Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 20:37 - ಕನ್ನಡ ಸತ್ಯವೇದವು J.V. (BSI)

37 ನಾನು ನಿಮ್ಮನ್ನು ಲೆಕ್ಕಿಸುವಂತೆ ಕೋಲಿನ ಕೆಳಗೆ ಹೋಗಮಾಡಿ ಒಡಂಬಡಿಕೆಯ ಕಟ್ಟಿನಿಂದ ಬಂಧಿಸಿ ನನಗೆ ತಿರುಗಿಬಿದ್ದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 “ನಾನು ನಿಮ್ಮನ್ನು ಲೆಕ್ಕಿಸುವಂತೆ, ದಂಡನೆಯ ಕೋಲಿನ ಕೆಳಗೆ ಹೋಗುವಂತೆ ಮಾಡಿ, ಒಡಂಬಡಿಕೆಯ ಕಟ್ಟಿನಿಂದ ಬಂಧಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 “ನಾನು ನಿಮ್ಮನ್ನು ಲೆಕ್ಕಿಸುವಂತೆ, ಕೋಲಿನ ಕೆಳಗೆ ಹೋಗುವಂತೆಮಾಡಿ, ಒಡಂಬಡಿಕೆಯ ಕಟ್ಟಿನಿಂದ ಬಂಧಿಸುವೆನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 “ನಾನು ನಿಮ್ಮ ನ್ಯಾಯವಿಚಾರಣೆ ಮಾಡಿ ನೀವು ಮಾಡಿದ ತಪ್ಪುಗಳಿಗೆ ನನ್ನ ಒಡಂಬಡಿಕೆಯ ಪ್ರಕಾರ ನಿಮ್ಮನ್ನು ಶಿಕ್ಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ನೀವು ನನ್ನ ಕೋಲಿನ ಕೆಳಗೆ ನಡೆಯುವಾಗ, ನನ್ನ ಗಮನವು ನಿಮ್ಮ ಮೇಲೆ ಇರುತ್ತದೆ ಮತ್ತು ನಾನು ನಿಮ್ಮನ್ನು ಒಡಂಬಡಿಕೆಗೆ ತರುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 20:37
11 ತಿಳಿವುಗಳ ಹೋಲಿಕೆ  

ಬೆಟ್ಟದ ಊರುಗಳು, ಇಳಕಲಿನ ಊರುಗಳು, ದಕ್ಷಿಣ ಪ್ರಾಂತದ ಊರುಗಳು, ಬೆನ್ಯಾಮೀನ್ ಸೀಮೆ, ಯೆರೂಸಲೇವಿುನ ಸುತ್ತಣ ಪ್ರದೇಶಗಳು, ಯೆಹೂದದ ಊರುಗಳು, ಈ ಎಲ್ಲಾ ಸ್ಥಳಗಳಲ್ಲಿ ಹಿಂಡುಗಳು ಎಣಿಸುವವನ ಕೈಗೆ ಲೆಕ್ಕವಾಗುವಂತೆ ಮತ್ತೆ ಹಾದುಹೋಗುವವು. ಇದು ಯೆಹೋವನ ನುಡಿ.


ದನಗಳೇಯಾಗಲಿ ಆಡುಕುರಿಗಳೇಯಾಗಲಿ ಒಡೆಯನು ಲೆಕ್ಕಿಸಿದ ಎಲ್ಲಾ ಪಶುಗಳಲ್ಲಿ ಪ್ರತಿ ಹತ್ತನೆಯದು ಯೆಹೋವನಿಗೆ ಮೀಸಲಾಗಿರಬೇಕು.


ಭೂವಿುಯ ಸಕಲಕುಲಗಳೊಳಗೆ ನಿಮ್ಮನ್ನು ಮಾತ್ರ ನನ್ನವರೆಂದು ಅರಿತುಕೊಂಡಿದ್ದೇನೆ; ಆದಕಾರಣ ನಿಮ್ಮ ಎಲ್ಲಾ ಪಾಪಗಳ ಫಲವನ್ನು ನಿಮಗೆ ತಿನ್ನಿಸುವೆನು.


ಶತ್ರುಗಳ ಕತ್ತಿಯ ಮೂಲಕವಾಗಿ ನಿಮ್ಮನ್ನು ಸಂಹರಿಸುವೆನು; ನೀವು ನನ್ನ ನಿಬಂಧನವನ್ನು ಮೀರಿದದರಿಂದ ಆ ಕತ್ತಿಯು ಪ್ರತಿದಂಡನೆಮಾಡುವದು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿರುವಾಗ ನಿಮ್ಮಲ್ಲಿ ಅಂಟುರೋಗವುಂಟಾಗುವಂತೆ ಮಾಡುವೆನು; ಹೀಗೆ ನೀವು ಶತ್ರುಗಳ ಕೈಗೆ ಬೀಳುವಿರಿ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನ ಹಿಂಡೇ, ಇಗೋ, ನಾನು ನಿಮ್ಮಲ್ಲಿನ ಕುರಿ ಮೇಕೆಗಳಿಗೂ ಟಗರುಹೋತಗಳಿಗೂ ಮಧ್ಯವರ್ತಿಯಾಗಿ ನ್ಯಾಯತೀರಿಸುವೆನು.


ನಾನು ಈ ಒಡಂಬಡಿಕೆಯನ್ನು ನಿನ್ನೊಂದಿಗೆ ಮಾಡಿಕೊಳ್ಳಲು ನಾನೇ ಯೆಹೋವನು ಎಂದು ನಿನಗೆ ಗೊತ್ತಾಗುವದು;


ನಾನು ಅವರೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ದುಷ್ಟಮೃಗಗಳು ದೇಶದಲ್ಲಿ ಇನ್ನಿರದಂತೆ ಮಾಡುವೆನು; ನನ್ನ ಜನರು ಕಾಡಿನಲ್ಲಿ ನಿರ್ಭಯವಾಗಿ ವಾಸಿಸುವರು, ಅರಣ್ಯದಲ್ಲಿ ಹಾಯಾಗಿ ನಿದ್ರಿಸುವರು.


ಮತ್ತು ನಾನು ಅವರೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಅದು ಶಾಶ್ವತವಾಗಿರುವದು; ನಾನು ಅವರನ್ನು ನೆಲೆಗೊಳಿಸಿ ವೃದ್ಧಿಮಾಡಿ ನನ್ನ ಪವಿತ್ರಾಲಯವನ್ನು ಅವರ ನಡುವೆ ಯುಗಯುಗಾಂತರಕ್ಕೂ ನಿಲ್ಲಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು