Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 20:27 - ಕನ್ನಡ ಸತ್ಯವೇದವು J.V. (BSI)

27 ಹೀಗಿರಲು, ನರಪುತ್ರನೇ, ಇಸ್ರಾಯೇಲ್ ವಂಶದವರಿಗೆ ಈ ಮಾತನ್ನು ಹೇಳು - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಿಮ್ಮ ಪಿತೃಗಳು ಇನ್ನೂ ಒಂದು ದ್ರೋಹವನ್ನು ಮಾಡಿ ನನ್ನನ್ನು ದೂಷಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಹೀಗಿರಲು, “ನರಪುತ್ರನೇ, ಇಸ್ರಾಯೇಲ್ ವಂಶದವರಿಗೆ ಈ ಮಾತನ್ನು ಹೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನಿಮ್ಮ ಪೂರ್ವಿಕರು ಇನ್ನೂ ಒಂದು ದ್ರೋಹವನ್ನು ಮಾಡಿ ನನ್ನನ್ನು ದೂಷಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 “ಹೀಗಿರಲು, ನರಪುತ್ರನೇ, ಇಸ್ರಯೇಲ್ ವಂಶದವರಿಗೆ ಈ ಮಾತನ್ನು ಹೇಳು - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಿಮ್ಮ ಪಿತೃಗಳು ಪುನಃ ದ್ರೋಹಮಾಡಿ ನನ್ನನ್ನು ದೂಷಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆದ್ದರಿಂದ ನರಪುತ್ರನೇ, ಇಸ್ರೇಲ್ ಜನಾಂಗದವರೊಂದಿಗೆ ಮಾತನಾಡು. ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ‘ನಿಮ್ಮ ಪೂರ್ವಿಕರು ನನಗೆ ಅಪಮಾನ ಮಾಡಿದರು ಮತ್ತು ದ್ರೋಹ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 “ಆದ್ದರಿಂದ ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಮನೆತನದವರ ಸಂಗಡ ಮಾತನಾಡಿ ಅವರಿಗೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನಗೆ ವಿರುದ್ಧವಾಗಿ ಬಹಳ ಅಪರಾಧಮಾಡಿದ್ದರಲ್ಲಿಯೂ ನಿಮ್ಮ ಪಿತೃಗಳು ನನ್ನನ್ನು ದೂಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 20:27
13 ತಿಳಿವುಗಳ ಹೋಲಿಕೆ  

ನಿಮ್ಮ ದೆಸೆಯಿಂದ ಅನ್ಯಜನರಲ್ಲಿ ದೇವರ ನಾಮವು ದೂಷಣೆಗೆ ಗುರಿಯಾಗುತ್ತದೆಂದು ಬರೆದದೆಯಲ್ಲಾ.


ನಾನು ನಿನ್ನೊಡನೆ ಮತ್ತೆ ಮಾತಾಡುವ ಕಾಲದಲ್ಲಿ ನಿನ್ನ ಬಾಯನ್ನು ಬಿಚ್ಚುವೆನು; ಆಗ ನೀನು ಅವರಿಗೆ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ ಎಂದು ನುಡಿಯಬೇಕು; ಕೇಳುವವನು ಕೇಳಲಿ. ಕೇಳದವನು ಬಿಡಲಿ; ಅವರು ದ್ರೋಹದ ಜನವೇ.


ಸೆರೆಯಾಗಿರುವ ನಿನ್ನ ಸ್ವಜನರ ಬಳಿಗೆ ಹೋಗಿ ಅವರು ಕೇಳಿದರೂ ಕೇಳದೆಹೋದರೂ ಅವರನ್ನು ಪ್ರಬೋಧಿಸಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ ಎಂದು ಅವರಿಗೆ ಸಾರು.


ಆಮೇಲೆ ಆತನು ನನಗೆ ಹೀಗೆ ಹೇಳಿದನು - ನರಪುತ್ರನೇ, ನೀನು ಇಸ್ರಾಯೇಲ್ ವಂಶದವರ ಬಳಿಗೆ ಹೋಗಿ ನಾನು ತಿಳಿಸುವ ಮಾತುಗಳನ್ನು ಅವರಿಗೆ ನುಡಿ.


ಅವರು ಕೇಳಿದರೂ ಕೇಳದೆಹೋದರೂ ನೀನು ನನ್ನ ಮಾತುಗಳನ್ನು ಅವರಿಗೆ ನುಡಿಯಲೇಬೇಕು; ಅವರು ದ್ರೋಹಿಗಳೇ ಹೌದು.


ಬಡಾಯಿ ಮಾತುಗಳನ್ನೂ ದೂಷಣೆಯ ಮಾತುಗಳನ್ನೂ ಆಡುವ ಬಾಯಿ ಅದಕ್ಕೆ ಕೊಡಲ್ಪಟ್ಟಿತು. ಮತ್ತು ನಾಲ್ವತ್ತೆರಡು ತಿಂಗಳ ಪರ್ಯಂತರ ತನ್ನ ಕಾರ್ಯಗಳನ್ನು ನಡಿಸುವ ಅಧಿಕಾರವೂ ಅದಕ್ಕೆ ಕೊಡಲ್ಪಟ್ಟಿತು.


ಆದರೆ ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು ಅಧರ್ಮಮಾಡಿ ದುಷ್ಟನು ನಡಿಸುವ ದುರಾಚಾರಗಳನ್ನೆಲ್ಲಾ ನಡಿಸಿದರೆ ಅವನು ಬಾಳುವನೋ? ಅವನು ಮಾಡಿದ ಯಾವ ಸುಕೃತ್ಯವೂ ಅವನ ಲೆಕ್ಕಕ್ಕೆ ಸೇರಿಸಲ್ಪಡದು, ಅವನು ಮಾಡುತ್ತಿರುವ ಪಾಪಾಪರಾಧಗಳಿಂದಲೇ ಸಾಯುವನು.


ಆದರೆ ಸ್ವದೇಶದವನಾಗಲಿ ಅನ್ಯದೇಶದವನಾಗಲಿ ಯಾವನಾದರೂ ಮನಃಪೂರ್ವಕವಾಗಿ ಹಟದಿಂದ ಪಾಪವನ್ನು ಮಾಡಿದರೆ ಅವನು ಯೆಹೋವನನ್ನು ದೂಷಿಸಿದವನಾದ್ದರಿಂದ ಕುಲದಿಂದ ತೆಗೆದುಹಾಕಲ್ಪಡಬೇಕು.


ಆತನಿಗೆ ವಿಮುಖರಾಗಿ ತಮ್ಮ ಹಿರಿಯರಂತೆ ದ್ರೋಹಿಗಳಾದರು. ಮೋಸದ ಬಿಲ್ಲಿನಂತೆ ತಿರುಗಿಕೊಂಡರು.


ಇವರೂ ಇವರ ಪಿತೃಗಳೂ ಬೆಟ್ಟಗುಡ್ಡಗಳಲ್ಲಿ ಧೂಪಹಾಕಿ ನನ್ನನ್ನು ಹೀನೈಸಿ ನಡಿಸಿದ ಅಪರಾಧಗಳ ಪ್ರತಿಫಲವನ್ನು ಇವರ ಮಡಲಿಗೆ ಹಾಕುವೆನು; ಹೌದು, ಇವರ ಕಾರ್ಯದ ಫಲವನ್ನು ಅಳತೆಗೆ ಸರಿಯಾಗಿ ಮೊಟ್ಟಮೊದಲೇ ಇವರ ಮಡಲಿಗೆ ಸುರಿಯುವೆನು ಎಂದು ಯೆಹೋವನು ಹೇಳುತ್ತಾನೆ.


ನರಪುತ್ರನೇ, ಅಪರಾಧವನ್ನು ನಡಿಸಿ ನನಗೆ ವಿರುದ್ಧವಾಗಿ ಪಾಪಮಾಡಿದ ದೇಶದ ಮೇಲೆ ನಾನು ಕೈಯೆತ್ತಿ ಅದರ ಜೀವನಾಧಾರವನ್ನು ತೆಗೆದುಬಿಟ್ಟು ಕ್ಷಾಮವನ್ನು ಬರಮಾಡಿ ಜನಪಶುಗಳನ್ನು ಅದರೊಳಗಿಂದ ನಿರ್ಮೂಲಮಾಡುವ ಪಕ್ಷದಲ್ಲಿ


ಇದಲ್ಲದೆ ಇಸ್ರಾಯೇಲ್ಯರು ತಮ್ಮ ಅಧರ್ಮದ ನಿವಿುತ್ತವೇ ಸೆರೆಯಾಗಿ ಹೋದರೆಂತಲೂ ಅವರು ನನಗೆ ದ್ರೋಹಮಾಡಿದ್ದರಿಂದ ನಾನು ಅವರಿಗೆ ವಿಮುಖನಾಗಿ ಅವರೆಲ್ಲರೂ ಖಡ್ಗಹತರಾಗುವಂತೆ ಅವರನ್ನು ಶತ್ರುವಶಮಾಡಿದೆನೆಂತಲೂ ಜನಾಂಗಗಳಿಗೆ ಗೊತ್ತಾಗುವದು;


ನಾನು ನನ್ನ ಜನರನ್ನು ಅನ್ಯಜನಾಂಗಗಳ ವಶದಿಂದ ತಪ್ಪಿಸಿ ಆ ಶತ್ರುಗಳ ದೇಶಗಳಿಂದ ಒಟ್ಟುಗೂಡಿಸಿ ಬಹು ಜನಾಂಗಗಳ ಕಣ್ಣೆದುರಿಗೆ ಅವರ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಂಡ ನಂತರ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು