Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 2:10 - ಕನ್ನಡ ಸತ್ಯವೇದವು J.V. (BSI)

10 ಆತನು ಆ ಸುರಳಿಯನ್ನು ನನ್ನೆದುರಿನಲ್ಲಿ ಬಿಚ್ಚಿದನು; ಅದರ ಎರಡು ಪಕ್ಕೆಗಳಲ್ಲಿಯೂ ಬರೆದಿತ್ತು; ಅದರಲ್ಲಿ ಬರೆದದ್ದು ಗೋಳು, ಮೂಲುಗು, ಮೊರೆ ಇವುಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆತನು ಆ ಸುರುಳಿಯನ್ನು ನನ್ನೆದುರಿನಲ್ಲಿ ಬಿಚ್ಚಿದನು; ಅದರ ಎರಡು ಪಕ್ಕಗಳಲ್ಲಿಯೂ ಬರೆದಿತ್ತು; ಅದರಲ್ಲಿ ಬರೆದದ್ದು ಪ್ರಲಾಪ, ಗೋಳಾಟ, ಶೋಕ ಇವುಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆ ಸುರುಳಿಯನ್ನು ನನ್ನೆದುರಿನಲ್ಲೆ ಬಿಚ್ಚಿದರು. ಅದರ ಎರಡು ಬದಿಗಳಲ್ಲಿಯೂ ಬರೆದಿತ್ತು: ಅದು ಪ್ರಲಾಪ, ಶೋಕ, ಶಾಪ ಇವುಗಳ ಬರಹದಿಂದ ಕೂಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆತನು ಆ ಸುರುಳಿಯನ್ನು ನನ್ನೆದುರಿನಲ್ಲಿ ಬಿಚ್ಚಿದಾಗ ಅದರ ಮುಂಭಾಗದಲ್ಲಿಯೂ ಹಿಂಭಾಗದಲ್ಲಿಯೂ ಮಾತುಗಳು ಬರೆಯಲ್ಪಟ್ಟಿದ್ದವು. ನಾನಾ ತರದ ಪ್ರಲಾಪಗಳು, ನರಳಾಟಗಳು ಮತ್ತು ಗೋಳಾಟಗಳು ಬರೆಯಲ್ಪಟ್ಟಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆ ಸುರುಳಿಯನ್ನು ನನ್ನೆದುರಿನಲ್ಲೇ ಬಿಚ್ಚಿದರು. ಅದರ ಎರಡು ಬದಿಗಳಲ್ಲಿಯೂ ಪ್ರಲಾಪ, ಶೋಕ ಮತ್ತು ಶಾಪದ ಪದಗಳನ್ನು ಬರೆಯಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 2:10
10 ತಿಳಿವುಗಳ ಹೋಲಿಕೆ  

ಆಮೇಲೆ ನಾನು ನೋಡಲಾಗಿ ಇಗೋ, ಒಂದೇ ಗರುಡಪಕ್ಷಿಯು ಆಕಾಶಮಧ್ಯದಲ್ಲಿ ಹಾರಾಡುತ್ತಿತ್ತು. ಅದು - ಅಯ್ಯೋ, ಅಯ್ಯೋ, ಅಯ್ಯೋ, ಊದಬೇಕಾಗಿರುವ ಮೂವರು ದೇವದೂತರ ವಿುಕ್ಕಾದ ತುತೂರಿಯ ಧ್ವನಿಗಳು ಉಂಟಾಗುವಾಗ ಭೂನಿವಾಸಿಗಳಿಗೆ ಎಂಥಾ ವಿಪತ್ತುಗಳು ಸಂಭವಿಸುವವು ಎಂದು ಮಹಾ ಶಬ್ದದಿಂದ ಹೇಳುವದನ್ನು ಕೇಳಿದೆನು.


ದುಷ್ಟರ ಗತಿಯನ್ನು ಏನು ಹೇಳಲಿ! ಅವರ ಕಾರ್ಯಗಳಿಗೆ ತಕ್ಕ ಪ್ರತಿಫಲವು ಅವರಿಗೆ ಲಭಿಸುವದಲ್ಲವೆ.


ಎರಡನೆಯ ವಿಪತ್ತು ಕಳೆದುಹೋಯಿತು; ಇಗೋ, ಮೂರನೆಯ ವಿಪತ್ತು ಬೇಗನೆ ಬರುತ್ತದೆ.


ಮೊದಲನೆಯ ವಿಪತ್ತು ಕಳೆದುಹೋಯಿತು; ಇಗೋ, ಇನ್ನೂ ಎರಡು ವಿಪತ್ತುಗಳು ಬರಬೇಕು.


ಆಗ ಯೆಹೋವನು ನನಗೆ ಈ ಉತ್ತರವನ್ನು ದಯಪಾಲಿಸಿದನು - ನಿನಗಾದ ದರ್ಶನವನ್ನು ಬರೆ; ಓದುವವರು ಶೀಘ್ರವಾಗಿ ಓದುವಂತೆ ಹಲಿಗೆಗಳ ಮೇಲೆ ಅದನ್ನು ಕೆತ್ತು.


ಸಿಂಹಾಸನದ ಮೇಲೆ ಕುಳಿತಿದ್ದಾತನ ಬಲಗೈಯಲ್ಲಿ ಒಂದು ಸುರುಳಿಯನ್ನು ಕಂಡೆನು; ಅದರ ಎರಡು ಪಕ್ಕೆಗಳಲ್ಲಿಯೂ ಬರೆದಿತ್ತು; ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು.


ಇಸ್ರಾಯೇಲಿನ ಪ್ರಭುಗಳ ವಿಷಯವಾಗಿ ಈ ಶೋಕಗೀತವನ್ನು ಎತ್ತು -


ಆಗ ನಾನು ಆ ಚಿಕ್ಕ ಸುರುಳಿಯನ್ನು ಆ ದೂತನ ಕೈಯಿಂದ ತೆಗೆದುಕೊಂಡು ತಿಂದುಬಿಟ್ಟೆನು. ಅದು ನನ್ನ ಬಾಯಲ್ಲಿ ಜೇನಿನಂತೆ ಸಿಹಿಯಾಗಿತ್ತು; ಅದನ್ನು ತಿಂದ ಮೇಲೆ ನನ್ನ ಹೊಟ್ಟೆಯು ಕಹಿಯಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು