Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 20:3 - ಕನ್ನಡ ಸತ್ಯವೇದವು J.V. (BSI)

3 ನರಪುತ್ರನೇ, ಇಸ್ರಾಯೇಲಿನ ಹಿರಿಯರನ್ನು ಸಂಬೋಧಿಸಿ ಹೀಗೆ ಹೇಳು - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನನ್ನು ಪ್ರಶ್ನೆಕೇಳುವದಕ್ಕೆ ಬಂದಿರೊ? ನನ್ನ ಜೀವದಾಣೆ, ನಾನು ನಿಮಗೆ ಉತ್ತರಕೊಡುವದೇ ಇಲ್ಲ; ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 “ನರಪುತ್ರನೇ, ಇಸ್ರಾಯೇಲಿನ ಹಿರಿಯರನ್ನು ಸಂಬೋಧಿಸಿ ಹೀಗೆ ಹೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನನ್ನನ್ನು ಪ್ರಶ್ನೆ ಕೇಳುವುದಕ್ಕೆ ಬಂದಿರೋ? ನನ್ನ ಜೀವದಾಣೆ, ನಾನು ನಿಮಗೆ ಉತ್ತರ ಕೊಡುವುದೇ ಇಲ್ಲ’” ಇದು ಕರ್ತನಾದ ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 “ನರಪುತ್ರನೇ, ಇಸ್ರಯೇಲಿನ ಹಿರಿಯರನ್ನು ಸಂಬೋಧಿಸಿ ಹೀಗೆ ಹೇಳು - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನನ್ನನ್ನು ಪ್ರಶ್ನೆಕೇಳುವುದಕ್ಕೆ ಬಂದಿರೋ? ನನ್ನ ಜೀವದಾಣೆ ನಾನು ನಿಮಗೆ ಉತ್ತರ ಕೊಡುವುದೇ ಇಲ್ಲ; ಇದು ಸರ್ವೇಶ್ವರನಾದ ದೇವರ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 “ನರಪುತ್ರನೇ, ಇಸ್ರೇಲಿನ ಹಿರಿಯರೊಂದಿಗೆ ಮಾತಾಡಿ ಅವರಿಗೆ, ‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನೀವು ನನ್ನ ಬುದ್ಧಿವಾದವನ್ನು ಕೇಳಲು ಬಂದಿರುವಿರಾ? ನನ್ನ ಜೀವದಾಣೆ, ನನ್ನ ಬುದ್ಧಿವಾದವನ್ನು ನಿಮಗೆ ಹೇಳುವದಿಲ್ಲವೆಂದು ನಾನು ಪ್ರಮಾಣಮಾಡುತ್ತೇನೆ. ನನ್ನ ಒಡೆಯನಾದ ಯೆಹೋವನ ವಾಕ್ಯವಿದು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 “ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಹಿರಿಯರ ಸಂಗಡ ಮಾತನಾಡಿ ಅವರಿಗೆ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನನ್ನು ಪ್ರಶ್ನೆಕೇಳುವುದಕ್ಕೆ ಬಂದಿರೋ? ನನ್ನ ಜೀವದಾಣೆ, ನಾನು ನಿಮಗೆ ಉತ್ತರ ಕೊಡುವುದೇ ಇಲ್ಲ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 20:3
20 ತಿಳಿವುಗಳ ಹೋಲಿಕೆ  

ದಿವ್ಯದರ್ಶಿಗಳು ಆಶಾಭಂಗಪಡುವರು, ಕಣಿಯವರು ನಾಚಿಕೆಗೊಳ್ಳುವರು, ಎಲ್ಲರೂ ಬಟ್ಟೆಯಿಂದ ಬಾಯಿಮುಚ್ಚಿಕೊಳ್ಳುವರು; ಅವರಿಗೆ ದೈವೋತ್ತರವೇ ದೊರೆಯದು.


ಧರ್ಮೋಪದೇಶಕ್ಕೆ ಕಿವಿಗೊಡದವನು ಮಾಡುವ ದೇವಪ್ರಾರ್ಥನೆಯೂ ಅಸಹ್ಯ.


ದೇವರು ಆತ್ಮಸ್ವರೂಪನು; ಆತನನ್ನು ಆರಾಧಿಸುವವರು ಆತ್ಮೀಯ ರೀತಿಯಲ್ಲಿ ಸತ್ಯಕ್ಕೆ ತಕ್ಕ ಹಾಗೆ ಆರಾಧಿಸಬೇಕು ಅಂದನು.


ಹೀಗಿರಲಾಗಿ ಅವನು ತನ್ನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳುವದಕ್ಕಾಗಿ ಹೊರಟುಬಂದ ಜನರ ಗುಂಪುಗಳಿಗೆ - ಎಲೈ ಸರ್ಪಜಾತಿಯವರೇ, ಮುಂದೆ ಕಾಣಬರುವ ದೈವಕೋಪದಿಂದ ತಪ್ಪಿಸಿಕೊಳ್ಳುವದಕ್ಕೆ ನಿಮಗೂ ಉಪದೇಶ ಮಾಡಿದವರಾರು?


ಆದರೆ ಅವನು ಫರಿಸಾಯರಲ್ಲಿಯೂ ಸದ್ದುಕಾಯರಲ್ಲಿಯೂ ಅನೇಕರು ತನ್ನಿಂದ ಸ್ನಾನಮಾಡಿಸಿಕೊಳ್ಳುವದಕ್ಕೆ ಬರುವದನ್ನು ಕಂಡು ಅವರಿಗೆ - ಎಲೈ ಸರ್ಪಜಾತಿಯವರೇ, ಮುಂದೆ ಕಾಣಬರುವ ದೈವಕೋಪದಿಂದ ತಪ್ಪಿಸಿಕೊಳ್ಳುವದಕ್ಕೆ ನಿಮಗೆ ಉಪದೇಶ ಮಾಡಿದವರಾರು?


ನೀವು ಬಲಿಯರ್ಪಿಸುತ್ತಾ ನಿಮ್ಮ ಮಕ್ಕಳನ್ನು ಆಹುತಿಕೊಟ್ಟು ಇಂದಿನವರೆಗೂ ನಿಮ್ಮನ್ನು ಅಶುದ್ಧಮಾಡಿಕೊಳ್ಳುತ್ತಿದ್ದೀರೋ? ಇಸ್ರಾಯೇಲ್ ವಂಶದವರೇ, ನಾನು ನಿಮ್ಮಂಥವರಿಗೆ ದೈವೋತ್ತರವನ್ನು ದಯಪಾಲಿಸಬಹುದೋ? ನನ್ನ ಜೀವದಾಣೆ, ನಿಮಗೆ ದೈವೋತ್ತರವನ್ನು ದಯಪಾಲಿಸೆನು; ಇದು ಕರ್ತನಾದ ಯೆಹೋವನ ನುಡಿ.


ನೀವು [ನನ್ನ ಕಡೆಗೆ] ಕೈಯೆತ್ತುವಾಗ ನಿಮ್ಮನ್ನು ನೋಡದಂತೆ ನನ್ನ ಕಣ್ಣುಗಳನ್ನು ಮರೆಮಾಡಿಕೊಳ್ಳುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿದರೂ ನಾನು ಕೇಳೆನು, ನಿಮ್ಮ ಕೈಗಳಲ್ಲಿ ರಕ್ತವು ತುಂಬಿದೆ.


ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕೆಂದು ನೀವು ಬರುತ್ತೀರಲ್ಲಾ; ನನ್ನ ಪ್ರಾಕಾರಗಳನ್ನು ತುಳಿಯಲು ಯಾರು ನಿಮ್ಮನ್ನು ಕೇಳಿಕೊಂಡರು?


ದುಷ್ಟರ ಯಜ್ಞವೇ ಅಸಹ್ಯ, ಅದನ್ನು ದುರ್ಬುದ್ಧಿಯಿಂದ ಅರ್ಪಿಸುವದು ಮತ್ತೂ ಅಸಹ್ಯ.


ದುಷ್ಟರ ಯಜ್ಞ ಯೆಹೋವನಿಗೆ ಅಸಹ್ಯ; ಶಿಷ್ಟರ ಬಿನ್ನಪ ಆತನಿಗೆ ಒಪ್ಪಿತ.


ಅವನು ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಿದರೂ ಆತನು ಅವನಿಗೆ ಕನಸುಗಳಿಂದಾಗಲಿ ಊರೀವಿುನಿಂದಾಗಲಿ ಪ್ರವಾದಿಗಳಿಂದಾಗಲಿ ಉತ್ತರಕೊಡಲೇ ಇಲ್ಲ.


ಆಗ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು -


ನರಪುತ್ರನೇ, ನಿನ್ನ ಜನರು ಗೋಡೆಗಳ ನೆರಳಿನಲ್ಲಿಯೂ ಮನೆಯ ಬಾಗಿಲುಗಳಲ್ಲಿಯೂ ನಿನ್ನ ಪ್ರಸ್ತಾಪವನ್ನೆತ್ತಿ ಪರಸ್ಪರವಾಗಿ ಒಬ್ಬರಿಗೊಬ್ಬರು - ಯೆಹೋವನ ಬಾಯಿಂದ ಹೊರಟ ಮಾತೇನು ಕೇಳೋಣ ಬನ್ನಿರಿ ಎಂದು ಹೇಳಿಕೊಳ್ಳುತ್ತಿದ್ದಾರೆ.


ಸಮುದ್ರದಿಂದ ಸಮುದ್ರಕ್ಕೆ, ಬಡಗಲಿಂದ ಮೂಡಲಿಗೆ ಬಳಲುತ್ತಾ ಹೋಗುವರು, ಯೆಹೋವನ ವಾಕ್ಯವನ್ನು ಹುಡುಕುತ್ತಾ ಓಡಾಡುವರು; ಆದರೂ ಅದು ಸಿಕ್ಕದು.


ಅವರಂತು ದಿನ ದಿನವೂ ನನ್ನ ದರ್ಶನಕ್ಕಾಗಿ ಬಂದು ನನ್ನ ಮಾರ್ಗವನ್ನು ತಿಳಿದುಕೊಳ್ಳುವದರಲ್ಲಿ ಹೆಚ್ಚಳಪಡುತ್ತಾರೆ; ತನ್ನ ದೇವರ ನಿಯಮಗಳನ್ನು ಬಿಡದೆ ಧರ್ಮವನ್ನಾಚರಿಸುವ ಜನಾಂಗವೋ ಎಂಬಂತೆ ಧೈರ್ಯವಾಗಿ ನನ್ನಿಂದ ನ್ಯಾಯವಿಧಿಗಳನ್ನು ಕೇಳಿಕೊಂಡು ದೇವದರ್ಶನದಲ್ಲಿ ಆನಂದಿಸುತ್ತಾರೆ.


ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ಬಂದು ನನ್ನ ಮುಂದೆ ಕೂತುಕೊಂಡಿರುವಾಗ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು