Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 20:20 - ಕನ್ನಡ ಸತ್ಯವೇದವು J.V. (BSI)

20 ನಾನು ನೇವಿುಸಿದ ಸಬ್ಬತ್ ದಿನಗಳನ್ನು ನನ್ನ ದಿನಗಳೆಂದು ಆಚರಿಸಿರಿ; ನಾನು ನಿಮ್ಮ ದೇವರಾದ ಯೆಹೋವನು ಎಂದು ನೀವು ತಿಳುಕೊಳ್ಳುವಂತೆ ಅವು ನಿಮಗೂ ನನಗೂ ಗುರುತಾಗಿರುವವು ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಾನು ನೇಮಿಸಿದ ಸಬ್ಬತ್ ದಿನಗಳನ್ನು ನನ್ನ ಪರಿಶುದ್ಧ ದಿನಗಳೆಂದು ಆಚರಿಸಿರಿ; ನಾನು ನಿಮ್ಮ ದೇವರಾದ ಯೆಹೋವನು ಎಂದು ನೀವು ತಿಳಿದುಕೊಳ್ಳುವಂತೆ ಅವು ನಿಮಗೂ ಮತ್ತು ನನಗೂ ಗುರುತಾಗಿರುವುವು” ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನಾನು ನೇಮಿಸಿದ ಸಬ್ಬತ್ ದಿನಗಳನ್ನು ನನ್ನ ದಿನಗಳೆಂದು ಆಚರಿಸಿರಿ; ನಾನು ನಿಮ್ಮ ದೇವರಾದ ಸರ್ವೇಶ್ವರ ಎಂದು ನೀವು ತಿಳಿದುಕೊಳ್ಳುವಂತೆ ಅವು ನಿಮಗೂ ನನಗೂ ಗುರುತಾಗಿರುವುವು’ ಎಂದು ಹೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನಾನು ನೇಮಿಸಿದ ಸಬ್ಬತ್ ದಿವಸಗಳು ಮಹತ್ವವಾದವುಗಳೆಂದು ಎಣಿಸಿರಿ. ನನ್ನ ಮತ್ತು ನಿಮ್ಮ ಸಂಬಂಧಕ್ಕೆ ಅವು ಗುರುತುಗಳಾಗಿವೆ. ನಾನು ನಿಮ್ಮ ಕರ್ತನು. ನಾನೇ ನಿಮ್ಮ ದೇವರಾದ ಯೆಹೋವನೆಂದು ತಿಳಿದುಕೊಳ್ಳಲು ಇವುಗಳು ಸಾಕ್ಷಿಗಳಾಗಿವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನನ್ನ ಸಬ್ಬತ್ ದಿನಗಳನ್ನು ಪರಿಶುದ್ಧ ಮಾಡಿರಿ, ನಾನೇ ನಿಮ್ಮ ದೇವರಾದ ಯೆಹೋವ ದೇವರು ಎಂದು ಅವು ನಿಮಗೂ ನನಗೂ, ನೀವು ತಿಳಿಯುವ ಹಾಗೆ ಗುರುತುಗಳಾಗಿರುವುವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 20:20
13 ತಿಳಿವುಗಳ ಹೋಲಿಕೆ  

ಆ ದಿನದಲ್ಲಿ ನಿಮ್ಮ ಮನೆಗಳಿಂದ ಯಾವ ಹೊರೆಯನ್ನೂ ಈಚೆಗೆ ತೆಗೆದುಕೊಂಡು ಬರಬೇಡಿರಿ, ಯಾವ ಕೆಲಸವನ್ನೂ ಮಾಡದಿರಿ; ಸಬ್ಬತ್ ದಿನವನ್ನು ನನ್ನ ದಿನವೆಂದು ಆಚರಿಸಿರಿ; ನಿಮ್ಮ ಪಿತೃಗಳಿಗೆ ನಾನು ಹೀಗೆ ಆಜ್ಞೆಮಾಡಿದೆನಲ್ಲಾ;


ನೀವು ಸಬ್ಬತ್ ದಿನವನ್ನು ಅಗಮ್ಯವಾದದ್ದೆಂದು ತಿಳಿದು ಆ ನನ್ನ ಪರಿಶುದ್ಧ ದಿವಸದಲ್ಲಿ ನಿಮ್ಮ ನಿತ್ಯದ ಕೆಲಸವನ್ನು ಮಾಡದೆ ಸ್ವೇಚ್ಫೆಯಾಗಿ ನಡೆಯದೆ ಸ್ವಕಾರ್ಯದಲ್ಲಿ ನಿರತರಾಗದೆ ಹರಟೆಹರಟದೆ ಯೆಹೋವನ ಸಬ್ಬತ್ತೆಂಬ ಪರಿಶುದ್ಧ ದಿನವು ಉಲ್ಲಾಸಕರವೂ ಮಾನ್ಯವೂ ಆದದ್ದೆಂದು ಘನಪಡಿಸಿದರೆ


ವ್ಯಾಜ್ಯವಾಗುವಲ್ಲಿ ಅದನ್ನು ತೀರಿಸಲು ನಿಂತು ನನ್ನ ನ್ಯಾಯವಿಧಿಗಳಿಗೆ ಅನುಸಾರವಾಗಿ ತೀರಿಸಲಿ; ನಾನು ಏರ್ಪಡಿಸಿದ ಹಬ್ಬಗಳಲ್ಲಿ ನನ್ನ ನಿಯಮನಿಷ್ಠೆಗಳನ್ನು ಕೈಕೊಂಡು ನನ್ನ ಸಬ್ಬತ್ತುಗಳು ಆಚರಿಸಲ್ಪಡುವಂತೆ ನೋಡಿಕೊಳ್ಳಲಿ.


ಇದಲ್ಲದೆ ತಮ್ಮನ್ನು ದೇವಜನರನ್ನಾಗಿ ಮಾಡಿರುವ ಯೆಹೋವನು ನಾನೇ ಎಂದು ಅವರು ತಿಳುಕೊಳ್ಳುವಂತೆ ನನಗೂ ಅವರಿಗೂ ಗುರುತಾದ ಸಬ್ಬತ್ ದಿನಗಳನ್ನು ಅವರಿಗೆ ನೇವಿುಸಿದೆನು.


ಆದರೆ ನೀವು ನನ್ನ ಕಡೆಗೆ ಕಿವಿಗೊಡದೆ ಸಬ್ಬತ್ ದಿನದಲ್ಲಿ ಹೊರೆಯನ್ನು ಹೊತ್ತು ಯೆರೂಸಲೇವಿುನ ಬಾಗಿಲುಗಳೊಳಗೆ ಪ್ರವೇಶಿಸಬಾರದೆಂಬ ನಿಯಮವನ್ನು ಕೈಕೊಳ್ಳದೆ ಆ ದಿನವನ್ನು ನನ್ನ ದಿನವೆಂದು ಆಚರಿಸದೆ ಇದ್ದರೆ ಆಗ ನಾನು ಊರಬಾಗಿಲುಗಳಲ್ಲಿ ಬೆಂಕಿಯನ್ನು ಹೊತ್ತಿಸುವೆನು, ಅದು ಯೆರೂಸಲೇವಿುನ ಉಪ್ಪರಿಗೆಗಳನ್ನು ದಹಿಸಿಬಿಡುವದು, ಆರುವದೇ ಇಲ್ಲ.


ಯೆಹೋವನಾದ ನನ್ನ ನುಡಿ ಇದೇ - ನೀವು ನನ್ನ ಕಡೆಗೆ ಚೆನ್ನಾಗಿ ಕಿವಿಗೊಟ್ಟು ಸಬ್ಬತ್ ದಿನದಲ್ಲಿ ಈ ಊರಿನ ಬಾಗಿಲುಗಳೊಳಗೆ ಯಾವ ಹೊರೆಯನ್ನೂ ತಾರದೆ ಯಾವ ಕೆಲಸವನ್ನೂ ಮಾಡದೆ ಆ ದಿನವನ್ನು ನನ್ನ ದಿನವೆಂದು ಆಚರಿಸಿದರೆ


ಆರು ದಿನಗಳಲ್ಲಿ ಯೆಹೋವನು ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ನಿರ್ಮಾಣಮಾಡಿ ಏಳನೆಯ ದಿನದಲ್ಲಿ ವಿಶ್ರವಿುಸಿಕೊಂಡನು. ಆದದರಿಂದ ಯೆಹೋವನು ಸಬ್ಬತ್ ದಿನವನ್ನು ತನ್ನ ದಿನವಾಗಿರಲಿ ಎಂದು ಆಶೀರ್ವದಿಸಿದನು.


ಈ ವಿಧಿಯನ್ನು ಕೈಕೊಳ್ಳುವ ಮನುಷ್ಯನು ಧನ್ಯನು; ಇದನ್ನೇ ಭದ್ರವಾಗಿ ಹಿಡಿದು ಸಬ್ಬತ್‍ದಿನವನ್ನು ಹೊಲೆಮಾಡದೆ ದೇವರ ದಿನವೆಂದು ಆಚರಿಸುತ್ತಾ ಯಾವ ಕೇಡಿಗೂ ಕೈಹಾಕದ ಮಾನವನು ಭಾಗ್ಯವಂತನು.


ಅವರು ತಮ್ಮ ಚೊಚ್ಚಲು ಮಕ್ಕಳನ್ನು ಆಹುತಿಕೊಟ್ಟು ಅರ್ಪಿಸುತ್ತಿದ್ದ ಬಲಿಗಳಿಂದಲೇ ಅವರನ್ನು ಹೊಲೆಗೆಡಿಸಿ ಕೇವಲ ದುರವಸ್ಥೆಗೆ ತಂದೆನು.


ಸಬ್ಬತ್ ದಿನವನ್ನು ದೇವರ ದಿನವೆಂದು ಆಚರಣೆಗೆ ತರುವದಕ್ಕೆ ಜ್ಞಾಪಕದಲ್ಲಿಟ್ಟುಕೊಳ್ಳಬೇಕು.


ನೀನು ನಿನ್ನ ಪವಿತ್ರವಸ್ತುಗಳನ್ನು ಅಲಕ್ಷ್ಯಮಾಡಿ ನಾನು ನೇವಿುಸಿದ ಸಬ್ಬತ್‍ದಿನಗಳನ್ನು ಹೊಲೆಮಾಡಿದ್ದೀ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು