Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 20:16 - ಕನ್ನಡ ಸತ್ಯವೇದವು J.V. (BSI)

16 ಏಕಂದರೆ ಅವರ ಹೃದಯವು ತಮ್ಮ ವಿಗ್ರಹಗಳಲ್ಲಿ ಆಸಕ್ತವಾಗಿ ಅವರು ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ನಿರಾಕರಿಸಿ ನಾನು ನೇವಿುಸಿದ ಸಬ್ಬತ್ ದಿನಗಳನ್ನು ಹೊಲೆ ಮಾಡಿದವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಏಕೆಂದರೆ ಅವರ ಹೃದಯವು ತಮ್ಮ ವಿಗ್ರಹಗಳಲ್ಲಿ ಆಸಕ್ತರಾಗಿ, ಅವರು ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ನಿರಾಕರಿಸಿ, ನಾನು ನೇಮಿಸಿದ ಸಬ್ಬತ್ ದಿನಗಳನ್ನು ಹೊಲೆ ಮಾಡಿದವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಏಕೆಂದರೆ, ಅವರ ಹೃದಯ ವಿಗ್ರಹಗಳಲ್ಲಿ ಆಸಕ್ತವಾಗಿ, ನನ್ನ ಆಜ್ಞಾವಿಧಿಗಳನ್ನು ಅವರು ಅನುಸರಿಸದೆ ಧಿಕ್ಕರಿಸಿ, ನಾನು ನೇಮಿಸಿದ ಸಬ್ಬತ್ ದಿನಗಳನ್ನು ಅಪವಿತ್ರಗೊಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “‘ಇಸ್ರೇಲ್ ಜನರು ನನ್ನ ಆಜ್ಞೆಗಳಿಗೆ ವಿಧೇಯರಾಗಲು ನಿರಾಕರಿಸಿದರು. ನನ್ನ ಕಟ್ಟಳೆಗಳನ್ನು ಅವರು ಅನುಸರಿಸಲಿಲ್ಲ. ನಾನು ನೇಮಿಸಿದ ಸಬ್ಬತ್ ದಿವಸಗಳನ್ನು ಆಚರಿಸಲಿಲ್ಲ. ಅವರ ಮನಸ್ಸು ಆ ಹೊಲಸು ದೇವರುಗಳ ಮೇಲೆ ನೆಟ್ಟಿದ್ದರಿಂದ ಅವರು ಹಾಗೆಲ್ಲಾ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅವರ ಹೃದಯವು ತಮ್ಮ ವಿಗ್ರಹಗಳಲ್ಲಿ ಆಸಕ್ತವಾಗಿ, ನನ್ನ ನಿಯಮಗಳನ್ನು ಅನುಸರಿಸದೆ ನಿರಾಕರಿಸಿ, ನಾನು ನೇಮಿಸಿದ ವಿಶ್ರಾಂತಿಯ ದಿನಗಳನ್ನು ಅಪವಿತ್ರ ಮಾಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 20:16
11 ತಿಳಿವುಗಳ ಹೋಲಿಕೆ  

ಆ ಗೊಂಡೆಗಳ ಉಪಯೋಗವೇನಂದರೆ - ನೀವು ಅವುಗಳನ್ನು ನೋಡುವಾಗ ಯೆಹೋವನ ಆಜ್ಞೆಗಳನ್ನೆಲ್ಲಾ ನೆನಪಿಗೆ ತಂದುಕೊಂಡು ನಡಿಸಬೇಕು, ಮತ್ತು ನೀವು ಪೂರ್ವದಲ್ಲಿ ನನಗೆ ದ್ರೋಹಿಗಳಾಗಿ ಮನಸ್ಸಿಗೂ ಕಣ್ಣಿಗೂ ತೋರಿದಂತೆ ದಾರಿತಪ್ಪಿ ನಡೆದ ಪ್ರಕಾರ ಇನ್ನು ನಡೆಯದೆ


ಅವರಾದರೋ ನನ್ನ ಮಾತನ್ನು ಕೇಳಲೊಲ್ಲದೆ ನನ್ನ ಮೇಲೆ ತಿರುಗಿಬಿದ್ದರು; ತಮ್ಮ ಕಣ್ಣಿಗೆ ಇಷ್ಟವಾದ ಅಸಹ್ಯವಸ್ತುಗಳನ್ನು ಯಾರೂ ಬಿಸಾಟುಬಿಡಲಿಲ್ಲ. ಐಗುಪ್ತದ ವಿಗ್ರಹಗಳನ್ನು ತ್ಯಜಿಸಲಿಲ್ಲ; ಆಗ ನಾನು ಇವರ ಮೇಲೆ ಐಗುಪ್ತದೇಶದೊಳಗೆ ನನ್ನ ರೋಷಾಗ್ನಿಯನ್ನು ಸುರಿಸಿ ನನ್ನ ಕೋಪವನ್ನು ತೀರಿಸಿಕೊಳ್ಳುವೆನು ಅಂದುಕೊಂಡೆನು.


ಅವಳು ಐಗುಪ್ತದಲ್ಲಿದ್ದಂದಿಂನಿಂದಲೂ ತನ್ನ ಸೂಳೆತನವನ್ನು ಬಿಡಲಿಲ್ಲ; ಅವಳ ಬಾಲ್ಯದಲ್ಲಿಯೇ ಅಲ್ಲಿನವರು ಅವಳೊಂದಿಗೆ ಮಲಗಿ ಅವಳ ಎಳೆಯ ತೊಟ್ಟುಗಳನ್ನು ನಸುಕಿ ಅವಳ ಸಂಗಡ ಸೂಳೆಗಾರಿಕೆಯನ್ನು ಹೆಚ್ಚೆಚ್ಚಾಗಿ ಮಾಡಿದರು.


ಆ ಸ್ತ್ರೀಯರು ತಮ್ಮ ದೇವತೆಗಳಿಗೆ ಮಾಡಿದ ಔತಣದ ಯಜ್ಞಗಳಿಗೆ ಇಸ್ರಾಯೇಲ್ಯರನ್ನು ಕರಿಸಲು ಇವರು ಆ ಭೋಜನವನ್ನು ಮಾಡಿ ಅವರ ದೇವತೆಗಳಿಗೆ ನಮಸ್ಕರಿಸುವವರಾದರು.


ಆದರೆ ಯಾರ ಚಿತ್ತವು ತಮ್ಮ ಅಸಹ್ಯವಸ್ತುಗಳನ್ನೂ ಹೇಯವಿಗ್ರಹಗಳನ್ನೂ ಅನುಸರಿಸುತ್ತದೋ ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು. ಇದು ಕರ್ತನಾದ ಯೆಹೋವನ ನುಡಿ.


ದ್ರೋಹಿಗಳಾದವರನ್ನು ನಿಮ್ಮೊಳಗಿಂದ ಗುಡಿಸಿಬಿಡುವೆನು; ಅವರು ಪ್ರವಾಸಿಗಳಾಗಿದ್ದ ದೇಶದಿಂದ ನಾನು ಅವರನ್ನು ಪಾರುಮಾಡಿದರೂ ಅವರು ಇಸ್ರಾಯೇಲ್ ದೇಶಕ್ಕೆ ಸೇರುವದೇ ಇಲ್ಲ ; ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು