Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 2:4 - ಕನ್ನಡ ಸತ್ಯವೇದವು J.V. (BSI)

4 ನಾನು ಯಾವ ಸಂತಾನದವರ ಬಳಿಗೆ ನಿನ್ನನ್ನು ಕಳುಹಿಸುತ್ತೇನೋ ಆ ಸಂತಾನದವರು ನಾಚಿಕೆಗೆಟ್ಟವರೂ ಹಟಗಾರರೂ ಆಗಿರುತ್ತಾರೆ; ನೀನು ಅವರಿಗೆ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ ಎಂದು ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 “ನಾನು ಯಾವ ಸಂತಾನದವರ ಬಳಿಗೆ ನಿನ್ನನ್ನು ಕಳುಹಿಸುತ್ತೇನೋ ಆ ಸಂತಾನದವರು ನಾಚಿಕೆಗೆಟ್ಟವರೂ, ಹಟಗಾರರೂ ಆಗಿರುತ್ತಾರೆ; ನೀನು ಅವರಿಗೆ, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ’ ಎಂದು ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನಾನು ಯಾವ ಸಂತಾನದವರ ಬಳಿಗೆ ನಿನ್ನನ್ನು ಕಳುಹಿಸುತ್ತೇನೋ ಆ ಸಂತಾನದವರು ನಾಚಿಕೆಗೆಟ್ಟವರೂ ಹಟಗಾರರೂ ಆಗಿದ್ದಾರೆ; ನೀನು ಅವರಿಗೆ, ‘ಸರ್ವೇಶ್ವರನಾದ ದೇವರೇ ಇಂತೆನ್ನುತ್ತಾರೆ,’ ಎಂದು ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆ ಜನರೊಂದಿಗೆ ಮಾತನಾಡಲು ನಾನು ನಿನ್ನನ್ನು ಕಳುಹಿಸುತ್ತಿದ್ದೇನೆ. ಅವರು ಬಹಳವಾಗಿ ಪ್ರತಿಭಟಿಸುವವರೂ ಮೊಂಡರೂ ಆಗಿದ್ದಾರೆ. ಆದರೆ ನೀನು ಅವರೊಂದಿಗೆ ಮಾತಾಡಿ, ‘ನಮ್ಮ ಒಡೆಯನಾದ ಯೆಹೋವನು ಇದನ್ನು ಹೇಳಿದ್ದಾನೆ’ ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವರು ಕಠಿಣ ಹೃದಯದವರು ಮತ್ತು ಹಠಮಾರಿ ಆಗಿದ್ದಾರೆ. ನಾನು ನಿನ್ನನ್ನು ಅವರ ಬಳಿಗೆ ಕಳುಹಿಸುತ್ತೇನೆ. ನೀನು ಅವರಿಗೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ,’ ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 2:4
23 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ ವಂಶದವರೋ ನಿನಗೆ ಕಿವಿಗೊಡಲೊಲ್ಲರು; ನನಗೂ ಕಿವಿಗೊಡಲೊಲ್ಲರು; ಅವರೆಲ್ಲರೂ ನಾಚಿಕೆಗೆಟ್ಟವರೂ ಹಟಗಾರರೂ ಆಗಿದ್ದಾರಲ್ಲಾ.


ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳ್ಳಷ್ಟೂ ನಾಚಿಕೆಪಡಲಿಲ್ಲ, ಲಜ್ಜೆಯ ಗಂಧವನ್ನೂ ತಿಳಿಯಲಿಲ್ಲ; ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಗರಿಸುವರು, ಬೀಳುವವರ ಸಂಗಡ ಬಿದ್ದೇ ಹೋಗುವರು ಎಂದು ಯೆಹೋವನು ಅನ್ನುತ್ತಾನೆ.


ಯೆಹೋವನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇರುತ್ತವಲ್ಲಾ; ನೀನು ಹೊಡೆದರೂ ಅವರು ಪಶ್ಚಾತ್ತಾಪಪಡಲಿಲ್ಲ, ಸಂಹರಿಸಿದರೂ ಶಿಕ್ಷಣಕ್ಕೆ ಒಪ್ಪಲಿಲ್ಲ; ತಮ್ಮ ಮುಖವನ್ನು ಕಲ್ಲಿಗಿಂತ ಕಠಿಣಮಾಡಿಕೊಂಡು ತಿರುಗಿಕೊಳ್ಳಲೊಲ್ಲದೆ ಹೋಗಿದ್ದಾರೆ.


ನೀನು ಹಟಗಾರ, ನಿನ್ನ ಕತ್ತಿನ ನರವು ಕಬ್ಬಿಣ, ನಿನ್ನ ಹಣೆ ತಾಮ್ರ ಎಂದು ನಾನು ತಿಳಿದುಕೊಂಡೆನು;


ನಿಮ್ಮ ಹಿರಿಯರು ಅರಣ್ಯದಲ್ಲಿರುವ ಮೆರೀಬದಲ್ಲಿ ಮಸ್ಸಾದಿನದಲ್ಲಿ ಮಾಡಿದಂತೆ ನೀವು ನಿಮ್ಮ ಹೃದಯವನ್ನು ಕಠಿಣಮಾಡಿಕೊಳ್ಳಬೇಡಿರಿ.


ನೋಡಿರಿ, ತೋಳಗಳ ನಡುವೆ ಕುರಿಗಳನ್ನು ಹೊಗಿಸಿದಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತೇನೆ. ಆದದರಿಂದ ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರ್ರಿ.


ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳ್ಳಷ್ಟೂ ನಾಚಿಕೆಪಡಲಿಲ್ಲ, ಲಜ್ಜೆಯ ಗಂಧವನ್ನೂ ತಿಳಿಯಲಿಲ್ಲ; ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಗರಿಸುವರು, ಬೀಳುವವರ ಸಂಗಡ ಬಿದ್ದೇಹೋಗುವರು ಎಂದು ಯೆಹೋವನು ಅನ್ನುತ್ತಾನೆ.


ಆದಕಾರಣ ಹದಮಳೆಗೆ ಅಡ್ಡಿಯಾಯಿತು, ಹಿಂಗಾರೂ ಆಗಲಿಲ್ಲ; ಆದರೂ ನೀನು ಸೂಳೆಯ ಮುಖವುಳ್ಳವಳಾಗಿ ನಾಚಿಕೆಗೆಟ್ಟಿದ್ದೀ.


ದುಷ್ಟನ ಮುಖದಲ್ಲಿ ಲಜ್ಜೆಯಿಲ್ಲ; ಸತ್ಯವಂತನು ತನ್ನ ನಡತೆಯನ್ನು ಸರಿಪಡಿಸಿಕೊಳ್ಳುತ್ತಿರುವನು.


ಇದಲ್ಲದೆ ನೆಬೂಕದ್ನೆಚ್ಚರನಿಗೆ ಒಳಗಾಗುತ್ತೇನೆಂದು ದೇವರ ಮೇಲೆ ಆಣೆಯಿಟ್ಟು ಪ್ರಮಾಣಮಾಡಿದ್ದರೂ ಅವನಿಗೆ ವಿರುದ್ಧವಾಗಿ ತಿರುಗಿಬಿದ್ದು ಇಸ್ರಾಯೇಲ್‍ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಲೊಲ್ಲದೆ ಹಟಹಿಡಿದು ಮನಸ್ಸನ್ನು ಕಠಿನಮಾಡಿಕೊಂಡನು.


ಈಗ ನಿಮ್ಮ ಪಿತೃಗಳಂತೆ ಆಜ್ಞೆಗೆ ಮಣಿಯದವರಾಗಿರಬೇಡಿರಿ, ಯೆಹೋವನಿಗೆ ಅಧೀನರಾಗಿರಿ. ನಿಮ್ಮ ದೇವರಾದ ಯೆಹೋವನು ಸದಾಕಾಲಕ್ಕೂ ಪ್ರತಿಷ್ಠಿಸಿಕೊಂಡ ಪವಿತ್ರಾಲಯಕ್ಕೆ ಬಂದು ಆತನನ್ನು ಸೇವಿಸಿರಿ. ಆಗ ನಿಮ್ಮ ಮೇಲಿರುವ ಆತನ ಉಗ್ರಕೋಪವು ತೊಲಗಿಹೋಗುವದು.


ಅದಕ್ಕೆ ಮೀಕಾಯೆಹುವು - ಯೆಹೋವನಾಣೆ, ಯೆಹೋವನು ಹೇಳುವದನ್ನೇ ನುಡಿಯುತ್ತೇನೆ ಎಂದು ಉತ್ತರಕೊಟ್ಟನು.


ಯಾಕಂದರೆ ನೀವು ಹಟಹಿಡಿದು ಆಜ್ಞೆಗೆ ಒಳಗಾಗದವರೆಂಬದು ನನಗೆ ತಿಳಿದೇ ಇದೆ. ನಾನು ಇನ್ನೂ ಜೀವದಿಂದಿರುವಾಗಲೇ ನೀವು ಯೆಹೋವನಿಗೆ ವಿರೋಧವಾಗಿ ತಿರುಗಿ ಬಿದ್ದಿದ್ದೀರಿ; ನಾನು ಹೋದ ತರುವಾಯ ನೀವು ತಿರುಗಿ ಬೀಳುವದು ಮತ್ತಷ್ಟು ನಿಶ್ಚಯ.


ಆದದರಿಂದ ನೀವು ಆಜ್ಞೆಗೆ ಮಣಿಯದ ನಿಮ್ಮ ದುಸ್ವಭಾವವನ್ನು ಬಿಟ್ಟುಬಿಟ್ಟು ನಿಮ್ಮ ಹೃದಯದಲ್ಲೇ ಸುನ್ನತಿ ಮಾಡಿಕೊಳ್ಳಿರಿ.


ಆಗ ಯೆಹೋವನು ನನಗೆ - ಬಾಲಕನೆನ್ನಬೇಡ; ಯಾರ ಬಳಿಗೆ ನಿನ್ನನ್ನು ಕಳುಹಿಸುತ್ತೇನೋ ಅವರೆಲ್ಲರ ಬಳಿಗೆ ನೀನು ಹೋಗೇ ಹೋಗುವಿ; ನಾನು ಆಜ್ಞಾಪಿಸುವದನ್ನೆಲ್ಲಾ ನುಡಿಯಲೇ ನುಡಿಯುವಿ.


ಕೂಡಲೇ ಅರಸನು ಸುರಳಿಯನ್ನು ತರುವದಕ್ಕೆ ಯೆಹೂದಿಯನ್ನು ಕಳುಹಿಸಿದನು; ಅವನು ಲೇಖಕನಾದ ಎಲೀಷಾಮನ ಕೋಣೆಯೊಳಗಿಂದ ಅದನ್ನು ತೆಗೆದುಕೊಂಡು ಬಂದು ಅರಸನ ಮತ್ತು ಅವನ ಪಕ್ಕದಲ್ಲಿ ನಿಂತಿದ್ದ ಸಕಲ ಪ್ರಧಾನರ ಮುಂದೆ ಓದಿದನು.


ಯೆಹೋವನು ನನ್ನನ್ನು ಮಂದೆಕಾಯುವದರಿಂದ ತಪ್ಪಿಸಿ - ನೀನು ಹೋಗಿ ನನ್ನ ಜನರಾದ ಇಸ್ರಾಯೇಲ್ಯರಿಗೆ ಪ್ರವಾದನೆಮಾಡು ಎಂದು ನನಗೆ ಅಪ್ಪಣೆಕೊಟ್ಟನು.


ಧರ್ಮೋಪದೇಶವನ್ನೂ ಸೇನಾಧೀಶ್ವರ ಯೆಹೋವನು ಪೂರ್ವಕಾಲದ ಪ್ರವಾದಿಗಳ ಮೂಲಕ ತನ್ನ ಆತ್ಮನಿಂದ ಹೇಳಿಸಿದ ಮಾತುಗಳನ್ನೂ ಕೇಳಬಾರದೆಂದು ತಮ್ಮ ಹೃದಯಗಳನ್ನು ವಜ್ರದಷ್ಟು ಕಠಿನಪಡಿಸಿಕೊಂಡರು; ಆದಕಾರಣ ಸೇನಾಧೀಶ್ವರ ಯೆಹೋವನಿಂದ ಅತಿರೌದ್ರವು ಅವರ ಮೇಲೆ ಬಿತ್ತು.


ಆಮೇಲೆ ಆತನು ನನಗೆ ಹೀಗೆ ಹೇಳಿದನು - ನರಪುತ್ರನೇ, ನೀನು ಇಸ್ರಾಯೇಲ್ ವಂಶದವರ ಬಳಿಗೆ ಹೋಗಿ ನಾನು ತಿಳಿಸುವ ಮಾತುಗಳನ್ನು ಅವರಿಗೆ ನುಡಿ.


ಸೆರೆಯಾಗಿರುವ ನಿನ್ನ ಸ್ವಜನರ ಬಳಿಗೆ ಹೋಗಿ ಅವರು ಕೇಳಿದರೂ ಕೇಳದೆಹೋದರೂ ಅವರನ್ನು ಪ್ರಬೋಧಿಸಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ ಎಂದು ಅವರಿಗೆ ಸಾರು.


ನಾನು ನಿನ್ನೊಡನೆ ಮತ್ತೆ ಮಾತಾಡುವ ಕಾಲದಲ್ಲಿ ನಿನ್ನ ಬಾಯನ್ನು ಬಿಚ್ಚುವೆನು; ಆಗ ನೀನು ಅವರಿಗೆ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ ಎಂದು ನುಡಿಯಬೇಕು; ಕೇಳುವವನು ಕೇಳಲಿ. ಕೇಳದವನು ಬಿಡಲಿ; ಅವರು ದ್ರೋಹದ ಜನವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು