್ಕೆ ಅಸಹ್ಯಪಟ್ಟು ಅದರ ಸೌಧಗಳನ್ನು ಹಗೆಮಾಡುತ್ತೇನೆ; ಆದದರಿಂದ ನಾನು ರಾಜಧಾನಿಯನ್ನೂ ಅದರ ಸಕಲಸಮೃದ್ಧಿಯನ್ನೂ ಆಪತ್ತಿಗೆ ಗುರಿಮಾಡುವೆನು,


ಆ ನಾಡಿನೊಳಗೆ ಪ್ರವಾದಿಗಳು ಒಳಸಂಚುಮಾಡಿಕೊಂಡಿದ್ದಾರೆ, ಬೇಟೆಯನ್ನು ಸೀಳುತ್ತಾ ಗರ್ಜಿಸುವ ಸಿಂಹದಂತಿದ್ದಾರೆ, ನರಪ್ರಾಣಿಗಳನ್ನು ನುಂಗಿದ್ದಾರೆ, ಆಸ್ತಿಯನ್ನೂ ಅಮೂಲ್ಯವಸ್ತುಗಳನ್ನೂ ದೋಚಿಕೊಂಡಿದ್ದಾರೆ; ದೇಶದಲ್ಲಿ ಬಹುಮಂದಿಯನ್ನು ವಿಧವೆಯರನ್ನಾಗಿ ಮಾಡಿದ್ದಾರೆ.


ಈ ದೇಶದಲ್ಲಿರುವ ಜನರಿಗೆ ಹೀಗೆ ಹೇಳು - ಕರ್ತನಾದ ಯೆಹೋವನು ಇಸ್ರಾಯೇಲ್ ದೇಶದ ಯೆರೂಸಲೇವಿುನ ನಿವಾಸಿಗಳ ವಿಷಯವಾಗಿ ಇಂತೆನ್ನುತ್ತಾನೆ - ಅವರು ಅನ್ನವನ್ನು ಬೆದರಿನಿಂದ ತಿಂದು ನೀರನ್ನು ಬೆರಗಿನಿಂದ ಕುಡಿಯುವರು; ಏಕಂದರೆ ಆ ದೇಶದವರೆಲ್ಲರು ಬಲಾತ್ಕಾರಿಗಳಾಗಿರುವದರಿಂದ ಅಲ್ಲಿನ ಸೊತ್ತೆಲ್ಲಾ ಸೂರೆಯಾಗಿ ದೇಶವು ಬರಿದಾಗುವದು.


ಬಡವರನ್ನು ಹಿಂಸಿಸುವ ದರಿದ್ರನು ಒಂದು ಕಾಳೂ ಉಳಿಯದಂತೆ [ಪೈರನ್ನು] ಬಡಿಯುವ ಮಳೆಯ ಹಾಗೆ.


ರಾಜನ ರೋಷವು ಸಿಂಹದ ಗರ್ಜನೆ; ಅವನ ದಯೆಯು ಪೈರಿನ ಇಬ್ಬನಿ.


ಅದೂ ಪ್ರಾಯದ ಸಿಂಹವಾಗಿ ಸಿಂಹಗಳ ನಡುವೆ ತಿರುಗುತ್ತಾ ಬೇಟೆ ಕಲಿತು ಮನುಷ್ಯರನ್ನು ನುಂಗಲಾರಂಭಿಸಿತು.


ಆಗ ಜನಾಂಗಗಳು ಸುತ್ತಲಿನ ರಾಷ್ಟ್ರಗಳಿಂದ ಕೂಡಿಬಂದು ಅದಕ್ಕೆ ವಿರುದ್ಧವಾಗಿ ನಿಂತು ಬಲೆಯೊಡ್ಡಿ ಗುಂಡಿತೋಡಲು ಅಲ್ಲಿ ಸಿಕ್ಕಿಬಿದ್ದಿತು.


ಅದು ಅವನಿಗೆ ಇಸ್ರಾಯೇಲಿನಲ್ಲಿ ಭೂಸ್ವಾಸ್ತ್ಯವಾಗುವದು; ಇನ್ನು ಮೇಲೆ ಪ್ರಭುಗಳು ನನ್ನ ಪ್ರಜೆಗಳನ್ನು ಹಿಂಸಿಸರು; ದೇಶದ ಭೂವಿುಯನ್ನು ಇಸ್ರಾಯೇಲ್ಯರಿಗೆ ಕುಲಕುಲಕ್ಕೂ ಹಂಚುವರು.


ಫರೋಹ ನೆಕೋವನು ಇವನನ್ನು ಯೆರೂಸಲೇವಿುನಲ್ಲಿ ಬಹು ದಿವಸಗಳವರೆಗೆ ಆಳಗೊಡಲಿಲ್ಲ. ಅವನು ಹಮಾತ್ ದೇಶದ ರಿಬ್ಲಾ ಎಂಬ ಊರಲ್ಲಿ ಇವನನ್ನು ಸೆರೆಯಲ್ಲಿಟ್ಟನು. ಯೆಹೂದ್ಯರು ಅವನಿಗೆ ನೂರು ತಲಾಂತು ಬೆಳ್ಳಿಯನ್ನೂ ಒಂದು ತಲಾಂತು ಬಂಗಾರವನ್ನೂ ದಂಡ ತೆರಬೇಕಾಯಿತು.


ಆದರೆ ನಿರ್ದೋಷಿಗಳ ರಕ್ತವನ್ನು ಸುರಿಸುವದು, ದೋಚಿಕೊಳ್ಳುವದು, ಹಿಂಸಿಸುವದು, ಜಜ್ಜುವದು, ಇವುಗಳನ್ನು ಮಾಡುವದರಲ್ಲಿಯೇ ನಿನ್ನ ದೃಷ್ಟಿಯೂ ನಿನ್ನ ಮನಸ್ಸೂ ನೆಲೆಗೊಂಡಿವೆ.


ಹಾ, ನೀವು ದುರ್ಬಲವಾದವುಗಳನ್ನು ಬಲಗೊಳಿಸಲಿಲ್ಲ, ರೋಗದವುಗಳನ್ನು ಸ್ವಸ್ಥಮಾಡಲಿಲ್ಲ, ಮುರಿದ ಅಂಗಗಳನ್ನು ಕಟ್ಟಲಿಲ್ಲ, ಓಡಿಸಿದವುಗಳನ್ನು ಮಂದೆಗೆ ಸೇರಿಸಲಿಲ್ಲ, ತಪ್ಪಿಸಿಕೊಂಡವುಗಳನ್ನು ಹುಡುಕಲಿಲ್ಲ; ಅವುಗಳನ್ನು ಹಿಂಸೆ ಬಲಾತ್ಕಾರಗಳಿಂದ ಆಳುತ್ತಾ ಬಂದಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು