Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 20:13 - ಕನ್ನಡ ಸತ್ಯವೇದವು J.V. (BSI)

13 ಆದರೆ ಇಸ್ರಾಯೇಲ್ ವಂಶದವರು ಅರಣ್ಯದಲ್ಲಿ ನನ್ನ ಮೇಲೆ ತಿರುಗಿಬಿದ್ದರು. ಕೈಕೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ನಿರಾಕರಿಸಿದರು, ನಾನು ನೇವಿುಸಿದ ಸಬ್ಬತ್ ದಿನಗಳನ್ನು ವಿಶೇಷವಾಗಿ ಹೊಲೆಮಾಡಿದರು; ಆಗ ನಾನು ಅವರ ಮೇಲೆ ಅರಣ್ಯದೊಳಗೆ ನನ್ನ ರೋಷಾಗ್ನಿಯನ್ನು ಸುರಿಸಿ ಇವರನ್ನು ಧ್ವಂಸಮಾಡುವೆನು ಅಂದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 “‘ಆದರೆ ಇಸ್ರಾಯೇಲ್ ವಂಶದವರು ಅರಣ್ಯದಲ್ಲಿ ನನ್ನ ಮೇಲೆ ತಿರುಗಿ ಬಿದ್ದರು. ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ನಿರಾಕರಿಸಿದರು, ನಾನು ನೇಮಿಸಿದ ಸಬ್ಬತ್ ದಿನಗಳನ್ನು ವಿಶೇಷವಾಗಿ ಹೊಲೆಮಾಡಿದರು; ಆಗ ನಾನು ಇವರ ಮೇಲೆ ಅರಣ್ಯದೊಳಗೆ ನನ್ನ ರೋಷಾಗ್ನಿಯನ್ನು ಸುರಿಸಿ ಇವರನ್ನು ಧ್ವಂಸಮಾಡುವೆನು’ ಅಂದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆದರೆ ಇಸ್ರಯೇಲ್ ವಂಶದವರು ಮರುಭೂಮಿಯಲ್ಲಿ ನನ್ನ ವಿರುದ್ಧ ದಂಗೆಯೆದ್ದರು. ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ಧಿಕ್ಕರಿಸಿದರು. ಮುಖ್ಯವಾಗಿ ನಾನು ನೇಮಿಸಿದ ಸಬ್ಬತ್ ದಿನಗಳನ್ನು ಅಪವಿತ್ರಮಾಡಿದರು. ಆಗ ನಾನು ‘ಮರುಭೂಮಿಯಲ್ಲಿರುವ ಇವರ ಮೇಲೆ ನನ್ನ ರೋಷಾಗ್ನಿಯನ್ನು ಹರಿಸಿ ಇವರನ್ನು ಧ್ವಂಸಮಾಡುವೆನು’ ಎಂದುಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “‘ಆದರೆ ಇಸ್ರೇಲ್ ಜನರು ಅಡವಿಯಲ್ಲಿರುವಾಗ ನನಗೆ ವಿರುದ್ಧವಾಗಿ ತಿರುಗಿಬಿದ್ದರು. ನನ್ನ ಆಜ್ಞೆಗಳನ್ನು ಅವರು ಅನುಸರಿಸಲಿಲ್ಲ. ನನ್ನ ನಿಯಮಗಳಿಗೆ ವಿಧೇಯರಾಗಲು ನಿರಾಕರಿಸಿದರು. ಆ ಆಜ್ಞೆಗಳೆಲ್ಲಾ ನ್ಯಾಯವಾದವುಗಳೇ. ಒಬ್ಬನು ಆ ಆಜ್ಞೆಗಳಿಗೆ ವಿಧೇಯನಾದರೆ ಅವನು ಬಾಳುವನು. ನಾನು ನೇಮಿಸಿದ ಸಬ್ಬತ್ ದಿವಸಗಳನ್ನು ವಿಶೇಷವಾಗಿ ಅಲಕ್ಷ್ಯ ಮಾಡಿದರು. ಆ ದಿವಸಗಳಲ್ಲಿ ಅವರು ಎಷ್ಟೋ ಸಾರಿ ಕೆಲಸ ಮಾಡಿದರು. ನನ್ನ ರೌದ್ರದ ತೀವ್ರತೆಯನ್ನು ಅವರು ಅರಿತುಕೊಳ್ಳಲೆಂದು ನಾನು ಅವರನ್ನು ಅಡವಿಯಲ್ಲಿ ದಂಡಿಸಿ ನಾಶಮಾಡಲು ಆಲೋಚಿಸಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ ‘ಆದರೆ ಇಸ್ರಾಯೇಲ್ ಜನರು ಮರುಭೂಮಿಯಲ್ಲಿಯೂ ನನಗೆ ವಿರುದ್ಧವಾಗಿ ತಿರುಗಿಬಿದ್ದರು. ಅವರು ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ, ನನ್ನ ಅಪ್ಪಣೆಗಳನ್ನು ತಿರಸ್ಕರಿಸಿದರು. ಅವುಗಳಿಗೆ ವಿಧೇಯನಾಗುವವನು ಅವುಗಳಿಂದ ಜೀವಿಸುವನು. ನನ್ನ ಸಬ್ಬತ್ ದಿನಗಳನ್ನು ಅಪವಿತ್ರಗೊಳಿಸಿದರು. ಆಗ ನಾನು ಅವರ ಮೇಲೆ ನನ್ನ ರೋಷವನ್ನು ಸುರಿದು, ಅವರನ್ನು ಮರುಭೂಮಿಯಲ್ಲಿ ನಾಶಮಾಡುವೆನೆಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 20:13
43 ತಿಳಿವುಗಳ ಹೋಲಿಕೆ  

ಆ ಸಂತಾನದವರಾದರೋ ನನ್ನ ಮೇಲೆ ತಿರುಗಿಬಿದ್ದರು; ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ; ಕೈಕೊಂಡವರಿಗೆ ಜೀವಾಧಾರವಾದ ನನ್ನ ವಿಧಿಗಳನ್ನು ಕೈಕೊಂಡು ನಡಿಸಲಿಲ್ಲ; ನಾನು ನೇವಿುಸಿದ ಸಬ್ಬತ್ ದಿನಗಳನ್ನು ಹೊಲೆಮಾಡಿದರು; ಆದದರಿಂದ ನಾನು ಅರಣ್ಯದಲ್ಲಿ ಇವರ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ ನನ್ನ ಕೋಪವನ್ನು ತೀರಿಸಿಕೊಳ್ಳುವೆನು ಅಂದುಕೊಂಡೆನು.


ಅವರಾದರೋ ನನ್ನ ಮಾತನ್ನು ಕೇಳಲೊಲ್ಲದೆ ನನ್ನ ಮೇಲೆ ತಿರುಗಿಬಿದ್ದರು; ತಮ್ಮ ಕಣ್ಣಿಗೆ ಇಷ್ಟವಾದ ಅಸಹ್ಯವಸ್ತುಗಳನ್ನು ಯಾರೂ ಬಿಸಾಟುಬಿಡಲಿಲ್ಲ. ಐಗುಪ್ತದ ವಿಗ್ರಹಗಳನ್ನು ತ್ಯಜಿಸಲಿಲ್ಲ; ಆಗ ನಾನು ಇವರ ಮೇಲೆ ಐಗುಪ್ತದೇಶದೊಳಗೆ ನನ್ನ ರೋಷಾಗ್ನಿಯನ್ನು ಸುರಿಸಿ ನನ್ನ ಕೋಪವನ್ನು ತೀರಿಸಿಕೊಳ್ಳುವೆನು ಅಂದುಕೊಂಡೆನು.


ನಾನು ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ ದೇಶದೇಶಗಳಿಗೆ ತೂರಿಬಿಡುವೆನು ಎಂದು ಅರಣ್ಯದಲ್ಲಿ ಅವರಿಗೆ ಪ್ರಮಾಣಮಾಡಿದೆನು.


ಅನ್ಯದೇಶೀಯರಲ್ಲಿ ಯಾರು ಯೆಹೋವನೆಂಬ ನನ್ನನ್ನು ಅವಲಂಬಿಸಿ ಸೇವಿಸಿ ನನ್ನ ನಾಮವನ್ನು ಪ್ರೀತಿಸಿ ನನಗೆ ದಾಸರಾಗಿ ಸಬ್ಬತ್ ದಿನವನ್ನು ಹೊಲೆಮಾಡದೆ ನನ್ನ ದಿನವೆಂದು ಆಚರಿಸಿ ನನ್ನ ಒಡಂಬಡಿಕೆಯನ್ನು ಭದ್ರವಾಗಿ ಹಿಡಿಯುತ್ತಾರೋ


ದೃಷ್ಟಾಂತ - ಹೋರೇಬಿನಲ್ಲಿ ನೀವು ಯೆಹೋವನಿಗೆ ಕೋಪವನ್ನು ಹುಟ್ಟಿಸಿದಿರಿ. ಆಗ ಆತನು ಬಲು ಸಿಟ್ಟುಗೊಂಡು ನಿಮ್ಮನ್ನು ಧ್ವಂಸಮಾಡಬೇಕೆಂದಿದ್ದನು.


ನಿಮ್ಮ ಶವಗಳು ಈ ಅರಣ್ಯದಲ್ಲಿಯೇ ಬೀಳುವವು. ನೀವು ನನಗೆ ವಿರೋಧವಾಗಿ ಗುಣುಗುಟ್ಟಿದದರಿಂದ ನಿಮ್ಮಲ್ಲಿ ಲೆಕ್ಕಿಸಲ್ಪಟ್ಟವರೆಲ್ಲರೂ ಅಂದರೆ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರೆಲ್ಲರೂ [ಅರಣ್ಯದಲ್ಲೇ ಸಾಯುವರು].


ಈ ಮನುಷ್ಯರೆಲ್ಲರು ಐಗುಪ್ತದೇಶದಲ್ಲಿಯೂ ಅರಣ್ಯದಲ್ಲಿಯೂ ನಾನು ನಡಿಸಿರುವ ಮಹತ್ಕಾರ್ಯಗಳನ್ನೂ ನನ್ನ ಮಹಿಮೆಯನ್ನೂ ನೋಡಿದರೂ ನನ್ನ ಮಾತಿಗೆ ಕಿವಿಗೊಡದೆ ಪದೇಪದೇ ನನ್ನನ್ನು ಪರೀಕ್ಷಿಸಿದದರಿಂದ


ಆದಕಾರಣ ನೀನು ನನ್ನನ್ನು ತಡೆಯಬೇಡ; ನನ್ನ ಕೋಪಾಗ್ನಿ ಉರಿಯಲಿ, ಅವರನ್ನು ಭಸ್ಮಮಾಡುವೆನು. ತರುವಾಯ ನಿನ್ನಿಂದಲೇ ಬೇರೆ ಒಂದು ದೊಡ್ಡ ಜನಾಂಗವುಂಟಾಗುವಂತೆ ಮಾಡುವೆನು ಎಂದು ಹೇಳಿದನು.


ಹೀಗಿರಲು ಈ ಮಾತನ್ನು ತಾತ್ಸಾರ ಮಾಡುವವನು ಮನುಷ್ಯನನ್ನು ತಿರಸ್ಕರಿಸುವದು ಮಾತ್ರವಲ್ಲದೆ ಪವಿತ್ರಾತ್ಮವರವನ್ನು ನಿಮಗೆ ದಯಪಾಲಿಸುವ ದೇವರನ್ನೂ ತಿರಸ್ಕರಿಸುತ್ತಾನೆ.


ಯೆಹೋವನು ಇಂತೆನ್ನುತ್ತಾನೆ - ಯೆಹೂದವು ಮೂರು ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವದೇ ಇಲ್ಲ; ಯೆಹೂದ್ಯರು ಯೆಹೋವನ ಧರ್ಮೋಪದೇಶವನ್ನು ನಿರಾಕರಿಸಿ ಆತನ ವಿಧಿಗಳನ್ನು ಕೈಕೊಳ್ಳದೆ ಅವರ ಪಿತೃಗಳು ಹಿಂಬಾಲಿಸಿದ ಸುಳ್ಳುದೇವತೆಗಳ ಮೂಲಕ ಸನ್ಮಾರ್ಗವನ್ನು ತಪ್ಪಿದರಷ್ಟೆ;


ಏಕಂದರೆ ಅವರ ಹೃದಯವು ತಮ್ಮ ವಿಗ್ರಹಗಳಲ್ಲಿ ಆಸಕ್ತವಾಗಿ ಅವರು ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ನಿರಾಕರಿಸಿ ನಾನು ನೇವಿುಸಿದ ಸಬ್ಬತ್ ದಿನಗಳನ್ನು ಹೊಲೆ ಮಾಡಿದವರಾಗಿದ್ದರು.


ಅವರಾದರೋ ಎದುರುಬಿದ್ದು ಆತನ ಪವಿತ್ರಾತ್ಮನನ್ನು ದುಃಖಪಡಿಸಿದರು; ಆದದರಿಂದ ಆತನು ಮಾರ್ಪಟ್ಟು ಅವರಿಗೆ ಶತ್ರುವಾಗಿ ತಾನೇ ಅವರೊಡನೆ ಹೋರಾಡಿದನು.


[ದೇವರ] ವಾಕ್ಯವನ್ನು ಉಲ್ಲಂಘಿಸುವವನು ನಾಶವಾಗುವನು; ಆಜ್ಞೆಯನ್ನು ಭಯಭಕ್ತಿಯಿಂದ ಕೈಕೊಳ್ಳುವವನು ಸುಫಲವನ್ನು ಹೊಂದುವನು.


ನನ್ನ ಬುದ್ಧಿವಾದವನ್ನು ಲಕ್ಷ್ಯಕ್ಕೆ ತಾರದೆ ನನ್ನ ತಿದ್ದುಪಾಟನ್ನು ಬೇಡವೆಂದು ತಳ್ಳಿಬಿಟ್ಟಿದ್ದೀರಿ.


ಹೀಗಿರಲು ನೀನು ಯೆಹೋವನಾದ ನನ್ನ ಆಜ್ಞೆಯನ್ನು ತಿರಸ್ಕರಿಸಿ ನನ್ನ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವದನ್ನು ಮಾಡಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡಿ.


ನಾನು ಅವರನ್ನು ಐಗುಪ್ತದಿಂದ ಬಿಡಿಸಿದಂದಿನಿಂದ ಇಂದಿನವರೆಗೂ ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳನ್ನು ಸೇವಿಸಿದರು. ನನಗೆ ಹೇಗೆ ಮಾಡಿದರೋ ಹಾಗೆಯೇ ನಿನಗೂ ಮಾಡುತ್ತಾರೆ.


ಯಾಕಂದರೆ ನೀವು ಹಟಹಿಡಿದು ಆಜ್ಞೆಗೆ ಒಳಗಾಗದವರೆಂಬದು ನನಗೆ ತಿಳಿದೇ ಇದೆ. ನಾನು ಇನ್ನೂ ಜೀವದಿಂದಿರುವಾಗಲೇ ನೀವು ಯೆಹೋವನಿಗೆ ವಿರೋಧವಾಗಿ ತಿರುಗಿ ಬಿದ್ದಿದ್ದೀರಿ; ನಾನು ಹೋದ ತರುವಾಯ ನೀವು ತಿರುಗಿ ಬೀಳುವದು ಮತ್ತಷ್ಟು ನಿಶ್ಚಯ.


ಇಸ್ಸಾಕಾರ್ ಕುಲದವರಾದ ಇವರಲ್ಲಿ ಲೆಕ್ಕಿಸಲ್ಪಟ್ಟವರು 64,300 ಮಂದಿ.


ಅವರು ಬಿಟ್ಟುಹೋದ ಸ್ವದೇಶವು ನಿರ್ಜನವಾಗಿ ಬಿದ್ದಿರುವಾಗ ತನಗೆ ಸಲ್ಲಬೇಕಾದ ಸಬ್ಬತ್ ವಿಶ್ರಾಂತಿಯನ್ನು ಹೊಂದುವದು. ಅವರು ಯೆಹೋವನ ಆಜ್ಞೆಬೇಡವೆಂದು ಆತನ ವಿಧಿಗಳನ್ನು ತಾತ್ಸಾರ ಮಾಡಿದ ಕಾರಣವೇ ತಮ್ಮ ಪಾಪದ ಫಲವನ್ನು ಅನುಭವಿಸಬೇಕಾಗಿರುವದು.


ನನ್ನ ನಿಯಮಗಳನ್ನು ಬೇಡವೆಂದು ನನ್ನ ವಿಧಿಗಳನ್ನು ತಳ್ಳಿಬಿಟ್ಟರೆ ನೀವು ನನ್ನ ಆಜ್ಞೆಗಳನ್ನು ಅನುಸರಿಸದೆ ನನ್ನ ನಿಬಂಧನವನ್ನು ಮೀರಿ ನಡೆದರೆ


ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಅವರು ಬೇಗನೆ ಬಿಟ್ಟುಹೋಗಿ ತಮಗೆ ಲೋಹದ ಬಸವನನ್ನು ಮಾಡಿಸಿಕೊಂಡು ಅದಕ್ಕೆ ಅಡ್ಡಬಿದ್ದು ಯಜ್ಞಗಳನ್ನು ಅರ್ಪಿಸಿ - ಇಸ್ರಾಯೇಲ್ಯರೇ, ನೋಡಿರಿ; ಇದೇ ನಿಮ್ಮನ್ನು ಐಗುಪ್ತದೇಶದಿಂದ ಕರಕೊಂಡು ಬಂದ ದೇವರು ಎಂದು ಹೇಳಿಕೊಳ್ಳುತ್ತಿದ್ದಾರೆ ಎಂದು ಹೇಳಿದನು.


ನೇಮನಿಷ್ಠೆಗಳಿಂದಾಗುವ ನೀತಿಯ ವಿಷಯದಲ್ಲಿ - ಅದನ್ನು ಅನುಸರಿಸಿದವನೇ ಅದರಿಂದ ಜೀವಿಸುವನೆಂದು ಮೋಶೆಯು ಬರೆಯುತ್ತಾನೆ.


ನನ್ನ ಆಜ್ಞಾವಿಧಿಗಳ ಪ್ರಕಾರ ನಡೆದುಕೊಳ್ಳುವವರು ಆ ಆಜ್ಞಾವಿಧಿಗಳ ಮೂಲಕ ಬದುಕುವರು. ಆದದರಿಂದ ನೀವು ಅವುಗಳನ್ನೇ ಅನುಸರಿಸಬೇಕು; ನಾನು ಯೆಹೋವನು.


ನಿಮ್ಮ ತಂದೆಗಳೂ ಸಹೋದರರೂ ನಡೆದಂತೆ ನೀವೂ ನಡೆಯಬೇಡಿರಿ. ಅವರು ತಮ್ಮ ಪಿತೃಗಳ ದೇವರಾದ ಯೆಹೋವನಿಗೆ ವಿರೋಧವಾಗಿ ದ್ರೋಹಿಗಳಾದದರಿಂದ ಆತನು ಅವರನ್ನು ನಾಶನಕ್ಕೆ ಒಪ್ಪಿಸಿದನು. ಅದಕ್ಕೆ ನೀವೇ ಸಾಕ್ಷಿಗಳು.


ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಸ್ವಂತ ಆಲೋಚನೆಗಳನ್ನು ಅನುಸರಿಸಿ ತಮ್ಮ ದುಷ್ಟಹೃದಯದ ಹಟದಂತೆ ನಡೆದು ಹಿಂದಿರುಗಿಯೇ ಹೋದರು, ಮುಂದರಿಯಲಿಲ್ಲ.


ಕೈಕೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅವರಿಗೆ ತಿಳಿಸಿಕೊಟ್ಟೆನು.


ಆದರೂ ಯಾವ ಜನಾಂಗಗಳ ಮುಂದೆ ಅವರನ್ನು ಪಾರುಮಾಡಿದೆನೋ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗಬಾರದೆಂದು ನನ್ನ ಹೆಸರಿನ ನಿವಿುತ್ತವೇ ಸಹಿಸಿಕೊಂಡೆನು.


ನಾನು ಐಗುಪ್ತದ ಅರಣ್ಯದಲ್ಲಿ ನಿಮ್ಮ ಪಿತೃಗಳ ಸಂಗಡ ವಾದಿಸಿದಂತೆ ನಿಮ್ಮ ಸಂಗಡಲೂ ವಾದಿಸುವೆನು; ಇದು ಕರ್ತನಾದ ಯೆಹೋವನ ನುಡಿ.


ನೀನು ನಿನ್ನ ಪವಿತ್ರವಸ್ತುಗಳನ್ನು ಅಲಕ್ಷ್ಯಮಾಡಿ ನಾನು ನೇವಿುಸಿದ ಸಬ್ಬತ್‍ದಿನಗಳನ್ನು ಹೊಲೆಮಾಡಿದ್ದೀ.


ಇದಲ್ಲದೆ ನನಗೆ ಈ ಅಪರಾಧವನ್ನು ನಡಿಸಿದ್ದಾರೆ; ಆಹುತಿಕೊಟ್ಟ ದಿನದಲ್ಲೇ ನನ್ನ ಪವಿತ್ರಾಲಯವನ್ನು ಅಪವಿತ್ರಪಡಿಸಿ ನಾನು ನೇವಿುಸಿದ ಸಬ್ಬತ್ ದಿನವನ್ನು ಹೊಲಸುಮಾಡಿದರು.


ನೀವು ಅರಣ್ಯದಲ್ಲಿ ನಿಮ್ಮ ದೇವರಾದ ಯೆಹೋವನಿಗೆ ಕೋಪಹುಟ್ಟಿಸಿದ್ದನ್ನು ನೆನಪುಮಾಡಿಕೊಳ್ಳಿರಿ; ಅದನ್ನು ಮರೆಯಬೇಡಿರಿ. ನೀವು ಐಗುಪ್ತದೇಶವನ್ನು ಬಿಟ್ಟಂದಿನಿಂದ ಈ ಸ್ಥಳಕ್ಕೆ ಬಂದ ದಿನದವರೆಗೂ ಯೆಹೋವನ ಆಜ್ಞೆಗಳನ್ನು ಧಿಕ್ಕರಿಸುವವರಾಗಿದ್ದಿರಿ.


ಆಗ ನಾನು ಯೆಹೂದ ಶ್ರೀಮಂತರಿಗೆ - ನೀವು ಮಾಡುವದು ಎಂಥ ದುಷ್ಕೃತ್ಯ! ನೀವು ಸಬ್ಬತ್‍ದಿನವನ್ನು ಅಶುದ್ಧಮಾಡುತ್ತೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು