Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 20:47 - ಕನ್ನಡ ಸತ್ಯವೇದವು J.V. (BSI)

47 ಯೆಹೋವನ ಮಾತನ್ನು ಕೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನು ನಿನ್ನೊಳಗೆ ಬೆಂಕಿಯನ್ನು ಹೊತ್ತಿಸುವೆನು, ಅದು ನಿನ್ನಲ್ಲಿನ ಎಲ್ಲಾ ಹಸುರುಮರಗಳನ್ನೂ ಒಣಮರಗಳನ್ನೂ ನುಂಗಿಬಿಡುವದು; ಧಗಧಗಿಸುವ ಉರಿಯು ಆರದೆ ತೆಂಕಲಿಂದ ಬಡಗಲವರೆಗೆ ಎಲ್ಲರ ಮುಖಗಳನ್ನು ಕಂದಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ಆ ವನಕ್ಕೆ ಹೀಗೆ ಪ್ರವಾದಿಸು, ಯೆಹೋವನ ಮಾತನ್ನು ಕೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಆಹಾ, ನಾನು ನಿನ್ನೊಳಗೆ ಬೆಂಕಿಯನ್ನು ಹೊತ್ತಿಸುವೆನು, ಅದು ನಿನ್ನಲ್ಲಿನ ಎಲ್ಲಾ ಹಸಿರು ಮರಗಳನ್ನೂ, ಒಣಮರಗಳನ್ನೂ ನುಂಗಿ ಬಿಡುವುದು; ಧಗಧಗಿಸುವ ಉರಿಯು ಆರದೆ ದಕ್ಷಿಣದಿಂದ ಉತ್ತರದವರೆಗೆ ಎಲ್ಲರ ಮುಖಗಳು ಸುಟ್ಟು ಹೋಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

47 ಆ ವನಕ್ಕೆ ಹೀಗೆ ಪ್ರವಾದಿಸು: ‘ಸರ್ವೇಶ್ವರನ ಮಾತನ್ನು ಕೇಳು: ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಆಹಾ, ನಾನು ನಿನ್ನೊಳಗೆ ಬೆಂಕಿಯನ್ನು ಹೊತ್ತಿಸುವೆನು. ಅದು ನಿನ್ನಲ್ಲಿನ ಎಲ್ಲಾ ಹಸಿರುಮರಗಳನ್ನೂ ಒಣಮರಗಳನ್ನೂ ಕಬಳಿಸಿಬಿಡುವುದು; ಧಗಧಗಿಸುವ ಜ್ವಾಲೆ ಆರದೆ, ತೆಂಕಲಿಂದ ಬಡಗಲವರೆಗೆ ಎಲ್ಲರ ಮುಖಗಳನ್ನು ಕುಂದಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

47 ನೆಗೆವ್ ಅಡವಿಗೆ ಹೀಗೆ ಹೇಳು: ‘ಯೆಹೋವನ ಮಾತುಗಳನ್ನು ಆಲೈಸು. ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನಾನು ನಿನ್ನ ಅಡವಿಯಲ್ಲಿ ಬೆಂಕಿಯನ್ನು ಹಾಕುತ್ತೇನೆ. ಆ ಬೆಂಕಿಯು ಪ್ರತಿಯೊಂದು ಹಸಿರು ಮರವನ್ನೂ ಪ್ರತಿಯೊಂದು ಒಣಗಿದ ಮರವನ್ನೂ ಸುಟ್ಟುಬಿಡುವುದು. ಆ ಬೆಂಕಿಯನ್ನು ನಂದಿಸಲಾಗುವದಿಲ್ಲ. ದಕ್ಷಿಣದಿಂದ ಉತ್ತರದ ತನಕವಿರುವ ಪ್ರತಿಯೊಂದು ಮುಖವು ಅದರ ತಾಪವನ್ನು ಅನುಭವಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

47 ದಕ್ಷಿಣದ ಮರುಭೂಮಿಗೆ ಹೇಳಬೇಕಾದದ್ದೇನೆಂದರೆ: ‘ಯೆಹೋವ ದೇವರ ವಾಕ್ಯವನ್ನು ಕೇಳು. ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ನಿನ್ನಲ್ಲಿ ಬೆಂಕಿ ಹಚ್ಚುತ್ತೇನೆ. ಅದು ನಿನ್ನಲ್ಲಿರುವ ಎಲ್ಲಾ ಹಸಿಮರಗಳನ್ನು ಮತ್ತು ಎಲ್ಲಾ ಒಣ ಮರಗಳನ್ನು ತಿಂದುಬಿಡುವುದು. ಉರಿಯುವ ಜ್ವಾಲೆ ಆರಿಹೋಗುವುದಿಲ್ಲ. ದಕ್ಷಿಣ ಮೊದಲುಗೊಂಡು ಉತ್ತರದವರೆಗೂ ಎಲ್ಲಾ ಮುಖಗಳು ಅದರಲ್ಲಿ ಸುಟ್ಟುಹೋಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 20:47
20 ತಿಳಿವುಗಳ ಹೋಲಿಕೆ  

ನಿಮ್ಮ ದುಷ್ಕೃತ್ಯಗಳಿಗೆ ಪ್ರತಿಫಲವಾಗಿ ನಿಮ್ಮನ್ನು ದಂಡಿಸುವೆನು; ನಿಮ್ಮ ಪುರಿಯೆಂಬ ವನಕ್ಕೆ ಬೆಂಕಿಹಚ್ಚುವೆನು, ಅದು ಸುತ್ತುಮುತ್ತಣದನ್ನೆಲ್ಲಾ ನುಂಗಿಬಿಡುವದು.


ಮರ ಹಸಿಯಾಗಿರುವಾಗ ಇಷ್ಟೆಲ್ಲಾ ಮಾಡಿದರೆ ಮರ ಒಣಗಿರುವಾಗ ಏನಾಗಬಹುದು? ಅಂದನು.


ಆಗ ಯೆಹೋವನಾದ ನಾನು ಎತ್ತರವಾದ ಮರವನ್ನು ತಗ್ಗಿಸಿ ತಗ್ಗಾದದ್ದನ್ನು ಎತ್ತರಪಡಿಸಿ ಹಸುರಾದದ್ದನ್ನು ಒಣಗಿಸಿ ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರಣ್ಯದ ಸಕಲವೃಕ್ಷಗಳು ತಿಳಿಯುವವು; ಇದನ್ನು ಯೆಹೋವನಾದ ನಾನೇ ನುಡಿದು ನಡಿಸಿದ್ದೇನೆ.


ಬೆಂಕಿಯು ದಂಡರೂಪವಾದ ಅದರ ಶಾಖೆಗಳಿಂದ ಹೊರಟು ಅದರ ಫಲವನ್ನು ನುಂಗಿಬಿಟ್ಟದ್ದರಿಂದ ರಾಜದಂಡಕ್ಕೆ ಯೋಗ್ಯವಾದ ಯಾವ ಗಟ್ಟಿಕೊಂಬೆಯೂ ಅದರಲ್ಲಿ ಉಳಿದಿಲ್ಲ. ಇದು ಶೋಕಗೀತ, ಶೋಕಗೀತವಾಗಿ ವಾಡಿಕೆಯಲ್ಲಿದೆ.


ಅವರು ಆಚೆ ಹೋಗಿ ನನಗೆ ದ್ರೋಹಮಾಡಿದವರ ಹೆಣಗಳನ್ನು ನೋಡುವರು; ಅವುಗಳನ್ನು ಕಡಿಯುವ ಹುಳವು ಸಾಯುವದಿಲ್ಲ, ಸುಡುವ ಬೆಂಕಿಯು ಆರುವದಿಲ್ಲ; ಅವು ಲೋಕದವರಿಗೆಲ್ಲಾ ಅಸಹ್ಯವಾಗಿರುವವು.


ಪುರಾತನ ಕಾಲದಿಂದಲೂ ಅಗ್ನಿಕುಂಡವು ಸಿದ್ಧವಾಗಿದೆ; ಹೌದು, ರಾಜನಿಗೆ ಅಣಿಯಾಗಿದೆ; ಅದನ್ನು ಆಳವಾಗಿಯೂ ಅಗಲವಾಗಿಯೂ ಮಾಡಿದ್ದಾನೆ; ಅದರಲ್ಲಿನ ಚಿತೆಯೊಳಗೆ ಬೆಂಕಿಯೂ ಬೇಕಾದಷ್ಟು ಕೊರಡುಗಳೂ ಇವೆ; ಯೆಹೋವನ ಶ್ವಾಸವು ಗಂಧಕದ ಪ್ರವಾಹದೋಪಾದಿಯಲ್ಲಿ ಅದನ್ನು ಉರಿಸುವದು.


ಅವರು ಬೆಚ್ಚಿಬೀಳುವರು, ಯಾತನೆವೇದನೆಗಳು ಅವರನ್ನಾಕ್ರವಿುಸುವವು. ಹೆರುವ ಹೆಂಗಸಿನಂತೆ ಸಂಕಟಪಡುವರು; ಒಬ್ಬರನ್ನೊಬ್ಬರು ನೋಡಿ ವಿಸ್ಮಯಪಡುವರು, ಅವರ ಮುಖಗಳು [ತಲ್ಲಣದಿಂದ] ಬೆಂಕಿಬೆಂಕಿಯಾಗುವವು.


ನನ್ನ ಕೋಪಾಗ್ನಿ ಪ್ರಜ್ವಲಿಸುತ್ತದೆ; ಅದು ಪಾತಾಳದವರೆಗೂ ವ್ಯಾಪಿಸಿ ಬೆಳೆ ಸಹಿತವಾಗಿ ಭೂವಿುಯನ್ನೂ ಬುಡಸಹಿತವಾಗಿ ಬೆಟ್ಟಗಳನ್ನೂ ದಹಿಸಿಬಿಡುವದು.


ಆದರೆ ನೀವು ನನ್ನ ಕಡೆಗೆ ಕಿವಿಗೊಡದೆ ಸಬ್ಬತ್ ದಿನದಲ್ಲಿ ಹೊರೆಯನ್ನು ಹೊತ್ತು ಯೆರೂಸಲೇವಿುನ ಬಾಗಿಲುಗಳೊಳಗೆ ಪ್ರವೇಶಿಸಬಾರದೆಂಬ ನಿಯಮವನ್ನು ಕೈಕೊಳ್ಳದೆ ಆ ದಿನವನ್ನು ನನ್ನ ದಿನವೆಂದು ಆಚರಿಸದೆ ಇದ್ದರೆ ಆಗ ನಾನು ಊರಬಾಗಿಲುಗಳಲ್ಲಿ ಬೆಂಕಿಯನ್ನು ಹೊತ್ತಿಸುವೆನು, ಅದು ಯೆರೂಸಲೇವಿುನ ಉಪ್ಪರಿಗೆಗಳನ್ನು ದಹಿಸಿಬಿಡುವದು, ಆರುವದೇ ಇಲ್ಲ.


ದಾವೀದನ ಮನೆತನದವರೇ, ಯೆಹೋವನು ಇಂತೆನ್ನುತ್ತಾನೆ - ನಿಮ್ಮ ದುಷ್ಕೃತ್ಯಗಳ ನಿವಿುತ್ತ ನನ್ನ ರೋಷವು ಜ್ವಾಲೆಯಂತೆ ಹೊರಟು ಯಾರೂ ಆರಿಸಲಾಗದಷ್ಟು ರಭಸವಾಗಿ ದಹಿಸಬಾರದಾಗಿದ್ದರೆ ಮುಂಜಾನೆ ನ್ಯಾಯತೀರಿಸಿರಿ, ಸುಲಿಗೆಯಾದವನನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ.


ಸಂಹರಿಸುವಂತೆ ಸಾಣೆಹಿಡಿದಿದೆ, ವಿುಂಚುವಂತೆ ತಿಕ್ಕಿದೆ. ನಮ್ಮ ಕುಮಾರನ ರಾಜದಂಡವು ವಿುಕ್ಕ ಎಲ್ಲಾ ದಂಡಗಳನ್ನು ತಿರಸ್ಕರಿಸುತ್ತದಲ್ಲಾ ಎಂಬದಾಗಿ ನಾವು ಸಂಭ್ರಮಪಡಬಹುದೇ?


ನೀನು ಅಗ್ನಿಗೆ ಆಹುತಿಯಾಗುವಿ; ನಿನ್ನ ರಕ್ತವು ದೇಶದಲ್ಲೆಲ್ಲಾ ಇಂಗಿರುವದು; ನೀನು ಇನ್ನು ಜ್ಞಾಪಕಕ್ಕೆ ಬರುವದಿಲ್ಲ; ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ.


ಹೀಗಿರಲು, ಸೂಳೆಯೇ, ಯೆಹೋವನ ಈ ವಾಕ್ಯವನ್ನು ಕೇಳು!


ಹಿಂಡಿನಲ್ಲಿ ಶ್ರೇಷ್ಠವಾದದ್ದನ್ನು ತೆಗೆದುಕೋ; ಹಂಡೆಯ ತಳದಲ್ಲಿ ಎಲುಬುಗಳನ್ನು ರಾಶಿಯಾಗಿ ಒಟ್ಟು; ಚೆನ್ನಾಗಿ ಕುದಿಸು; ಹೌದು, ಎಲುಬುಗಳು ಅದರಲ್ಲಿ ಬೇಯಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು